ಬೆಂಗಳೂರು
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಿ ರಾಜೀನಾಮೆ: ಬಿ ವೈ ವಿಜಯೇಂದ್ರ – Vijayendra Meets JP Nadda
ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು.
ದೆಹಲಿಯಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸಚಿವರಿಗೆ ವಿಶ್ವಾಸ ಇಲ್ಲ; ವಿಧಾನಸೌಧಕ್ಕೂ ಸಚಿವರು ಹೋಗುತ್ತಿಲ್ಲ. ಯಾವಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೋ, ಯಾವಾಗ ಸಿದ್ದರಾಮಯ್ಯರ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ಹೋಗಬೇಕೋ ಎಂಬ ಆತಂಕ ಅವರಲ್ಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವೈಷ್ಣೋದೇವಿಗೆ ಹೋಗಿ ಬಂದಿದ್ದಾರೆ. ತಾಯಿಯಲ್ಲಿ ಆಶೀರ್ವಾದ ಬೇಡಿಕೊಂಡು ಬಂದಂತಿದೆ; ಅದು ಬೇರೆ ವಿಚಾರ ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು ಎಂದರು.
ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿದ್ದರು. ಪಾಪ; ಕಾಂಗ್ರೆಸ್ಸಿಗರು ಗಾಬರಿಯಿಂದ ನಮ್ಮ ಪಾದಯಾತ್ರೆ ತಲುಪುವ ಮುನ್ನ ಜನಾಂದೋಲನ ಮಾಡಿದ್ದರು. ಮತ್ತೊಂದೆಡೆ ಸ್ವತಃ ಸಿದ್ದರಾಮಯ್ಯನವರು ಮೈಸೂರಿನಲ್ಲಿದ್ದು, ಜನಾಂದೋಲನಕ್ಕೆ ಸಿದ್ಧತೆ ಮಾಡಿದ್ದರು. ಮುಖ್ಯಮಂತ್ರಿಗಳು ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ಕುರಿತು ಕಾಂಗ್ರೆಸ್ಸಿನ ಶಾಸಕರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಅಭಿವೃದ್ಧಿ ಕೆಲಸಗಳು ಶುರುವೇ ಆಗಿಲ್ಲ. ಇವತ್ತಲ್ಲ ನಾಳೆ ಸಿಎಂ ರಾಜೀನಾಮೆ ಕೊಡಲೇಬೇಕು. ಹೈಕೋರ್ಟ್ ತೀರ್ಪು ಬಂದ ಬಳಿಕವಾದರೂ ಅವರು ರಾಜೀನಾಮೆ ನೀಡಲಿದ್ದಾರೆ, ಇವತ್ತಲ್ಲ ನಾಳೆ ಆ 14 ನಿವೇಶನಗಳು ಮುಡಾ ಪಾಲಾಗಿ ಬಡವರಿಗೆ ಸಿಗಲಿವೆ. ಈ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಭಿವೃದ್ಧಿ ಕೆಲಸಗಳು ಶುರುವೇ ಆಗಿಲ್ಲ. ಯಾವುದೇ ಹೊಸ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನುಷ್ಠಾನ ಮಾಡುತ್ತಿಲ್ಲ ಎಂದು ಟೀಕಿಸಿದರು.
ಸರ್ಕಾರದ ಗ್ಯಾರಂಟಿ ಪರಿಣಾಮವಾಗಿ ಕೆಎಸ್ಆರ್ಟಿಸಿಗೆ 4,500 ಕೋಟಿ ರೂ. ಕೊಡಬೇಕಿದೆ. ಇನ್ನೂ ಮೂರ್ನಾಲ್ಕು ತಿಂಗಳು ಹೀಗೇ ಮುಂದುವರೆದರೆ ಕೆಎಸ್ಆರ್ಟಿ ಬಾಗಿಲು ಮುಚ್ಚಲಿದೆ. ಸಂಬಳ ಕೊಡಲೂ ದುಡ್ಡಿಲ್ಲ. ಮತ್ತೊಂದು ಕಡೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ತಿಳಿಸಿದ್ದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಕುಗ್ಗಿ ಹೋಗಿದ್ದು, 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿಗಳಿದ್ದರೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದು ಇರಲಿ; ಅವರ ಗೌರವಧನವನ್ನು 3 ತಿಂಗಳಿಂದ ಪಾವತಿಸಿಲ್ಲ ಎಂದು ಆಕ್ಷೇಪಿಸಿದರು. ಕರ್ನಾಟಕದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನೂನು- ಸುವ್ಯವಸ್ಥೆ ಹಾಳಾಗಿದೆ ಎಂದರು.
ಸರ್ಕಾರ ಕಾಲಹರಣ ಮಾಡುತ್ತಿದೆ. ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಹಗರಣ ನಡೆದ ಕುರಿತು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಅದೇ ಮಾದರಿಯಲ್ಲಿ ಮುಡಾದ ತಪ್ಪನ್ನೂ ಒಪ್ಪಿಕೊಂಡು, ನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು ಎಂದು ಹೇಳಿದರು.
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಪಾದಯಾತ್ರೆಯ ಯಶಸ್ಸಿನ ಕುರಿತು ಮಾಹಿತಿ ಹಂಚಿಕೊಂಡಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಬಾರಿ 1.05 ಕೋಟಿ ಸದಸ್ಯತ್ವವನ್ನು ನಾವು ನೋಂದಣಿ ಮಾಡಿಸಿದ್ದೆವು. ಈ ಬಾರಿ ಇನ್ನೂ ಹೆಚ್ಚು ಸದಸ್ಯತ್ವ ದಾಖಲಿಸುವ ಕುರಿತು ಕೂಡ ಗಮನ ಸೆಳೆದುದಾಗಿ ಹೇಳಿದರು.
ಅಹಿಂದ ಸಮುದಾಯಗಳಿಗೆ ಅನ್ಯಾಯ: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಎಸ್‍ಐಟಿ ರಚಿಸಿ ಕ್ಲೀನ್ ಚಿಟ್ ಕೊಡಿಸುವ ಅಗತ್ಯ ಏನಿತ್ತು? ಸರ್ಕಾರದ ದಲಿತರ ಕಾಳಜಿ ಅಂದರೆ ಇದೇನಾ ಎಂದು ವಿಜಯೇಂದ್ರ ಪ್ರಶ್ನಿಸಿದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಇ.ಡಿ. ತನಿಖೆ ನಡೆಯುತ್ತಿದೆ. ಇದೊಂದು ಗಂಭೀರ ಪ್ರಕರಣ. ಲೆಕ್ಕಾಧಿಕಾರಿ ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಶಾಸಕರನ್ನು ದೂರವಿಟ್ಟು ಯಾರಿಗೆ ದ್ರೋಹ ಮಾಡುತ್ತಿದ್ದೀರಿ? ಅಹಿಂದ ಸಮುದಾಯಗಳಿಗೆ ಸಿದ್ದರಾಮಯ್ಯನವರು ಅನ್ಯಾಯ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.
ಹಿಂದೆ ಇದೇ ಸಿದ್ದರಾಮಯ್ಯನವರು ಎಸಿಬಿ ಮೂಲಕ ಕ್ಲೀನ್ ಚಿಟ್ ಪಡೆದುಕೊಂಡ ಇತಿಹಾಸ ಇದೆ. ರಾಷ್ಟ್ರಮಟ್ಟದಲ್ಲಿ ಸಿದ್ದರಾಮಯ್ಯನವರ ವಿಚಾರದಲ್ಲಿ ಹೋರಾಟ ಮಾಡುವ ಕುರಿತು ರಾಜ್ಯದ ನಾಯಕರ ಕೆಲವು ಸಲಹೆಗಳಿದ್ದು, ಅದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ. ಪಕ್ಷದ ವರಿಷ್ಠರು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಯತ್ನಾಳ್ ಅಥವಾ ಇನ್ಯಾರದೋ ವಿರುದ್ಧ ದೆಹಲಿಯಲ್ಲಿ ದೂರು ಕೊಡಲು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿಲ್ಲ; ಸಂಘಟನೆ ಬಲಪಡಿಸಲು, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಯತ್ನಾಳ್ ಅವರ ಕುರಿತು ಇಲ್ಲಿ ನಾನು ಪ್ರಸ್ತಾಪಿಸಿಲ್ಲ; ಅದರ ಅವಶ್ಯಕತೆಯೂ ನನಗಿಲ್ಲ. ಪಕ್ಷದ ಬೆಳವಣಿಗೆಗೆ ಪೂರಕ ಇದ್ದರೆ, ರಾಷ್ಟ್ರೀಯ ನಾಯಕರ ಒಪ್ಪಿಗೆ ಇದ್ದರೆ ಇನ್ನೊಂದು ಪಾದಯಾತ್ರೆ ಮಾಡಬಹುದು. ಅದರ ಬಗ್ಗೆ ಈಗ ನಾನು ಮಾತನಾಡಲ್ಲ. ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಕ್ಕೆ ಬಲ ತುಂಬಲಿದ್ದೇನೆ ಎಂದರು.
ದೇಶ
ವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ
ಬೆಂಗಳೂರು: ನಗರದ ಕೆಂಗೇರಿಯಲ್ಲಿ ಕ್ಷತ್ರಿಯ (ತಿಗಳ ಕ್ಷತ್ರಿಯ) ಸಮುದಾಯದವರಿಂದ ಆಚರಿಸಲ್ಪಡುವ ದ್ರೌಪದಿ ಅಮ್ಮನವರ ಭವ್ಯ ಕರಗ ಶಕ್ತಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಅನಾದಿಕಾಲದಿಂದಲೂ ನಡೆಯುತ್ತಿರುವ ಈ ಸಂಪ್ರದಾಯಿಕ ಹಬ್ಬದಲ್ಲಿ ಭಕ್ತಿ, ಶಕ್ತಿ ಮತ್ತು ಸಂಸ್ಕೃತಿಯ ಸಮ್ಮಿಳನ ಕಂಡುಬರುತ್ತದೆ.
ಈ ಮಹೋತ್ಸವದ ಅಂಗವಾಗಿ ಹಸಿ ಕರಗವನ್ನು ಮುನ್ನಡೆಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸಮುದಾಯದವರು Draupadi Amman ಅವರನ್ನು ಕುಲದೇವತೆಯಾಗಿ ಆರಾಧಿಸುತ್ತಾರೆ. ಕರಗ ಪೂಜೆಯಲ್ಲಿ ಕುಲಪುರೋಹಿತರು, ವೀರಕುಮಾರರು ಮತ್ತು ಭಕ್ತರು ಭಾಗವಹಿಸಿ ವಿಶೇಷ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ.
ಹಬ್ಬದ ವಿಶೇಷವೆಂದರೆ ವೀರಕುಮಾರರು ಕೈಯಲ್ಲಿ ಖಡ್ಗಗಳನ್ನು ಹಿಡಿದು ಭಕ್ತಿಯ ಸಂಕೇತವಾಗಿ ತಮ್ಮ ಎದೆಗೆ ತಾವೇ ಪ್ರಹಾರ ಮಾಡಿಕೊಳ್ಳುವುದು. ಗಾಯವಾದಲ್ಲಿ ಔಷಧಿಯ ಬದಲು ಅರಿಶಿನವನ್ನು ಬಳಸಿ ದೇವಿಯ ಮೇಲಿನ ಭಕ್ತಿಯನ್ನು ತೋರಿಸುತ್ತಾರೆ.
ರಾತ್ರಿ ಸುಮಾರು ಮೂರು ಗಂಟೆಗೆ ಹೂವಿನ ಕರಗ ಸಿದ್ಧವಾಗುತ್ತಿದ್ದು, ಕೆಂಪು ವಸ್ತ್ರ ಮತ್ತು ಮಂಗಳ ದ್ರವ್ಯಗಳಿಂದ ಅಲಂಕರಿಸಲಾಗುತ್ತದೆ. ಪೂಜಾರಿ ಮಲ್ಲಿಗೆ ಹೂಗಳಿಂದ ಸಿಂಗರಿಸಿಕೊಂಡು ಕರಗವನ್ನು ಹೊತ್ತು ಭಕ್ತಿಭಾವದಿಂದ ನರ್ತನ ಮಾಡುತ್ತಾ ಸಾಗುತ್ತಾರೆ.
ಈ ಕರಗವು ಕೆಂಗೇರಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಸಂಚರಿಸಿ, ನಂತರ ದೇವಸ್ಥಾನಕ್ಕೆ ಮರಳಿ ಪೂಜೆ ಸ್ವೀಕರಿಸುವ ಮೂಲಕ ಮಹೋತ್ಸವ ಮುಕ್ತಾಯಗೊಳ್ಳುತ್ತದೆ.
ಈ ಸಂದರ್ಭದಲ್ಲಿ ಸಮುದಾಯದ ಅನೇಕ ಮುಖಂಡರು ಹಾಗೂ ಭಕ್ತರು ಭಾಗವಹಿಸಿ ಉತ್ಸವಕ್ಕೆ ಭಕ್ತಿ ಭಾವ ತುಂಬಿದರು.
ದೇಶ
ಬೆಂಗಳೂರಿನಲ್ಲಿ ಎಲ್ಪಿಜಿ ಸಂಕಷ್ಟ: ಆಟೊ ಚಾಲಕರ ಬದುಕು ಸಂಕಷ್ಟಕ್ಕೆ
ಬೆಂಗಳೂರು: ನಗರದಲ್ಲಿ ಉಂಟಾಗಿರುವ ಎಲ್ಪಿಜಿ ಕೊರತೆಯಿಂದ ಆಟೊ ಚಾಲಕರ ಸಮಸ್ಯೆಗಳು ದಿನೇ ದಿನೇ ಗಂಭೀರವಾಗುತ್ತಿವೆ. ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಲಭ್ಯವಿರುವ ಬಂಕ್ಗಳ ಬಳಿ ಆಟೊ ಚಾಲಕರು ಗಂಟೆಗಟ್ಟಲೆ ಕಾದು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ಬಂಕ್ಗಳು ತಾತ್ಕಾಲಿಕವಾಗಿ ಬಾಗಿಲು ಮುಚ್ಚಿದ್ದು, ಉಳಿದ ಬಂಕ್ಗಳಲ್ಲೂ ‘ನೋ ಸ್ಟಾಕ್’ ಫಲಕಗಳು ಸಾಮಾನ್ಯ ದೃಶ್ಯವಾಗಿವೆ.
ರಾಜಾಜಿನಗರ, ಮತ್ತೀಕೆರೆ, ದಾಸರಹಳ್ಳಿ, ಗುಟ್ಟಹಳ್ಳಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಮಸ್ಯೆ ತೀವ್ರಗೊಂಡಿದೆ. ಬಂಕ್ಗಳ ಬಳಿ ಆಟೊಗಳು ಸಾಲುಗಟ್ಟಿ ನಿಲ್ಲುವುದರಿಂದ ಸಂಚಾರ ದಟ್ಟಣೆಗೂ ಕಾರಣವಾಗುತ್ತಿದೆ. ಎಲ್ಪಿಜಿ ಕೊರತೆಯಿಂದ ಸಾವಿರಾರು ಆಟೊಗಳು ರಸ್ತೆಗಿಳಿಯಲು ಸಾಧ್ಯವಾಗದೇ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಒತ್ತಡ ಹೆಚ್ಚಾಗಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್ ಪೂರೈಕೆಗೆ ತೀವ್ರ ಹೊಡೆತ ಬಿದ್ದಿದ್ದು, ಆಟೊ ಚಾಲಕರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಗ್ಯಾಸ್ ಬೆಲೆ ಏರಿಕೆಯಿಂದಾಗಿ ಚಾಲಕರು ಕಡಿಮೆ ದೂರಕ್ಕೂ ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ವಸೂಲು ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೂ ಹೆಚ್ಚುವರಿ ಹೊರೆ ಬೀಳುತ್ತಿದೆ.
ಗ್ಯಾಸ್ ಲಭ್ಯವಿರುವ ಮಾಹಿತಿ ಸಿಕ್ಕ ತಕ್ಷಣ ನೂರಾರು ಆಟೊಗಳು ಬಂಕ್ಗಳತ್ತ ಧಾವಿಸುತ್ತಿವೆ. ಪರಿಣಾಮ, ಕೆಲವೇ ಗಂಟೆಗಳಲ್ಲಿ ಸ್ಟಾಕ್ ಖಾಲಿಯಾಗುತ್ತಿದೆ. ಸಿಎನ್ಜಿ ಕೊರತೆಯೂ ಕಾಣಿಸಿಕೊಂಡಿರುವುದರಿಂದ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗಿದೆ.
ಇದರಿಂದಾಗಿ ವಿದ್ಯುತ್ ಚಾಲಿತ ಆಟೊಗಳ ಬಳಕೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಇವುಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಪರಿಸ್ಥಿತಿ ಮುಂದುವರಿದರೆ ಅನೇಕ ಆಟೊ ಚಾಲಕರು ವೃತ್ತಿ ತೊರೆಯುವ ಸ್ಥಿತಿ ಎದುರಾಗುವ ಸಾಧ್ಯತೆ ಇದೆ.
ದೇಶ
ಸುಪ್ರೀಂ ಕೋರ್ಟ್ ಆದೇಶ ಬಳಿಕ ಬೀದಿ ನಾಯಿಗಳ ಲೆಕ್ಕಾಚಾರ: ನಗರದಲ್ಲಿ ಆತಂಕ
ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಬೀದಿ ನಾಯಿಗಳ ಸಮಸ್ಯೆ ಗಂಭೀರವಾಗುತ್ತಿರುವ ಹಿನ್ನೆಲೆ, Bruhat Bengaluru Mahanagara Palike ಸರ್ವೆ ಕಾರ್ಯ ಆರಂಭಿಸಿದೆ. Supreme Court of India ನೀಡಿದ ನಿರ್ದೇಶನದಂತೆ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಶಾಲೆ, ಕಾಲೇಜು, ಆಸ್ಪತ್ರೆ, ಬಸ್ ನಿಲ್ದಾಣ, ಕ್ರೀಡಾಂಗಣ ಹಾಗೂ ಆಟದ ಮೈದಾನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 2,670 ಬೀದಿ ನಾಯಿಗಳು ಪತ್ತೆಯಾಗಿವೆ. ಕೇಂದ್ರ ವಲಯದಲ್ಲಿ 504, ಉತ್ತರ ವಲಯದಲ್ಲಿ 875, ಪಶ್ಚಿಮ ವಲಯದಲ್ಲಿ 591, ದಕ್ಷಿಣ ವಲಯದಲ್ಲಿ 331 ಹಾಗೂ ಪೂರ್ವ ವಲಯದಲ್ಲಿ 369 ನಾಯಿಗಳಿವೆ ಎಂದು ಮಾಹಿತಿ ನೀಡಲಾಗಿದೆ.
ಆದರೆ, ಈ ಅಂಕಿ-ಅಂಶಗಳ ನಿಖರತೆ ಬಗ್ಗೆ ಪ್ರಶ್ನೆಗಳು ಮೂಡಿವೆ. ಕೆಲವು ವಲಯಗಳಲ್ಲಿ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದ್ದು, ಕೆಲವು ಸಂಸ್ಥೆಗಳು ತಮ್ಮ ವ್ಯಾಪ್ತಿಯ ಲೆಕ್ಕ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಬೀದಿ ನಾಯಿಗಳ ಸ್ಥಳಾಂತರಕ್ಕಾಗಿ ಆನೇಕಲ್ ವ್ಯಾಪ್ತಿಯ ಬಿಂಗೀಪುರದಲ್ಲಿ 5 ಎಕರೆ ಜಾಗ ಗುರುತಿಸಲಾಗಿದ್ದು, ಸುಮಾರು 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯದ ಶೆಲ್ಟರ್ ನಿರ್ಮಾಣಕ್ಕೆ 2 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ.
ಇದೇ ವೇಳೆ, ಉತ್ತರ ಹಾಗೂ ಪಶ್ಚಿಮ ವಲಯಗಳಲ್ಲಿ ಹೆಚ್ಚುವರಿ ಆಶ್ರಯ ತಾಣ ನಿರ್ಮಾಣದ ಕಾರ್ಯ ಕೂಡ ಪ್ರಗತಿಯಲ್ಲಿದೆ.
ಒಟ್ಟಿನಲ್ಲಿ, ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದರೂ, ಅಂಕಿ-ಅಂಶಗಳ ಸ್ಪಷ್ಟತೆ ಹಾಗೂ ಅನುಷ್ಠಾನದ ಪರಿಣಾಮಕಾರಿತ್ವ ಬಗ್ಗೆ ಇನ್ನೂ ಅನುಮಾನಗಳು ಉಳಿದಿವೆ.
-
ಚುನಾವಣೆ9 hours agoDavangere By Election 2026 : 25 ಅಭ್ಯರ್ಥಿಗಳ ಕಣ: ಮುಸ್ಲಿಂ ಅಭ್ಯರ್ಥಿಗಳೇ ಗೇಮ್ಚೇಂಜರ್?
-
ದೇಶ10 hours agoX ನಲ್ಲಿ ವೈರಲ್ ಆದ CA ಕಥೆ: ನಂಬಲೇಬೇಕಾ ಅಥವಾ ಕೇವಲ ಕಥೆಯಾ?
-
ದೇಶ10 hours agoಗಡಿಯಲ್ಲಿ ಹಾವು-ಮೊಸಳೆ ಕಾವಲು?: ಬಿಎಸ್ಎಫ್ ಹೊಸ ಯೋಜನೆ ಚರ್ಚೆಯಲ್ಲಿ
-
ಚುನಾವಣೆ10 hours agoಎಐಎಡಿಎಂಕೆ vs ಡಿಎಂಕೆ: ಸೀಟ್ ಶೇರಿಂಗ್ನಲ್ಲಿ ಭಾರಿ ಪೈಪೋಟಿ
-
ಕ್ರೀಡೆ24 hours agoಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
-
ದೇಶ12 hours agoತಾಲಿಬಾನ್ ವಿರುದ್ಧ ಪಾಕಿಸ್ತಾನದ ಆಪರೇಷನ್: ನೂರಾರು ಉಗ್ರರು ಸಾವು
-
ದೇಶ12 hours agoಇರಾನ್ಗೆ ಟ್ರಂಪ್ ಮತ್ತೊಂದು ಗಡುವು: 24 ಗಂಟೆ ವಿಸ್ತರಣೆ ಘೋಷಣೆ
-
ದೇಶ8 hours agoವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ
