ದೇಶ
ಶಾಂತಿಯ ಸಂದೇಶಕ್ಕಾಗಿ ಪ್ರಧಾನಿ ಮೋದಿ ಉಕ್ರೇನ್ ಭೇಟಿ ಸ್ವಾಗತಿಸಿದ ಬೈಡನ್ – Telephonic conversation with modi
ವಾಷಿಂಗ್ಟನ್ ಡಿಸಿ: ಅಮೆರಿಕ ಅಧ್ಯಕ್ಷ ಜೋ ಬೈಡನ್, ಪ್ರಧಾನಿ ನರೇಂದ್ರ ಅವರ ಪೋಲೆಂಡ್ ಮತ್ತು ಉಕ್ರೇನ್ ಭೇಟಿಯನ್ನು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ. ಪ್ರಧಾನಿ ಮೋದಿ ಜತೆ ದೂರವಾಣಿ ಸಂಭಾಷಣೆ ನಡೆಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಈ ಭೇಟಿ ಶಾಂತಿಯ ಸಂದೇಶದ ಧ್ಯೋತಕ ಎಂದು ಶ್ಲಾಘಿಸಿದ್ದಾರೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಫೋನ್ ಸಂಭಾಷಣೆ ವೇಳೆ ಉಭಯ ನಾಯಕರು, ಯುರೋಪಿಯನ್ ರಾಷ್ಟ್ರಗಳ ಪ್ರವಾಸ ಮತ್ತು ಸೆಪ್ಟೆಂಬರ್‌ನಲ್ಲಿ ಮುಂಬರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಡೆಯುವ ಸಂವಾದ ಮತ್ತು ಚರ್ಚೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ದಶಕಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ಪೋಲೆಂಡ್ ಮತ್ತು ಉಕ್ರೇನ್‌ಗೆ ಐತಿಹಾಸಿಕ ಭೇಟಿ ನೀಡಿದ್ದಾರೆ. ಈ ವೇಳೆ, ಪ್ರಧಾನಿ ವಿಶ್ವಕ್ಕೆ ಶಾಂತಿಯ ಸಂದೇಶ ನೀಡಿರುವುದನ್ನು ಬೈಡನ್ ಪ್ರಶಂಸಿದರು. ಮತ್ತು ಇಂಧನ ಕ್ಷೇತ್ರ ಸೇರಿದಂತೆ ಉಕ್ರೇನ್‌ಗೆ ಮಾನವೀಯ ಬೆಂಬಲ ಘೋಷಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದರು.
ಪಿಎಂ ಮೋದಿ ಮತ್ತು ಅಧ್ಯಕ್ಷ ಬೈಡನ್ ವಿಶ್ವಸಂಸ್ಥೆ ಸನ್ನದು ಆಧಾರದ ಮೇಲೆ ಅಂತಾರಾಷ್ಟ್ರೀಯ ಕಾನೂನಿನ ಅನುಸಾರವಾಗಿ ಸಂಘರ್ಷದ ಶಾಂತಿಯುತ ಪರಿಹಾರ ಕ್ಕೆ ತಮ್ಮ ನಿರಂತರ ಬೆಂಬಲವನ್ನು ವ್ಯಕ್ತಪಡಿಸಿದರು. ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ಕ್ವಾಡ್‌ನಂತಹ ಪ್ರಾದೇಶಿಕ ಗುಂಪುಗಳನ್ನು ಒಳಗೊಂಡಂತೆ ಒಟ್ಟಾಗಿ ಕೆಲಸ ಮಾಡುವ ತಮ್ಮ ನಿರಂತರ ಬದ್ಧತೆಯನ್ನು ಇದೇ ವೇಳೆ ಉಭಯ ನಾಯಕರು ವ್ಯಕ್ತಪಡಿಸಿದರು. ಇದಕ್ಕೂ ಮುನ್ನ, ಪ್ರಧಾನಿ ಮೋದಿ ಅವರು ಬೈಡನ್ರ ಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ವಿವರಿಸಿದರು ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ಸ್ಥಿರವಾದ ನಿಲುವನ್ನು ಪುನರುಚ್ಚರಿಸಿದರು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಪ್ರಧಾನಿ ಮೋದಿ ಮತ್ತು ಬೈಡನ್ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚೆ ನಡೆಸಿದರು. ಕ್ವಾಡ್ ಸೇರಿದಂತೆ ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು.
ಪ್ರಧಾನಿ ಮೋದಿಯವರ ಪೋಲೆಂಡ್ ಮತ್ತು ಉಕ್ರೇನ್ ಭೇಟಿಯ ಕೆಲವು ದಿನಗಳ ನಂತರ ಈ ಸಂಭಾಷಣೆ ನಡೆದಿದೆ. ಪ್ರಧಾನಿ ಮೋದಿ ಕಳೆದ ಶುಕ್ರವಾರ ಉಕ್ರೇನ್‌ಗೆ ಭೇಟಿ ನೀಡಿದ್ದರು. ಭಾರತೀಯ ಪ್ರಧಾನಿಯೊಬ್ಬರು ಯುರೋಪಿಯನ್ ರಾಷ್ಟ್ರಕ್ಕೆ ನೀಡಿದ ಮೊದಲ ಭೇಟಿ ಇದಾಗಿತ್ತು. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಈಗಿನ ಸಂಘರ್ಷವನ್ನು ಶಾಂತಿಯುತವಾಗಿ ಪರಿಹರಿಸುವ ಭಾರತದ ನಿಲುವನ್ನು ಪ್ರಧಾನಿ ಮೋದಿ ಪ್ರತಿಪಾದಿಸಿದ್ದರು.
“ಭಾರತ ಎಂದಿಗೂ ತಟಸ್ಥವಾಗಿರಲಿಲ್ಲ, ನಾವು ಯಾವಾಗಲೂ ಶಾಂತಿಯ ಕಡೆ ಇದ್ದೇವೆ” ಎಂದು ಪ್ರಧಾನಿ ಮೋದಿ ಝೆಲೆನ್ಸ್ಕಿಯವರಿಗೆ ಇದೇ ವೇಳೆ ಭಾರತದ ನಿಲುವನ್ನು ದೃಢಪಡಿಸಿದ್ದರು. ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಸಕ್ರಿಯ ಪಾತ್ರ ವಹಿಸಲು ಭಾರತ ಸಿದ್ಧವಾಗಿದೆ ಎಂದು ಮೋದಿ ಘೋಷಿಸಿದ್ದರು
ದೇಶ
ಎಪ್ಸ್ಟೀನ್ ಫೈಲ್ಸ್‌ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್‌ಗಟ್ಟಲೆ ಇಮೇಲ್‌ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ ಕೆಲವು ಭಾರತೀಯರ ಹೆಸರುಗಳು ಕಾಣಿಸಿಕೊಂಡಿರುವುದು ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಹೆಸರು ಉಲ್ಲೇಖವಾಗಿರುವುದಾಗಿ ವರದಿಯಾಗುತ್ತಿದ್ದಂತೆಯೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನೊಳಗೂ ಹೊರಗೂ ಮಾತನಾಡಿದ ಅವರು, ಎಪ್ಸ್ಟೀನ್ ಪ್ರಕರಣದ ಉಲ್ಲೇಖದೊಂದಿಗೆ ಕೇಂದ್ರ ಸರ್ಕಾರವನ್ನು ಟೀಕಿಸಿದರು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಹರ್ದೀಪ್ ಪುರಿ, “ನಾನು ಜೆಫ್ರಿ ಎಪ್ಸ್ಟೀನ್ ಅವರನ್ನು ಕೆಲವೇ ಬಾರಿ, ಅದೂ ಔಪಚಾರಿಕ ಸಂದರ್ಭಗಳಲ್ಲಿ ಮಾತ್ರ ಭೇಟಿ ಮಾಡಿದ್ದೇನೆ. ಅವರ ಅಕ್ರಮ ಚಟುವಟಿಕೆಗಳಿಗೆ ನನ್ನೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.
ಮೂರು ಮಿಲಿಯನ್ ಇಮೇಲ್‌ಗಳಲ್ಲಿ ತಮ್ಮ ಹೆಸರು ಕೇವಲ 3-4 ಬಾರಿ ಮಾತ್ರ ಉಲ್ಲೇಖವಾಗಿದೆ. ನಿಯೋಗದ ಭಾಗವಾಗಿ ಕೆಲ ಸಂದರ್ಭಗಳಲ್ಲಿ ಭೇಟಿಯಾಗಿದ್ದು, ಕೇವಲ ಒಂದು ಇಮೇಲ್ ವಿನಿಮಯ ಮಾಡಿಕೊಂಡಿದ್ದೇನೆ ಅಷ್ಟೇ ಹೊರತು, ಯಾವುದೇ ಅಕ್ರಮ ಸಂಬಂಧ ಇಲ್ಲ ಎಂದು ಹೇಳಿದರು.
ಇದೇ ವೇಳೆ, 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ಕುರಿತ ಉಲ್ಲೇಖಗಳನ್ನೂ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. “ಇದು ಅಧಿಕೃತ ಭೇಟಿಯೇ ಹೊರತು, ಉಳಿದ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಕಲ್ಪನೆಗಳಾಗಿವೆ” ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಎಪ್ಸ್ಟೀನ್ ಫೈಲ್ಸ್ ಪ್ರಕರಣ ಇದೀಗ ಭಾರತೀಯ ರಾಜಕೀಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.
ಕ್ರೀಡೆ
JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.
ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.
ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.
ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.
ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.
ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.
ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.
ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.
ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ದೇಶ
LATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು (Kiren Rijiju) ತಿಳಿಸಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ‘ಭಾರತ ಮಾತೆಯನ್ನು ಮಾರಿಬಿಟ್ಟಿದೆ’ ಎಂದು ಆರೋಪಿಸಿದ್ದರು. ಭಾರತ–ಅಮೆರಿಕ ವಾಣಿಜ್ಯ ಒಪ್ಪಂದವನ್ನು ‘ಸಂಪೂರ್ಣ ಶರಣಾಗತಿ’ ಎಂದು ಟೀಕಿಸಿದ ಅವರು, ದೇಶದ ಶಕ್ತಿ ಸುರಕ್ಷತೆ ಅಮೆರಿಕಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜುಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು. ಗಂಭೀರ ಆರೋಪ ಮಾಡಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಮತ್ತು ಪುರಾವೆ ಸಲ್ಲಿಸಬೇಕು. ಆದರೆ ರಾಹುಲ್ ಗಾಂಧಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡಿದ್ದಾರೆ,” ಎಂದು ರಿಜುಜು ಹೇಳಿದರು.
ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ದಾಖಲಾಗಿರುವ ತಪ್ಪು ಹೇಳಿಕೆಗಳು ಮತ್ತು ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ರಿಜುಜು ತಿಳಿಸಿದರು.
ಈ ಬೆಳವಣಿಗೆಗಳ ನಡುವೆ ಸಂಸತ್ ಕಲಾಪದಲ್ಲಿ ಮತ್ತಷ್ಟು ರಾಜಕೀಯ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇದೆ.
-
ದೇಶ10 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ17 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ16 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ17 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ದೇಶ9 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ17 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ಕ್ರೀಡೆ10 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ಅಪರಾಧ9 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
