Connect with us

ಬೆಂಗಳೂರು

ಭಾರತೀಯರು ತಲೆ ಎತ್ತಿ, ಎದೆ ತಟ್ಟಿ ಗೌರವಿಸುತ್ತ ಆಚರಿಸುವ ಸ್ವಾಭಿಮಾನದ ಹಬ್ಬವೇ ಆಗಸ್ಟ್ 15 ರ ಸ್ವಾತಂತ್ರೋತ್ಸ- ಶಾಸಕ ಎಸ್ ಟಿ ಸೋಮಶೇಖರ್

Published

on

ಬೆಂಗಳೂರು: ಭಾರತೀಯರು ತಲೆ ಎತ್ತಿ, ಎದೆ ತಟ್ಟಿ ಗೌರವಿಸುತ್ತ ಆಚರಿಸುವ ಸ್ವಾಭಿಮಾನದ ಹಬ್ಬವೇ ಆಗಸ್ಟ್ 15 ರ ಸ್ವಾತಂತ್ರೋತ್ಸ ಎಂದು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು, ಕೆಂಗೇರಿ ಉಪನಗರದ ಇಂದಿರಾ ಗಾಂಧಿ ಸರ್ಕಲ್ ನಲ್ಲಿ ಧ್ವಜ ರೋಹನ ಮಾಡಿ ನಂತರ ಮಾತನಾಡಿದ ಅವರು ದೇಶ ಮತ್ತು ದೇಶಾಭಿಮಾನ ಎದೆಯೊಳಗೆ ಇದ್ದಾಗ ಮಾತ್ರ ಸ್ವಾತಂತ್ರ್ಯ ಎಂಬುದು ಪರಪೂರ್ಣ ಅರ್ಥ ಪಡೆಯುತ್ತದೆ, ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯ ಪಾಲುಗಾರಿಕೆಯೂ ಮುಖ್ಯ ಪಾತ್ರ ವಹಿಸುತ್ತದೆ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಧಾರ್ಮಿಕ, ಸಾಂವಿಧಾನಿಕ, ರಾಜಕೀಯ, ಪ್ರಾದೇಶಿಕ, ಮಾನಿಸಕ ಮನಸ್ಧಿತಿ ಮತ್ತು ದೈಹಿಕ ವ್ಯಾಪ್ತಿ ಇವೆರಡರ ಸಮ್ಮಿಲನದ ಒಟ್ಟು ಒಂದೊಳ್ಳೆ ನಾಗರಿಕನ ವ್ಯಕ್ತಿತ್ವವೇ ಸ್ವಾತಂತ್ರ್ಯ ಎಂದರು,
ರಾಮರಾಜ್ಯದ ಕನಸು ಕಂಡ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೆಣ್ಣೊಬ್ಬಳು ಮಧ್ಯ ರಾತ್ರಿ ಒಬ್ಬಂಟಿಯಾಗಿ ರಸ್ತೆಯಲ್ಲಿ ನಡೆದಾಡಿದರೆ ಅವತ್ತು ಈ ದೇಶಕ್ಕೆ ಸಿಗುವುದು ನಿಜವಾದ ಸ್ವಾತಂತ್ರ್ಯ ಎಂದು ಹೇಳಿದ್ದರು, ಅದರೆ ಇಂದು ಭಯದಿಂದಲೇ ದಿನಚರಿ ವ್ಯವಹಾರಗಳನ್ನು ಮುಗಿಸಿ, ಸಂಜೆ ಆಗುತ್ತಲೇ ಭಯದಿಂದಲೇ ಮನೆ ಸೇರುವ ಸ್ಧಿತಿ ನಿರ್ಮಾಣವಾಗಿದೆ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಕಂಡ ರಾಮ ರಾಜ್ಯದ ಕನಸು, ಸ್ವಾಮಿ ವಿವೇಕಾನಂದರು ಕಂಡ ಬಲಿಷ್ಠ ಭಾರತದ ಕನಸುಗಳು, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕಂಡ ನವ ಭಾರತ ಸಮ ಸಮಾಜ ನಿರ್ಮಾಣದ ಕನಸು ಇಂದು ದೇಶದ ಸಂವಿಧಾನ ಮತ್ತು ದೇಶದ ಪ್ರಗತಿಗೆ ವಿರುದ್ಧವಾಗಿ ದಿಕ್ಕಾಪಾಲಾಗಿ ನಿರ್ದಿಷ್ಟ ಗುರಿಯಿಲ್ಲದೆ ಸಾಗುತ್ತಿದೆ, ದೊಡ್ಡ ದೊಡ್ಡ ಜನರು, ದೊಡ್ಡ ದೊಡ್ಡ ಕಾರುಗಳು ಬಂದವು ಹೋದವು, ಒಂದಷ್ಟು ಕಣ್ಣಿಗೆ ಮಣ್ಣೆರಾಚುವ ಹಣವು ಮನೆಯೊಳಗೆ ಬಂದು ಬಿದ್ದವು ಅದರೆ ತಂದೆ ತಾಯಿಗೆ ಜೀವನದ ಕೊನೆ ಗಳಿಗೆಯಲ್ಲಿ ಅಸರೆಯಾಗಬೇಕಾದ ಪ್ರೀತಿಯ ಮಗನಿಲ್ಲವಾಯಿತು, ಮುಗ್ದ ಮಗುವಿಗೆ ತಂದೆ ಎಂಬ ಪ್ರೀತಿ ಇಲ್ಲದೆ ಅನಾಥವಾಯಿತು ಎಂದರು, ಕಾರ್ಯಕ್ರಮದಲ್ಲಿ ಬಂಡೇಮಠ ವಾರ್ಡ್ ಅಧ್ಯಕ್ಷ ಟಿ.ಪ್ರಭಾಕರ್, ಸ್ವಾಭಿಮಾನ ಮಹಿಳಾ ಟ್ರಸ್ಟ್ ಅಧ್ಯಕ್ಷೆ ಅನುಪಮಾ ಪಂಚಾಕ್ಷರಿ, ಸ್ಧಳೀಯ ಕಾಂಗ್ರೆಸ್ ಮುಖಂಡರಾದ ಶಿವು, ಕೆ.ವೈ.ಕೃಷ್ಣ, ಸಜ್ಜಾದ್ ಬಾಬು, ರೋಹಿಣಿ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಧಿತರಿದ್ದರು,

ದೇಶ

ಕಾಂಗ್ರೆಸ್‌ನಲ್ಲಿ ಭಾರಿ ಶಿಸ್ತು ಕ್ರಮ: ನಟಿ ಭಾವನಾ ರಾಮಣ್ಣ ಸೇರಿ ಹಲವರಿಗೆ ಶಾಕ್

Published

on

ಬೆಂಗಳೂರು: Karnataka Pradesh Congress Committee ಪ್ರಮುಖ ಸಭೆಗೆ ಗೈರಾಗಿದ್ದ ಪದಾಧಿಕಾರಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ D. K. Shivakumar ಭಾರೀ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SSR) ಕುರಿತ ಮಹತ್ವದ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಆರೋಪದ ಮೇಲೆ ಹಲವು ಹಿರಿಯ ನಾಯಕರನ್ನು ಪಕ್ಷದ ಹುದ್ದೆಗಳಿಂದ ತಕ್ಷಣದಿಂದಲೇ ವಜಾಗೊಳಿಸಲಾಗಿದೆ.

ಈ ಕ್ರಮದಡಿ ಕೆಪಿಸಿಸಿ ವಕ್ತಾರರಾದ Niketh Raj Maurya, Bhavana Ramanna ಸೇರಿದಂತೆ ಶಿವಮೂರ್ತಿ ನಾಯಕ್, ಎಂ.ಸಿ. ವೇಣುಗೋಪಾಲ್, ಷಣ್ಮುಖ ಶಿವಳ್ಳಿ ಹಾಗೂ ಸಿ.ಆರ್. ಮನೋಹರ್ ಅವರಿಗೆ ಪಕ್ಷದಿಂದ “ಗೇಟ್ ಪಾಸ್” ನೀಡಲಾಗಿದೆ. ಇವರ ಜೊತೆಗೆ ಮೂವರು ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳನ್ನೂ ಹುದ್ದೆಗಳಿಂದ ಕೈಬಿಡಲಾಗಿದೆ.

ಬೆಂಗಳೂರಿನಲ್ಲಿ ನಡೆದ ಈ ಮಹತ್ವದ ಸಭೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ Randeep Singh Surjewala ಕೂಡ ಭಾಗವಹಿಸಿದ್ದರು. ಪಕ್ಷದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದ ಸಭೆಗೆ ಇಷ್ಟೊಂದು ಪ್ರಮಾಣದಲ್ಲಿ ನಾಯಕರು ಗೈರಾಗಿರುವುದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದರು ಎನ್ನಲಾಗಿದೆ.

ಸಭೆಯನ್ನು ಲಘುವಾಗಿ ತೆಗೆದುಕೊಂಡವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸುರ್ಜೇವಾಲಾ ಸೂಚನೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಈ ಮೂಲಕ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಇದೇ ವೇಳೆ ರಾಜ್ಯ ರಾಜಕೀಯದಲ್ಲಿ Siddaramaiah ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ ಈ ಕ್ರಮ ಕಾಂಗ್ರೆಸ್ ಪಾಳಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದೆ.

ಪಕ್ಷದಲ್ಲಿ ಹಿರಿಯರಾಗಿರಲಿ ಅಥವಾ ಪ್ರಮುಖ ಹುದ್ದೆಯಲ್ಲಿರಲಿ, ಜವಾಬ್ದಾರಿ ಮತ್ತು ಶಿಸ್ತು ಪಾಲನೆ ಕಡ್ಡಾಯ ಎಂಬುದನ್ನು ಡಿಕೆ ಶಿವಕುಮಾರ್ ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಿದ್ದಾರೆ.

Continue Reading

ದೇಶ

“ಭಗವಂತ ನನ್ನ ಆಸೆ ಈಡೇರಿಸಿದ್ದಾನೆ”: ಇಕ್ಬಾಲ್ ಹುಸೇನ್ ಭಾವನಾತ್ಮಕ ಮಾತು

Published

on

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ Iqbal Hussain ನೀಡಿರುವ ಹೇಳಿಕೆ ಹೊಸ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ D. K. Shivakumar ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವ ವಿಚಾರವಾಗಿ ಮಾತನಾಡಿದ ಅವರು, “ಭಗವಂತ ನನ್ನ ಆಸೆ ಈಡೇರಿಸಿದ್ದಾನೆ” ಎಂದು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, “ಭಗವಂತನ ದಯೆಯಿಂದ ಒಳ್ಳೆ ಕಾಲ ಬಂದಿದೆ. ನಮ್ಮ ನಾಯಕರಿಗೆ ರಾಜ್ಯದ ಜನರು ಬಯಸಿದ್ದನ್ನು ಭಗವಂತ ನೆರವೇರಿಸಿದ್ದಾನೆ. ಅವನಿಗೆ ಕೋಟಿ ಕೋಟಿ ನಮಸ್ಕಾರಗಳು” ಎಂದು ಹೇಳಿದ್ದಾರೆ.

“ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಪಕ್ಷದ ವರಿಷ್ಠರು ಶಿಸ್ತಿನಿಂದ ಇರಲು ಸೂಚಿಸಿದ್ದರು. ಕಾಲ ಬಂದಾಗ ಮಾತನಾಡಿ ಎಂದಿದ್ದರು. ಈಗ ಆ ಸಮಯ ಬಂದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಸುಳಿವನ್ನೂ ನೀಡಿದ್ದಾರೆ.

ಇನ್ನೂ ನಾಯಕರು ಬೆಂಗಳೂರಿಗೆ ಬಂದ ಬಳಿಕ ಅವರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದ ಅವರು, ಕಾರ್ಯಕರ್ತರು ಹಾಗೂ ನಾಯಕರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಇಕ್ಬಾಲ್ ಹುಸೇನ್, “ರಾತ್ರಿ ನನಗೆ ನಿದ್ದೆ ಬರಲಿಲ್ಲ. ದೆಹಲಿಯಲ್ಲಿ ಮಾತನಾಡಬೇಕಾದವರ ಜೊತೆ ಮಾತನಾಡುತ್ತಿದ್ದೆ. ಕ್ಷಣಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೆ” ಎಂದು ಹೇಳಿದ್ದಾರೆ.

ಈ ಹೇಳಿಕೆ ಇದೀಗ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ.

Continue Reading

ಬೆಂಗಳೂರು

“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!

Published

on

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗಿರುವ ನಡುವೆಯೇ Siddaramaiah ಅವರು “ನಾಳೆ ಮಾತನಾಡುತ್ತೇನೆ” ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

ಮಾಜಿ ಪ್ರಧಾನಿ Jawaharlal Nehru ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನೆಹರು ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.

ಕಾರ್ಯಕ್ರಮದ ವೇಳೆ ಮಾಧ್ಯಮ ಪ್ರತಿನಿಧಿಗಳು ದೆಹಲಿ ಪ್ರವಾಸ, ಕಾಂಗ್ರೆಸ್ ಹೈಕಮಾಂಡ್ ಸಭೆ ಹಾಗೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗಳನ್ನು ಕೇಳಿದಾಗ ಸಿದ್ದರಾಮಯ್ಯ ಯಾವುದೇ ವಿವರವಾದ ಪ್ರತಿಕ್ರಿಯೆ ನೀಡಲಿಲ್ಲ. “ಏನೇ ಇದ್ದರೂ ನಾಳೆ ಮಾತನಾಡುತ್ತೇನೆ” ಎಂದು ಒಂದೇ ಸಾಲಿನಲ್ಲಿ ಉತ್ತರಿಸಿ ಅಲ್ಲಿಂದ ತೆರಳಿದರು.

ಸಾಮಾನ್ಯವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಗಟ್ಟಿಯಾಗಿ ಪ್ರತಿಕ್ರಿಯಿಸುವ ಸಿದ್ದರಾಮಯ್ಯ, ಇಂದು ಮಾತ್ರ ಮೌನವಾಗಿದ್ದದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಅವರ ಮುಖಭಾವದಲ್ಲೂ ಬೇಸರ ಸ್ಪಷ್ಟವಾಗಿ ಕಾಣಿಸುತ್ತಿತ್ತು ಎಂದು ಕಾರ್ಯಕ್ರಮದಲ್ಲಿ ಭಾಗಿಯಾದವರು ಹೇಳುತ್ತಿದ್ದಾರೆ.

ಇಂದು ಮುಖ್ಯಮಂತ್ರಿ ಅವರಿಗೆ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಿರಲಿಲ್ಲ. ಹೀಗಾಗಿ ವಿಧಾನಸೌಧದಿಂದ ನೇರವಾಗಿ ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಗೆ ತೆರಳಿದ್ದಾರೆ.

ಇದೀಗ ನಾಳೆ ಬೆಳಗ್ಗೆ ತಮ್ಮ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ಬ್ರೇಕ್‌ಫಾಸ್ಟ್ ಸಭೆ ನಡೆಸಲಿರುವ ಸಿದ್ದರಾಮಯ್ಯ, ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಎಲ್ಲಾ ರಾಜಕೀಯ ಬೆಳವಣಿಗೆಗಳ ಬಗ್ಗೆ ಸ್ಪಷ್ಟನೆ ನೀಡುವ ನಿರೀಕ್ಷೆಯಿದೆ.

Continue Reading

Trending