ಬೆಂಗಳೂರು
MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಸಾಧ್ಯತೆ, ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್ ಗೆ ಅನುಮತಿ ಕೋರಿ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಮನವಿ ಸಂಬಂಧ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಇನ್ನು ಕ್ರಮ ಕೈಗೊಂಡಿಲ್ಲ. ಈ ನಡುವಲ್ಲೇ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತನಿಖೆಗೆ ವಹಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆಂಬ ಊಹಾಪೋಹಗಳು ಶುರುವಾಗಿವೆ.
ಜುಲೈ 26ರಂದು ಅಬ್ರಹಾಂ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಇದರ ಬೆನ್ನಲ್ಲೇ ಆಗಸ್ಟ್ 1 ರಂದು, ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ನಡೆದ ಸಚಿವ ಸಂಪುಟವು ನೋಟಿಸ್ ವಾಪಸ್ ಪಡೆಯಲು ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿತು. ಅಲ್ಲದೆ, ಅರ್ಜಿಯನ್ನು ತಿರಸ್ಕರಿಸುವಂತೆಯೂ ಆಗ್ರಹಿಸಿತ್ತು.
ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆಯೇ ಅಥವಾ ಪ್ರಕರಣವನ್ನು ಸಿಬಿಐಗೆ ವಹಿಸುತ್ತಾರೆಯೇ ಎಂಬುದರ ಕುರಿತು ಕುತೂಹಲಗಳು ಮೂಡಿವೆ.
ನಡುವೆ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ಯಾವುದೇ ಘರ್ಷಣೆಯಾಗದಂತೆ ನೋಡಿಕೊಳ್ಳಲು ರಾಜ್ಯಪಾಲ ಗೆಹ್ಲೋಟ್ ಅವರು ಕಾನೂನು ಸಲಹೆಗಾರರ ಅಭಿಪ್ರಾಯವನ್ನೂ ತೆಗೆದುಕೊಂಡಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಸಚಿವರು ಸಲಹೆಯನ್ನು ನೀಡಿದಾಗ ರಾಜ್ಯಪಾಲರು ಇದಕ್ಕೆ ಅನುಗುಣವಾಗಿರುತ್ತಾರೆ ಎಂಬ ಭರವಸೆ ನನಗಿದೆ. ಏಕೆಂದರೆ ರಾಜಭವನ ರಾಜಕೀಯ ಆಟವಾಡುವ ಸ್ಥಳವಲ್ಲ. ಆದರೆ, ಬಿಜೆಪಿ ಆ ಪ್ರಯತ್ನವನ್ನು ಮಾಡುತ್ತಿದೆ. ಇದು ನಿಜಕ್ಕೂ ದುರದೃಷ್ಟಕರ ಸಂಗತಿ. 163ನೇ ವಿಧಿಯೂ ರಾಜ್ಯಪಾಲರು ತಮ್ಮ ವಿವೇಚನೆಯನ್ನು ಬಳಸಬಹುದು ಎಂದು ಹೇಳುತ್ತದೆ. ಆದರೆ, ಅದನ್ನು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಬಳಸುವಂತಿಲ್ಲ. ರಾಜ್ಯಪಾಲರು ಮಂತ್ರಿಮಂಡಲದ ನೆರವು ಮತ್ತು ಸಲಹೆಯನ್ನು ಮೀರಿ ಹೋಗಬಾರದು ಎಂದು ತಿಳಿಸಿದ್ದಾರೆ.
ಈ ವಿಚಾರವಾಗಿ ನಗರಾಭಿವೃದ್ಧಿ ಇಲಾಖೆಗೆಗೆ ಕಳೆದ ಒಂದು ವರ್ಷದಿಂದ 15 ಪತ್ರಗಳನ್ನು ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು 50- 50 ಅನುಪಾತವನ್ನು ರದ್ದು ಪಡಿಸಿ ಸೂಕ್ತ ಕ್ರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಜೊತೆಗೆ ತನಿಖಾ ಸಮಿತಿ ರಚಿಸಿ ಮುಡಾ ಆಯಕ್ತರ ವಿಚಾರಣೆ ಮಾಡುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಿದ್ದರು. ಆದರೆ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಯಾವುದೇ ಒಂದು ಬಡಾವಣೆ ನಿರ್ಮಾಣ ಮಾಡುವಾಗ ನಗರಾಭಿವೃದ್ಧಿ ಪ್ರಾಧಿಕಾರಿಗಳು ರೈತರನ್ನು ಒಪ್ಪಿಸಿ ಭೂಸ್ವಾಧೀನ ಮಾಡಬೇಕಾಗುತ್ತದೆ. ಹೀಗೆ ಮಾಡುವ ಸಂದರ್ಭದಲ್ಲಿ ರೈತರಿಗೆ ಪರಿಹಾರ ರೂಪದಲ್ಲಿ ಭೂಮಿಯ ಮೌಲ್ಯದಷ್ಟೇ ಹಣವನ್ನು ಅಥವಾ ಲೇಔಟ್ ಮಾಡುವಾಗ ಶೇ 50ರಷ್ಟು ನಿವೇಶನಗಳನ್ನು ನೀಡಬೇಕೆಂಬ ಒಪ್ಪಂದವಾಗುತ್ತದೆ. ಇವೆರಡೂ ಅಲ್ಲದಿದ್ದರೆ ವಶಪಡಿಸಿಕೊಂಡ ಭೂಮಿಯ ಮೌಲ್ಯದಷ್ಟೇ ಭೂಮಿಯನ್ನು ಇನ್ನೊಂದು ಕಡೆ ಗುರುತು ಮಾಡಿ ನೀಡುವುದು ಪ್ರಾಧಿಕಾರದ ಹೊಣೆಗಾರಿಕೆಯಾಗಿರುತ್ತದೆ.ಆದರೆ ಮೈಸೂರಿನಲ್ಲಿ ನಿರ್ಮಿಸಲ್ಪಟ್ಟ ಬಡಾವಣೆಗಳಲ್ಲಿ ಆ ರೀತಿ ಯಾವುದೇ ಮಾನದಂಡವನ್ನು ಅನುಸರಿಸಲಾಗಿಲ್ಲ ಎಂಬುದು ಈಗ ಕೇಳಿ ಬಂದಿರುವ ಆರೋಪವಾಗಿದೆ.
ಬೆಂಗಳೂರು
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನ ಆಕರ್ಷಕ ಪ್ರತಿಕೃತಿಗಳು

ಬೆಂಗಳೂರು: ಲಾಲ್‌ಬಾಗ್ ಉದ್ಯಾನದಲ್ಲಿ ನಾಳೆ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಗಾಜಿನ ಮನೆಯಲ್ಲಿ ಸ್ಥಾಪಿಸಿರುವ ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನವರ ಐಕ್ಯ ಮಂಟಪದ ಪ್ರತಿಕೃತಿಗಳು.
ತೋಟಗಾರಿಕೆ ಇಲಾಖೆ ವಿವಿಧ ರೀತಿಯ ಆಕರ್ಷಕ ಹೂವುಗಳಿಂದ ಗಾಜಿನ ಮನೆಯನ್ನು ಅಲಂಕಾರಗೊಳಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳು ಬಣ್ಣ ಬಣ್ಣದ ಹೂಸಸಿಗಳೊಂದಿಗೆ ಶೃಂಗಾರಗೊಂಡಿವೆ. ಈ ಪ್ರದರ್ಶನದಲ್ಲಿ ಆಂಥೋರಿಯಂ, ಗುಲಾಬಿ, ಆರ್ಕಿಡ್, ಜರ್ಬೇರಾ ಮತ್ತು ಸುಗಂಧ ರಾಜ ಸೇರಿದಂತೆ ಹಲವಾರು ಶೀತ ವಲಯದ ಹೂಗಳು ನೋಡುಗರ ಕಣ್ಮನ ಸೆಳೆಯಲಿವೆ.
ಬೋನ್ಸಾಯ್ ವನವನ್ನು ನವೀಕರಿಸಿ ವಿಭಿನ್ನ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಬೋನ್ಸಾಯ್ ಸಸಿಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಜೊತೆಗೆ ಇಕೆಬಾನಾ, ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಯ ಪ್ರದರ್ಶನವೂ ಈ ಶೋನಲ್ಲಿ ಒಳಗೊಂಡಿವೆ.
ಸುಮಾರು 2.5 ಲಕ್ಷದಿಂದ 3 ಲಕ್ಷ ಹೂವುಗಳಿಂದ ನಿರ್ಮಿತವಾಗಿರುವ ಗಾಜಿನ ಮನೆಯಲ್ಲಿ, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರಿನ ಕೋಟೆ ಪ್ರತಿಕೃತಿ ಸ್ಥಾಪಿಸಲಾಗಿದೆ. ಇದರ ಮುಂಭಾಗದಲ್ಲಿ ಅಶ್ವಾರೂಢ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳು ಹಾಗೂ ಹಿಂಭಾಗದಲ್ಲಿ ಐಕ್ಯ ಮಂಟಪದ ಪ್ರತಿಕೃತಿ ಇದೆ.
ಪ್ರವೇಶ ಶುಲ್ಕ:
- ಸಾಮಾನ್ಯ ದಿನ: ₹80
- ರಜಾದಿನಗಳು ಮತ್ತು ವಾರಾಂತ್ಯ: ₹100
ಈ ಪ್ರದರ್ಶನವು ನೈಸರ್ಗಿಕ ಸೌಂದರ್ಯ ಹಾಗೂ ಐತಿಹಾಸಿಕ ಮಹತ್ವವನ್ನು ಒಗ್ಗೂಡಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸುವ ನಿರೀಕ್ಷೆಯಿದೆ.
ಬೆಂಗಳೂರು
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.
ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.
2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.
ಬೆಂಗಳೂರು
ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.
ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.
ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.
ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!