Connect with us

ದೇಶ

ಕುಮಾರಸ್ವಾಮಿಗೆ ಕೈ ತೋರಿಸಿ ಆವಾಜ್ ಹಾಕಿದ ಕಾಂಗ್ರೆಸ್‌ ಕಾರ್ಯಕರ್ತ; ಮಂಡ್ಯದಲ್ಲಿ ರೋಷಾವೇಶ; ಆಗಿದ್ದೇನು?

ಮಂಡ್ಯ ನಗರಸಭೆಯ ಆವರಣ ಇಂದು ಅಕ್ಷರಶಃ ರಣರಂಗವಾಗಿತ್ತು. ನಗರಸಭಾ ಅಧ್ಯಕ್ಷ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್‌ ನಾಯಕರ ಮಧ್ಯೆ ಜಿದ್ದಾಜಿದ್ದಿನ ರಾಜಕೀಯ ಹೋರಾಟ ನಡೆದಿದೆ. ನಗರಸಭೆ ಆವರಣದಲ್ಲಿ ಕಾಂಗ್ರೆಸ್ ಸದಸ್ಯರು, ಜೆಡಿಎಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಾಗ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಕೆರಳಿ ಕೆಂಡವಾಗಿದ್ದಾರೆ.

ನಗರಸಭೆ ಆವರಣಕ್ಕೆ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ಬಂದಿದ್ದರು. ಜೆಡಿಎಸ್ ಸದಸ್ಯರು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಆಗಮಿಸಿದರು. ಆಗ ಜೆಡಿಎಸ್ ಬಸ್ ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್‌ನ ಮೂವರು ಸದಸ್ಯರನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅದೇ ರೀತಿ ಕಾಂಗ್ರೆಸ್‌ನ ಓರ್ವನನ್ನು ಜೆಡಿಎಸ್‌ ಹೈಜಾಕ್ ಮಾಡಿದ ಆರೋಪದಲ್ಲಿ ಹೈಡ್ರಾಮವೇ ನಡೆಯಿತು.

ಈ ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡುತ್ತಿದ್ದರು. ಈ ವೇಳೆ ಕುಮಾರಸ್ವಾಮಿ ಅವರು ಮಧ್ಯ ಪ್ರವೇಶ ಮಾಡಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕೊನೆಗೆ ಮಂಡ್ಯ ನಗರಸಭೆಯಲ್ಲಿ ಜೆಡಿಎಸ್-ಬಿಜೆಪಿ ದೋಸ್ತಿಗೆ ಗೆದ್ದು ಬೀಗಿತು. ಜೆಡಿಎಸ್ ಪಾಲಾದ ಮೇಲೆ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಕುಮಾರಸ್ವಾಮಿ ಪರ ಜೈಕಾರ ಹಾಕಿ ಸತ್ಯಕ್ಕೆ ಜಯ, ಕುಮಾರಣ್ಣ ಇದ್ದ ಕಡೆ ಜಯ ಎಂದು ಘೋಷಣೆ ಕೂಗಿದರು.

ಕುಮಾರಸ್ವಾಮಿ ಹೇಳಿದ್ದೇನು?
ಮಂಡ್ಯ ನಗರಸಭೆಯಲ್ಲಿ ನಡೆದ ಗಲಾಟೆ ಬಳಿಕ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಮಾತನಾಡಿದರು. ಕಾಂಗ್ರೆಸ್ ಶಾಸಕ ಗಣಿಗ ರವಿ ವಾಮಮಾರ್ಗದಲ್ಲಿ ಅಧಿಕಾರ ಹಿಡಿದರು ಎಂದು ಆರೋಪಿಸಿದ್ದಾರೆ. ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯೂ ಕಣ್ಸನ್ನೆ, ಕೈಸನ್ನೆ ಮೂಲಕವೂ ಹಣದ ಆಮಿಷ ಒಡ್ಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ನ್ನ ಜೀವನದಲ್ಲಿ ಮೊದಲ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಬೇಕಾಯಿತು. ಕ್ಯಾಬಿನೆಟ್ ಸಭೆ ಬಿಟ್ಟು ಪ್ರಧಾನಿಮಂತ್ರಿ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಚುನಾವಣೆ ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್‌ಪರ್ಟ್ ಆಗಿದೆ. ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದ್ದರು. ನಮ್ಮ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡಿದ್ದಾರೆ ಅನ್ನೋದು ಗೊತ್ತಿದೆ. ಕಾಂಗ್ರೆಸ್ ಕುಟುಂಬ ಸದಸ್ಯರು ಬ್ಲಾಕ್ ಮೇಲ್ ಮಾಡಿದ್ದಾರೆ. ಅದಕ್ಕಾಗಿ ಸದಸ್ಯರನ್ನ ಕುಟುಂಬಸ್ಥರನ್ನು ಇಟ್ಟುಕೊಂಡು ಚುನಾವಣೆ ಮಾಡಲು ಮುಂದಾಗಿದ್ದರು. ನಗರಸಭೆ ಅಧ್ಯಕ್ಷ ಮಹದೇವು ತೆಗೆದುಕೊಂಡು ನಿರ್ಧಾರ ಪಕ್ಷ ನಿಷ್ಠೆ ತೋರಿದೆ. ಅವರ ಮನೆಗೆ ತೆರಳಿ ಕೃತಜ್ಞತೆ ತಿಳಿಸುತ್ತೇನೆ ಎಂದಿದ್ದಾರೆ.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending