Connect with us

ಬೆಂಗಳೂರು

ಮುಡಾ ಕೇಸ್‌ ಚುರುಕು ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಹೈಕೋರ್ಟ್‌ಗೆ ಸಿಐಡಿ ಅರ್ಜಿ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೋ (POSCO Case) ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಸಿಎಂ ವಿರುದ್ಧ ಬಿಜೆಪಿಯಿಂದ (BJP) ರಾಜೀನಾಮೆ ಒತ್ತಾಯ, ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಬೆನ್ನಲ್ಲೇ ಬಿಎಸ್‌ವೈ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಸರ್ಕಾರ ತೀವ್ರಗೊಳಿಸಿದೆ.

ಮಧ್ಯಂತರ ರಕ್ಷಣೆ ತೆರವು ಮಾಡಲು ಹೈಕೋರ್ಟ್‌ಗೆ (High Court) ಸಿಐಡಿ ಮೆಮೋ ಸಲ್ಲಿಕೆ ಮಾಡಿದೆ. ಸಿಐಡಿ ಪರ ಎಸ್‌ಪಿಪಿ ಅಶೋಕ್ ನಾಯ್ಕ್ ಅವರು ಮೆಮೋ ಸಲ್ಲಿಕೆ ಮಾಡಿದ್ದಾರೆ. ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಧ್ಯಾಹ್ನ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

ಬಿಎಸ್‌ವೈ ಬಂಧನಕ್ಕೆ ಹೈಕೋರ್ಟ್ (High Court) ನೀಡಿದ ತಡೆಯಾಜ್ಞೆ ತೆರವಿಗೆ ಸರ್ಕಾರ ಈಗ ಕಸರತ್ತು ಆರಂಭಿಸಿದೆ. ತಡೆಯಾಜ್ಞೆ ತೆರವುಗೊಳಿಸಿ ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ಲ್ಯಾನ್‌ ಮಾಡಿದೆ.

ದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಬಿಎಸ್‌ವೈ ಬಂಧನಕ್ಕೆ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ

ದೇಶ

ಬೇಸಿಗೆಗೆ ಮುನ್ನ ಬೆಂಗಳೂರು ಜಲಮಂಡಳಿ ಎಚ್ಚರಿಕೆ: ಕಾವೇರಿ ನೀರಿಗೆ ಪರ್ಯಾಯ ಯೋಜನೆ

ಬೆಂಗಳೂರು: ಶಿವರಾತ್ರಿ ಮುಗಿಯುತ್ತಿದ್ದಂತೆ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್‌ನಿಂದ ಅಧಿಕೃತವಾಗಿ ಬೇಸಿಗೆ (Summer) ಆರಂಭವಾಗಲಿದ್ದು, ನೀರಿನ ಅಭಾವದ ಆತಂಕ ಸಹಜ. ಆದರೆ ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ (Drinking Water) ಕೊರತೆ ಆಗದಂತೆ ಬೆಂಗಳೂರು ಜಲಮಂಡಳಿ (Bengaluru Water Board) ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

54 ಟಿಎಂಸಿ ನೀರು ಲಭ್ಯ

ಸದ್ಯ ಕೆಆರ್‌ಎಸ್ ಜಲಾಶಯದಲ್ಲಿ 54 ಟಿಎಂಸಿ ನೀರು ಲಭ್ಯವಿದ್ದು, ಜುಲೈವರೆಗೆ ಬೆಂಗಳೂರಿಗೆ ಅಗತ್ಯವಿರುವ 14 ಟಿಎಂಸಿ ನೀರು ಸಾಕಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ಯಾಂಕರ್ ವ್ಯವಸ್ಥೆ ಸಿದ್ಧ

ನೀರಿನ ಕೊರತೆ ಕಾಣಿಸಬಹುದಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಜಲಮಂಡಳಿ ಯೋಜನೆ ರೂಪಿಸಿದೆ. ಬೋರ್‌ವೆಲ್‌ ನೀರು ಬೇಸಿಗೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ಕಳೆದ ವರ್ಷದಿಂದಲೇ ಬೋರ್‌ವೆಲ್ ನಿರ್ವಹಣೆಯನ್ನು ಜಲಮಂಡಳಿ ವಹಿಸಿಕೊಂಡಿದೆ. ಅಂತರ್ಜಲ ಕುಸಿತ ತಡೆಯಲು ಕ್ರಮ ಕೈಗೊಳ್ಳಲಾಗಿದೆ.

ನೀರು ವ್ಯರ್ಥ ಮಾಡಿದ್ರೆ ದಂಡ

ಕಾವೇರಿ ನೀರನ್ನು ಬೈಕ್, ಕಾರು ತೊಳೆಯಲು ಬಳಸುವುದು ಅಥವಾ ಅನಗತ್ಯವಾಗಿ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಜಲಮಂಡಳಿ ಸಿದ್ಧವಾಗಿದೆ. ವೀಕ್ಷಕರು ಹಾಗೂ ಬ್ಲೂಫೋರ್ಸ್ ತಂಡಗಳು ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತದೆ.

ಜನರು ನೀರನ್ನು ಜಾಗರೂಕತೆಯಿಂದ ಬಳಕೆ ಮಾಡಿದರೆ ಬೇಸಿಗೆಯಲ್ಲಿ ಜಲಕ್ಷಾಮ ಸಮಸ್ಯೆ ತಗ್ಗಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Continue Reading

ಬೆಂಗಳೂರು

BENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ

ಬೆಂಗಳೂರು: ವಸಂತಪುರದಲ್ಲಿ ಅನಾದಿಕಾಲದಿಂದ ನೆಲಸಿರುವ ಸ್ವಯಂವ್ಯಕ್ತ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ಮಹೋತ್ಸವ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು. ಕಳೆದ ಒಂಬತ್ತು ದಿನಗಳಿಂದ ನಡೆದ ಶ್ರೀಸ್ವಾಮಿಯ ಬ್ರಹ್ಮ ರಥೋತ್ಸವವು ವೈಭವಯುತವಾಗಿ ಸಾಗಿದ್ದು, ಅದರ ಅಂತಿಮ ಘಟ್ಟವಾಗಿ ಸ್ವಾಮಿಗೆ ವಿಶ್ರಾಂತಿ ನೀಡುವ ಶಯನೋತ್ಸವ ಸುಗಂಧ ಪರಿಮಳಯುಕ್ತ ಮಂಟಪದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಈ ಶಯನೋತ್ಸವವನ್ನು ತಲಘಟ್ಟಪುರದ ಮಾಜಿ ಶ್ಯಾನಭೋಗ ಟಿ.ವಿ. ನಾರಾಯಣಮೂರ್ತಿ ಅವರ ಕುಟುಂಬವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ತ.ನಾ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಕುಟುಂಬ ಸದಸ್ಯರೊಂದಿಗೆ ಉತ್ಸವ ಜರುಗಿತು. ಪ್ರಧಾನ ಅರ್ಚಕ ರಘುರಾಮ್ ಭಟ್ ಅವರು ಸಕಲ ವಿಧಿವಿಧಾನಗಳೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು.

ಉತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದು ತೀರ್ಥ-ಪ್ರಸಾದ ಸ್ವೀಕರಿಸಿದರು. ಭಕ್ತರ ಜಯಘೋಷಗಳಿಂದ ದೇವಾಲಯ ಪ್ರದೇಶ ಭಕ್ತಿಮಯ ವಾತಾವರಣಕ್ಕೆ ಸಾಕ್ಷಿಯಾಯಿತು.

ಈ ಸಂದರ್ಭದಲ್ಲಿ ಅಕ್ಷಯ ವಿಪ್ರ ಮಹಾಸಭಾದ ಕಾರ್ಯದರ್ಶಿ ಎನ್.ಎಸ್. ಸುಧೀಂದ್ರ ರಾವ್, ಕಿರಣ್ ಕುಮಾರ್, ಎಸ್. ರಾಮರಾವ್, ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

Trending