Connect with us

ದೇಶ

ಆರೋಗ್ಯ ವಿಮೆಯ ಜಿಎಸ್​ಟಿ ಕಡಿಮೆ ಮಾಡಿ: ಟಿಎಂಸಿ ಮುಖಂಡ ಒ’ಬ್ರಿಯಾನ್ ಒತ್ತಾಯ – GST on health insurance

ನವದೆಹಲಿ: ಆರೋಗ್ಯ ವಿಮಾ ಪಾಲಿಸಿಗಳಿಗೆ ವಿಧಿಸಲಾಗುತ್ತಿರುವ ಶೇ 18ರಷ್ಟು ಜಿಎಸ್ಟಿಯನ್ನು ಕಡಿಮೆ ಮಾಡುವಂತೆ ಟಿಎಂಸಿಯ ಹಿರಿಯ ನಾಯಕ ಡೆರೆಕ್ ಒ’ಬ್ರಿಯಾನ್ ಸೋಮವಾರ ಸರಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಇದೇ ರೀತಿಯ ಬೇಡಿಕೆಯನ್ನು ಮುಂದಿಟ್ಟು ಹಣಕಾಸು ಸಚಿವರಿಗೆ ಬರೆದ ಪತ್ರವನ್ನು ಉಲ್ಲೇಖಿಸಿದರು.

“ನಮ್ಮ ಬೇಡಿಕೆ ಸರಳವಾಗಿದೆ. ವೈದ್ಯಕೀಯ ಮತ್ತು ಆರೋಗ್ಯ ವಿಮೆಯ ಮೇಲೆ ಈಗ ವಿಧಿಸಲಾಗುತ್ತಿರುವ ಶೇ 18ರಷ್ಟು ಜಿಎಸ್ಟಿಯನ್ನು ಕಡಿಮೆ ಮಾಡಬೇಕು. ಇದು ಜನರಿಗೆ, ಮುಖ್ಯವಾಗಿ ಮಧ್ಯಮ ವರ್ಗದವರಿಗೆ ಹೊರೆಯಾಗುತ್ತಿರುವುದರಿಂದ ಇದನ್ನು ಕಡಿಮೆ ಮಾಡಲೇಬೇಕಿದೆ.” ಎಂದು ಡೆರೆಕ್ ಹೇಳಿದರು.

ಜಾಗತಿಕವಾಗಿ ಆರೋಗ್ಯ ವಿಮಾ ಪಾಲಿಸಿ ಪಡೆಯುವವರ ಪ್ರಮಾಣ ಶೇಕಡಾ 7 ರಷ್ಟಿದ್ದರೆ, ಇದು ಭಾರತದಲ್ಲಿ ಈಗಲೂ ಶೇ 4ರಷ್ಟಿದೆ ಎಂದು ಟಿಎಂಸಿ ನಾಯಕ ಒ’ಬ್ರಿಯಾನ್ ಸದನದ ಗಮನಸೆಳೆದರು. ವಿಮಾ ಕ್ಷೇತ್ರದಲ್ಲಿ ಶೇಕಡಾ 75 ರಷ್ಟು ಜೀವ ವಿಮಾ ಪಾಲಿಸಿಗಳು ಮತ್ತು ಶೇಕಡಾ 25 ರಷ್ಟು ವೈದ್ಯಕೀಯ ಪಾಲಿಸಿಗಳಿದ್ದು, ಈ ಕ್ಷೇತ್ರದಲ್ಲಿ ಅಸಮತೋಲನವಿದೆ ಎಂದು ಅವರು ಹೇಳಿದರು.

ಈ ನಿಟ್ಟಿನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದಾರೆ ಮತ್ತು ಅನೇಕ ವಿರೋಧ ಪಕ್ಷದ ಸಂಸದರು ಸಹ ಈ ಬಗ್ಗೆ ಧ್ವನಿ ಎತ್ತಿದ್ದಾರೆ ಎಂದು ಡೆರೆಕ್ ಹೇಳಿದರು.

“ಹಣಕಾಸು ಸಚಿವರು ನಮ್ಮ ಮಾತು ಕೇಳದಿದ್ದರೆ ಬಿಡಲಿ. ಕನಿಷ್ಠ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಅವರ ಮಾತನ್ನಾದರೂ ಅವರು ಕೇಳಲಿ” ಎಂದು ಅವರು ಹೇಳಿದರು.

ಜಿಎಸ್​ಟಿ ಕೌನ್ಸಿಲ್ ಮಾತ್ರ ಇದನ್ನು ಬದಲಾಯಿಸಬಹುದು ಎಂಬ ಸರ್ಕಾರದ ಸಮಜಾಯಿಷಿಯನ್ನು ಒಪ್ಪದ ಡೆರೆಕ್, “ಇದು ತಪ್ಪು ಹೇಳಿಕೆಯಾಗಿದೆ” ಎಂದರು ಮತ್ತು ಜಿಎಸ್​ಟಿ ಕೌನ್ಸಿಲ್​ನಲ್ಲೂ ಎನ್​ಡಿಎಗೆ ಬಹುಮತವಿರುವುದನ್ನು ಎತ್ತಿ ತೋರಿಸಿದರು.

“ಜಿಎಸ್​ಟಿ ಮಂಡಳಿ ಎಂಬ ಪರದೆಯ ಹಿಂದೆ ಅಡಗಿಕೊಳ್ಳಲು ನಾವು ಹಣಕಾಸು ಸಚಿವರಿಗೆ ಅವಕಾಶ ನೀಡಬಾರದು. ಇದು ಮಧ್ಯಮ ವರ್ಗದ ಸಮಸ್ಯೆಯಾಗಿದೆ. ಇದು ರಾಜಕೀಯ ವಿಷಯವಲ್ಲ” ಎಂದು ಡೆರೆಕ್ ಹೇಳಿದರು. ಹಿರಿಯ ನಾಗರಿಕರಿಗೆ ಬ್ಯಾಂಕುಗಳು ಕ್ರೆಡಿಟ್ ಕಾರ್ಡ್ ಗಳನ್ನು ನೀಡುತ್ತಿಲ್ಲ ಎಂದು ಕಾಂಗ್ರೆಸ್ ಸದಸ್ಯೆ ರೇಣುಕಾ ಚೌಧರಿ ಇದೇ ಸಂದರ್ಭದಲ್ಲಿ ಕಳವಳ ವ್ಯಕ್ತಪಡಿಸಿದರು.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending