Connect with us

ದೇಶ

ಸಂಸದೆ ಕಂಗನಾ ರಣಾವತ್​​ಗೆ ಅತ್ಯಾಚಾರ ಬೆದರಿಕೆ: ಬುಲೆಟ್ಸ್ ನನ್ನನ್ನು ಶಾಂತಗೊಳಿಸಲು ಸಾಧ್ಯವಿಲ್ಲವೆಂದ ನಟಿ – Rape Threats to Kangana Ranaut

ನವದೆಹಲಿ: ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಬಹುನಿರೀಕ್ಷಿತ ಚಿತ್ರ ‘ಎಮರ್ಜೆನ್ಸಿ’ ಬಿಡುಗಡೆ ಹೊಸ್ತಿಲಿನಲ್ಲಿದೆ. ಆದ್ರೀಗ ನಟಿ ಅತ್ಯಾಚಾರ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಪ್ರತಿಕ್ರಿಯೆಯಾಗಿ ಇಂಥ ಬೆದರಿಕೆ ತಂತ್ರಗಳಿಂದ ನನ್ನನ್ನು ಮೌನಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಐಎಎನ್‌ಎಸ್‌ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ನಟಿ ಕಂಗನಾ ರಣಾವತ್, “ಕುಚ್ ಲೋಗೋ ನೆ ಬಂದೂಕೆ ತಾನ್​​ ದಿ ಹೈ, ಹಮಾರೆ ಮಾತೆ ಪೆ ತಾನ್ ದಿ ಹೈ. ಬಂದುಕೋಂ ಸೇ ಹಮ್ ಡರ್ನೆ ವಾಲೇ ಹೈ ನಹಿ (ಕೆಲವರು ನನ್ನ ಮೇಲೆ ಬಂದೂಕು ಚಲಾಯಿಸಲು ತರಬೇತಿ ಮಾಡಿದ್ದಾರೆ. ಆದ್ರೆ ನಾನು ಬುಲೆಟ್‌ಗಳು ಮತ್ತು ಬೆದರಿಕೆಗಳಿಗೆ ಹೆದರುವವಳಲ್ಲ). ನನಗಿಂದು ಅತ್ಯಾಚಾರ ಬೆದರಿಕೆಗಳು ಬರುತ್ತಿವೆ, ಆದರೆ ಅವರು ನನ್ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಪಂಜಾಬ್‌ನ ಮಾಜಿ ಸಂಸದರು ಮತ್ತು ಶಿರೋಮಣಿ ಅಕಾಲಿದಳದ (ಅಮೃತಸರ) ಮುಖ್ಯಸ್ಥ ಸಿಮ್ರಂಜಿತ್ ಸಿಂಗ್ ಮಾನ್ ಅವರ ಅತ್ಯಾಚಾರದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಕಂಗನಾ ಅವರ ಈ ಹೇಳಿಕೆ ಬಂದಿವೆ. ನಟಿಗೆ “ಅತ್ಯಾಚಾರದ ಸಾಕಷ್ಟು ಅನುಭವವಿದೆ” ಎಂದು ಸಿಮ್ರಂಜಿತ್ ಸಿಂಗ್ ಮಾನ್ ಹೇಳಿದ್ದಾರೆಂದು ವರದಿಯಾಗಿದೆ.

ತಮ್ಮ ಬಹುನಿರೀಕ್ಷಿತ ಚಿತ್ರ ಎಮರ್ಜೆನ್ಸಿ ಬಿಡುಗಡೆಗಾಗಿ ಎಲ್ಲಾ “ವಿರೋಧಗಳು ಮತ್ತು ಒತ್ತಡಗಳನ್ನು” ತಡೆದುಕೊಳ್ಳಲು ಸಿದ್ಧ. ಯಾವುದಕ್ಕೂ ಹೆದರುವುದಿಲ್ಲ ಎಂದು ತಿಳಿಸಿದ್ದಾರೆ.

ನನ್ನಂಥ ಕಲಾವಿದಳನ್ನು ಬೆದರಿಸಲು ಅಥವಾ ಮೌನಗೊಳಿಸಲು ಸಾಧ್ಯವಿಲ್ಲ. ನಾನು ನನ್ನ ಸಿನಿಮಾಗಾಗಿ ಹೋರಾಡುತ್ತೇನೆ ಮತ್ತು ಅಗತ್ಯ ಬಿದ್ದರೆ ನ್ಯಾಯಾಲಯದ ಮೆಟ್ಟಿಲೇರುತ್ತೇನೆ” ಎಂದು ಕಂಗನಾ ಐಎಎನ್‌ಎಸ್‌ಗೆ ತಿಳಿಸಿದ್ದಾರೆ. ”ಕಲಾವಿದರ ಸೃಜನಶೀಲ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಮತ್ತು ತಮ್ಮ ಸಿನಿಮಾ ಬಿಡುಗಡೆ ಮಾಡುವುದನ್ನು ತಡೆಯಲು ಸಾಧ್ಯವಿಲ್ಲ. ನಾನು ಬುಲೆಟ್ಸ್ ಮತ್ತು ಬೆದರಿಕೆಗಳಿಗೆ ಹೆದರುವವಳಲ್ಲ. ಅವರು ನನ್ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರ ಜೀವನಾಧಾರಿತ ‘ಎಮರ್ಜೆನ್ಸಿ’ ಚಿತ್ರದಲ್ಲಿ ಕಂಗನಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪರದೆ ಮೇಲೆ ರಾಜಕಾರಣಿಯಾಗಿ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ತಲೈವಿ (2021) ಚಿತ್ರದಲ್ಲಿ ನಟಿ-ರಾಜಕಾರಣಿ ದಿವಂಗತ ಜೆ ಜಯಲಲಿತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಎಮರ್ಜೆನ್ಸಿ’ ಸೆಪ್ಟೆಂಬರ್​​ 6ರಂದು ತೆರಗಪ್ಪಳಿಸಲು ಸಜ್ಜಾಗಿದ್ದು, ಹಲವರಿಂದ ಆಕ್ರೋಶ ಎದುರಾಗಿದೆ. ಸಿನಿಮಾ ಬಿಡುಗಡೆಗೊಳ್ಳಬಾರದೆಂಬ ಒತ್ತಾಯಗಳು ಕೇಳಿಬಂದಿವೆ.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending