Connect with us

ದೇಶ

ನಿಮಗೆ ಈ ರೋಗ ಲಕ್ಷಣಗಳಿದ್ದರೆ ಜಾಗರೂಕರಾಗಿರಿ: ಅದು ‘ಮಂಕಿಪಾಕ್ಸ್’ ಆಗಿರಬಹುದು! – Monkeypox Symptoms

Monkeypox Symptoms: ಕೋವಿಡ್-19ನಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಸಾಂಕ್ರಾಮಿಕ ರೋಗವು ಜಗತ್ತನ್ನು ಬೆಚ್ಚಿಬೀಳಿಸಿದೆ. ಆ ಮಹಾಮಾರಿಯೇ ಮಂಕಿಪಾಕ್ಸ್. ಆಫ್ರಿಕಾದ ಮಧ್ಯಭಾಗದಲ್ಲಿ ಹರಡಿರುವ ಮಂಗನ ಕಾಯಿಲೆ ಈಗ ನಮ್ಮ ನೆರೆಯ ರಾಷ್ಟ್ರವಾದ ಪಾಕಿಸ್ತಾನಕ್ಕೂ ಬಂದಿದೆ. ಯುರೋಪಿಯನ್ ಖಂಡದ ಸ್ವೀಡನ್‌ನಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂಎಚ್‌ಒ) ಈಗಾಗಲೇ ಮಂಗನ ಕಾಯಿಲೆಗೆ ಅಂತರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಈ ಮಂಗನ ಕಾಯಿಲೆಯು ಮೊದಲು ಎಲ್ಲಿ ಪತ್ತೆಯಾಯಿತು? ಇದರಲ್ಲಿ ಎಷ್ಟು ವಿಧ? ಈ ರೋಗ ಲಕ್ಷಣಗಳೇನು? ಇದು ಹೇಗೆ ಹರಡುತ್ತದೆ? ಎನ್ನುವ ವಿವರಗಳನ್ನು ತಿಳಿಯೋಣಬನ್ನಿ.

ಮಂಕಿಪಾಕ್ಸ್ ಎಂದರೇನು?: ಇದು ವೈರಲ್ ರೋಗ. ಇದು ಸಿಡುಬು ಕುಟುಂಬಕ್ಕೆ ಸೇರಿದೆ. ಈ ವೈರಸ್ ಹೆಚ್ಚಾಗಿ ಮಧ್ಯ ಮತ್ತು ಪಶ್ಚಿಮ ಆಫ್ರಿಕಾದಲ್ಲಿ ಹರಡುತ್ತಿದೆ. ಈ ವೈರಸ್ ಅನ್ನು ಮೊದಲು 1958 ರಲ್ಲಿ ಮಂಗಗಳಲ್ಲಿ ಪತ್ತೆ ಮಾಡಲಾಯಿತು. ಅದಕ್ಕಾಗಿಯೇ ಇದಕ್ಕೆ ಮಂಗನ ಕಾಯಿಲೆ ಎಂದು ಹೆಸರು ಬಂದಿದೆ.

ಮನುಷ್ಯನಲ್ಲಿ ಮೊದಲ ಪ್ರಕರಣ ಪತ್ತೆಯಾಗಿದ್ದು ಯಾವಾಗ?: 1970ರಲ್ಲಿ ಮೊದಲ ಬಾರಿಗೆ ಮನುಷ್ಯನದಲ್ಲಿ ಈ ರೋಗ ತಗುಲಿತ್ತು. ಇದು ಹೆಚ್ಚಾಗಿ ಉಷ್ಣವಲಯದ ಆಫ್ರಿಕನ್ ದೇಶಗಳ ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುತ್ತಿದೆ. ಇದರ ಪರಿಣಾಮವಾಗಿ, ಪ್ರಪಂಚದಾದ್ಯಂತದ ವಿಜ್ಞಾನಿಗಳು ಮತ್ತು ಆರೋಗ್ಯ ಇಲಾಖೆಗಳು ಇದನ್ನು ನಿರ್ಲಕ್ಷಿಸಿವೆ. ಇದರಿಂದಾಗಿ 2022ರಲ್ಲಿ ಮೊಟ್ಟಮೊದಲ ಬಾರಿಗೆ ಪ್ರಪಂಚದಾದ್ಯಂತ ಮಂಗನ ಕಾಯಿಲೆಯ ಪ್ರಕರಣಗಳು ದೊಡ್ಡ ಪ್ರಮಾಣದಲ್ಲಿ ಕಂಡುಬಂದಿದ್ದವು. 2022ರಲ್ಲಿ ಭಾರತದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚು ವರದಿಯಾಗಿವೆ. ಈ ರೋಗವು ಪ್ರಸ್ತುತ ಆಫ್ರಿಕನ್ ದೇಶಗಳಲ್ಲಿ ಹರಡುತ್ತಿರುವುದರಿಂದ WHO ಅಂತರರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಮಂಕಿಪಾಕ್ಸ್‌ನಲ್ಲಿ ಎಷ್ಟು ವಿಧಗಳಿವೆ?: ಮಂಕಿಪಾಕ್ಸ್ ಅನ್ನು ಕ್ಲಾಡ್-1 (ಕಾಂಗೊ ಬೇಸಿನ್ ಕ್ಲೇಡ್) ಮತ್ತು ಕ್ಲಾಡ್-2 (ಪಶ್ಚಿಮ ಆಫ್ರಿಕಾದ ಕ್ಲೇಡ್) ಎಂಬ ಎರಡು ರೂಪಾಂತರಗಳಾಗಿ ವರ್ಗೀಕರಿಸಲಾಗಿದೆ. ಇದರಲ್ಲಿನ ಕ್ಲಾಡ್-1 ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ನ್ಯುಮೋನಿಯಾ, ಬ್ಯಾಕ್ಟೀರಿಯಾದ ಸೋಂಕುಗಳು ಮತ್ತು ಉಸಿರಾಟದ ತೊಂದರೆಗಳು ಸಹ ಸಂಭವಿಸುತ್ತವೆ. ಮರಣ ಪ್ರಮಾಣವು ಶೇ 1ರಿಂದ 10ರಷ್ಟು ಆಗಿದೆ. ಕ್ಲಾಡ್-2 ಸ್ವಲ್ಪ ಕಡಿಮೆ ಅಪಾಯಕಾರಿ. ದೇಹದಲ್ಲಿ ಗುಳ್ಳೆಗಳು ಮತ್ತು ಜ್ವರದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಮರಣ ಪ್ರಮಾಣವು ಶೇಕಡಾ 1ಕ್ಕಿಂತ ಕಡಿಮೆಯಿದೆ.

ಈ ರೋಗ ಹರಡುವುದು ಹೇಗೆ?: ನೇರ ಸಂಪರ್ಕದ ಮೂಲಕ ವ್ಯಕ್ತಿಯಿಂದ ವ್ಯಕ್ತಿಗೆ ಮಂಗನ ಕಾಯಿಲೆ ಹರಡುತ್ತದೆ. ಬಾಯಿ ಮತ್ತು ಇತರ ಅಂಗಗಳ ಸ್ರವಿಸುವಿಕೆಯಿಂದ ಸೋಂಕಿನ ಸಾಧ್ಯತೆಯೂ ಇದೆ. ರೋಗಿಗಳು ಬಳಸಿದ ಬಟ್ಟೆ, ಇತರೆ ವಸ್ತುಗಳು, ಟ್ಯಾಟೂಗಳ ಹಾಕಿಸಿಕೊಳ್ಳುವುದರಿಂದಲು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇದೆ ಎನ್ನುತ್ತಾರೆ ವೈದ್ಯರು. ಸೋಂಕಿತ ಪ್ರಾಣಿಗಳನ್ನು ಸ್ಪರ್ಶಿಸುವುದು ಮತ್ತು ಆ ಪ್ರಾಣಿಗಳು ಕಚ್ಚುವುದರಿಂದ ವೈರಸ್ ಮನುಷ್ಯರಿಗೆ ಹರಡುತ್ತದೆ ಎಂದು ಹೇಳಲಾಗುತ್ತದೆ. ಆದಾಗ್ಯೂ, ಕ್ಲಾಡ್-1 IB ರೂಪಾಂತರವು ಪ್ರಸ್ತುತ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. ಲೈಂಗಿಕ ಸಂಪರ್ಕದಿಂದಲೂ ಈ ರೂಪಾಂತರವು ವೇಗವಾಗಿ ಹರಡುತ್ತಿದೆ ಎಂದು ತಿಳಿಸುತ್ತಾರೆ ವೈದ್ಯರು.

ಎಂಪಾಕ್ಸ್‌ನ ಲಕ್ಷಣಗಳೇನು? WHO ಪ್ರಕಾರ, ಈ ವೈರಸ್ ಮಾನವನ ದೇಹವನ್ನು ಪ್ರವೇಶಿಸಿದ ನಂತರ, 1 ರಿಂದ 21 ದಿನಗಳವರೆಗೆ ಯಾವುದೇ ಸಮಯದಲ್ಲಿ ರೋಗಲಕ್ಷಣಗಳು ಕಾಣಿಸಿಕೊಳ್ಳಬಹುದು. ಗುಳ್ಳೆಗಳು, ಜ್ವರ, ಒಣ ಗಂಟಲು, ತಲೆನೋವು, ಸ್ನಾಯು ನೋವು, ಬೆನ್ನು ನೋವು, ಆಲಸ್ಯ ಸಾಮಾನ್ಯವಾಗಿದೆ. ಇದು ಸುಮಾರು 2 ರಿಂದ 4 ವಾರಗಳವರೆಗೆ ಇರುತ್ತದೆ. ಇದು ವ್ಯಕ್ತಿಯ ರೋಗನಿರೋಧಕ ಶಕ್ತಿಯನ್ನು ಅವಲಂಬಿಸಿರುತ್ತದೆ. ಕೆಲವರಿಗೆ ಬಾಯಿ, ಕಣ್ಣು, ಗಂಟಲು ಮತ್ತು ಖಾಸಗಿ ಭಾಗಗಳಲ್ಲಿ ಗುಳ್ಳೆಗಳು ಬರಬಹುದು.

ಎಂಪಾಕ್ಸ್‌ ತಡಗಟ್ಟುವುದು ಹೇಗೆ?:

  • ಎಂಪಾಕ್ಸ್‌ ಅಥವಾ ಮಂಕಿಪಾಕ್ಸ್‌ನಂತೆ ಕಾಣುವ ದದ್ದು ಹೊಂದಿರುವ ಜನರನ್ನು ಸಮೀಪದಲ್ಲಿ ಕುಳಿತುಕೊಳ್ಳುವುದನ್ನು ತಪ್ಪಿಸಿ, ಸ್ವಲ್ಪ ಅಂತರವನ್ನು ಕಾಯ್ದುಕೊಳ್ಳಿ.
  • ಸೋಂಕಿತ ಪ್ರಾಣಿ ಅಥವಾ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿರುವ ಬಟ್ಟೆಗಳು, ಹೊದಿಕೆಗಳು ಅಥವಾ ಇತರ ವಸ್ತುಗಳನ್ನು ಮುಟ್ಟಬೇಡಿ.
  • ಕೈಗಳನ್ನು ಸಾಬೂನು ನೀರಿನಿಂದ ನಿಯಮಿತವಾಗಿ ತೊಳೆಯಬೇಕು.
  • ಕೈ ತೊಳೆಯುವುದು ಲಭ್ಯವಿಲ್ಲದಿದ್ದರೆ, ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಬಳಸಿ.
  • ಅಂತಿಮವಾಗಿ, ತಜ್ಞರು ಹೇಳುವ ಪ್ರಕಾರ, ಈ ರೋಗದ ಲಕ್ಷಣಗಳನ್ನು ತಿಳಿದುಕೊಳ್ಳುವುದು ಮತ್ತು ಅದರಿಂದ ಪ್ರಭಾವಿತವಾಗದಂತೆ ಕಾಲಕಾಲಕ್ಕೆ ನಿಮ್ಮನ್ನು ಪರೀಕ್ಷಿಸಿಕೊಳ್ಳುವುದು ಬಹಳ ಮುಖ್ಯ.

ಓದುಗರಿಗೆ ಸೂಚನೆ: ಇಲ್ಲಿ ನಿಮಗೆ ನೀಡಿರುವ ಎಲ್ಲಾ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳುವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯನ್ನು ಆಧರಿಸಿ ನಾವು ಈ ಮಾಹಿತಿಯನ್ನು ನಿಮಗೆ ನೀಡಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ನಿಮ್ಮ ವೈಯಕ್ತಿಕ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending