ಚುನಾವಣೆ
Ladakh ಲಡಾಕ್‍ನಲ್ಲಿ 5 ಹೊಸ ಜಿಲ್ಲೆ ಘೋಷಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ

ನವದೆಹಲಿ: ಲೇಹ್ ಮತ್ತು ಕಾರ್ಗಿಲ್ ಎಂಬ ಎರಡು ಜಿಲ್ಲೆಗಳನ್ನು ಒಳಗೊಂಡು ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ ನಲ್ಲಿ ಐದು ಹೊಸ ಜಿಲ್ಲೆಗಳನ್ನು ಸ್ಧಾಪಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಣೆ ಮಾಡಿದ್ದಾರೆ ,
ಹೆಚ್ಚುವರಿಯಾಗಿ ಝನ್ಸ್ಕಾರ್, ದ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಹೊಸ ಜಿಲ್ಲೆಯಗಳಾಗಿ ಹೊರಹೊಮ್ಮಲಿವೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಶಾ ಮಾಹಿತಿ ಹಂಚಿಕೊಂಡಿದ್ದಾರೆ, ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಲಡಾಖ್ ನಿರ್ಮಾಣ ಪ್ರಧಾನಿ ನರೇಂದ್ರ ಮೋದಿಯವರ ದೂರು ದೃಷ್ಟಿ, ಇದಕ್ಕಾಗಿ ಐದು ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ,
ಪ್ರತಿ ಮೂಲೆಯಲ್ಲಿಯೂ ಆಡಳಿತವನ್ನು ಬಲಪಡಿಸಿ ಜನರಿಗೆ ನೀಡಬೇಕಾದ ಸೌಲಭ್ಯ ಸೌಕರ್ಯಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಲಡಾಕ್‍ನಲ್ಲಿ ಝನ್ಸ್ಕಾರ್, ದ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್‍ಥಾಂಗ್ ಎಂಬ ಹೊಸ ಜೆಲ್ಲೆಗಳನ್ನು ಘೋಷಿಸಿರುವುದಾಗಿ ಹೇಳಿದ್ದಾರೆ ,