ಅಪರಾಧ
ಬಾಂಗ್ಲಾದೇಶದಲ್ಲಿ ಪ್ರತಿಭಟನಾಕಾರರು, ಆಡಳಿತ ಪಕ್ಷದ ಬೆಂಬಲಿಗರ ಮಧ್ಯೆ ಘರ್ಷಣೆ: 100 ಮಂದಿ ಸಾವು – Violence in Bangladesh
ಢಾಕಾ (ಬಾಂಗ್ಲಾದೇಶ): ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಾಕಾರರ ನಡುವೆ ಭಾನುವಾರ ನಡೆದ ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ಆಡಳಿತ ಪಕ್ಷದ ಬೆಂಬಲಿಗರು, ಅಧಿಕಾರಿಗಳು ಮೊಬೈಲ್ ಇಂಟರ್ನೆಟ್ ಅನ್ನು ಕಡಿತಗೊಳಿಸುವಂತೆ ಒತ್ತಾಯಿಸಿದರು. ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪಿ ಕರ್ಫ್ಯೂ ಜಾರಿಗೊಳಿಸಿದ್ದಾರೆ.
ಉದ್ಯೋಗ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಆಗ್ರಹಿಸಿದರು. ತಾರತಮ್ಯದ ವಿರುದ್ಧ ವಿದ್ಯಾರ್ಥಿಗಳಿಂದ ಭಾನುವಾರ ಬೆಳಗ್ಗೆ ನಡೆದ ಅಸಹಕಾರ ಕಾರ್ಯಕ್ರಮಕ್ಕೆ ಅವಾಮಿ ಲೀಗ್, ಛತ್ರ ಲೀಗ್ ಜುಬೋ ಲೀಗ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು, ಆಡಳಿತ ಪಕ್ಷದ ಬೆಂಬಲಿಗರಿಂದ ತೀವ್ರ ಘರ್ಷಣೆ ಪ್ರಾರಂಭವಾದವು. ಅಸಹಕಾರ ಕಾರ್ಯಕ್ರಮದ ಹಿನ್ನೆಲೆ ದೇಶಾದ್ಯಂತ ಘರ್ಷಣೆಗಳು, ಗುಂಡಿನ ದಾಳಿಗಳು ಮತ್ತು ಅಹಿತಕರ ಘಟನೆಗಳ ನಡೆದಿವೆ. ಈ ವೇಳೆ ಕನಿಷ್ಠ 98 ಜನರು ಸಾವನ್ನಪ್ಪಿದ್ದಾರೆ ಎಂದು ಬಂಗಾಳಿ ಭಾಷೆಯ ಪ್ರಮುಖ ಪತ್ರಿಕೆ ಪ್ರೋಥೋಮ್ ಅಲೋ ವರದಿ ಮಾಡಿದೆ.
ದೇಶಾದ್ಯಂತ 14 ಪೊಲೀಸರು ಸಾವು: ಪೊಲೀಸ್ ಪ್ರಧಾನ ಕಚೇರಿಯ ಪ್ರಕಾರ, ದೇಶಾದ್ಯಂತ 14 ಪೊಲೀಸರು ಸಾವನ್ನಪ್ಪಿದ್ದಾರೆ. ಅವರಲ್ಲಿ 13 ಮಂದಿ ಸಿರಾಜ್‌ಗಂಜ್‌ನ ಎನಾಯೆತ್‌ಪುರ ಪೊಲೀಸ್ ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ. ಕೊಮಿಲ್ಲಾದ ಎಲ್ಲಿಯೋಟ್‌ಗಂಜ್‌ನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ಪತ್ರಿಕೆ ತಿಳಿದೆ.
ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿನ ಹೋರಾಟಗಾರರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ 30 ಪ್ರತಿಶತವನ್ನು ಮೀಸಲಿಡುವ ವಿವಾದಾತ್ಮಕ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪೊಲೀಸರು ಮತ್ತು ವಿದ್ಯಾರ್ಥಿ ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ ಈವರೆಗೆ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈವರೆಗೆ 11,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಅನಿರ್ದಿಷ್ಟ ಅವಧಿಗೆ ಕರ್ಫ್ಯೂ ಘೋಷಣೆ: ಪ್ರತಿಭಟನೆಯಲ್ಲಿ ಬಲಪಂಥೀಯ ಇಸ್ಲಾಮಿ ಶಶೋತಂತ್ರ ಆಂದೋಲನ್‌ನ ಕಾರ್ಯಕರ್ತರು ಹಾಗೂ ಅಪರಿಚಿತರು ಸೇರಿಕೊಂಡಿದ್ದಾರೆ. ಪ್ರಮುಖ ಹೆದ್ದಾರಿಗಳಲ್ಲಿ ಮತ್ತು ರಾಜಧಾನಿಯೊಳಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಪ್ರತಿಭಟನಾಕಾರರು, ಪೊಲೀಸ್ ಠಾಣೆಗಳು ಮತ್ತು ಆಡಳಿತ ಪಕ್ಷದ ಕಚೇರಿಗಳು ಮತ್ತು ಅವರ ನಾಯಕರ ನಿವಾಸಗಳ ಮೇಲೆ ದಾಳಿ ಮಾಡಿದರು. ಮತ್ತು ಹಲವಾರು ವಾಹನಗಳನ್ನು ಸುಟ್ಟುಹಾಕಿದರು. ಈ ಪರಿಸ್ಥಿತಿ ಹಿನ್ನೆಲೆ ಅಧಿಕಾರಿಗಳು ಭಾನುವಾರ ಸಂಜೆ 6 ರಿಂದ ಅನಿರ್ದಿಷ್ಟ ಅವಧಿಗೆ ಬಾಂಗ್ಲಾದೇಶದಾದ್ಯಂತ ಪ್ರಮುಖ ನಗರಗಳು ಮತ್ತು ಸಣ್ಣ ಪಟ್ಟಣಗಳಲ್ಲಿ ಕರ್ಫ್ಯೂ ಘೋಷಣೆ ಮಾಡಿದರು.
ಸೇನಾ ಪಡೆಗಳು, ಅರೆಸೈನಿಕ ಗಡಿ ಕಾವಲುಗಾರರು ಬಿಜಿಬಿ ಮತ್ತು ಗಣ್ಯ ಅಪರಾಧ ವಿರೋಧಿ ರಾಪಿಡ್ ಆಕ್ಷನ್ ಬಟಾಲಿಯನ್ ಹಾಗೂ ಪೊಲೀಸರು ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಮೆಟಾ ಪ್ಲಾಟ್‌ಫಾರ್ಮ್‌ಗಳಾದ ಫೇಸ್‌ಬುಕ್, ಮೆಸೆಂಜರ್, ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಮ್ ಅನ್ನು ಸ್ಥಗಿತಗೊಳಿಸಲು ಸರ್ಕಾರ ಆದೇಶಿಸಿದೆ. 4G ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸುವಂತೆ ಮೊಬೈಲ್ ಆಪರೇಟರ್‌ಗಳಿಗೆ ಆದೇಶಿಸಲಾಗಿದೆ ಎಂದು ಪತ್ರಿಕೆ ತಿಳಿಸಿದೆ.
ಪ್ರಧಾನಿ ಹಸೀನಾ ಮನವಿ: ”ಪ್ರತಿಭಟನೆಯ ಹೆಸರಿನಲ್ಲಿ ದೇಶಾದ್ಯಂತ ವಿಧ್ವಂಸಕ ಕೃತ್ಯದಲ್ಲಿ ತೊಡಗಿರುವವರು ವಿದ್ಯಾರ್ಥಿಗಳಲ್ಲ. ಆದರೆ ಭಯೋತ್ಪಾದಕರು. ಈ ಭಯೋತ್ಪಾದಕರನ್ನು ಹತ್ತಿಕ್ಕಲು ನಾನು ದೇಶವಾಸಿಗಳಿಗೆ ಮನವಿ ಮಾಡುತ್ತೇನೆ” ಎಂದು ಪ್ರಧಾನಿ ಹಸೀನಾ ಹೇಳಿದರು
ಮೂರು ದಿನಗಳ ಸಾರ್ವತ್ರಿಕ ರಜೆ: ಹಸೀನಾ ಅವರು ಭದ್ರತಾ ವ್ಯವಹಾರಗಳ ರಾಷ್ಟ್ರೀಯ ಸಮಿತಿಯ ಸಭೆಯನ್ನು ಕರೆದಿದ್ದಾರೆ. ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. ಸಭೆಯಲ್ಲಿ ಸೇನೆಯ ಮುಖ್ಯಸ್ಥರು, ನೌಕಾಪಡೆ, ವಾಯುಪಡೆ, ಪೊಲೀಸ್, ಆರ್‌ಎಬಿ, ಬಿಜಿಬಿ ಮತ್ತು ಇತರ ಉನ್ನತ ಭದ್ರತಾ ಅಧಿಕಾರಿಗಳು ಭಾಗವಹಿಸಿದ್ದರು. ಹೊಸ ಹಿಂಸಾಚಾರವು ದೇಶದ ಹಲವಾರು ಭಾಗಗಳಿಗೆ ಹರಡುತ್ತಿದ್ದಂತೆ ಸಭೆ ನಡೆಯಿತು. ದೇಶಾದ್ಯಂತ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸೋಮವಾರ, ಮಂಗಳವಾರ ಮತ್ತು ಬುಧವಾರದಂದು ಮೂರು ದಿನ ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಿಸಿದೆ.
ಅಪರಾಧ
ಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!
ಬೆಂಗಳೂರು, ಏಪ್ರಿಲ್ 04: ನಗರದಲ್ಲಿ IPL 2026 ಟಿಕೆಟ್ ಕ್ರೇಜ್ ಜೋರಾಗಿರುವ ನಡುವೆ ಆನ್‌ಲೈನ್ ಮೋಸದ ಪ್ರಕರಣವೂ ಬೆಳಕಿಗೆ ಬಂದಿದೆ. ಅನಧಿಕೃತ ಪ್ಲಾಟ್‌ಫಾರ್ಮ್ ಮೂಲಕ ಟಿಕೆಟ್ ಖರೀದಿಸಲು ಯತ್ನಿಸಿದ ಟೆಕ್ಕಿ ಒಬ್ಬರು ₹1.46 ಲಕ್ಷ ಕಳೆದುಕೊಂಡಿರುವ ಘಟನೆ ಕ್ರಿಕೆಟ್ ಅಭಿಮಾನಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.
Bengaluruನ ಬಿ. ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ, Instagramನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮೋಸಕ್ಕೆ ಒಳಗಾಗಿದ್ದಾರೆ. ಆತ ತನ್ನನ್ನು M. Chinnaswamy Stadium ಟಿಕೆಟ್ ಕೌಂಟರ್ ಹಿರಿಯ ಮೇಲ್ವಿಚಾರಕ ಸುಮಿತ್ ಬಿಸ್ವಾಲ್ ಎಂದು ಪರಿಚಯಿಸಿಕೊಂಡು ನಂಬಿಕೆ ಮೂಡಿಸಿದ್ದಾನೆ.
ಮೊದಲಿಗೆ ಎರಡು ಟಿಕೆಟ್‌ಗಳಿಗೆ ₹3,700 ಕೇಳಿದ ಆರೋಪಿಯು, ಬಳಿಕ ಭದ್ರತಾ ಠೇವಣಿ, ಐಡಿ ಕಾರ್ಡ್ ಮತ್ತು ಫುಡ್ ಕೂಪನ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾನೆ. ಪಂದ್ಯದ ದಿನ ಗೇಟ್ ನಂ.10 ಬಳಿ ಬರಲು ಹೇಳಿ ನಕಲಿ ಇಮೇಲ್ ದೃಢೀಕರಣವನ್ನೂ ಕಳುಹಿಸಿದ್ದಾನೆ.
ಆತನ ಮಾತು ನಂಬಿದ ಟೆಕ್ಕಿ, ತನ್ನ ಹಾಗೂ ತಾಯಿಯ ಖಾತೆಯಿಂದ ಯುಪಿಐ ಮೂಲಕ ಒಟ್ಟು ₹1.46 ಲಕ್ಷ ವರ್ಗಾವಣೆ ಮಾಡಿದ್ದಾರೆ. ಆದರೆ ಹಣ ಪಡೆದ ಬಳಿಕ ಆರೋಪಿಯು ಟಿಕೆಟ್ ನೀಡದೆ ಸಂಪರ್ಕ ಕಡಿತಗೊಳಿಸಿದ್ದಾನೆ.
ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಐಪಿಎಲ್ ಟಿಕೆಟ್ ಖರೀದಿಸುವಾಗ ಅಧಿಕೃತ ವೆಬ್‌ಸೈಟ್ ಅಥವಾ ಮಾನ್ಯ ಮಾರಾಟಗಾರರ ಮೂಲಕವೇ ಖರೀದಿಸಲು ಸಲಹೆ ನೀಡಿದ್ದಾರೆ. ಅನಧಿಕೃತ ಲಿಂಕ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವ್ಯವಹಾರ ಮಾಡುವುದರಿಂದ ಇಂತಹ ಮೋಸಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.
ಅಪರಾಧ
ಶಿಡ್ಲಘಟ್ಟದಲ್ಲಿ ರೌಡಿ ಶೀಟರ್‌ಗಳಿಗೆ ಕಟ್ಟೆಚ್ಚರ: ಗೈರುಹಾಜರಾದರೆ ಕಠಿಣ ಕ್ರಮ
ಶಿಡ್ಲಘಟ್ಟ: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ರೌಡಿ ಶೀಟರ್‌ಗಳ ಮೇಲೆ ನಿಗಾವಣೆಯನ್ನು ಮತ್ತಷ್ಟು ಬಲಪಡಿಸಲಾಗಿದೆ.
ರೌಡಿ ಶೀಟರ್‌ಗಳ ಪರೇಡ್
ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಮುರಳಿಧರ್ ನೇತೃತ್ವದಲ್ಲಿ ಶುಕ್ರವಾರ ರೌಡಿ ಶೀಟರ್‌ಗಳ ಪರೇಡ್ ನಡೆಯಿತು. ಠಾಣಾ ವ್ಯಾಪ್ತಿಯ ಎಲ್ಲಾ ರೌಡಿ ಶೀಟರ್‌ಗಳನ್ನು ಕಡ್ಡಾಯವಾಗಿ ಹಾಜರುಪಡಿಸಿ ಪರಿಶೀಲನೆ ನಡೆಸಲಾಯಿತು.
ಗೈರುಹಾಜರಾದರೆ ಕಾನೂನು ಕ್ರಮ
ಪರೇಡ್‌ಗೆ ಗೈರುಹಾಜರಾಗುವ ರೌಡಿ ಶೀಟರ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಮುರಳಿಧರ್ ಎಚ್ಚರಿಕೆ ನೀಡಿದ್ದಾರೆ.
ಅಪರಾಧ ನಿಯಂತ್ರಣಕ್ಕೆ ಕ್ರಮ
ಶಿಡ್ಲಘಟ್ಟ ನಗರ, ಗ್ರಾಮಾಂತರ ಹಾಗೂ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯುವುದು ಪ್ರಮುಖ ಗುರಿಯಾಗಿದೆ. ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರಿಗೆ ಭದ್ರತೆ
ಇಂತಹ ನಿಯಮಿತ ಪರೇಡ್‌ಗಳ ಮೂಲಕ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದರ ಜೊತೆಗೆ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವುದು ಪೊಲೀಸರ ಉದ್ದೇಶವಾಗಿದೆ.
ಅಧಿಕಾರಿಗಳ ಉಪಸ್ಥಿತಿ
ಈ ಸಂದರ್ಭದಲ್ಲಿ ಸಿಪಿಐ ಆನಂದ್, ಪಿಎಸ್‌ಐ ವೇಣುಗೋಪಾಲ್, ಸುನಿಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಅಪರಾಧ
ಕಲಬುರಗಿಯಲ್ಲಿ ಭೀಕರ ಹತ್ಯೆ: ಮಾಜಿ ಸಚಿವರ ಸಂಬಂಧಿ ಫೈನಾನ್ಸ್ ಕಚೇರಿಯಲ್ಲೇ ಕೊಚ್ಚಿ ಕೊಲೆ
ಕಲಬುರಗಿ: ನಗರದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಫೈನಾನ್ಸ್ ಕಚೇರಿಯಲ್ಲೇ ಹತ್ಯೆ
ಪಿ & ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿ ನಡೆದ ಈ ಘಟನೆದಲ್ಲಿ 45 ವರ್ಷದ ಅನೀಲ್ ರಾಠೋಡ್ ಎಂಬವರು ಸಾವನ್ನಪ್ಪಿದ್ದಾರೆ. ಅವರು ಸಿದ್ದೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದರು.
ಹಣಕಾಸು ವ್ಯವಹಾರವೇ ಕಾರಣ?
ಘಟನೆ ನಡೆದ ರಾತ್ರಿ, ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ಅನೀಲ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಹಣಕಾಸಿನ ವಿಚಾರಕ್ಕೆ ಜಗಳ ತೀವ್ರಗೊಂಡಿದ್ದು, ಬಳಿಕ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೈದು ಪರಾರಿಯಾಗಿದ್ದಾರೆ. ಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ಈ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾವು
ಹಠಾತ್ ದಾಳಿ ನಡೆದಾಗ ಅನೀಲ್ ರಾಠೋಡ್ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಕಚೇರಿ ಬಾಗಿಲು ಬಳಿ ಅವರನ್ನು ಬೆನ್ನಟ್ಟಿ ಕೊಚ್ಚಿ ಕೊಲೆ ಮಾಡಲಾಗಿದೆ.
ಪೊಲೀಸರ ತನಿಖೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಬಳಸಿಕೊಂಡು ಸಾಕ್ಷ್ಯ ಸಂಗ್ರಹಿಸಲಾಗಿದೆ. ಹಂತಕರ ಬಂಧನಕ್ಕಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಕುಟುಂಬದ ಆರೋಪ
ಮೃತನ ಕುಟುಂಬಸ್ಥರು, “ಹಣಕಾಸಿನ ವಿಚಾರಕ್ಕೆ ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಜೀವ ಬೆದರಿಕೆ ಇದೆ ಎಂದು ಮೊದಲು ಹೇಳಿಕೊಂಡಿದ್ದ” ಎಂದು ಆರೋಪಿಸಿದ್ದಾರೆ.
ಹೆಚ್ಚುತ್ತಿರುವ ಅಪರಾಧ
ನಗರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಸರಣಿ ಹತ್ಯೆಗಳು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಈ ಪ್ರಕರಣದ ನಿಖರ ಕಾರಣ ತನಿಖೆಯ ಬಳಿಕವೇ ಬಹಿರಂಗವಾಗಲಿದೆ.
-
ದೇಶ6 hours ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ6 hours agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ5 hours agoಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
-
ದೇಶ6 hours agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ಕ್ರೀಡೆ3 hours agoಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
-
ದೇಶ6 hours ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ6 hours agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ6 hours agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
