Connect with us

ಬೆಂಗಳೂರು

ತಿರುಪತಿ ದೇವಸ್ಥಾನದ ಪ್ರಸಾದಕ್ಕೆ ನಂದಿನಿ ತುಪ್ಪ ಸರಬರಾಜು: ತುಪ್ಪದ ಟ್ಯಾಂಕರ್​ಗೆ ಸಿಎಂ ಸಿದ್ದರಾಮಯ್ಯ ಚಾಲನೆ – Nandini Ghee for Tirupati

Published

on

ಬೆಂಗಳೂರು: ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದಕ್ಕೆ ಕರ್ನಾಟಕದ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದ್ದು, ತುಪ್ಪದ ಟ್ಯಾಂಕರ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಬುಧವಾರ ರಾತ್ರಿ ಚಾಲನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಭೀಮಾನಾಯಕ್ ಮತ್ತು ಕೆಎಂಎಫ್ ಎಂಡಿ ಜಗದೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಅವರು ನಂದಿನಿ ದೇಸಿ ಹಸುವಿನ ತುಪ್ಪವನ್ನು ಬಿಡುಗಡೆಗೊಳಿಸಿದರು.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ಕಳೆದ 5 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 24 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲು ಖರೀದಿಸಿ, ಸಂಸ್ಕರಿಸಿ, ‘ಗೋವಿನಿಂದ ಗ್ರಾಹಕರವರೆಗೆ’ ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ರ್ಯಾಂಡ್​ನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿದೆ. ನಂದಿನಿಯು ಕರ್ನಾಟಕ ರಾಜ್ಯದ ಮನೆ ಮಾತಾಗಿರುವ ಬ್ರ್ಯಾಂಡ್ ಆಗಿರುವುದಲ್ಲದೇ, ರಾಷ್ಟ್ರಾದ್ಯಂತ ಗ್ರಾಹಕರು ಗುರುತಿಸುವ ಪ್ರತಿಷ್ಠಿತ ಹಾಲಿನ ಬ್ರ್ಯಾಂಡ್​ ಆಗಿ ಹೊರಹೊಮ್ಮಿದೆ.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದಿಂದ ತಿರುಮಲ ತಿರುಪತಿ ದೇವಸ್ಥಾನದವರಿಗೆ ಹಲವಾರು ವರ್ಷಗಳಿಂದ ಅಸ್ಮಾರ್ಕ್ ಸ್ಪೆಷಲ್ ಗ್ರೇಡ್ ಹೊಂದಿರುವ ಹಸುವಿನ ತುಪ್ಪವನ್ನು ಟ್ಯಾಂಕರ್ ಮೂಲಕ ತಿರುಮಲ ತಿರುಪತಿ ದೇವಸ್ಥಾನಕ್ಕೆ ಪವಿತ್ರ ಶ್ರೀವಾರಿ ಪ್ರಸಾದ ತಯಾರಿಕೆಗೆ ಸರಬರಾಜು ಮಾಡಲಾಗುತ್ತಿದೆ.

2013-14ನೇ ಸಾಲಿನಿಂದ 2021-22ರ ವರೆಗೂ 5000 ಮೆ. ಟನ್ ತುಪ್ಪವನ್ನು ತಿರುಮಲ ತಿರುಪತಿ ದೇವಸ್ಥಾನಕ್ಕೆ ಸರಬರಾಜು ಮಾಡಲಾಗಿದೆ. ಪ್ರಸ್ತುತ 2024-25 ನೇ ಸಾಲಿನಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಪ್ರಾರಂಭಿಕವಾಗಿ 350 ಮೆ.ಟನ್ ನಂದಿನಿ ತುಪ್ಪ ಸರಬರಾಜು ಮಾಡಲು ಟೆಂಡರ್ ಮೂಲಕ ಬೇಡಿಕೆ ನೀಡಿದ್ದು, ಅದಕ್ಕನುಗುಣವಾಗಿ ಹಸುವಿನ ತುಪ್ಪವನ್ನು ತಿರುಮಲ ತಿರುಪತಿ ದೇವಸ್ಥಾನಕ್ಕೆ ಟ್ಯಾಂಕ‌ರ್ ಮಾಲಕ ಸರಬರಾಜು ಮಾಡಲಾಗುತ್ತಿದೆ.

ನಾಟಿ ಹಸು ಹಾಲು ಪ್ರತ್ಯೇಕ ಸಂಗ್ರಹ: ಇನ್ನು ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಲಭ್ಯವಿರುವ ನಾಟಿ ಹಸುವಿನ ಹಾಲನ್ನು ಪ್ರತ್ಯೇಕವಾಗಿ ಬೆಂಗಳೂರು ಹಾಲು ಒಕ್ಕೂಟದಲ್ಲಿ ಸಂಗ್ರಹಿಸಿಲಾಗುತ್ತದೆ. ಬೆಂಗಳೂರು ಹಾಲು ಒಕ್ಕೂಟದಲ್ಲಿ ಈ ಹಾಲನ್ನು ಸಂಗ್ರಹಿಸಲು ಮಾಗಡಿ ಮತ್ತು ಕನಕಪುರ ತಾಲೂಕಿನ ಮರಳವಾಡಿ, ಕೋಡಿಹಳ್ಳಿ ಮಾಡಬಾಳು ಮತ್ತು ಕಸಬಾ ಹೋಬಳಿಯ 87 ಹಾಲು ಉತ್ಪಾದಕರ ಸಂಘಗಳನ್ನು ಗುರುತಿಸಲಾಗಿದೆ. ಈ ಸಂಘಗಳಲ್ಲಿ ದೇಸಿ ಹಸುಗಳಾದ ಶಾಹೀವಾಲ್, ಗಿರ್, ಅಮೃತ್ ಮಹಲ್ ಮತ್ತು ಹಳ್ಳಿಕಾರ್ ತಳಿಗಳಿಂದ ಹಾಲನ್ನು ಪ್ರತ್ಯೇಕವಾಗಿ ನಿಗದಿಪಡಿಸಿರುವ ಮೂರು ಬಲ್ಕ್ ಮಿಲ್ಕ್ ಕೂಲರ್ (BMC) ಗಳಲ್ಲಿ ಸಂಗ್ರಹಿಸಿ ಪ್ರತ್ಯೇಕವಾದ ಹಾಲಿನ ಟ್ಯಾಂಕರ್‌ಗಳಲ್ಲಿ ರವಾನಿಸಲಾಗುವುದು. ಈ ಹಾಲಿನಲ್ಲಿ ಸರಾಸರಿ 4.8 % ಜಿಡ್ಡಿನ ಅಂಶವಿರುತ್ತದೆ. ದೇಸಿ ತಳಿಯ ಪ್ರತಿ ಲೀಟರ್ ಹಾಲಿಗೆ 57.85 ರೂ. ದರವನ್ನು ನಿಗದಿ ಪಡಿಸಲಾಗಿದೆ.

ದೇಸಿ ಹಸುವಿನ ಹಾಲಿನಿಂದ ತುಪ್ಪ ತಯಾರಿಸಿ, ನಂದಿನಿ “ದೇಸಿ ಹಸುವಿನ ತುಪ್ಪ” 200 ಮಿಲಿ ಮತ್ತು 500 ಮಿಲಿ ಬಾಟಲ್‌ಗಳಲ್ಲಿ ಗ್ರಾಹಕರಿಗೆ ಬಿಡುಗಡೆ ಮಾಡಲಾಗುತ್ತಿದೆ. 500 ಮಿಲಿ ಬಾಟಲ್‌ನ ದರವು 900 ರೂ. ಮತ್ತು 200 ಮಿಲಿ ಬಾಟಲ್‌ನ ದರವು 400 ರೂ. ಗಳಾಗಿರುತ್ತದೆ. ಪ್ರಾರಂಭಿಕ ಹಂತದಲ್ಲಿ ಇ- ಕಾಮರ್ಸ್/ಆನ್‌ಲೈನ್ ಮೂಲಕ ಮಾರಾಟ ಮಾಡಲಾಗುವುದು.

ದೇಸಿ ಹಸುವಿನ ತುಪ್ಪದ ಅನುಕೂಲಗಳು: ದೇಸಿ ತುಪ್ಪ ಸೇವನೆಯಿಂದ ಹೃದಯ ಮತ್ತು ಮೂಳೆಗಳ ಆರೋಗ್ಯವು ವೃದ್ಧಿಸುತ್ತದೆ. ದೇಸಿ ತುಪ್ಪವು ವಿಟಮಿನ್ ಎ.ಡಿ.ಇ ಮತ್ತು ಕೆಯ ಸಮೃದ್ಧ ಮೂಲವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ದೇಸಿ ತುಪ್ಪವು ಬ್ಯುಟರಿಕ್ ಆಮ್ಲವನ್ನು ಸಹ ಹೊಂದಿದ್ದು, ಕರುಳಿನ ಆರೋಗ್ಯವನ್ನು ಸುಧಾರಿಸಲು ಮತ್ತು ಉತ್ತಮ ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ. ದೇಸಿ ತುಪ್ಪದಲ್ಲಿ OMEGA-3 ಇರುವುದರಿಂದ ಕಣ್ಣಿನ ಆರೋಗ್ಯವೃದ್ಧಿಗೆ ಅನುಕೂಲಕರ. ಚರ್ಮದ ಕಾಂತಿ ಮತ್ತು ಪೋಷಣೆಗೆ ಅನುಕೂಲಕರವಾಗಿದೆ.

ಕ್ರೀಡೆ

ವಾಂಖೆಡೆನಲ್ಲಿ RCB ದಬ್ಬಾಳಿಕೆ: ಚಿನ್ನಸ್ವಾಮಿ ಕಾದಿದೆ!

Published

on

By

ಮುಂಬೈ: Indian Premier League 2026ರ ಪಂದ್ಯದಲ್ಲಿ Royal Challengers Bengaluru ತಂಡವು Mumbai Indians ವಿರುದ್ಧ 18 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ RCB ತನ್ನ ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತವನ್ನು ದಾಖಲಿಸಿದೆ.

ಈ ಪಂದ್ಯದಲ್ಲಿ Phil Salt 36 ಎಸೆತಗಳಲ್ಲಿ 78 ರನ್ ಸಿಡಿಸಿ ‘ಪ್ಲೇಯರ್ ಆಫ್ ದ ಮ್ಯಾಚ್’ ಪ್ರಶಸ್ತಿ ಪಡೆದರು. ನಾಯಕ Rajat Patidar ಕೇವಲ 20 ಎಸೆತಗಳಲ್ಲಿ 53 ರನ್ ಸಿಡಿಸಿ ತಂಡಕ್ಕೆ ಬಲವಾದ ವೇದಿಕೆ ಒದಗಿಸಿದರು. ಪಾಟಿದಾರ್ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಟೂರ್ನಿಯ ಇತಿಹಾಸದಲ್ಲೇ ವೇಗವಾದ ಫಿಫ್ಟಿ ಸಿಡಿಸಿದ ನಾಯಕ ಎಂಬ ದಾಖಲೆ ನಿರ್ಮಿಸಿದರು.

ಬೌಲಿಂಗ್ ವಿಭಾಗದಲ್ಲಿ Krunal Pandya (1/26) ಮತ್ತು Suyash Sharma (2/47) ಪ್ರಮುಖ ಪಾತ್ರವಹಿಸಿ ಮುಂಬೈ ತಂಡವನ್ನು ನಿಯಂತ್ರಿಸಿದರು.

ಪಂದ್ಯದ ಬಳಿಕ ಮಾತನಾಡಿದ ಪಾಟಿದಾರ್, “ಪ್ರತಿ ಪಂದ್ಯದಲ್ಲೂ 200ಕ್ಕೂ ಹೆಚ್ಚು ರನ್‌ಗಳು ಬರುತ್ತಿವೆ. ಇದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸುತ್ತಿದೆ” ಎಂದು ಹೇಳಿದರು. ತಮ್ಮ ಬ್ಯಾಟಿಂಗ್ ಬಗ್ಗೆ ಮಾತನಾಡಿ, “ನಾನು ಬಾಲ್‌ಗೆ ಪ್ರತಿಕ್ರಿಯಿಸುತ್ತೇನೆ, ಸ್ಪಷ್ಟತೆಯಿಂದ ಆಟ ಆಡುತ್ತೇನೆ” ಎಂದು ತಿಳಿಸಿದ್ದಾರೆ.

ಕೃಣಾಲ್ ಪಾಂಡ್ಯಾ ತಂಡದ ಬ್ಯಾಟಿಂಗ್ ಶಕ್ತಿಯನ್ನು ಮೆಚ್ಚಿ, “ವಿರಾಟ್, ಸಾಲ್ಟ್, ಟಿಮ್ ಎಲ್ಲರೂ ಕೊಡುಗೆ ನೀಡಿದ್ದಾರೆ” ಎಂದರು. ಕೋಚ್ Malolan Rangarajan ರಸಿಖ್‌ರ ಹೋರಾಟ ಮನೋಭಾವವನ್ನು ಶ್ಲಾಘಿಸಿದರು.

ಈ ಗೆಲುವಿನೊಂದಿಗೆ RCB ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದು, ಮುಂದಿನ ಚಿನ್ನಸ್ವಾಮಿ ಪಂದ್ಯಕ್ಕಾಗಿ ಕಾತುರವಾಗಿದೆ.

Continue Reading

ದೇಶ

ಕಾಂಗ್ರೆಸ್‌ನಲ್ಲಿ ಭೂಕಂಪ: ನಜೀರ್ ಅಹ್ಮದ್‌ಗೆ ಸುರ್ಜೇವಾಲಾ ಅಲ್ಟಿಮೇಟಂ

Published

on

By

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಳಅಸಮಾಧಾನ ತೀವ್ರಗೊಂಡಿರುವ ನಡುವೆಯೇ, ರಾಜ್ಯ ಉಸ್ತುವಾರಿ Randeep Singh Surjewala ಅವರು ಸಿಎಂ ರಾಜಕೀಯ ಕಾರ್ಯದರ್ಶಿ Naseer Ahmed ಅವರಿಗೆ ಕಠಿಣ ಡೆಡ್‌ಲೈನ್ ನೀಡಿದ್ದಾರೆ.

ಇಂದು (ಏಪ್ರಿಲ್ 13) ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿರುವ ಸುರ್ಜೇವಾಲಾ, ಸಮಯಕ್ಕೆ ರಾಜೀನಾಮೆ ನೀಡದಿದ್ದರೆ ಅವರನ್ನು ಸ್ಥಾನದಿಂದ ವಜಾಗೊಳಿಸಲು ಮುಖ್ಯಮಂತ್ರಿ Siddaramaiah ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, “ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಕೊಡಬಹುದು. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಕೆಲವು ನಾಯಕರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ನಸೀರ್ ಅಹ್ಮದ್ ಅವರು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆಂದು ಸಿಎಂ ಹೇಳಿದ್ದಾರೆ.

ಇದಕ್ಕೂ ಮೊದಲು ಸುರ್ಜೇವಾಲಾ ಅವರು ಸಚಿವ Zameer Ahmed Khan, Abdul Jabbar ಹಾಗೂ ನಸೀರ್ ಅಹ್ಮದ್ ವಿರುದ್ಧ ವರದಿ ಸಲ್ಲಿಸಿದ್ದರು. ಈಗಾಗಲೇ ಅಬ್ದುಲ್ ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದನ್ನು D. K. Shivakumar ಅಂಗೀಕರಿಸಿದ್ದಾರೆ.

ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Continue Reading

ದೇಶ

ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

Published

on

By

ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ G. Parameshwara ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅದೇನು ಗ್ಯಾಂಬ್ಲಿಂಗ್ ಅಲ್ಲ, ಶಾಸಕರು ತಮ್ಮ ಅರ್ಹತೆಯ ಆಧಾರದಲ್ಲಿ ಕೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕೇಳುವುದು ಸಹಜ. ಆದರೆ ಅಂತಿಮ ನಿರ್ಧಾರ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಕೈಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಪಕ್ಷ ಪುನಾರಚನೆ ಕುರಿತು ಮಾತನಾಡಿದ ಪರಮೇಶ್ವರ್, “ನಾಯಕತ್ವ ವಿಚಾರವಾಗಲಿ, ಸಚಿವ ಸಂಪುಟ ಪುನಾರಚನೆ ಆಗಲಿ, ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈಗ ಪುನಾರಚನೆ ಚರ್ಚೆ ನಡೆಯುತ್ತಿದೆ. ಅಧ್ಯಕ್ಷ ಸ್ಥಾನ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇವೆ” ಎಂದು ಹೇಳಿದರು.

ಇನ್ನೂ ದಾವಣಗೆರೆ ಕ್ಷೇತ್ರದಲ್ಲಿ Abdul Jabbar ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಅವರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿದರು. D. K. Shivakumar ಹೊಸ ಸಮಿತಿ ರಚನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪುನಾರಚನೆ ನಡೆದರೆ ಹಿರಿಯರು ಸ್ಥಾನ ಬಿಟ್ಟುಕೊಡಬೇಕಾದರೆ ನಾವು ಒಪ್ಪಲೇಬೇಕು. ಹೈಕಮಾಂಡ್ ತೀರ್ಮಾನಕ್ಕೆ ಯಾರೂ ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Continue Reading

Trending