Blog
ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ ಸುರಂಗ ಮಾರ್ಗ, ಆಕಾಶ ಗೋಪುರ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು – Bengaluru Tunnel Road

ಬೆಂಗಳೂರು: “ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸುರಂಗ ಮಾರ್ಗ ನಿರ್ಮಾಣ, ನಗರದಲ್ಲಿ 250 ಅಡಿ ಎತ್ತರದ ಆಕಾಶ ಗೋಪುರ (sky deck) ನಿರ್ಮಾಣ, ಹೊಸದಾಗಿ 52 ಇಂದಿರಾ ಕ್ಯಾಂಟೀನ್ಗಳ ಸ್ಥಾಪನೆ ಸೇರಿದಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
“ನಗರದ ಹೆಬ್ಬಾಳ ಮೇಲ್ಸೇತುವೆ (ಎಸ್ಟೀಮ್ ಮಾಲ್) ಪ್ರದೇಶದಿಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್ನ ಮೇಲ್ಸೇತುವೆವರೆಗೆ ಸುರಂಗ ಮಾರ್ಗವನ್ನು 12,690 ಕೋಟಿ ರೂ. ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗಿದೆ. ಅದೇ ರೀತಿ ಬೆಂಗಳೂರು ನಗರದಲ್ಲಿ 250 ಅಡಿ ಎತ್ತರದ ಆಕಾಶ ಗೋಪುರವನ್ನು 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಒಪ್ಪಿಗೆ ನೀಡಲಾಗಿದೆ. ಆದರೆ, ಜಾಗದ ಬಗ್ಗೆ ಇನ್ನೂ ಅಂತಿಮಗೊಂಡಿಲ್ಲ” ಎಂದು ಹೇಳಿದರು.
“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೂತನವಾಗಿ 52 ಇಂದಿರಾ ಕ್ಯಾಂಟೀನ್ಗಳನ್ನು ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅದೇ ರೀತಿ ಸಾಂಪ್ರದಾಯಿಕ ಬೀದಿದೀಪಗಳ ನಿರ್ವಹಣೆಯನ್ನು ‘ಇಂಧನ ಉಳಿತಾಯ -ಇಎಂಐ/ ವಾರ್ಷಿಕ ಪಾವತಿ ಮಾದರಿ ‘ ಕೇಂದ್ರೀಕೃತ ನಿಯಂತ್ರಣ ಮತ್ತು ಮೇಲ್ವಿಚಾರಣಾ ವ್ಯವಸ್ಥೆ ಯೋಜನೆ ಅಡಿಯಲ್ಲಿ ಎಲ್ಇಡಿ ಬೀದಿದೀಪಗಳನ್ನು ಅಳವಡಿಸುವ ಹಾಗೂ 7 ವರ್ಷಗಳ ನಿರ್ವಹಣಾ ವೆಚ್ಚ 684.34 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ. ಹೊಂಬೆಳಕು ಯೋಜನೆಯಡಿ 50 ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು 25 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಒಪ್ಪಿಗೆ ನೀಡಿದ್ದು, ಪ್ರಸ್ತುತ ವರ್ಷದಲ್ಲಿ 10 ಕೋಟಿ ರೂ.ಗಳಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ” ಎಂದು ಸಚಿವರು ವಿವರಿಸಿದರು.
ಕ್ಯಾಬಿನೆಟ್ನಲ್ಲಿ ಅನುಮೋದನೆಗೊಂಡ ಇತರ ವಿಷಯಗಳು: ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024 ಕ್ಕೆ ಅನುಮೋದನೆ. ಬಾಲ ಗರ್ಭಿಣಿಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ವಿವಿಧ ಇಲಾಖೆಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸುವುದು. 592 ಅಂಗನವಾಡಿ ಕೇಂದ್ರಗಳನ್ನು 85 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಿರ್ಮಿಸುವ ಬಗ್ಗೆ ಒಪ್ಪಿಗೆ. ಮೆ.ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿ. (ಮೆ.ಮೈಸೂರು ಮಿನರಲ್ಸ್ ಲಿ.) ಸಂಸ್ಥೆಯ ಗ್ರೂಪ್ ಎ ಮತ್ತು ಬಿ ವೃಂದದ ಅಧಿಕಾರಿಗಳಿಗೆ 4ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಸಾರ 1998, ಏ.1 ರಿಂದ 2005 ರ ಸೆ.30 ರವರೆಗಿನ ಅವಧಿಗೆ ವೇತನ ಬಾಕಿ, ಬಡ್ಡಿ ಇತ್ಯಾದಿಗಳನ್ನು ಪಾವತಿಸುವುದು. ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ (ತಿದ್ದುಪಡಿ) ನಿಯಮಗಳು, 2024 ಕ್ಕೆ ಅನುಮೋದನೆ ನೀಡಲಾಗಿದೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್ ಎಂಇ) ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಕೇಂದ್ರ ಸರ್ಕಾರದ (ಆರ್ ಎಎಂಪಿ) ಕಾರ್ಯಕ್ರಮವನ್ನು (ಕೇಂದ್ರದ ಪಾಲು 118.72 ಕೋಟಿ ರೂ., ರಾಜ್ಯದ ಪಾಲು 29.25 ಕೋಟಿ ರೂ.) ರಾಜ್ಯದಲ್ಲಿ 147.87 ಕೋಟಿ ರೂ.ಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ.
ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ಲೀಸ್ ಕಂ ಸೇಲ್ ಆಧಾರದ ಮೇಲೆ ಹಂಚಿಕೆಯಾದ ಮಳಿಗೆ ಮತ್ತು ನಿವೇಶನಗಳ ಕ್ರಯಪತ್ರ ನೀಡುವ ಕನಿಷ್ಠ ಕಾಲಾವಧಿಗೆ 10 ವರ್ಷಗಳಿಂದ 2 ವರ್ಷಗಳಿಗೆ ಇಳಿಸಲು ಒಪ್ಪಿಗೆ ನೀಡಲಾಗಿದೆ.
ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಸೇವೆ (ನೇಮಕಾತಿ) (ತಿದ್ದುಪಡಿ) ನಿಯಮಗಳು 2024ಕ್ಕೆ ಅನುಮೋದನೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲುಕಿನ ತೋರಣಗಲ್ಲು ಮತ್ತು ಕುರೇಕುಪ್ಪ ಗ್ರಾಮಗಳಲ್ಲಿನ 2000.58 ಎಕರೆ ಹಾಗೂ ತೋರಣಗಲ್ಲು, ಮುಸೇನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿನ 1666.73 ಎಕರೆ ಭೂಮಿಯನ್ನು ಮೆ. Jsw ಸ್ಟೀಲ್ ಲಿ. ಸಂಸ್ಥೆಯ ಪರವಾಗಿ ಶುದ್ಧ ಕ್ರಯಪತ್ರಗಳನ್ನು ನೀಡಲು ಅನುಮೋದನೆ. ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಬೆಂಗಳೂರು ನಬಾರ್ಡ್ ಮೂಲಕ ಪನರ್ಧನ ಪಡೆಯಲು 1600 ಕೋಟಿ ರೂ.ಗಳಿಗೆ ರಾಜ್ಯ ಸರ್ಕಾರದ ಖಾತರಿಯನ್ನು ವಿಸ್ತರಿಸಿ 29.07.2024 ರಂದು ಹೊರಡಿಸಿರುವ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
ಕೆಎಎಸ್ ಅಧಿಕಾರಿ ರಾಜಮ್ಮ ಎ.ಚೌಡರೆಡ್ಡಿ ವಿರುದ್ಧ ಲೋಕಾಯುಕ್ತ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆಯಲ್ಲಿ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತರ ಶಿಫಾರಸ್ಸಿನಂತೆ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲು ಸಂಪುಟ ಒಪ್ಪಿಗೆ ನೀಡಲಾಗಿದೆ. ಕೆಎಎಸ್ ಅಧಿಕಾರಿಗಳಾದ ಹೆಚ್.ಎಸ್. ಅರುಣ ಪ್ರಭ, ಡಾ.ಎನ್.ಸಿ. ವೆಂಕಟರಾಜು ಹಾಗೂ ಹರೀಶ್ ನಾಯಕ್ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ರ ಪ್ರಕರಣ 12(3) ರಡಿ ಉಪಲೋಕಾಯುಕ್ತರು ಇಲಾಖಾ ವಿಚಾರಣೆ ಕೋರಿ ಸಲ್ಲಿಸಿರುವ ವರದಿಯ ಬಗ್ಗೆ ಒಪ್ಪಿಗೆ ನೀಡಲಾಗಿದೆ.
ರಾಜ್ಯದಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಹೆಲ್ತ್ ಮಿಷನ್ ಹಾಗೂ ಆರೋಗ್ಯ ಇಲಾಖೆಯ ಇತರೆ ಎಲ್ಲಾ ಆರೋಗ್ಯ ಸಂಬಂಧಿತ ಡಿಜಿಟಲ್ ಉಪಕ್ರಮಗಳ ಅನುಷ್ಠಾನನದ ಉದ್ದೇಶಕ್ಕಾಗಿ ಕರ್ನಾಟಕ ಸೊಸೈಟಿಗಳ ನೋಂದಣಿ ಕಾಯ್ದೆ, 1960ರ ಅಡಿಯಲ್ಲಿ ಕರ್ನಾಟಕ ಡಿಜಿಟಲ್ ಹೆಲ್ತ್ ಸೊಸೈಟಿ ಅನ್ನು ಸ್ಥಾಪಿಸಿ ನೋಂದಣಿ ಮಾಡುವ ಬಗ್ಗೆ ಅನುಮೋದನೆ. ಕರ್ನಾಟಕ ಸಿವಿಲ್ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) (2ನೇ ತಿದ್ದುಪಡಿ ನಿಯಮಗಳು 2024ಕ್ಕೆ ಅನುಮೋದನೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ತಾಂತ್ರಿಕ ಶಿಕ್ಷಣ ಇಲಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು, 2024ಕ್ಕೆ ಅನುಮೋದನೆ ನೀಡಲಾಗಿದೆ.
ಕರ್ನಾಟಕ ಪ್ರದೇಶ ಕುರುಬರ ಸಂಘ, ಕಲಬುರಗಿ ಶಾಖೆ ಇವರು ಕಲಬುರಗಿಯ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಈ ಕಾಲೇಜಿಗೆ ಸೇರಿದ 3-07 ಎಕರೆ/ಗುಂಟೆ ಜಮೀನನ್ನು ಮಂಜೂರು ಮಾಡಲು ಒಪ್ಪಿಗೆ. ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ಮತಕ್ಷೇತ್ರದ ತಾಳಿಕೋಟೆ ಪಟ್ಟಣಕ್ಕೆ ಸಂಪರ್ಕಿಸುವ ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿ-61ರ ಸರಪಳಿ 58.00 ಮತ್ತು 58.10 ಕಿ.ಮೀ ನಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಯನ್ನು ರೂ.28.00 ಕೋಟಿಗಳ ಅಂದಾಜು ಮೊತ್ತದಲ್ಲಿ KRDCL ವತಿಯಿಂದ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
Blog
ಪ್ರವಾಹ ಸಂತ್ರಸ್ತರಿಗೆ ನೀಡಲು ಹಣವಿಲ್ಲ, ನಾನು ಕ್ಯಾಬಿನೇಟ್ ಸಚಿವೆ ಅಲ್ಲ; ಮತ್ತೆ ವಿವಾದ ಸೃಷ್ಟಿಸಿದ ಕಂಗನಾ

ಶಿಮ್ಲಾ: ಹಿಮಾಚಲ ಪ್ರದೇಶದಾದ್ಯಂತ ಭಾರೀ ಮಳೆಯಿಂದಾಗಿ ಪ್ರವಾಹ (Kangana Ranaut) ಉಂಟಾಗಿದೆ. ಪ್ರವಾಹದಿಂದಾಗಿ ಈ ವರೆಗೆ 78 ಜನರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳು ಹಾನಿಯಾಗಿವೆ. ಭಾನುವಾರ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪ್ರವಾಹ (Mandi Flood) ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ್ದ ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರನೌತ್, ತಮ್ಮ ಬಳಿ ಸಂಪುಟ ಹುದ್ದೆಯೂ ಇಲ್ಲ, ವಿಪತ್ತು ಪರಿಹಾರಕ್ಕಾಗಿ ಹಣವೂ ಇಲ್ಲ ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿ ಮಾಡಿದ್ದಾರೆ. ಆದಾಗ್ಯೂ, ಕೇಂದ್ರದಿಂದ ಆರ್ಥಿಕ ನೆರವು ಪಡೆಯಲು ತಾವು ಪ್ರಯತ್ನಿಸುತ್ತಿರುವುದಾಗಿ ಅವರು ಒತ್ತಿ ಹೇಳಿದರು.
ನನ್ನ ಬಳಿ ವಿಪತ್ತು ಪರಿಹಾರಕ್ಕಾಗಿ ಯಾವುದೇ ಹಣವಿಲ್ಲ ಅಥವಾ ಯಾವುದೇ ಸಂಪುಟ ಹುದ್ದೆಯನ್ನು ಹೊಂದಿಲ್ಲ. ಸಂಸದರಿಗೆ ಸಂಸತ್ತಿಗೆ ಸೀಮಿತವಾದ ಕೆಲಸವಿದೆ. ನಾವು ಬಹಳ ಸಣ್ಣವರು. ಆದರೆ, ಕೇಂದ್ರದಿಂದ ವಿಪತ್ತು ನಿಧಿಯನ್ನು ಪಡೆಯಲು ನಾನು ಸಹಾಯ ಮಾಡಬಹುದು” ಎಂದು ಮಂಡಿಯ ಸಂಸದೆ ಹೇಳಿದ್ದಾರೆ. ಕಂಗನಾ ಅವರ ಈ ಹೇಳಿಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸ್ವಪಕ್ಷದವರೇ ಕಂಗನಾ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದರು. ಮಂಡಿಯಲ್ಲಿ ಪ್ರವಾಹ ಬಂದು ಜನರು ಸಂಕಷ್ಟದಲ್ಲಿದ್ದರೂ ಸಂಸದೆ ಅದರ ಕುರಿತು ಎಲ್ಲಿಯೂ ಮಾತನಾಡಿರಲಿಲ್ಲ. ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಜೈರಾಮ್ ಠಾಕೂರ್ ಕಂಗನಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಕಂಗನಾ ಮಂಡಿಯ ಪರಿಸ್ಥಿತಿಯ ಬಗ್ಗೆ ಏಕೆ ಪ್ರತಿಕ್ರಿಯಿಸಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಠಾಕೂರ್, “ನನಗೆ ಗೊತ್ತಿಲ್ಲ, ಮತ್ತು ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಕಾಳಜಿ ವಹಿಸುವವರಿಗಾಗಿ ನೆರವು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಕಾಳಜಿ ವಹಿಸದವರ ಬಗ್ಗೆ ನಾನು ಕಾಮೆಂಟ್ ಮಾಡಲು ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಠಾಕೂರ್ ಅವರ ಹೇಳಿಕೆಗಳ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್, “ಸಂಸದ ಕಂಗನಾ ರನೌತ್ ಅವರಿಗೆ ಮಂಡಿಯ ಜನರ ಬಗ್ಗೆ ಕಾಳಜಿ ಇಲ್ಲ. ಇವು ನಮ್ಮ ಮಾತುಗಳಲ್ಲ, ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳೇ ಇದನ್ನು ಹೇಳಿದ್ದಾರೆ ಎಂದು ಹೇಳಿದೆ. ಮಂಡಿಯಲ್ಲಿ ಪ್ರಸ್ತುತ ಭಾರೀ ಮಳೆಯಾಗುತ್ತಿದ್ದು, ಇದು ನಿವಾಸಿಗಳ ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
Blog
ಝೊಮ್ಯಾಟೊ-ಸ್ವಿಗ್ಗಿಗೆ ಬಿಗ್ ಶಾಕ್: ಬೈಕ್ ನಲ್ಲಿ ಆಹಾರ,ವಸ್ತು ಡೆಲಿವರಿ ಬ್ಯಾನ್?

ಬೆಂಗಳೂರು: ರಾಜ್ಯದಲ್ಲಿ ಸದ್ಯ ರಾಪಿಡೋ ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಲಾಗಿದೆ, ಆದರೆ ಇನ್ಮುಂದೆ ಸ್ವಿಗ್ಗಿ, ಝೊಮ್ಯಾಟೊ, ಅಮೆಜಾನ್, ಫ್ಲಿಪ್ ಕಾರ್ಟ್‍ಗೂ ಶಾಕ್ ಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ,
ಸಾಮಾನ್ಯವಾಗಿ ಸರಕು ಸಾಗಣೆ, ಪ್ರಯಾಣಕ್ಕೆ ಯೆಲ್ಲೊ ಬೋರ್ಡ್ ವಾಹನಗಳನ್ನು ಬಳಸಬೇಕು, ಅದರೆ ಇಷ್ಟು ದಿನ ಇದ್ದ ರಾಪಿಡೋ ಬೈಕ್ ಟ್ಯಾಕ್ಸಿ ಈಗ ಇರುವ ಸ್ವಿಗ್ಗಿ, ಝೊಮ್ಯಾಟೊ, ಅಮೆಜಾನ್, ಫ್ಲಿಪ್ ಕಾರ್ಟ್ ನಂತಹ ಇ-ಕಾಮರ್ಸ್, ಕ್ವಿಕ್ ಕಾಮರ್ಸ್‍ನ ಡೆಲಿವರಿ ಬಾಯ್ ಗಳು ಬಳಸುವ ಬೈಕ್‍ಗಳು ಸಾಮಾನ್ಯವಾಗಿ ವೈಟ್ ಬೋರ್ಡ್‍ಗಳಿರುತ್ತವೆ, ಅದೇ ಈಗ ಸಂಕಷ್ಟ ತಂದೊಡ್ಡುತ್ತಿದೆ,
ಕೇಂದ್ರ ಸಾರಿಗೆ ಇಲಾಖೆ ಈ ಒಂದು ಆದೇಶ ಹೊರಡಿಸಿದ್ದು, ಆ ನಿರ್ಧಾರದಿಂದ ಇ-ಕಾಮರ್ಸ್ ಹಾಗೂ ಕ್ವಿಕ್ ಕಾಮರ್ಸ್, ಗಿಗಿ ಉದ್ಯೋಗಿಗಳಿಗೆ ಸಂದಷ್ಟ ಎದುರಾಗಿದೆ,
ಎಲ್ಲಾ ವಾಹನಗಳನ್ನು ಯೆಲ್ಲೋ ಬೋರ್ಡ್ ಮಾಡಬೇಕಾ?
ಖಾಸಗಿ ನೋಂದಾಯಿತ ಬೈಕ್‍ಗಳು ಅಂದರೆ ವೈಟ್ ಬೋರ್ಡ್ ಇರುವ ಬೈಕ್‍ಗಳನ್ನು ಕೇವಲ ಪ್ರಯಾಣಕ್ಕಾಗಿ ಮಾತ್ರ ಬಳಸಬೇಕು, ಆದರೆ ಗಿಗ್ ಉದ್ಯೋಗಿಗಳು ವಾಣಿಜ್ಯ ವಿತರಣಾ ಉದ್ದೇಶಗಳಿಗೆ ಬಳಸುತ್ತಿದ್ದಾರೆ, ಇದು ಸಾರಿಗೆ ಇಲಾಖೆಯ ನಿಯಮಗಳಿಗೆ ವಿರುದ್ಧವಾದುದು, ಇದೇ ಕಾರಣಕ್ಕೆ ಈಗಾಗಲೇ ರಾಪಿಡೋ ಸೇವೆಗೆ ಬ್ರೇಕ್ ಹಾಕಲಾಗಿದೆ, ಮುಂದಿನ ದಿನಗಳಲ್ಲಿ ಆಹಾರ ಹಾಗೂ ಇ-ಕಾಮರ್ಸ್ ಡೆಲಿವರಿಗಳಿಗೂ ಈ ನಿಯಮ ಅನ್ವಯವಾಗಲಿದೆ,
ಸಾರಿಗೆ ಇಲಾಖೆ ಅಧಿಸೂಚನೆಯಲ್ಲಿ ಏನೇನಿದೆ?
ಸಾಮಾನ್ಯವಾಗಿ ಡೆಲಿವರಿ ಬಾಯ್ ಗಳಿಗೆ ಇಂತಿಷ್ಟೇ ಸಮಯದಲ್ಲಿ ವಸ್ತುಗಳನ್ನು ತಲುಪಿಸಲಬೇಕು ಎಂಬ ನಿಯಮ ಇರುತ್ತದೆ, ಅದಕ್ಕಾಗಿ ಅತಿಯಾದ ವೇಗದಲ್ಲಿ ವಾಹನ ಚಲಾಯಿಸುತ್ತಾರೆ, ಸಿಗ್ನಲ್ ಬ್ರೇಕ್ ಮಾಡುತ್ತಾಎರ, ಡೆಲಿವರಿ ಬಾಯ್ ಗಳು ಪಾದಚಾರಿಗಳ ಹಕ್ಕು ಉಲ್ಲಂಘನೆ ಮಾಡುತ್ತಾರೆ ಎಂದು ಕೇಂದ್ರದ ಸಾರಿಗೆ ಇಲಾಖೆ ಹೇಳಿದೆ, ಕೆಲವೊಮ್ಮೆ ಪಾದಚಾರಿ ಮಾರ್ಗಗಳ ಮೇಲೆಯೇ ಬೈಕ್ ಓಡಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ,
ಪೀಕ್ ಅವರ್ ನಲ್ಲಿ ಡೆಲಿವರಿ ವಾಹನಗಳ ಸಂಖ್ಯೆ ಹೆಚ್ಚಾಗಿರುತ್ತದೆ, ಇದರಿಂದ ಟ್ರಾಫಿಕ್ ಜಾಮ್ ಆಗುತ್ತದೆ, ಸ್ವಿಗ್ಗಿ, ಝೊಮ್ಯಾಟೊ, ಅಮೆಜಾನ್, ಫ್ಲಿಪ್ ಕಾರ್ಟ್ ನಂತಾ ಕಂಪನಿಗಳನ್ನು ನಂಬಿ ಖಾಸಗಿ ಬೈಕ್ ಗಳ ಮೂಲಕ ವಿತರಣಾ ಕೆಲಸ ನಿರ್ವಹಿಸುತ್ತಿದ್ದ ಲಕ್ಷಾಂತರ ಗಿಗ್ ಉದ್ಯೋಗಿಗಳಿಗೆ ಸಂಕಷ್ಟ ಎದುರಾಗಿದೆ, ಈಗಾಗಲೇ ಕೇಂದ್ರ ಸಾರಿಗೆ ಇಲಾಖೆ ರಾಜ್ಯ ಸಾರಿಗೆ ಇಲಾಖೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದು, ರಾಜ್ಯ ಸರ್ಕಾರಗಳು ಕ್ರಮ ಕೈಗೊಂಡರೆ ಗಿಗ್ ಕ್ರಮ ಕೈಗೊಂಡರೆ ಗಿಗ್ ನೌಕರರು ಬೀದಿಗೆ ಬೀಳುತ್ತಾರೆ.
Blog
ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಗೆ ಕಂಗನಾ ರನೌತ್ ರಾಯಭಾರಿ!

ನವದೆಹಲಿ: ಖ್ಯಾತ ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ಅವರನ್ನು ನವದೆಹಲಿ 2025 ರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ಭಾರತೀಯ ಪ್ಯಾರಾಲಿಂಪಿಕ್ ಸಮಿತಿ ಘೋಷಿಸಿದೆ,
ಈ ಹೊಸ ಪಾತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ಕಂಗನಾ, ಭಾರತದ ಪ್ಯಾರಾ ಅಥ್ಲೀಟ್‍ಗಳು ಪ್ರತಿದಿನ ಅದ್ಭುತ ಸಾಧನೆಗಳ ಇತಿಹಾಸವನ್ನು ಪುನಃ ಬರೆಯುತ್ತಿದ್ದಾರೆ, ಅವರನ್ನು ಬೆಂಬಲಿಸಲು ಮತ್ತು ಅವರ ಅದ್ಬುತ ಸಾಧನೆಗಳ ಬಗ್ಗೆ ಪ್ರಚಾರ ಮಾಡಲು ನನಗೆ ತುಂಬಾ ಹೆಮ್ಮೆಯೆನಿಸುತ್ತಿದೆ, ಪ್ಯಾರಾ ಕ್ರೀಡೆ ಕೇವಲ ಸ್ಪರ್ಧೆಯ ಬಗ್ಗೆ ಅಲ್ಲ, ಇದು ಧೈರ್ಯವನ್ನು ತೋರಿಸುತ್ತದೆ, ಮತ್ತು ನಮ್ಮ ಚಾಂಪಿಯನ್ ಗಳ ಹಿಂದೆ ನಿಲ್ಲಲು ನನಗೆ ತುಂಬಾ ಹೆಮ್ಮೆ ಇದೆ ಎಂದು ಅವರು ಹೇಳಿದ್ದಾರೆ,
ಕಂಗನಾ ರನೌತ್ ಅವರ ಧ್ವನಿಯ ಪ್ಯಾರಾ ಕ್ರೀಡೆಗಳೊಂದಿಗೆ ಸಾರ್ವಜನಿಕವಾಗಿ ತೊಡಗಿಸಿಕೊಳ್ಳುವಿಕೆಯನ್ನು ಗಮನಾರ್ಹವಾಗಿ ವರ್ಧಿಸುತ್ತದೆ ಮತ್ತು ದೇಶಾದ್ಯಂತ ಮುಂದಿನ ಪೀಳಿಗೆಯ ಕ್ರೀಡಾಪಟುಗಳು ಮತ್ತು ಅಭಿಮಾನಿಗಳಿಗೆ ಸ್ಫೋರ್ತಿ ನೀಡುತ್ತದೆ ಎಂದು ಭಾರತದ ಪ್ಯಾರಾಲಿಂಪಿಕ್ ಸಮಿತಿ ಹೇಳಿದೆ,
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು9 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ