Connect with us

ಕ್ರೀಡೆ

Breaking News ಅನರ್ಹ ಮಾಡಿದ್ದು ಫೋಗಟ್​ ವಿರುದ್ಧ ನಡೆದ ದೊಡ್ಡ ಷಡ್ಯಂತ್ರ’- ವಿಜೇಂದ್ರ ಸಿಂಗ್ ಶಾಕಿಂಗ್ ರಿಯಾಕ್ಷನ್!

Published

on

ಪ್ಯಾರಿಸ್: ಇಡೀ ದೇಶಕ್ಕೆ ದೇಶವೇ ಒಂದು ಕಾತರತೆಯನ್ನು, ಕುತೂಹಲವನ್ನು ಹೆಮ್ಮೆಯೊಂದನ್ನ ಎದೆಯಲ್ಲಿಟ್ಟುಕೊಂಡು ಕುಳಿತಿತ್ತು. ಈಗಾಗಲೇ ಮೂರು ಕಂಚಿನ ಪದಕಗಳು ಬಂದಿವೆ. ಚಿನ್ನ, ಬೆಳ್ಳಿ ಬಾಕಿಯಿದೆ. ಫೈನಲ್​ಗೆ ಲಗ್ಗೆಯಿಟ್ಟಿರುವ ಕುಸ್ತಿಪಟು ವಿನೇಶ್ ಪೋಗಟ್ ಹಾಗೂ ಜಾವಲಿನ್ ಎಸೆತಗಾರ ನೀರಜ್​ ಚೋಪ್ರಾ ಅದನ್ನು ಪೂರ್ಣಗೊಳಿಸಲಿದ್ದಾರೆ ಅನ್ನೋ ತೀವ್ರ ನಿರೀಕ್ಷೆಗಳ ತುದಿಗಾಲಲ್ಲಿ ಇಡೀ ದೇಶವೇ ನಿಂತಿತ್ತು. ಆದ್ರೆ ಇಂದು ಆಗಿದ್ದೇ ಬೇರೆ.

29 ವರ್ಷದ ವಿನೇಶ್​ ಎಂಬ ಮಹಾ ಕುಸ್ತಿ ಪ್ರವೀಣೆ, ಎದುರಾದ ಎಲ್ಲಾ ಸವಾಲುಗಳನ್ನು ಅಡ್ಡಡ್ಡ ಮಲಗಿಸಿ ಫೈನಲ್​ಗೆ ಎಂಟ್ರಿ ಪಡೆದಿದ್ದಳು. ಆದ್ರೆ 100 ರಿಂದ 150 ಗ್ರಾಮ್ ತೂಕ ಹೆಚ್ಚಾಯ್ತು ಅನ್ನೋ ಕಾರಣದಿಂದಾಗಿ ಬರಿಗೈಯಲ್ಲಿ ಪ್ಯಾರಿಸ್​ನಿಂದ ವಾಪಸ್​​​ ಬರುವಂತಾಗಿದೆ. ಇದು ಕೋಟ್ಯಾನುಕೋಟಿ ಭಾರತೀಯರ ಆಸೆಗೆ ತಣ್ಣೀರು ಎರಚಿದಂತಾಗಿದೆ. ನೀತಿ ನಿಯಮಗಳ ಅಡಿಯಲ್ಲಿ ಪೋಗಟ್ ಅನರ್ಹತೆ ಎಷ್ಟು ಸರಿ ಎಂದು ಈಗ ನ್ಯಾಯ ಅನ್ಯಾಯಗಳ ತಕ್ಕಡಿಯಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯನ್ನಿಟ್ಟು ತೂಗುತ್ತಿದ್ದಾರೆ. ಇದು ಭಾರತ ಹಾಗೂ ಭಾರತದ ಕುಸ್ತಿಪಟುವಿನ ವಿರುದ್ಧ ನಡೆದಿರುವ ದೊಡ್ಡ ಷಡ್ಯಂತ್ರ ಅನ್ನುತ್ತಿದ್ದಾರೆ 2008ರ ಬೀಜಿಂಗ್ ಒಲಿಂಪಿಕ್ಸ್​​ನಲ್ಲಿ ಬಾಕ್ಸಿಂಗ್ ವಿಭಾಗದಲ್ಲಿ ಕಂಚು ಪದಕ ಗೆದ್ದಿದ್ದ ವಿಜೇಂದ್ರ ಸಿಂಗ್​.

ವಿಜಯೇಂದ್ರ ಸಿಂಗ್ ಹೇಳಿದ್ದೇನು? 
ಇದು ಭಾರತ ಹಾಗೂ ವಿನೇಶ್ ಪೋಗಟ್​ ವಿರುದ್ಧ ನಡೆದಿರುವ ದೊಡ್ಡ ಷಡ್ಯಂತ್ರ. ಇಡೀ ರಾತ್ರಿಯೊಳಗೆ ಐದರಿಂದ ಆರು ಕೆಜಿ ತೂಕವನ್ನು ಒಬ್ಬ ಕ್ರೀಡಾಳು ಇಳಿಸುತ್ತಾನೆ. ಕೇವಲ 100 ರಿಂದ 150 ಗ್ರಾಂ ತೂಕ ದೊಡ್ಡ ವಿಷಯವಾ, ಪೋಗಟ್​ಗೆ ತೂಕ ಇಳಿಸಿಕೊಳ್ಳಲು ಒಂದು ಅವಕಾಶ ನೀಡಬೇಕಿತ್ತು. ಈ ರೀತಿಯ ಅರ್ಹತೆ ಈ ಹಿಂದೆ ಎಂದೂ ನಡೆದಿಲ್ಲ. ಇದು ಅಕ್ಷರಶಃ ಷಡ್ಯಂತ್ರ, ಯಾರಿಗೋ ನಮ್ಮ ಸಂತೋಷವನ್ನು ನೊಡುವುದು ಬೇಕಿಲ್ಲ. ಅವರಿಗೆ ಅದು ಜೀರ್ಣ ಆಗುತ್ತಿಲ್ಲ. ಹೀಗಾಗಿಯೇ ಕುಸ್ತಿಪಟುವನ್ನು ಅನರ್ಹಗೊಳಿಸುವ ಹೆಜ್ಜೆಯನ್ನಿಟ್ಟಿದ್ದಾರೆ ಎಂದು ವಿಜಯೇಂದ್ರ ಸಿಂಗ್ ಹೇಳಿದ್ದಾರೆ.

ಒಲಿಂಪಿಕ್ಸ್​ನಂತಹ ಕ್ರೀಡಾಕೂಟದೊಳಗೆ ಭಾಗವಹಿಸುವ ನಮ್ಮಂಥ ಕ್ರೀಡಾಪಟುಗಳಿಗೆ ಯಾವುದೇ ಕೈಬ್ರೋಹೈಡ್ರೆಟ್ಸ್ ಅಥವಾ ಪ್ರೊಟೀನ್​ನ ಅಗತ್ಯವಿಲ್ಲ. ನಾವು ಮೊದಲು ರಿಕವರಿ ಆಗಬೇಕು. ತೂಕ ನಿಯಂತ್ರಣ ಅನ್ನೋದು ಕ್ರೀಡಾಪಟುಗಳ ಬದುಕಿನಲ್ಲಿ ಮೊದಲ ಆದ್ಯತೆಯಾಗಿರುತ್ತೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ಕ್ರೀಡೆ

ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!

Published

on

By

ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.

ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.

ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.

Continue Reading

ಕ್ರೀಡೆ

ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!

Published

on

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.

ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.

ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Continue Reading

Trending