ಬೆಂಗಳೂರು
3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ-ಕೈ ಜನಾಂದೋಲನ ಸಭೆಗೆ 4 ನೇ ದಿನ!

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಶನಿವಾರ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭಿಸಿದ್ದು, ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ,
ಕಹಳೆ ಊದುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬ.ವೈ.ವಿಜಯೇಂದ್ರ ಯಾತ್ರೆಗೆ ಚಾಲನೆ ನೀಡಿದ್ದಾರೆ, ನಿಖಿಲ್ ಕುಮಾರಸ್ವಾಮಿ, ಡಾ.ಮಂಜುನಾಥ್, ಅಶ್ವತ ನಾರಾಯಣ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದಾರೆ, ಇಂದು ಕೆಂಗಲ್ ನಿಂದ ಹೊರಟ ಬಿಜೆಪಿ ಪಾದಯಾತ್ರೆಯು ನಿಡಘಟ್ಟದಲ್ಲಿ ವಾಸ್ತವ್ಯ ಮಾಡಲಿದೆ,
ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ಜನಾಂದೋಲನ ಸಭೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟದ್ದು, ಮದ್ದೂರಿನ ಕ್ರೀಡಾಂಗಣದಲ್ಲಿ ನಡೆಯುತ್ತಿದೆ, ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ,