ರಾಜ್ಯ
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ

Free Sewing Machine : ಹೆಣ್ಣುಮಕ್ಕಳಿಗೆ ಸಹಾಯ ಆಗಲು ಈಗ ಕೇಂದ್ರ ಸರ್ಕಾರವು ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೆ ತಂದಿದೆ, ಉಚಿತವಾಗಿ ಹೊಲಿಗೆ ಯಂತ್ರ ನೀಡುವುದಕ್ಕೆ ನಿರ್ಧಾರ ಮಾಡಿದೆ
Free Sewing Machine : ಕೇಂದ್ರ ಸರ್ಕಾರವು ನಮ್ಮ ದೇಶದ ಬಡವರು ಹಾಗೂ ನಿರ್ಗತಿಕ ಜನರಿಗೆ ಹಾಗೂ ಹೆಣ್ಣುಮಕ್ಕಳಿಗೆ ಸಹಾಯ ಅಗುವಂಥ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಯೋಜನೆಗಳ ಮೂಲಕ ಅವರಿಗೆಲ್ಲಾ ಆರ್ಥಿಕವಾಗಿ ಸಹಾಯ ಮಾಡುವುದು ಸರ್ಕಾರದ ಗುರಿ.
ಕೇಂದ್ರ ಸರ್ಕಾರವು ಹೆಣ್ಣುಮಕ್ಕಳಿಗಾಗಿ ವಿಶೇಷವಾಗಿ ಒಂದಷ್ಟು ಯೋಜನೆಗಳನ್ನು (Govt Schemes) ಜಾರಿಗೆ ತರುತ್ತಿದೆ. ಅವುಗಳ ಮೂಲಕ ಮಹಿಳೆಯರ ಸಬಲೀಕರಣ ಮಾಡುವ ಉದ್ದೇಶ ಆಗಿರುತ್ತದೆ.
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿರಬೇಕು ಎನ್ನುವುದು ಎಲ್ಲರ ಉದ್ದೇಶ ಆಗಿದೆ. ಈಗಾಗಲೇ ಮಹಿಳೆಯರಿಗೆ ಒಂದಷ್ಟು ಯೋಜನೆಗಳನ್ನು ತಂದಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಯೋಜನೆಯನ್ನು ಜಾರಿಗೆ ತರುತ್ತಿದೆ.
ಈ ಯೋಜನೆಯಿಂದ ಹೆಣ್ಣುಮಕ್ಕಳು ಆರ್ಥಿಕವಾಗಿ ಸದೃಢವಾಗಿ ಇರೋದಕ್ಕೆ ಸಹಾಯ ಆಗುತ್ತದೆ. ಹೆಣ್ಣುಮಕ್ಕಳಿಗೆ ಸಹಾಯ ಆಗಲು ಈಗ ಕೇಂದ್ರ ಸರ್ಕಾರವು ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು(Free Sewing Machine Scheme) ಜಾರಿಗೆ ತಂದಿದೆ.
ಈ ಯೋಜನೆಯಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗ ಸಿಕ್ಕ ಹಾಗೆ ಆಗುತ್ತದೆ. ಜೊತೆಗೆ ಆರ್ಥಿಕವಾಗಿ ಸದೃಢರು ಆಗುತ್ತಾರೆ. ಈ ಯೋಜನೆಯಲ್ಲಿ ಕೇಂದ್ರ ಸರ್ಕಾರವು ಪ್ರತಿ ರಾಜ್ಯದಲ್ಲಿ ಸುಮಾರು 50 ಸಾವಿರ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡುವುದಕ್ಕೆ ನಿರ್ಧಾರ ಮಾಡಿದೆ..
ಈ ಪ್ರಯೋಜನ ಪಡೆಯಲು ಬಯಸುವ ಮಹಿಳೆಯರು ಸರ್ಕಾರಕ್ಕೆ ಅರ್ಜಿ ಸಲ್ಲಿಸಬೇಕು, ಅರ್ಜಿ ಹಾಕುವ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಮಂಜೂರು ಮಾಡಲಾಗುತ್ತದೆ.
ಕರ್ನಾಟಕ, ಗುಜರಾತ್, ಉತ್ತರ ಪ್ರದೇಶ, ಮಹಾರಾಷ್ಟ್ರ, ಹರಿಯಾಣ, ಮಧ್ಯಪ್ರದೇಶ, ಬಿಹಾರ, ಛತ್ತೀಸ್ ಘಡ್ ಈ ಎಲ್ಲಾ ರಾಜ್ಯದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ಸಿಗಲಿದೆ.
ಈ ಯೋಜನೆಯ ಮೂಲಕ ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾಗುವ ಅರ್ಹತೆಗಳು ಹೀಗಿದೆ..
*ಅರ್ಜಿ ಹಾಕುವ ಮಹಿಳೆಯ ವಯಸ್ಸು 20 ರಿಂದ 40 ವರ್ಷಗಳ ಒಳಗೆ ಇರಬೇಕು.
*ಅರ್ಜಿದಾರರು ನಮ್ಮ ದೇಶದ ಪ್ರಜೆಯೇ ಆಗಿರಬೇಕು ಮತ್ತು ಬಡತನದಲ್ಲಿ ಇರುವವರಾಗಿರಬೇಕು.
*ಇವರ ವಾರ್ಷಿಕ ಆದಾಯ 12,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು.
*ವಿಧವೆಯರು ಕೂಡ ಈ ಯೋಜನೆಯ ಸೌಲಭ್ಯ ಪಡೆಯಬಹುದು.ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೀಗೆ..
*ಅರ್ಜಿ ಹಾಕಲು ಮೊದಲಿಗೆ https://pmmodiyojana.in/free-silai-machine-yojana/ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
*ಹೋಮ್ ಪೇಜ್ ನಲ್ಲಿ ಉಚಿತ ಹೊಲಿಗೆ ಯಂತ್ರಕ್ಕೆ ಅಪ್ಲೈ ಮಾಡುವ ಆಯ್ಕೆಯನ್ನು ಸೆಲೆಕ್ಟ್ ಮಾಡಿ, ಆಗ ಹೊಸ ಪೇಜ್ ಓಪನ್ ಆಗುತ್ತದೆ.
*ಇಲ್ಲಿ ಅರ್ಜಿ ಓಪನ್ ಆಗಲಿದ್ದು, ಅದರಲ್ಲಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿ. ಬಳಿಕ ಸಬ್ಮಿಟ್ ಲಿಂಕ್ ಕ್ಲಿಕ್ ಮಾಡಿ, ಈಗ ನಿಮ್ಮ ಅರ್ಜಿ ಸಲ್ಲಿಕೆ ಆಗಿದೆ ಎಂದು ಅರ್ಥ..
*ಇದಕ್ಕಾಗಿ ನಿಮ್ಮ ಬರ್ತ್ ಸರ್ಟಿಫಿಕೇಟ್, ಇನ್ಕಮ್ ಸರ್ಟಿಫಿಕೇಟ್, ಮೊಬೈಲ್ ನಂಬರ್, ಪಾಸ್ ಪೋರ್ಟ್ ಸೈಜ್ ಇರುವ ಫೋಟೋಗಳು ಮತ್ತು ಇನ್ನು ಕೆಲವು ದಾಖಲೆಗಳು ಅರ್ಜಿ ಸಲ್ಲಿಸಲು ಬೇಕಾಗುತ್ತದೆ.
ರಾಜಕೀಯ
DK Shivakumar ಸಿಎಂ ಆಗಬೇಕು: ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷ ಆಗ್ರಹ

ರಾಮನಗರ:
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ಆಗ್ರಹವನ್ನು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “DK Shivakumar ನಮ್ಮ ನಾಯಕರು. ಅವರ ಶ್ರಮ ಹಾಗೂ ಹೋರಾಟಕ್ಕೆ ಪ್ರತಿಫಲ ಸಿಗಬೇಕು. ನಾನು ಈ ಜಿಲ್ಲೆಯಲ್ಲಿ ಹುಟ್ಟಿದ್ದು, ಅವರು ಕೂಡ ನಮ್ಮ ಜನರು. ಅವರಿಗೆ ಗೌರವ ಸಿಗಬೇಕು ಎಂದು ಹೇಳುವುದು ನನ್ನ ಹಕ್ಕು,” ಎಂದು ಸ್ಪಷ್ಟಪಡಿಸಿದರು.
“ನಾನು ಈಗಲೂ ನನ್ನ ಹಿಂದಿನ ಹೇಳಿಕೆಗೆ ಬದ್ಧನಾಗಿದ್ದೇನೆ. DK Shivakumar ಸಿಎಂ ಆಗಬೇಕು ಎಂಬ ಮಾತು ಹಿಂದೆ ಹೇಳಿದ್ದೆ, ಈಗಲೂ ನಿಂತಿದ್ದೇನೆ,” ಎಂದರು.
ಆ.8ರಂದು ಕಾಂಗ್ರೆಸ್ ಹೋರಾಟ:
ಆಗಸ್ಟ್ 8ರಂದು ನಡೆಯಲಿರುವ ಚುನಾವಣಾ ಅಕ್ರಮದ ವಿರುದ್ಧದ ಕಾಂಗ್ರೆಸ್ ಹೋರಾಟ ಕುರಿತು ಮಾತನಾಡಿದ ಅವರು, “ಈ ಹೋರಾಟಕ್ಕೆ ಹೈಕಮಾಂಡ್ ರೂಪುರೇಷೆ ನೀಡಿದೆ. ರಾಷ್ಟ್ರೀಯ ನಾಯಕರು ನೇತೃತ್ವ ವಹಿಸುತ್ತಿದ್ದಾರೆ. ನಮ್ಮ ಜಿಲ್ಲೆಯಿಂದ 20,000 ಮಂದಿ ಪಾಲ್ಗೊಳ್ಳುತ್ತಾರೆ,” ಎಂದು ಹೇಳಿದರು.
ಇವಿಎಂ ಅಕ್ರಮ ಕುರಿತು ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲವಾದರೂ, “ನಮ್ಮ ರಾಷ್ಟ್ರ ನಾಯಕರು ಎಲ್ಲಾ ವಿವರಗಳನ್ನು ಬಹಿರಂಗಪಡಿಸುತ್ತಾರೆ,” ಎಂದು ತಿಳಿಸಿದರು.
ಬೆಂಗಳೂರು
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.
ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.
2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.
ಅಪರಾಧ
ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್‌ಐಟಿ ತನಿಖೆಗೆ ಹೊಸ ತಿರುವು!

ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್‌ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿನ್ನೆ ನಡೆದ ಉತ್ಖನನದ ವೇಳೆ:
- ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
- ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
- ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇಂದಿನ ಉತ್ಖನನ:
- ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್‌ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
- 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್‌ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಪೂರ್ವ ಘಟನೆ:
- ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್‌ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!