Connect with us

ಬೆಂಗಳೂರು

ಕೈ ಮುಖಂಡೆಯಿಂದಲೇ ವಿದ್ಯುತ್ ಕಳವು..!

Published

on

ಚಿಕ್ಕಮಂಗಳೂರು: ರಾಜ್ಯ ಸರ್ಕಾರ ಗೃಹ ಜ್ಯೋತಿಯಡಿಯಲ್ಲಿ ಪ್ರತಿ ಮನೆಗೆ 200 ಯೂನಿಟ್‍ಗಳ ಯೂನಿಟ್‍ಗಳ ತನಕ ಫ್ರೀ ಕರೆಂಟ್ ಕೊಟ್ಟಿದ್ದರು ಕೂಡ ಕಾಂಗ್ರೆಸ್ ನಾಯಕಿಯೊಬ್ಬರು ಅಕ್ರಮವಾಗಿ ಕರೆಂಟ್ ಕದ್ದು ಸಿಕ್ಕಿ ಬಿದ್ದಿರುವ ಘಟನೆ ಚಿಕ್ಕಮಂಗಳೂರಿನಲ್ಲಿ ನಡೆದಿದೆ,
ಜಿಲ್ಲೆ ಯ ಎನ್.ಆರ್.ಪುರ ತಾಲೂಕಿನ ಕಡಬಗೆರೆಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಆಶಾ ನಾರಾಯಣ್ ಎಂಬುವವರು ಅಕ್ರಮವಾಗಿ ಮೂರು ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಿಸಿದ್ದರು, ಎನ್ನುವ ಆರೋಪ ಕೇಳಿ ಬಂದಿದೆ, ಇದೀಗ ಮನೆ ಮೇಲೆ ಮೆಸ್ಕಾಂ ಅಧಿಕಾರಿಗಳು ದಾಳಿ ನಡೆಸಿದಾಗಿ ಈ ಪ್ರಕರಣ ಬೆಳಕಿಗೆ ಬಂದಿದೆ,
ಕರೆಂಟ್ ಕದ್ದಿರುವ ವಿಷಯ ತಿಳಿದು ಮೆಸ್ಕಾಂ ಅಧಿಕಾರಿಗಳು ದಿಢೀರನೆ ಮೂರು ಮನೆಗಳ ಮೇಲೆ ದಾಳಿ ಮಾಡಿದ್ದಾರೆ, ಮಂಗಳೂರಿನಿಂದ ಆಗಮಿಸಿ ಮೆಸ್ಕಾಂ ಅಧಿಕಾರಿಗಳು ದಾಳಿ ಮಾಡಿ 1 ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿದ್ದಾರೆ ಎನ್ನಲಾಗಿದ,
ಪ್ರಭಾವಿ ಎನ್ನುವ ಕಾರಣಕ್ಕೆ ಸ್ಧಳೀಯ ಅಧಿಕಾರಿಗಳು ಸಮ್ಮನಾಗಿದ್ದರು, ಹೀಗಾಗಿ ಮಂಗಳೂರಿನಿಂದಲೇ ಅಧಿಕಾರಿಗಳು ಬಂದು ದಾಳಿ ಮಾಡಿದ್ದಾರೆ, ಅಕ್ರಮ ಗೊತ್ತಿದ್ದರೂ ಚಿಕ್ಕಮಂಗಳೂರು ಮೆಸ್ಕಾಂ ಅಧಿಕಾರಿಗಳು ಸುಮ್ಮನೆ ಇದ್ದರು ಎಂಬ ಆರೋಪ ಕೇಳಿ ಬಂದಿದೆ,

ದೇಶ

ಸಾರ್ವಜನಿಕರಿಗೆ ಗುಡ್ ನ್ಯೂಸ್! ಭಾನುವಾರವೂ ಸಿಗಲಿವೆ ನೋಂದಣಿ ಸೇವೆಗಳು

Published

on

ಬೆಂಗಳೂರು: ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು ಜುಲೈ 12ರ ಭಾನುವಾರ ರಜಾ ದಿನವಾಗಿದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಹತ್ವದ ಪ್ರಕಟಣೆ ಹೊರಡಿಸಿದೆ.

ಸಾಮಾನ್ಯವಾಗಿ ಭಾನುವಾರ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಆದರೆ ಇಲಾಖೆಯಲ್ಲಿ ಹೆಚ್ಚುತ್ತಿರುವ ಕಾರ್ಯದೊತ್ತಡವನ್ನು ಕಡಿಮೆ ಮಾಡುವ ಜೊತೆಗೆ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವ ಉದ್ದೇಶದಿಂದ ಈ ವಿಶೇಷ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಆಸ್ತಿ ನೋಂದಣಿ ಸೇರಿದಂತೆ ವಿವಿಧ ಸೇವೆಗಳನ್ನು ಪಡೆಯಲು ಕಾಯುತ್ತಿದ್ದವರಿಗೆ ಅನುಕೂಲವಾಗಲಿದೆ.

ಇಲಾಖೆಯ ಪ್ರಕಟಣೆಯ ಪ್ರಕಾರ, ಜುಲೈ 12ರಂದು ಎಲ್ಲಾ ಉಪ ನೋಂದಣಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ (Stamp) ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಯಾವುದೇ ಅಡಚಣೆಯಿಲ್ಲದೆ ಪಡೆಯಬಹುದಾಗಿದೆ.

ಈ ವಿಶೇಷ ವ್ಯವಸ್ಥೆಯಿಂದ ವಾರದ ಕೆಲಸದ ದಿನಗಳಲ್ಲಿ ಕಚೇರಿಗೆ ತೆರಳಲು ಸಾಧ್ಯವಾಗದ ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈಗಾಗಲೇ ನೋಂದಣಿ ಪ್ರಕ್ರಿಯೆಗೆ ಸಮಯ ನಿಗದಿಪಡಿಸಿಕೊಂಡಿರುವವರು ಕೂಡ ಈ ಅವಕಾಶವನ್ನು ಬಳಸಿಕೊಳ್ಳಬಹುದು.

ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಸಾರ್ವಜನಿಕರು ಈ ವಿಶೇಷ ಸೇವೆಯ ಸದುಪಯೋಗ ಪಡೆದು ತಮ್ಮ ನೋಂದಣಿ ಸಂಬಂಧಿತ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳುವಂತೆ ಮನವಿ ಮಾಡಿದೆ. ಭಾನುವಾರವೂ ಸೇವೆ ಲಭ್ಯವಿರುವುದರಿಂದ ನೋಂದಣಿ ಪ್ರಕ್ರಿಯೆಯಲ್ಲಿ ಉಂಟಾಗುವ ವಿಳಂಬವೂ ಕಡಿಮೆಯಾಗುವ ನಿರೀಕ್ಷೆಯಿದೆ.

Continue Reading

ದೇಶ

14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್‌ಗೆ ಜನ ಫಿದಾ

Published

on

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಮತ್ತೊಮ್ಮೆ ತಮ್ಮ ಫಿಟ್ನೆಸ್ ಮತ್ತು ಆರೋಗ್ಯದ ಬಗ್ಗೆ ಇರುವ ಬದ್ಧತೆಯನ್ನು ಸಾಬೀತುಪಡಿಸಿದ್ದಾರೆ. 70 ವರ್ಷದ ವಯಸ್ಸಿನಲ್ಲಿಯೂ ಯುವಕರಿಗೆ ಮಾದರಿಯಾಗುವಂತೆ ಅವರು ಬೆಂಗಳೂರುದಿಂದ ತಿರುಪತಿವರೆಗೆ 265 ಕಿಲೋಮೀಟರ್‌ಗಳನ್ನು ಸೈಕಲ್‌ನಲ್ಲಿ ಕ್ರಮಿಸಿ ಗಮನ ಸೆಳೆದಿದ್ದಾರೆ.

ರಾಜಾಜಿನಗರ ಪೆಡಲ್ ಪವರ್-ಸೈಕ್ಲಿಂಗ್‘ ತಂಡದ ಸದಸ್ಯರೊಂದಿಗೆ ಅವರು ಜುಲೈ 10ರಂದು ಆರಂಭವಾದ ಈ ಸೈಕ್ಲಿಂಗ್ ಯಾತ್ರೆಯಲ್ಲಿ ಭಾಗವಹಿಸಿದ್ದರು. ಜುಲೈ 9ರಂದು ಬೆಳಗ್ಗೆ 4:30ಕ್ಕೆ ಬಸವೇಶ್ವರನಗರದಿಂದ ಹೊರಟ ತಂಡವು ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ತಿರುಪತಿ ತಲುಪಿತು. ಮಧ್ಯದಲ್ಲಿ ಮದನಪಲ್ಲಿಯಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದ ತಂಡ ಒಟ್ಟು 265 ಕಿಲೋಮೀಟರ್‌ಗಳನ್ನು ಸುಮಾರು 14 ಗಂಟೆ 10 ನಿಮಿಷಗಳಲ್ಲಿ ಪೂರ್ಣಗೊಳಿಸಿದೆ.

ವಿಶೇಷವೆಂದರೆ, ಇದು ಸುರೇಶ್ ಕುಮಾರ್ ಅವರ ಮೊದಲ ತಿರುಪತಿ ಸೈಕಲ್ ಯಾತ್ರೆಯಲ್ಲ. 2024 ಮತ್ತು 2025ರಲ್ಲೂ ಇದೇ ರೀತಿಯಲ್ಲಿ ಸೈಕಲ್ ಮೂಲಕ ತಿರುಪತಿಗೆ ತೆರಳಿ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಸಾರಿದ್ದರು. ಈ ವರ್ಷವೂ ತಮ್ಮ ತಂಡದೊಂದಿಗೆ ಪೆಡಲ್ ಹೊಡೆದು ಯಶಸ್ವಿಯಾಗಿ ಗುರಿ ತಲುಪಿದ್ದಾರೆ.

ಪ್ರಯಾಣದ ಬಳಿಕ ಮಾತನಾಡಿದ ಶಾಸಕ ಎಸ್. ಸುರೇಶ್ ಕುಮಾರ್, “ಈ ಯಾತ್ರೆ ನಮ್ಮ ತಂಡಕ್ಕೆ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ನೀಡಿದೆ. ಇಂತಹ ಸೈಕ್ಲಿಂಗ್ ಚಟುವಟಿಕೆಗಳು ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ಮಾರ್ಗ” ಎಂದು ಹೇಳಿದರು.

ಸಾರ್ವಜನಿಕ ಜೀವನದ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಿರುವ ಸುರೇಶ್ ಕುಮಾರ್ ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲೂ ಮೆಚ್ಚುಗೆಗೆ ಪಾತ್ರವಾಗಿದ್ದು, ಯುವಜನತೆಗೆ ಮಾತ್ರವಲ್ಲದೆ ಎಲ್ಲ ವಯೋಮಾನದವರಿಗೂ ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವಾಗಿದೆ.

Continue Reading

ದೇಶ

ಅಶೋಕ್ ರೈ ಕಂಬಳಕ್ಕೆ ಸಿದ್ಧ, ಯದುವೀರ್-ಪ್ರತಾಪ್ ಸಿಂಹ ವಿರೋಧ; ದಸರಾದಲ್ಲಿ ಹೊಸ ವಿವಾದ

Published

on

ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಸಿದ್ಧತೆಗಳು ಆರಂಭವಾಗುತ್ತಿದ್ದಂತೆಯೇ ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಕಂಬಳ (Kambala) ಆಯೋಜನೆ ಮಾಡುವ ವಿಚಾರ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಒಂದೆಡೆ ಪುತ್ತೂರು ಶಾಸಕ ಅಶೋಕ್ ರೈ (Ashok Rai) ಕಂಬಳ ಆಯೋಜನೆಗೆ ಸಿದ್ಧತೆ ಆರಂಭಿಸಿರುವುದಾಗಿ ತಿಳಿಸಿದ್ದರೆ, ಮತ್ತೊಂದೆಡೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಮಹೋತ್ಸವದ ಸಿದ್ಧತೆ ಕುರಿತು ಚರ್ಚೆ ನಡೆಯಿತು. ಆಗಸ್ಟ್ 26ರಂದು ಗಜಪಯಣ ಆರಂಭವಾಗಲಿದ್ದು, ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಕ್ಟೋಬರ್ 21ರಂದು ವಿಜಯದಶಮಿಯಂದು ಮಧ್ಯಾಹ್ನ 4:10ಕ್ಕೆ ಮೀನಾ ಲಗ್ನದಲ್ಲಿ ಐತಿಹಾಸಿಕ ಜಂಬೂ ಸವಾರಿ ನಡೆಯಲಿದೆ.

ಸಭೆಯಲ್ಲಿ ಕಂಬಳ ಆಯೋಜನೆ ವಿಚಾರವೂ ಪ್ರಸ್ತಾಪವಾಗಿದ್ದು, ಅಂತಿಮ ನಿರ್ಧಾರವನ್ನು ಮುಂದಿನ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಅಶೋಕ್ ರೈ ಅವರ ಪ್ರಕಾರ, ಕಂಬಳ ಆಯೋಜನೆಗೆ ಸುಮಾರು ₹5 ರಿಂದ ₹6 ಕೋಟಿ ವೆಚ್ಚವಾಗಲಿದ್ದು, ಜುಲೈ 15ರಿಂದಲೇ ಸಿದ್ಧತೆ ಆರಂಭಿಸಲು ಯೋಜಿಸಲಾಗಿದೆ. ಕಂಬಳದ ಮೂಲಕ ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ.

ಆದರೆ, ಯದುವೀರ್ ಒಡೆಯರ್ ದಸರಾದಲ್ಲಿ ಕಂಬಳ ಸೇರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ದಸರಾ, ಕಂಬಳ ಮತ್ತು ಇತರೆ ಜಾತ್ರೆಗಳಿಗೆ ತಮ್ಮದೇ ಆದ ವೈಶಿಷ್ಟ್ಯವಿದ್ದು, ಪ್ರತಿಯೊಂದು ಆಚರಣೆಯೂ ತನ್ನ ಸಾಂಪ್ರದಾಯಿಕ ಸ್ವರೂಪದಲ್ಲೇ ನಡೆಯಬೇಕು ಎಂದು ಹೇಳಿದ್ದಾರೆ. ಕಂಬಳದ ಬಗ್ಗೆ ವಿರೋಧವಿಲ್ಲದಿದ್ದರೂ ದಸರಾದ ಮೂಲ ಪರಂಪರೆಯಲ್ಲಿ ಬದಲಾವಣೆ ಬೇಡ ಎಂಬುದು ಅವರ ನಿಲುವಾಗಿದೆ.

Continue Reading

Trending