Connect with us

ರಾಜಕೀಯ

BJP ಅವಧಿಯ ಭ್ರಷ್ಟಾಚಾರ, ಹಗರಣಗಳ ಟಾರ್ಗೆಟ್ ಮಾಡಿದ ‘ಕೈ’ ಹೈಕಮಾಂಡ್; ಮಾಜಿ ಸಿಎಂಗೆ ಸಂಕಷ್ಟ?

ರಾಜ್ಯ ಸರ್ಕಾರದ ವಿರುದ್ಧ ಅದರಲ್ಲೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ದೋಸ್ತಿಗಳು ಮಾಡುತ್ತಿರುವ ಪಾದಯಾತ್ರೆ ಭರ್ಜರಿಯಾಗಿ ಸಾಗಿದೆ. ಕಾಂಗ್ರೆಸ್​ ನಾಯಕರ ಯಾವುದೇ ರಣತಂತ್ರಗಳಿಗೂ ಮಣಿಯದೇ ಮೈತ್ರಿ ಪಡೆಗಳು ಒಗ್ಗಟ್ಟಾಗಿ ಹೆಜ್ಜೆ ಹಾಕುತ್ತಿದ್ದು, ಮೈಸೂರು ಚಲೋ 3ನೇ ದಿನಕ್ಕೆ ಕಾಲಿಟ್ಟಿದೆ. 2ನೇ ದಿನದ ಪಾದಯಾತ್ರೆಯಲ್ಲಿ ದಳಪತಿಯೇ ಅಖಾಡಕ್ಕಿಳಿದು ಮೈಸೂರು ಚಲೋಗೆ ಬಲ ತುಂಬಿದ್ರು. ಇತ್ತ ಕಮಲ-ದಳದ ಪಾದಯಾತ್ರೆ ಮೈಲೇಜ್​ ಪಡೆದುಕೊಳ್ತಿದ್ದಂತೆ ಅತ್ತ ಕಾಂಗ್ರೆಸ್​ ಹೈಕಮಾಂಡ್​ ರಂಗ ಪ್ರವೇಶ ಮಾಡಿದೆ.

ಬಿಜೆಪಿ ಕಾಲದ ಹಗರಣ ಕೆದಕಲು ಕೈ ಹಾಕಿದ ‘ಹಸ್ತ’ ನಾಯಕರು

ಬಿಜೆಪಿ-ಜೆಡಿಎಸ್​ ಪಾದಯಾತ್ರೆಗೆ ಠಕ್ಕರ್​ ಕೊಡಲು ಕಾಂಗ್ರೆಸ್​ ಜನಾಂದೋಲನ ಹೋರಾಟ ಮಾಡ್ತಿದೆ. ಪಾದಯಾತ್ರೆ ಮುಂದೆ ಸಾಗುತ್ತಲೇ ಇದೆ. ಇದು ಕಾಂಗ್ರೆಸ್​ ಹೈಕಮಾಂಡ್​ನ ನಿದ್ದೆಗೆಡಿಸಿದೆ. ಹೀಗಾಗಿ ಬಿಜೆಪಿ ಅವಧಿಯ 3 ಹಳೇ ಹಗರಣಗಳ ಬಗ್ಗೆ ಮತ್ತೆ ಕೆದಕಲು ದೆಹಲಿ ನಾಯಕರು ಕೈ ಹಾಕಿದ್ದಾರೆ. ಹೈಕಮಾಂಡ್​ ನಾಯಕರ ಸೂಚನೆ ಮೇರೆಗೆ ರಾಜ್ಯಕ್ಕೆ ಆಗಮಿಸಿದ ಕೆ.ಸಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ರಾಜ್ಯ ನಾಯಕರ ಜೊತೆ ಸಭೆ ನಡೆಸಿ, ಬಿಜೆಪಿ ಕಾಲದ ಹಗರಣಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಬಿಜೆಪಿ ಹಗರಣ..‘ಕೈ’ ಟಾರ್ಗೆಟ್!

  • ಬಿಟ್ ಕಾಯಿನ್, ಕೊರೊನಾ, ಪಿಎಸ್ಐ ಅಕ್ರಮ‌ ನೇಮಕಾತಿ
  • ಈ ಮೂರು ಸೇರಿ ಹಲವು ಹಗರಣಗಳ ತನಿಖೆ ಏನಾಯಿತು?
  • ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಡಾ.ಕೆ ಸುಧಾಕರ್
  • ಅಶ್ವತ್ಥ್ ನಾರಾಯಣ್, ಅಶೋಕ್ ವಿರುದ್ಧ ಆರೋಪಗಳಿವೆ
  • ಆರೋಪ ಸಾಬೀತಾಗಲು ದಾಖಲೆಗಳಿದ್ರೂ ಯಾಕೆ ಬಂಧಿಸಿಲ್ಲ?
  • ಬಿಜೆಪಿ ಅಕ್ರಮ ಬಗ್ಗೆ ಯಾಕೆ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿಲ್ಲ?
  • ಅವುಗಳ ತನಿಖೆ ಎಲ್ಲಿಯವರೆಗೆ ಬಂದಿದೆ.. ವರದಿ ತರಿಸಿಕೊಳ್ಳಿ
  • ನೀವು ಕ್ರಮ ತೆಗೆದುಕೊಂಡಿದ್ರೆ ಬಿಜೆಪಿ ಪಾದಯಾತ್ರೆ ಮಾಡ್ತಿರಲಿಲ್ಲ
  • ನಿಮ್ಮ ಉದಾಸೀನತೆಯೇ ಬಿಜೆಪಿಗರಿಗೆ ಆಹಾರವಾಗಿ ಸಿಕ್ಕಿದೆ
  • ಸಿಎಂ, ಡಿಸಿಎಂ ಮಾತ್ರ ಮಾತನಾಡೋದಲ್ಲ, ಸಚಿವರು ಮಾತಾಡಿ
  • ಬಿಜೆಪಿ, ಜೆಡಿಎಸ್ ಕಾಲದ ಹಗರಣದ ಬಗ್ಗೆ ಸಚಿವರು ಮಾತನಾಡಿ
  • ಅಡ್ಜಸ್ಟಮೆಂಟ್ ರಾಜಕಾರಣ ಬಿಟ್ಟು ಜೋರಾಗಿ‌ ಮಾತನಾಡಬೇಕು.

ಇವತ್ತು ಕಾಂಗ್ರೆಸ್​ ಇದರ ವಿರುದ್ಧ ಹೋರಾಡಬೇಕೆಂದು ನಿರ್ಧರಿಸಿದೆ. ಇದು ಬಿಜೆಪಿ, ಜೆಡಿಎಸ್​ನ ಷಡ್ಯಂತ್ರ. ಆ ಸತ್ಯ ಕರ್ನಾಟಕದ ಜನರಿಗೆ ತಿಳಿಸಬೇಕು. ಕರ್ನಾಟಕದ ಜನರಿಗೆ ಸದ್ಯ ಸತ್ಯವನ್ನ ಹೇಳಬೇಕಿದೆ. ಅದಕ್ಕಾಗಿ ಸಚಿವರಿಗೆ ಹೇಳಿದ್ದೇವೆ. ಪ್ರತಿ ಜಿಲ್ಲೆ, ವಿಧಾನಸಭಾ ಕ್ಷೇತ್ರಗಳಿಗೆ ಹೋಗಿ. ಮತ್ತೆ ಕರ್ನಾಟಕದ ಜನರಿಗೆ ಅಕ್ರಮಗಳ ಬಗ್ಗೆ ವಿವರಿಸಿ. ಗ್ಯಾರಂಟಿಗಳ ಮೂಲಕ ಜನರಿಗೆ ಎಷ್ಟು ನೀಡುತ್ತಿದ್ದೇವೆ. ಗ್ಯಾರಂಟಿಗಳನ್ನು ಮುಗಿಸಲು ಬಿಜೆಪಿ ಯಾವ ರೀತಿ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಿದೆ ಎನ್ನುವುದನ್ನ.

ಕೆ.ಸಿ.ವೇಣುಗೋಪಾಲ್​, ಎಐಸಿಸಿ ಪ್ರಧಾನ ಕಾರ್ಯದರ್ಶಿ.

ಇದೇ ವೇಳೆ ರಾಜ್ಯಪಾಲರ ನಡೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ ವೇಣುಗೋಪಾಲ್​, ಬಿಜೆಪಿ–ಜೆಡಿಎಸ್‌ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದೆ ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ರು.

ಬೆಂಗಳೂರು

ಅಗಸ್ಟ್ 10 ರಂದು ಬೆಂಗಳೂರು ಮೆಟ್ರೋ ಫೇಸ್-3 ಶಂಕುಸ್ಥಾಪನೆ: ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 10ರಂದು ಪ್ರಧಾನಿ ಮೋದಿ ಮೆಟ್ರೋ ಯೆಲ್ಲೋ ಲೈನ್ ಅನ್ನು ಉದ್ಘಾಟಿಸುವುದರ ಜೊತೆಗೆ ಜೆಪಿ ನಗರ ವೆಗಾಸಿಟಿ ಮಾಲ್‌ನಿಂದ ಕಡಬಗೆರೆವರೆಗೆ ವಿಸ್ತರಿಸಲಾಗಿರುವ ಮೆಟ್ರೋ ಮಾರ್ಗದ ಶಂಕುಸ್ಥಾಪನೆ ಕಾರ್ಯವನ್ನು ಸಹ ನೆರವೇರಿಸಲಿದ್ದಾರೆ,” ಎಂದು ಹೇಳಿದರು.

ಈ ಯೋಜನೆಯು ಸುಮಾರು ₹17,000 ಕೋಟಿ ವೆಚ್ಚದ ಫೇಸ್-3 ಯೋಜನೆಯ ಭಾಗವಾಗಿದೆ. ಮೊದಲೇ ಯೆಲ್ಲೋ ಲೈನ್ ಶಂಕುಸ್ಥಾಪನೆಗೆ ಮೋದಿ ಅವರೇ ಆಗಿದ್ದರೆ, ಈಗ ಉದ್ಘಾಟನೆಯ ಗೌರವವೂ ಅವರಿಗೇ ಸಲ್ಲಲಿದೆ.

ಡಿಸಿಎಂ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಯೋಜನೆಯಲ್ಲಿ ರಾಜ್ಯದ ಪಾತ್ರವಿದೆ ಎಂದು ಹೇಳಿರುವುದರ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸುತ್ತಾ, “ಇದುವರೆಗೆ ಈ ಯೋಜನೆಯ ಬಗ್ಗೆ ಯಾವ ರಾಜ್ಯ ಸಚಿವರೂ ಚಿಂತೆ ಮಾಡಿಲ್ಲ. ಪ್ರಧಾನಿ ಬರುವ ಸುದ್ದಿ ತಿಳಿಯುತ್ತಿದ್ದಂತೆ ಕ್ರೆಡಿಟ್ ಕಳಿಸಲು ಮುಂದಾಗಿದ್ದಾರೆ,” ಎಂದು ಟೀಕಿಸಿದರು.

ಫ್ಲೈಓವರ್ ಪ್ರಗತಿಯ ಮೇಲೂ ಟೀಕೆ:
“ಈಜಿಪುರದ 2.5 ಕಿ.ಮೀ ಫ್ಲೈಓವರ್‌ನ್ನು ಎಂಟು ವರ್ಷಗಳಿಂದ ಪೂರ್ಣಗೊಳಿಸಲಾಗಿಲ್ಲ. ಅದರೆ ಇದೀಗ 100 ಕಿ.ಮೀ ರಸ್ತೆಗಳ ಯೋಜನೆ ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.

ಮೆಟ್ರೋ ಯೋಜನೆಗೆ ಹಿಂದೆ ಸರ್ಕಾರದ ಕೊಡುಗೆ:
ಕೊರೋನಾ ಸಮಯದಲ್ಲೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಅನುದಾನ ಒದಗಿಸಿ ಕೆಲಸ ಮುಂದುವರೆದಿದ್ದವು. ಆದರೆ ಇದೀಗ ಎಂಡಿ ನೇಮಕ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

ರಾಜಕೀಯ

ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.

ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.

ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.

ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:

“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.

Continue Reading

Trending