Connect with us

ಬೆಂಗಳೂರು

ಸಿಎಂಗೆ ಸುಳ್ಳು ಹೇಳುವ ಅಭ್ಯಾಸವೋ, ಚಾಳಿಯೋ ಗೊತ್ತಿಲ್ಲ- ಹೆಚ್‍ಡಿಕೆ ಟೀಕೆ

ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ್ದಾರೆ,
ಟ್ವೀಟ್ ಮಾಡಿ ಮುಡಾದವರು ನನಗೆ ನಿವೇಶನ ಹಂಚಿದ್ದು ನಿಜ, ಸ್ವಾಧೀನ ಪತ್ರವನ್ನೂ ನೀಡಿದ್ದಾರೆ, ಆ ಪತ್ರ ಈಗಾಗಲೇ ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ, ಹಂಚಿಕ ನಿವೇಶನದ ಜಾಗ ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ ಹಾಗಾದರೆ, ಇದರಲ್ಲಿ ಸಿದ್ದರಾಮಯ್ಯ ಮಾಡಿದ ಸಂಶೋಧನ ಏನಿದೆ ಎಂದು ಹೆಚ್‍ಡಿಕೆ ಪ್ರಶ್ನಿಸಿದ್ದಾರೆ,
ಸುಳ್ಳು ಸಂಶೋಧಕ ಸಿದ್ದರಾಮಯ್ಯನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ, ಮುಡಾ ಭೂವಿಯನ್ನು ಸಿಎಂ ಕುಟುಂಬ ಮುಕ್ಕಿ ತಿಂದಿದೆ ಎಂದು ಕಿಡಿಕಾರಿದ್ದಾರೆ,
ನಿಮ್ಮ ಸಮಾಜವಾದಿ ಮುಖವಾಡ ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ, ಇದೆಲ್ಲವೂ ಕಳಚಿಬಿದ್ದಿದೆ, ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಅಚಾರವೋ, ಚಾಳಿಯೋ ಗೊತ್ತಿಲ್ಲ ಎಂದು ಹೆಚ್‍ಡಿಕೆ ಟೀಕಿಸಿದ್ದಾರೆ,

ಕ್ರೀಡೆ

ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್‌ಗೆ ಜನ್ಮದಿನ ಸಂಭ್ರಮ: ವಿಶಿಯ ಕಲಾತ್ಮಕ ಬ್ಯಾಟಿಂಗ್‌ಗೆ 77ನೇ ವಸಂತ

ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಕಲಾತ್ಮಕ ಬ್ಯಾಟ್ಸ್‌ಮನ್‌ಗಳಲ್ಲಿ ಅಗ್ರಸ್ಥಾನ ಪಡೆದಿರುವ ಗುಂಡಪ್ಪ ರಂಗನಾಥ್ ವಿಶ್ವನಾಥ್ (GR Vishwanath) ಅವರಿಗೆ ಫೆಬ್ರವರಿ 12ರಂದು ಜನ್ಮದಿನ ಸಂಭ್ರಮ. ವಿಶಿ ಕ್ರೀಸಿಗೆ ಬಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಶತಕ ಸಿಡಿಸಿದ ಯಾವುದೇ ಪಂದ್ಯದಲ್ಲಿ ಭಾರತ ಸೋತ ಉದಾಹರಣೆ ಇಲ್ಲ — ಒಂದೋ ಗೆಲುವು, ಇಲ್ಲವೇ ಡ್ರಾ!

1969ರಲ್ಲಿ ಕಾನ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದ ವಿಶಿ, ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟ್ ಆದರೂ, ಎರಡನೇ ಇನ್ನಿಂಗ್ಸ್‌ನಲ್ಲಿ 25 ಬೌಂಡರಿಗಳೊಂದಿಗೆ 137 ರನ್ ಸಿಡಿಸಿ ಕ್ರಿಕೆಟ್ ಲೋಕದ ಗಮನ ಸೆಳೆದರು. ಅವರ ಸ್ಕ್ವೇರ್ ಕಟ್ ಶಾಟ್ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆದ್ದಿತ್ತು.

ಗವಾಸ್ಕರ್ ಪ್ರಶಂಸೆ, ಹೆಲ್ಮೆಟ್ ಇಲ್ಲದೆ ವೇಗದ ಬೌಲರ್ ಎದುರಿಸಿದ ಧೈರ್ಯ

“ನನ್ನಂತಹ ನೂರು ಗವಾಸ್ಕರ್ ಬರಬಹುದು, ಆದರೆ ವಿಶಿಯಂತವರು ಬರಲಾರರು” ಎಂಬ ಸುನಿಲ್ ಗವಾಸ್ಕರ್ ಮಾತುಗಳು ವಿಶಿಯ ಮಹತ್ವ ಸಾರುತ್ತವೆ. ಆಂಡಿ ರಾಬರ್ಟ್ಸ್, ಜೆಫ್ ಥಾಂಪ್ಸನ್‌ಂತಹ ವೇಗದ ಬೌಲರ್‌ಗಳನ್ನು ಹೆಲ್ಮೆಟ್ ಇಲ್ಲದೆ ಎದುರಿಸಿದ ಧೈರ್ಯವೂ ವಿಶಿಯ ವಿಶೇಷ.

ಕ್ರೀಡಾಸ್ಪೂರ್ತಿಗೆ ಮಾದರಿ

1980ರ ಸುವರ್ಣ ಮಹೋತ್ಸವ ಟೆಸ್ಟ್‌ನಲ್ಲಿ ಅಂಪೈರ್ ತಪ್ಪು ತೀರ್ಪು ನೀಡಿದಾಗ ಬಾಬ್ ಟೇಲರ್ ಅವರನ್ನು ಮರು ಕ್ರೀಸಿಗೆ ಕರೆಸಿದ ವಿಶಿಯ ಕ್ರೀಡಾಸ್ಫೂರ್ತಿ ಕ್ರಿಕೆಟ್ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ.

ರಣಜಿ ಫೈನಲ್‌ಗೂ ಮದುವೆಯೂ ಒಂದೇ ಸಮಯ

1978ರಲ್ಲಿ ಗವಾಸ್ಕರ್ ಸಹೋದರಿ ಕವಿತಾ ಅವರನ್ನು ಮದುವೆಯಾದ ವಿಶಿ, ಮದುವೆಯ ಬಳಿಕ ನೇರವಾಗಿ ಮೈದಾನಕ್ಕಿಳಿದು ರಣಜಿ ಫೈನಲ್‌ನಲ್ಲಿ 247 ರನ್ ಸಿಡಿಸಿ ಕರ್ನಾಟಕಕ್ಕೆ ಕಿರೀಟ ತಂದುಕೊಟ್ಟರು.

ವಿಶಿಯ ಮೂರು ಸ್ಮರಣೀಯ ಇನ್ನಿಂಗ್ಸ್

  • 1975, ಮದ್ರಾಸ್: ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್
  • 1969, ಕಾನ್ಪುರ: ಪಾದಾರ್ಪಣೆ ಪಂದ್ಯದಲ್ಲೇ 137 ರನ್
  • 1981, ಎಂಸಿಜಿ: ಆಸ್ಟ್ರೇಲಿಯಾ ವಿರುದ್ಧ 114 ರನ್

77ನೇ ವಸಂತಕ್ಕೆ ಕಾಲಿಡುತ್ತಿರುವ ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ ಅವರಿಗೆ ಹಾರ್ದಿಕ ಶುಭಾಶಯಗಳು.

Continue Reading

ದೇಶ

ಹೊಸಕೋಟೆಗೆ ಬಜೆಟ್‌ ಬಲ ಸಿಗುತ್ತಾ? ಮೆಟ್ರೋ, ನೀರಾವರಿ, ಒಳಚರಂಡಿ ಯೋಜನೆಗಳ ನಿರೀಕ್ಷೆ

ಹೊಸಕೋಟೆ: ಬೆಂಗಳೂರು ನಗರಕ್ಕೆ ಹೊಂದಿಕೊಂಡು ವೇಗವಾಗಿ ವಿಸ್ತರಿಸುತ್ತಿರುವ ಹೊಸಕೋಟೆ ತಾಲೂಕು ಮುಂದಿನ ರಾಜ್ಯ ಬಜೆಟ್‌ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ನೀರಾವರಿ, ಕೃಷಿ, ರಸ್ತೆ, ಮೆಟ್ರೋ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬೇಕು ಎಂದು ಜನತೆ ಆಗ್ರಹಿಸುತ್ತಿದ್ದಾರೆ.

2 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಹೊಸಕೋಟೆ, ವಾಣಿಜ್ಯ ಹಾಗೂ ವಸತಿ ವಿಸ್ತಾರದಲ್ಲಿ ಮಹತ್ವ ಪಡೆದುಕೊಂಡಿದೆ. ಶಾಸಕರು ಈಗಾಗಲೇ ಮೆಟ್ರೋ ವಿಸ್ತರಣೆಗೆ ಹೆಜ್ಜೆಯಿಟ್ಟಿದ್ದು, ಕೆ.ಆರ್‌.ಪುರಂ ಮೂಲಕ ಹೊಸಕೋಟೆಗೆ ಮೆಟ್ರೋ ಸಂಪರ್ಕ ನೀಡುವ ಬಗ್ಗೆ ಬಿಎಂಆರ್‌ಸಿಎಲ್ ಅಧ್ಯಯನ ಆರಂಭಿಸಿದೆ. ಬಜೆಟ್‌ನಲ್ಲಿ ಆರ್ಥಿಕ ಮಂಜೂರು ಸಿಗುತ್ತದೆಯೇ ಎಂಬುದು ಕುತೂಹಲ.

ಗ್ರಾಮಾಂತರ ಪೊಲೀಸ್ ಠಾಣೆ ಬೇಡಿಕೆ

ಪ್ರಸ್ತುತ ಹೊಸಕೋಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 31 ವಾರ್ಡ್‌ಗಳು ಹಾಗೂ 15 ಸಾವಿರಕ್ಕೂ ಹೆಚ್ಚು ಹಳ್ಳಿಗಳ ಜನಸಂಖ್ಯೆ ಒಳಗೊಂಡಿದೆ. ಪ್ರತ್ಯೇಕ ಗ್ರಾಮಾಂತರ ಪೊಲೀಸ್ ಠಾಣೆ ತೆರೆಯುವಂತೆ ಶಾಸಕರು ಸದನದಲ್ಲಿ ಮನವಿ ಮಾಡಿದ್ದು, ಗೃಹ ಸಚಿವರು ಬಜೆಟ್‌ನಲ್ಲಿ ಸ್ಪಂದನೆ ಸಿಗುವ ಭರವಸೆ ನೀಡಿದ್ದಾರೆ.

ನೀರಾವರಿ ಮತ್ತು ಒಳಚರಂಡಿಗೆ ಒತ್ತು

ವಂಗಯ್ಯನ ಕೆರೆ ಏತ ನೀರಾವರಿ ಯೋಜನೆ ಅನುಷ್ಠಾನಗೊಂಡಿದ್ದರೂ ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಗಳ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಹೆಚ್ಚಿನ ಅನುದಾನ ಅಗತ್ಯವಿದೆ. ಜೊತೆಗೆ ₹100 ಕೋಟಿ ವೆಚ್ಚದ ಶಾಶ್ವತ ಒಳಚರಂಡಿ ಕಾಮಗಾರಿ ಮಂಜೂರಾಗಬೇಕು ಎಂಬುದು ನಾಗರಿಕರ ಬೇಡಿಕೆ.

ದೊಡ್ಡ ಅಮಾನಿಕೆರೆ ಪ್ರವಾಸಿ ತಾಣವಾಗುತ್ತದೆಯೇ?

ನಗರದ ದೊಡ್ಡ ಹಾಗೂ ಚಿಕ್ಕ ಅಮಾನಿಕೆರೆಗಳಲ್ಲಿ 200ಕ್ಕೂ ಹೆಚ್ಚು ಜೀವ ವೈವಿಧ್ಯ ಪ್ರಭೇದಗಳಿವೆ. ಇದನ್ನು ಪ್ರವಾಸಿ ಹಾಗೂ ಜೀವ ವೈವಿಧ್ಯ ತಾಣವಾಗಿ ಅಭಿವೃದ್ಧಿಪಡಿಸಬೇಕು ಎಂಬ ಅಭಿಲಾಷೆ ವ್ಯಕ್ತವಾಗಿದೆ.


🔹 ಬಜೆಟ್ ನಿರೀಕ್ಷೆಯ ಪ್ರಮುಖ ಅಂಶಗಳು:

  • ಚೆನ್ನ ಬೈರೇಗೌಡ ಕ್ರೀಡಾಂಗಣ ಮೆಲ್ದರ್ಜೆ
  • ಶಾಶ್ವತ ಒಳಚರಂಡಿ ಕಾಮಗಾರಿ
  • ನೂತನ ನ್ಯಾಯಾಲಯ ಸಂಕೀರ್ಣ
  • ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಮತ್ತು ಡಿಪೊ
  • ಸರ್ಕಾರಿ ಮಹಿಳಾ ಪದವಿ ಕಾಲೇಜು
Continue Reading

ಅಪರಾಧ

CRIME : ಬೆಂಗಳೂರಿನಲ್ಲಿ ಮತ್ತೆ ರೋಡ್‌ ರೇಜ್‌: ಬಾನೆಟ್‌ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೋಡ್‌ ರೇಜ್‌ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಫೆ.11ರಂದು ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಚ್ಎಎಲ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 12.45ರ ವೇಳೆಗೆ ಕಾರು ಮತ್ತು ಗೂಡ್ಸ್ ವಾಹನ ಟಚ್ ಆದ ವಿಚಾರಕ್ಕೆ ಚಾಲಕರ ನಡುವೆ ವಾಗ್ವಾದ ನಡೆದಿದೆ.

ಈ ವೇಳೆ ಗೂಡ್ಸ್ ವಾಹನ ಚಾಲಕ ನಂಜುಂಡ ಕಾರಿನ ಮುಂದೆ ನಿಂತು ನಷ್ಟಪೂರೈಕೆ ಕೇಳಿದ್ದಾನೆ. ಆದರೆ ಕಾರು ಚಾಲಕ ಏಕಾಏಕಿ ವಾಹನ ಚಲಾಯಿಸಿದ್ದು, ನಂಜುಂಡ ಬಾನೆಟ್ ಮೇಲೆ ಬಿದ್ದರೂ ಸುಮಾರು 1 ಕಿ.ಮೀ ಹೆಚ್ಚು ದೂರ ಕಾರು ನಿಲ್ಲಿಸದೆ ಚಲಾಯಿಸಿದ್ದಾನೆ. ಟ್ರಿನಿಟಿ ಜಂಕ್ಷನ್‌ನಿಂದ ಸಿಬಿ ಜಂಕ್ಷನ್ ಹಾಗೂ ASC ಸೆಂಟರ್ ಕಾಲೇಜು ವರೆಗೆ ಕಾರು ಸಾಗಿದ ದೃಶ್ಯ ರಸ್ತೆಬದಿ ಜನರನ್ನು ಬೆಚ್ಚಿಬೀಳುವಂತೆ ಮಾಡಿತು. ಕೆಲವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇತರೆ ವಾಹನ ಚಾಲಕರು ಅಡ್ಡಹಾಕಿದ ಬಳಿಕ ಕಾರು ನಿಲ್ಲಿಸಲಾಯಿತು.

ಕಾರು ಚಾಲಕ ಬಂಧನ

ಪೊಲೀಸರು ಕಾರು ಚಾಲಕನನ್ನು ಪುಲಕೇಶಿ ನಗರದ 52 ವರ್ಷದ ಸುರೇಶ್ ಎಂದು ಗುರುತಿಸಿದ್ದಾರೆ. ಘಟನೆಯ ವೇಳೆ ಕಾರಿನಲ್ಲಿ ಪತ್ನಿಯೂ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ (Attempt to Murder) ಅಡಿಯಲ್ಲಿ ಆರೋಪಿಯನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತನಿಖೆಯಲ್ಲಿ ಸುರೇಶ್ ವಿರುದ್ಧ ಈ ಹಿಂದೆಯೂ ಅತಿವೇಗ ಚಾಲನೆ ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಇರುವುದಾಗಿ ತಿಳಿದುಬಂದಿದೆ.

ರಾಜಧಾನಿಯಲ್ಲಿ ಹೆಚ್ಚುತ್ತಿರುವ ರೋಡ್‌ ರೇಜ್‌

ಇತ್ತೀಚೆಗೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ರೋಡ್‌ ರೇಜ್‌ ಪ್ರಕರಣದಲ್ಲಿ ಕಾರು ಚಾಲಕ ತನ್ನ ಸ್ನೇಹಿತನನ್ನೇ ಗೋಡೆ ಹಾಗೂ ಮರಕ್ಕೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿದ್ದ ಘಟನೆ ಸ್ಮರಣೀಯವಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರೋಡ್‌ ರೇಜ್‌ ಘಟನೆಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿವೆ.

Continue Reading

Trending