Connect with us

ಚುನಾವಣೆ

ಬಿಜೆಪಿಯವರು ಶ್ರೀಮಂತರಿಗಾಗಿ ಕೆಲಸ ಮಾಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Published

on

ಬಿಜೆಪಿಯವರು ಶ್ರೀಮಂತರಿಗಾಗಿ ಕೆಲಸ ಮಾಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು  ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಾಗಲ್ಲ ಎಂದು ಹೇಳಿದ್ದರು.  ಗೃಹಲಕ್ಷ್ಮಿ ಕಾರ್ಯಕ್ರಮವನ್ನು  ಮೋದಿ ಅವರು ನೋಡಿದ್ದರೆ ಇಂತಹ ಕಾರ್ಯಕ್ರಮ ಕೂಡ ಜಾರಿ ಮಾಡಲು ಸಾಧ್ಯವಿದೆ ಎಂಬುವುದನ್ನು ಎಂದು ತಿಳಿಯಬಹುದು. ಆದರೆ, ಅವರು ಒಪ್ಪಲ್ಲ, ಅವರು ಹೇಳಿದ್ದನ್ನೇ ಬೇರೆಯವರು ಕೇಳಬೇಕು. ಬೇರೆಯವರು ಹೇಳಿದ್ದನ್ನು ಅವರು ಕೇಳಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.   ರಾಜ್ಯ ಸರ್ಕಾರದಿಂದ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಎಂದು ರಾಹುಲ್ ಗಾಂಧಿ ಅವರು ಸ್ಪಷ್ಟವಾಗಿ ತಮ್ಮ ಅನಿಸಿಕೆಗಳನ್ನು ನಿಮ್ಮ ಮುಂದೆ ಇಟ್ಟಿದ್ದಾರೆ. ನಾನು ಸಹ ಅದೇ ಮಾತನ್ನು ಹೇಳುತ್ತೇನೆ. ಕಾಂಗ್ರೆಸ್‌ ಸರ್ಕಾರ ಭರವಸೆ ನೀಡಿದ  ಐದು ಗ್ಯಾರಂಟಿಗಳ ಪೈಕಿ ನಾಲ್ಕನ್ನು ಜಾರಿ ಮಾಡಿದ್ದೇವೆ. ಇಲ್ಲಿ ಕೊಟ್ಟಂತಹ ಗ್ಯಾರಂಟಿಗಳನ್ನು ದೇಶದ ಯಾವ ರಾಜ್ಯದಲ್ಲೂ ಜಾರಿ ಮಾಡಿಲ್ಲ  53 ವರ್ಷದಲ್ಲಿ ದೇಶಕ್ಕೆ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಕೇಳುತ್ತಾರೆ. ಆದರೆ, ಅನೇಕ ಕೆಲಸ ಮಾಡಿದ್ದೇವೆ ಎಂದು ಹೇಳಬಹುದು. ನಾವು ಮಾಡಿದ ಕೆಲಸಕ್ಕೆ ಸುಣ್ಣ ಬಣ್ಣ ಹಚ್ಚಿ ಬಿಜೆಪಿಯವರು ಉದ್ಘಾಟನೆ ಮಾಡುತ್ತಾರೆ. ಕಾಂಗ್ರೆಸ್ ಏನು‌ ಮಾಡಿದೆ ಎಂದು ರಿಪೋರ್ಟ್ ಕೊಡುತ್ತೇವೆ. ನೆಹರು, ಸರ್ದಾರ್‌ ವಲ್ಲಭಭಾಯಿ ಪಟೇಲ್, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಏನು‌ ಮಾಡಿದರು ಎಂಬ ಬಗ್ಗೆ ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಅವರು (ಬಿಜೆಪಿ) ಏನು ಮಾಡಿದರು ಎಂದು ಕಾರ್ಡ್ ಕೊಡಲಿ ಎಂದು ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದರು.   ಮತದಾನ ವಯಸ್ಸು 21ರಿಂದ 18ಕ್ಕಿಳಿಸಿದ್ದು ಕಾಂಗ್ರೆಸ್. ನಮ್ಮ ಕಾಲದಲ್ಲಿ ದೊಡ್ಡ ಕಾಮಗಾರಿಗಳು ಆಗಿವೆ, ಎಲ್ಲ ಸಂಸ್ಥೆಗಳನ್ನು ಕಟ್ಟಿದ್ದು ನಾವು. ನಾವು ಬಡವರಿಗಾಗಿ ಯೋಜನೆ ಮಾಡಿದರೆ, ಅವರು ಶ್ರೀಮಂತರಿಗಾಗಿ ಕೆಲಸ ಮಾಡುತ್ತಾರೆ. ನೀರವ್ ಮೋದಿ ಮತ್ತಿತರರು ಬ್ಯಾಂಕ್ ಹಣ ಲೂಟಿ ಮಾಡಿ ಹೋಗಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ತೆಗೆದಿದ್ದರು.

ಚುನಾವಣೆ

ಜಿಬಿಎ ಚುನಾವಣೆಗೆ ಕೌಂಟ್‌ಡೌನ್ ಶುರು! ಜೂನ್‌ನಲ್ಲಿ ಡೇಟ್ ಫಿಕ್ಸ್

Published

on

ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.

ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.

ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Continue Reading

ಚುನಾವಣೆ

‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಗುರುವಾರ ಕಾಲಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.

ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.

ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.

ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ಚುನಾವಣೆ

“ದೇಶ ನಿಮ್ಮ ಇಚ್ಛೆಗೆ ನಡೆಯಲ್ಲ” – ಶರ್ಮಾ ಕಿಡಿ

Published

on

ದಿಸ್ಪುರ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಉದ್ವಿಗ್ನತೆ ಮುಂದುವರಿದಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರಾಜೀನಾಮೆ ನೀಡದಿದ್ದರೆ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಪ್ರತಿಕ್ರಿಯಿಸಿದ ಶರ್ಮಾ, “ಬಂಗಾಳ ಜನತೆ ಹಲವು ವರ್ಷಗಳಿಂದ ಮಮತಾ ಬ್ಯಾನರ್ಜಿಯನ್ನು ಸಹಿಸಿಕೊಂಡಿದ್ದಾರೆ. ಅವರು ರಾಜೀನಾಮೆ ನೀಡದಿದ್ದರೆ ರಾಜ್ಯಪಾಲರು ಕ್ರಮ ಕೈಗೊಂಡು ವಜಾಗೊಳಿಸಬೇಕು. ದೇಶವು ಯಾರೊಬ್ಬರ ಇಚ್ಛೆಯಂತೆ ನಡೆಯುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಮಮತಾ ಬ್ಯಾನರ್ಜಿ ಚುನಾವಣೆಯಲ್ಲಿ ಸೋಲು ಕಂಡರೂ, ತಾನು ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಸೋತಿಲ್ಲ. ಆದ್ದರಿಂದ ರಾಜಭವನಕ್ಕೆ ಹೋಗುವುದಿಲ್ಲ. ರಾಜೀನಾಮೆ ನೀಡುವುದಿಲ್ಲ” ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಶರ್ಮಾ, “ನೀವು 100 ಸ್ಥಾನಗಳನ್ನು ಕಸಿದುಕೊಂಡಿದ್ದಾರೆ ಎಂದು ಹೇಳುತ್ತಿದ್ದರೆ, ನಾನು ಕೂಡ ನನ್ನ ಸ್ಥಾನಗಳನ್ನು ಕಸಿದುಕೊಂಡಿದ್ದಾರೆ ಎಂದು ಹೇಳಬಹುದು. ಅದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸರಿಹೊಂದುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಮತ್ತೊಂದೆಡೆ, ಗಡಿ ಭದ್ರತೆ ಮತ್ತು ಆಡಳಿತದ ವೈಫಲ್ಯಗಳ ಕುರಿತು ಕೂಡ ಶರ್ಮಾ ಆರೋಪ ಮಾಡಿದ್ದು, “ಬಂಗಾಳದಲ್ಲಿ ಬಹಳ ಹಿಂದೆಯೇ ಬದಲಾವಣೆ ಆಗಬೇಕಾಗಿತ್ತು. ಜನತೆ ಈ ಬಾರಿ ಬಿಜೆಪಿಗೆ ಜನಾದೇಶ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಸತತ ಮೂರು ಅವಧಿಗಳ ಆಡಳಿತದ ಬಳಿಕ ಟಿಎಂಸಿ ಈ ಬಾರಿ ಹಿನ್ನಡೆಯನ್ನು ಕಂಡಿದ್ದು, ರಾಜಕೀಯ ವಾತಾವರಣ ಮತ್ತಷ್ಟು ತೀವ್ರಗೊಂಡಿದೆ. ಮಮತಾ ಬ್ಯಾನರ್ಜಿ ರಾಜೀನಾಮೆ ನೀಡುವುದನ್ನು ನಿರಾಕರಿಸಿರುವುದು ಮುಂದಿನ ರಾಜಕೀಯ ಬೆಳವಣಿಗೆಗಳಿಗೆ ದಾರಿ ಮಾಡಿಕೊಡಲಿದೆ.

Continue Reading

Trending