Connect with us

ಬೆಂಗಳೂರು

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸರ್ಕಾರ ಅನುಮತಿ ಕೊಡಲ್ಲ: ಸಚಿವ ಜಿ.ಪರಮೇಶ್ವರ್ – BJP JDS March

Published

on

ಬೆಂಗಳೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಪಾದಯಾತ್ರೆ ನಡೆಸಲು ನಿರ್ಧರಿಸಿವೆ.

ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ನಮ್ಮ‌ ಪಾದಯಾತ್ರೆಗೂ ಅವರು ಅನುಮತಿ ಕೊಟ್ಟಿರಲಿಲ್ಲ. ಆದರೂ ನಾವೂ ಮಾಡಿದೆವು, ಹಾಗೇ ಅವರೂ ಮಾಡಲಿ. ಆದರೆ ಸರ್ಕಾರದ ಅನುಮತಿ ಇರಲ್ಲ. ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಸರ್ಕಾರ ಅನುಮತಿ ಕೊಡಲ್ಲ. ಅವರು ಪಾದಯಾತ್ರೆ ಮಾಡಿದರೆ ಮಾಡಲಿ. ಆದರೆ ಅಧಿಕೃತವಾಗಿ ಅದಕ್ಕೆ ನಮ್ಮ ಪೊಲೀಸ್ ಇಲಾಖೆ ಅನುಮತಿ ಕೊಡಲ್ಲ. ಪಾದಯಾತ್ರೆಗೆ ತಡೆ ಹಾಕಲ್ಲ. ಅನುಮತಿ ಕೊಟ್ಟರೆ ಕಾನೂನು ಸಮಸ್ಯೆಗಳಾಗಲಿವೆ. ಆದರೆ ಅವರು ಜನರಿಗೆ ತೊಂದರೆ ಕೊಡದೇ ಪಾದಯಾತ್ರೆ ನಡೆಸಲಿ. ಪಾದಯಾತ್ರೆಗೆ ಏನು ವ್ಯವಸ್ಥೆ ಬೇಕೋ ಮಾಡಿಕೊಡ್ತೇವೆ ಎಂದರು.

ಮಲತಾಯಿ ಧೋರಣೆ ತೋರಿಸಿದರೆ ಹೇಗೆ?: ರಾಜ್ಯಕ್ಕೆ ಅನುದಾನ ಅನ್ಯಾಯವಾಗಿಲ್ಲ ಎಂಬ ಸಚಿವೆ ನಿರ್ಮಲಾ ಸೀತರಾಮನ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ಯುಪಿಎ ಎನ್‌ಡಿಎ ಅವಧಿ ಅನ್ನೋ ಹೋಲಿಕೆಯ ಪ್ರಶ್ನೆ ಅಲ್ಲ. ಅಂದಿನ ಬಜೆಟ್ ಎಷ್ಟಿತ್ತು, ಈಗ ಎಷ್ಟಾಗಿದೆ ಅನ್ನೋದನ್ನು ನೋಡಬೇಕು. ಚಂದ್ರಬಾಬು ನಾಯ್ಡುಗೆ 15 ಸಾವಿರ ಕೋಟಿ ಕೊಟ್ಟಿದ್ದಾರೆ. ಕೊಡೋದು ಬೇಡ ಅನ್ನಲ್ಲ, ಸರಿ ಸಮಾನವಾಗಿ ಕೊಡಬೇಕು. ನಮ್ಮ ಪಾಲನ್ನು ನಮಗೆ ಕೊಡಿ ಅಂತ ಸುಪ್ರೀಂ ಕೋರ್ಟ್​ವರೆಗೆ ತಲುಪಿದ್ದೇವೆ. ಕೊಟ್ಟಿದೀವಿ ಕೊಟ್ಟಿದೀವಿ ಅಂತಾರೆ, ಏನು ಕೊಟ್ಟಿದ್ದಾರೆ ಅಂತ ಹೇಳಬೇಕಲ್ವಾ?. ಭದ್ರಾಗೆ ಹಣಕೊಡಬೇಕಿತ್ತು, ಕೊಟ್ಟಿಲ್ಲ. ಈ ರೀತಿ ಮಲತಾಯಿ ಧೋರಣೆ ತೋರಿಸಿ, ಬೆಂಗಳೂರಿಗೆ ಬಂದು ಎಲ್ಲಾ ಕೊಟ್ಟಿದ್ದಿವಿ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು.

ಬೆಂಗಳೂರು ದೇಶದ ಪ್ರತಿಷ್ಠಿತ ನಗರ. ಬೆಂಗಳೂರನ್ನು ಕರ್ನಾಟಕಕ್ಕೆ ಸೀಮಿತ ಮಾಡಬಾರದು. ಇದನ್ನು ಪ್ರಪಂಚಕ್ಕೆ ತೋರಿಸಬೇಕಲ್ವಾ?. ನೀತಿ ಆಯೋಗಕ್ಕೆ ಮಮತಾ ಹೋಗಿ ವಾಕ್ ಔಟ್ ಮಾಡಿ ಬಂದಿದ್ದಾರೆ. ನಾವು ಹೋಗಿ ವಾಕ್ ಔಟ್ ಮಾಡಬೇಕಿತ್ತಾ?. ರಾಜ್ಯ, ಕೇಂದ್ರದ ನಡುವಿನ ಸಂಬಂಧ ಚೆನ್ನಾಗಿರಬೇಕು. ಅದಕ್ಕೆ ರಾಜ್ಯವನ್ನು ಚೆನ್ನಾಗಿ ನಡೆಸಿಕೊಳ್ಳಬೇಕಲ್ವಾ ಎಂದರು.

ಕಂಪನಿಗಳು ರಾಜ್ಯವನ್ನು ತೊರೆಯುತ್ತಿದೆ ಎಂಬ ಸಚಿವೆ ನಿರ್ಮಲಾ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಕಂಪನಿಗಳು ಹಲವು ಆಪ್ಶನ್ ಇಟ್ಟುಕೊಂಡು ಬರ್ತಾರೆ. ಇಲ್ಲಿಗೆ ಬಂದು ಹೋಗ್ತಾರೆ ಅಂತ ಅಲ್ಲ ಎಂದು ಹೇಳಿದರು.

ಪ್ರತಿಪಕ್ಷಗಳ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್​ ಕೂಡ ರಣತಂತ್ರವನ್ನು ಹೆಣೆದು ಕೌಂಟರ್ ಕೊಡುತ್ತದೆ. ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ. ಆದ್ದರಿಂದ ನಾವೂ ಕೂಡ ರಾಜಕೀಯ ಮಾಡಬೇಕಾಗುತ್ತದೆ. ಇದಕ್ಕೆ ಸರ್ಕಾರವನ್ನು ಬಳಸಿಕೊಲ್ಲ, ಪಕ್ಷದ ವತಿಯಿಂದ ಮಾಡುತ್ತೇವೆ ಎಂದು ಉತ್ತರಿಸಿದರು.

ಬಿಬಿಎಂಪಿ ಕಸದ ಲಾರಿಗೂ ಇಬ್ಬರು ಬಲಿ ಪ್ರಕರಣ ವಿಚಾರವಾಗಿ ಮಾತನಾಡಿ, ನಿನ್ನೆ ರಾತ್ರಿ ಅಪಘಾತ ಆಗಿದೆ. ಇಬ್ಬರು ಮೃತಪಟ್ಟಿದ್ದಾರೆ. ಬಿಬಿಎಂಪಿ ಮೃತರ ಕುಟುಂಬಗಳಿಗೆ ನೆರವು ಕೊಡಲಿದೆ. ಇದು ದುರಾದೃಷ್ಟಕರ ಘಟನೆ ಎಂದು ಪ್ರತಿಕ್ರಿಯಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ. ಆಗಸ್ಟ್ 3 ರಿಂದ ಬೆಂಗಳೂರಿನಿಂದ ಪಾದಯಾತ್ರೆ ಆರಂಭವಾಗಲಿದ್ದು, ಆ.10 ರಂದು ಮೈಸೂರಲ್ಲಿ ಸಮಾರೋಪವಾಗಲಿದೆ.

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ಕ್ರೀಡೆ

ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!

Published

on

By

ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.

ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.

ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.

Continue Reading

ದೇಶ

K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ

Published

on

By

ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್‌ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.

ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.

ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ನೀಡಲಾಯಿತು.

ವಿಶೇಷವಾಗಿ, ಸ್ನೇಹಾ ಟಿ (ಎಂಎಸ್‌ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.

ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.

Continue Reading

Trending