ಕ್ರೀಡೆ
ರಾಹುಲ್ ದ್ರಾವಿಡ್ಗೆ ವಿದೇಶದಿಂದ ಬಿಗ್ ಆಫರ್.. ಕನ್ನಡಿಗನಿಗಾಗಿ ಈ ದೇಶದಲ್ಲಿ ಭಾರೀ ಫೈಟ್!

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2024/08/RAHUL_DRAVID-3.webp&description=ರಾಹುಲ್ ದ್ರಾವಿಡ್ಗೆ ವಿದೇಶದಿಂದ ಬಿಗ್ ಆಫರ್.. ಕನ್ನಡಿಗನಿಗಾಗಿ ಈ ದೇಶದಲ್ಲಿ ಭಾರೀ ಫೈಟ್!', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2024/08/RAHUL_DRAVID-3.webp&description=ರಾಹುಲ್ ದ್ರಾವಿಡ್ಗೆ ವಿದೇಶದಿಂದ ಬಿಗ್ ಆಫರ್.. ಕನ್ನಡಿಗನಿಗಾಗಿ ಈ ದೇಶದಲ್ಲಿ ಭಾರೀ ಫೈಟ್!', 'pinterestShare', 'width=750,height=350'); return false;" title="Pin This Post">
ಚಾಂಪಿಯನ್ ಕೋಚ್ ರಾಹುಲ್ ದ್ರಾವಿಡ್ಗೆ ಸಿಕ್ಕಾಪಟ್ಟೆ ಬೇಡಿಕೆ ಶುರುವಾಗಿದೆ. ಒಂದರ ಹಿಂದೆ ಮತ್ತೊಂದು ಆಫರ್, ದಿ ವಾಲ್ರನ್ನ ಹುಡುಕಿ ಬರ್ತಿವೆ. ಇದ್ರಲ್ಲಿ ಯಾವುದನ್ನ ಆಯ್ಕೆ ಮಾಡಿಕೊಳ್ಳಬೇಕು ಅಂತ ಭಾರತ ತಂಡದ ಮಾಜಿ ಕೋಚ್ಗೆ ಗೊಂದಲ ಶುರುವಾಗಿದೆ. ಅಷ್ಟಕ್ಕೂ ದ್ರಾವಿಡ್ಗೆ ಬಂದಿರೋ ಹೊಸ ಆಫರ್ ಯಾವುದು?
ನಿರುದ್ಯೋಗಿ’ ವಾಲ್ಗೆ 2 ಆಫರ್..! ದ್ರಾವಿಡ್ ಆಯ್ಕೆ ಯಾವುದು..?
ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿದ್ದೇ ಬಂತು. ದಿ ವಾಲ್ ಅದೃಷ್ಟವೇ ಬದಲಾಗಿದೆ. ಒಂದರ ಹಿಂದೆ ಒಂದು ಆಫರ್ ಅವರನ್ನ ಹುಡುಕಿಕೊಂಡು ಬರ್ತಿವೆ. ಮುಂದಿನ ಐಪಿಎಲ್ ಸೀಸನ್ನಲ್ಲಿ ಪ್ರಮುಖ ತಂಡವೊಂದರ ಹೆಡ್ಕೋಚ್ ಆಗ್ತಾರೆ ಅನ್ನು ಸುದ್ದಿ ಹರಿದಾಡ್ತಿರೋವಾಗಲೇ ಚಾಂಪಿಯನ್ ಕೋಚ್ಗೆ ಇದೀಗ ಮತ್ತೊಂದು ದೊಡ್ಡ ಆಫರ್ ಬಂದಿದೆ.
ಇಂಗ್ಲೆಂಡ್ ಕೋಚ್ ಆಗುವಂತೆ ದ್ರಾವಿಡ್ಗೆ ಆಹ್ವಾನ..!
ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ತಾನು ಇನ್ಮುಂದೆ ನಿರುದ್ಯೋಗಿ ಅಂದಿದ್ದ ಲೆಜೆಂಡ್ರಿ ರಾಹುಲ್ಗೆ ಇಂಗ್ಲೆಂಡ್ ತಂಡದ ಹೆಡ್ಕೋಚ್ ಆಫರ್ ಅರಸಿ ಬಂದಿದೆ. ಟಿ20 ವಿಶ್ವಕಪ್ ಹಾಗೂ ಒನ್ಡೆ ವಿಶ್ವಕಪ್ ಫೇಲ್ಯೂರ್ ಬೆನ್ನಲ್ಲೆ ECB ವೈಟ್ ಬಾಲ್ ಹೆಡ್ಕೋಚ್ ಮ್ಯಾಥ್ಯೂವ್ ಮೋಟ್ರನ್ನ ಕೆಳಗಿಳಿಸಿದೆ. ಇವರ ಬದಲಿಗೆ ಚಾಂಪಿಯನ್ ಕೋಚ್ ದ್ರಾವಿಡ್ರನ್ನ ನೇಮಿಸಿಕೊಳ್ಳಲು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಬೋರ್ಡ್ ಪ್ಲಾನ್ ಮಾಡಿದೆ.
ಈ ನಡುವಲ್ಲೆ ಮಾಜಿ ಚಾಂಪಿಯನ್ ಕ್ಯಾಪ್ಟನ್ ಇಯಾನ್ ಮಾರ್ಗನ್, ಕೂಡ ರಾಹುಲ್ ದ್ರಾವಿಡ್ ಇಂಗ್ಲೆಂಡ್ ತಂಡದ ವೈಲ್ಬಾಲ್ ಕೋಚ್ ಆದ್ರೆ, ಬೆಸ್ಟ್ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ದ್ರಾವಿಡ್ ತಂಡಕ್ಕೆ ಸೂಕ್ತ ಎಂದು ಮಾರ್ಗನ್ ಹೇಳಿದ್ದಾರೆ.
ಇಂಗ್ಲೆಂಡ್ ಕೋಚ್ ಆಗಲು ದಿಗ್ಗಜರಿಂದ ಪೈಪೋಟಿ..!
ಸದ್ಯ ಇಯಾನ್ ಮಾರ್ಗನ್ ಏನೋ ಇಂಗ್ಲೆಂಡ್ ತಂಡದ ಕೋಚ್ ಆಗಲು ರಾಹುಲ್ ದ್ರಾವಿಡ್ ಪರ ಬ್ಯಾಟ್ ಬೀಸಿದ್ದಾರೆ. ಆದರೆ ಇಂಗ್ಲೆಂಡ್ ತಂಡದ ಹೆಡ್ಕೋಚ್ ಹುದ್ದೆಗೇರುವುದು ಸುಲಭವಿಲ್ಲ. ಯಾಕಂದ್ರೆ ಈ ಸಿಂಹಾಸನದ ಪಟ್ಟಕ್ಕೆ ದಿಗ್ಗಜರ ನಡುವೆ ಪೈಪೋಟಿ ಏರ್ಪಟ್ಟಿದೆ. ದ್ರಾವಿಡ್ ಸೇರಿದಂತೆ ಸ್ಟೀಫನ್ ಪ್ಲೇಮಿಂಗ್, ರಿಕಿ ಪಾಂಟಿಂಗ್ ಹಾಗೂ ಕುಮಾರ್ ಸಂಗಕ್ಕಾರ ಈ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.
ದ್ರಾವಿಡ್ ಮುಂದಿದೆ ರಾಜಸ್ಥಾನದ ಹೆಡ್ ಕೋಚ್ ಆಫರ್..!
ದ್ರಾವಿಡ್ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಡ್ತಿದ್ದಂತೆ ರಾಜಸ್ಥಾನ ರಾಯಲ್ಸ್ ಗಾಳ ಹಾಕಿದೆ. 18ನೇ ಐಪಿಎಲ್ ಸೀಸನ್ನಲ್ಲಿ ರಾಜಸ್ಥಾನ ತಂಡದ ಹೆಡ್ಕೋಚ್ ಆಗುವಂತೆ ಆಫರ್ ಕೊಟ್ಟಿದೆ. ಈ ಬಗ್ಗೆ ದ್ರಾವಿಡ್ ಜೊತೆ ಮಾತುಕತೆ ನಡೆದಿದೆ. ಆದ್ರೆ, ನಿರ್ಧಾರ ಮಾತ್ರ ಸಸ್ಪೆನ್ಸ್ ಆಗುಳಿದಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!
ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
ಕ್ರೀಡೆ
ಭಾರತೀಯ ತಂಡದ ಕೋಚ್ ಗೌತಮ್ ಗಂಭೀರ್ ವಿರುದ್ಧ ಟೀಕೆ, ಬಿಸಿಸಿಐ ಸಹಾಯಕ ಕೋಚ್ ಮಾರ್ನೆ ಮಾರ್ಕೆಲ್-ಟೆನ್ ಡೊಶ್ಕಾಟೆ ಬದಲಾವಣೆ ಸಾಧ್ಯತೆ
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ಕೋಚಿಂಗ್ ಶೈಲಿಯನ್ನು ಮಾಜಿ ಕ್ರಿಕೆಟಿಗರು ಸೇರಿದಂತೆ ಸುನಿಲ್ ಗವಾಸ್ಕರ್, ರಿಕಿ ಪಾಂಟಿಂಗ್ ಸೇರಿದಂತೆ ಹಲವು ಹಿರಿಯರು ಭಾರೀ ಟೀಕೆ ಮಾಡಿದ್ದಾರೆ. ಈ ಟೀಕೆಗಳಿಗೆ ಸಂಬಂಧಿಸಿ, ಗಂಭೀರ್ ಮನವಿ ಮಾಡಿಕೊಂಡ ಸಹಾಯಕ ಕೋಚ್‌ಗಳಾದ ಮಾರ್ನೆ ಮಾರ್ಕೆಲ್ (ಬೌಲಿಂಗ್ ಕೋಚ್) ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತಿವೆ.
ಕಳೆದ ವರ್ಷ ಜುಲೈನಲ್ಲಿ ಗಂಭೀರ್ ಭಾರತದ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಮನವಿ ಮೇರೆಗೆ ಐಪಿಎಲ್ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ ಅಭಿಷೇಕ್ ನಾಯರ್, ಮಾರ್ಕೆಲ್ ಮತ್ತು ಡೊಶ್ಕಾಟೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧ ವೈಟ್ ವಾಷ್ ಹಾಗೂ ಆಸ್ಟ್ರೇಲಿಯಾ ತಂಡದ ಸೋಲುಗಳು ಬಿಸಿಸಿಐನಲ್ಲಿ ಅಸಮಾಧಾನ ಮೂಡಿಸಿದ ಕಾರಣ, ಮೊದಲನೆಯದಾಗಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಹುದ್ದೆಯಿಂದ ವಜಾಗೊಂಡಿದ್ದರು.
ಇದೇ ಹಿನ್ನೆಲೆಯಲ್ಲಿ, ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಸಹ ಇನ್ನೂ ಸಹ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಂಡದ ಆಯ್ಕೆ ಪ್ರಕ್ರಿಯೆ, ಆಟಗಾರರ ಕಾರ್ಯದೊತ್ತಡ, ಪಿಚ್ ಅನ್ವಯ 11 ಆಟಗಾರರ ಆಯ್ಕೆ ಮತ್ತು ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್‌ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ವ್ಯಕ್ತಪಡಿಸಿದೆ.
ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಥಾನಕ್ಕೂ ಸವಾಲು ಎದುರಾಗಿದೆ. 2023ರ ಜುಲೈನಲ್ಲಿ ನೇಮಕಗೊಂಡ ಈ ಸಮಿತಿ ಮುಖ್ಯಸ್ಥರ ನೇತೃತ್ವದಲ್ಲಿ ಭಾರತ ತಂಡದ ಪ್ರದರ್ಶನ ಕಳೆದ ಒಂದು ವರ್ಷದಿಂದ ತೀರಾ ಕಳಪೆಯಾಗಿದ್ದು, ಸಮರ್ಥ ಆಟಗಾರರ ಆಯ್ಕೆಯಲ್ಲಿ ನಿರಂತರ ಎಡವಾಟಗಳು ನಡೆದಿವೆ ಎಂದು ವಿಶ್ಲೇಷಣೆಗಳು ತಿಳಿಸುತ್ತಿವೆ.
ಕ್ರೀಡೆ
ಕನ್ನಡಿಗ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟ
ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರು ‘ಹುಬ್ಬಳ್ಳಿ ಟೈಗರ್ಸ್’ ತಂಡಕ್ಕೆ 13.20 ಲಕ್ಷ ರೂಪಾಯಿಗೆ ಮಾರಾಟ ಆಗಿದ್ದು, ಈ ಮೊತ್ತವು ಮಹಾರಾಜ ಟ್ರೋಫಿಯ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಯಾಗಿದೆ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಉತ್ತಮ ಪ್ರದರ್ಶನ ನೀಡಿ, ಅವರು ಈ ಯಶಸ್ಸಿಗೆ ಪಾತ್ರರಾಗಿದ್ದಾರೆ.
ಕಳೆದ ಐಪಿಎಲ್ ಪಂದ್ಯಾವಳಿಯಲ್ಲಿ ಗಾಯದಿಂದ ಕೆಲವು ಪಂದ್ಯಗಳಿಂದ ದೂರ ಉಳಿದರೂ, ದೇವದತ್ ಪಡಿಕ್ಕಲ್ ಅವರ ಸಾಮರ್ಥ್ಯ ಎಲ್ಲರ ಮನಸ್ಸಿಗೆ ತಲುಪಿತ್ತು. 2024ರ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌ನಿಂದ ಹೊರಬಂದ ಬಳಿಕ ಆರ್‌ಸಿಬಿ ತಂಡವು ಅವರನ್ನು 3.20 ಕೋಟಿ ರೂಪಾಯಿಗೆ ಖರೀದಿಸಿದೆ. ಇದೀಗ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು 13.20 ಲಕ್ಷ ರೂಪಾಯಿಗೆ ದೇವದತ್ ಪಡಿಕ್ಕಲ್ ಅವರನ್ನು ಪಡೆದಿದ್ದು, ಇದು ಟೂರ್ನಿಯ ದಾಖಲೆಯ ಬೆಲೆಯಾಗಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಜುಲೈ 15ರಂದು ಬೆಂಗಳೂರಿನಲ್ಲಿ ಆಯೋಜಿಸಿದ ಈ ಹರಾಜಿನಲ್ಲಿ ದೇವದತ್ ಪಡಿಕ್ಕಲ್ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಕನ್ನಡಿಗ ಕ್ರಿಕೆಟಿಗರಾಗಿದ್ದಾರೆ. ಮಹಾರಾಜ ಟ್ರೋಫಿಯಲ್ಲಿ ಪ್ರತಿ ಫ್ರಾಂಚೈಸಿಯು ಕನಿಷ್ಠ ಇಬ್ಬರು ಸ್ಥಳೀಯ ಆಟಗಾರರನ್ನು ತಂಡದಲ್ಲಿ ಇರಿಸಬೇಕು ಎಂಬ ನಿಯಮವಿದ್ದು, ಇದರಿಂದ ಸ್ಥಳೀಯ ಪ್ರತಿಭೆಗಳ ಪ್ರೋತ್ಸಾಹಕ್ಕೆ ದೊಡ್ಡ ಅವಕಾಶ ಸಿಗುತ್ತದೆ.
ಈ ವರ್ಷದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಭಿಮಾನಿಗಳಿಗೆ ಮೈದಾನದಲ್ಲಿ ವೀಕ್ಷಣೆಗೆ ಅವಕಾಶ ಇಲ್ಲ. ಆದರೂ ದೇವದತ್ ಪಡಿಕ್ಕಲ್ ಅವರ ಸಾಧನೆ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಯುವ ಕ್ರಿಕೆಟಿಗರಿಗೆ ಪ್ರೇರಣೆಯಾಗಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ