ಬೆಂಗಳೂರು
ಮೈಸೂರು ಚಲೋಗೆ ಚಾಲನೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಗಾರಿ ಬಾರಿಸಿದ ದೋಸ್ತಿಗಳು! – Mysuru Chalo padayatra
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಬಿಜೆಪಿ ಜೆಡಿಎಸ್ ದೋಸ್ತಿಗಳ ಜಂಟಿ ‘ಮೈಸೂರು ಚಲೋ’ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಇಂದಿನಿಂದ ಆಗಸ್ಟ್ 10ರವರೆಗೆ ಬೆಂಗಳೂರಿನಿಂದ ಮೈಸೂರಿನವರೆಗೆ ದೊಸ್ತಿಗಳ ಜಂಟಿ ಪಾದಯಾತ್ರೆಯ ವೇದಿಕೆ ಕಾರ್ಯಕ್ರಮವನ್ನು ಉಭಯ ಪಕ್ಷಗಳ ನಾಯಕರು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು.
ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, 140 ಕಿಮೀಯ 8 ದಿನಗಳ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಇಂದು ಪಾದಯಾತ್ರೆ ಬಿಡದಿವರೆಗೆ ಸಾಗಲಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಕರ್ನಾಟಕ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್, ಮಾಜಿ ಸಿಎಂ ಸದಾನಂದ ಗೌಡ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಜೆಡಿಎಸ್ ಮುಖಂಡರಾದ ಬಂಡೆಪ್ಪ ಕಾಶಂಪೂರ, ಬೋಜೇಗೌಡ, ಜಿಟಿ ದೇವೇಗೌಡ ಉಪಸ್ಥಿತರಿದ್ದಾರೆ.
ವೇದಿಕೆಯ ಮೇಲೆ ಎರಡು ಪಕ್ಷಗಳ ಕೋರ್ ಕಮಿಟಿ ಸದಸ್ಯರು, ಸಂಸದರು ಸೇರಿ ಸುಮಾರು 45 ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಭಾಗಿಯಾಗಿದ್ದಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಅಶ್ವತ್ಥ್ ನಾರಾಯಣ್, ಸಂಸದ ಗೋವಿಂದ ಕಾರಜೋಳ, ಸಂಸದ ಯಧುವೀರ್, ವಿಶ್ವೇಶ್ವರ್ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಸುನಿಲ್ ಕುಮಾರ್, ಜನಾರ್ದನ ರೆಡ್ಡಿ ಉಪಸ್ಥಿತರಿದ್ದಾರೆ.
ನಿರ್ವಹಣೆಗೆ ವಿವಿಧ ಮೋರ್ಚಾಗಳ ಜೊತೆಗೆ ತಂಡಗಳು ರಚನೆಯಾಗಿವೆ. ಮೊದಲ ದಿನದ ಪಾದಯಾತ್ರೆಯನ್ನು ಯುವ ಮೋರ್ಚಾ ನಿರ್ವಹಿಸಲಿದೆ. ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20 ರಿಂದ 22 ವಿಭಾಗಗಳನ್ನು ರಚಿಸಲಾಗಿದೆ. ಆಗಸ್ಟ್ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಕ್ರೀಡೆ
JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.
ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.
ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.
ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.
ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.
ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.
ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.
ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.
ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಅಪರಾಧ
ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.
ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.
ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.
ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಅಪರಾಧ
BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.
ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.
-
ದೇಶ17 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ23 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ23 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ15 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ24 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ಕ್ರೀಡೆ16 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ23 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ದೇಶ15 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
