ಕ್ರೀಡೆ
ಟೀಂ ಇಂಡಿಯಾಗೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ! ಆಸ್ಟ್ರೇಲಿಯಾ ಸರಣಿಯ ವೇಳಾಪಟ್ಟಿ ಪ್ರಕಟ
ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರ ಮಗ ಸಮಿತ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಅಂಡರ್ 19 ವಿಭಾಗದಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಗಸ್ಟ್ 31ರಂದು ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಬಹು-ಫಾರ್ಮ್ಯಾಟ್ ಸರಣಿಯ ವೇಳಾ ಪಟ್ಟಿಯೊಂದಿಗೆ ಅಂಡರ್ 19 ತಂಡವನ್ನು ಪ್ರಕಟಿಸಿದೆ. ಸಮಿತ್ ಅವರನ್ನು ಏಕದಿನ ಮತ್ತು ನಾಲ್ಕು ದಿನದ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂಡರ್ 19 ಸರಣಿಯು ಸೆಪ್ಟೆಂಬರ್ 21ರಿಂದ ಪ್ರಾರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಮತ್ತು ಎರಡು ನಾಲ್ಕು ದಿನಗಳ ಪಂದ್ಯಗಳು ನಡೆಯಲಿವೆ.
ಇನ್ನು ಉತ್ತರ ಪ್ರದೇಶದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಮೊಹಮ್ಮದ್ ಅಮಾನ್ 50 ಓವರ್ಗಳ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಮಧ್ಯಪ್ರದೇಶದ ಸೋಹಮ್ ಪಟವರ್ಧನ್ ನಾಲ್ಕು ದಿನಗಳ ಪಂದ್ಯಗಳಿಗೆ ತಂಡವನ್ನು ಮುನ್ನಡೆಸಲಿದ್ದಾರೆ.
ದ್ರಾವಿಡ್ ಮಗ ಸಮಿತ್ ಇತ್ತೀಚೆಗೆ ಮೊದಲ ಹಿರಿಯ ಪುರುಷರ ಟಿ20 ಪಂದ್ಯಾವಳಿಯಲ್ಲಿ ಮಹಾರಾಜಿ ಟಿ20 ಟ್ರೋಪಿಯಲ್ಲಿ ಆಡಿದ್ದರು. ಮೈಸೂರು ವಾರಿಯರ್ಸ್ ತಂಡದ ಭಾಗವಾಗಿದ್ದರು. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಈತ 7 ಇನ್ನಿಂಗ್ಸ್ನಲ್ಲಿ 114 ಸ್ಟ್ತೈಕ್ ರೇಟ್ನಲ್ಲಿ 82 ರನ್ ಗಳಿಸಿದ್ದಾರೆ.
ಏಕದಿನ ಸರಣಿಗೆ ತಂಡ:
ರುದ್ರ ಪಟೇಲ್ (VC) (GCA), ಸಾಹಿಲ್ ಪರಾಖ್ (MAHCA) ಕಾರ್ತಿಕೇಯ ಕೆಪಿ (KSACA), ಮೊಹಮ್ಮದ್ ಅಮನ್ (C) (UPCA), ಕಿರಣ್ ಚೋರ್ಮಲೆ (MAHCA), ಅಭಿಗ್ಯಾನ್ ಕುಂದು (WK) (MCA)., ಹರ್ವಂಶ್ ಸಿಂಗ್ ಪಂಗಾಲಿಯಾ (WK) (SCA), ಸಮಿತ್ ದ್ರಾವಿಡ್ (KSCA), ಯುದ್ದೀತ್ ಗುಹಾ (CAB), ಸಮರ್ಥ್ ಎನ್ (KSCA), ನಿಖಿಲ್ ಕುಮಾರ್ (UTCA), ಚೇತನ್ ಶರ್ಮಾ (RCA), ಹಾರ್ದಿಕ್ ರಾಜ್ (KSCA), ರೋಹಿತ್ ರಾಜ್ Avt (MPCA), ಮೊಹಮ್ಮದ್ ಅನನ್ (KCA)
ನಾಲ್ಕು ದಿನಗಳ ಸರಣಿಗೆ ತಂಡ:
ವೈಭವ್ ಸೂರ್ಯವಂಶಿ (Bihar CA), ನಿತ್ಯ ಪಾಂಡ್ಯ (BCA), ವಿಹಾನ್ ಮಲ್ಲೋತ್ರಾ (VC) (PCA), ಸೋಹಮ್ ಪಟವರ್ಧನ್ (C) (MPCA), ಕಾರ್ತಿಕೇಯ KP (KSCA), ಸಮಿತ್ ದ್ರಾವಿಡ್ (KSCA), ಅಭಿಜ್ಞಾನ್ ಕುಂದು (WK) (MCA), ಹರ್ವಂಶ್ ಸಿಂಗ್ ಪಂಗಾಲಿಯಾ (WK) (SCA), ಚೇತನ್ ಶರ್ಮಾ (RCA), ಸಮರ್ಥ್ N (KSCA), ಆದಿತ್ಯ ರಾವತ್ (CAU), ನಿಖಿಲ್ ಕುಮಾರ್ (UTCA), ಅನ್ನೋಲ್ಲೀತ್ ಸಿಂಗ್ (PCA), ಆದಿತ್ಯ ಸಿಂಗ್ (UPCA), ಮೊಹಮ್ಮದ್ ಅನನ್ (KCA)
ಕ್ರೀಡೆ
ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!
ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.
ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.
ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.
ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಅಪರಾಧ
ಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!
ಬೆಂಗಳೂರು, ಏಪ್ರಿಲ್ 04: ನಗರದಲ್ಲಿ IPL 2026 ಟಿಕೆಟ್ ಕ್ರೇಜ್ ಜೋರಾಗಿರುವ ನಡುವೆ ಆನ್‌ಲೈನ್ ಮೋಸದ ಪ್ರಕರಣವೂ ಬೆಳಕಿಗೆ ಬಂದಿದೆ. ಅನಧಿಕೃತ ಪ್ಲಾಟ್‌ಫಾರ್ಮ್ ಮೂಲಕ ಟಿಕೆಟ್ ಖರೀದಿಸಲು ಯತ್ನಿಸಿದ ಟೆಕ್ಕಿ ಒಬ್ಬರು ₹1.46 ಲಕ್ಷ ಕಳೆದುಕೊಂಡಿರುವ ಘಟನೆ ಕ್ರಿಕೆಟ್ ಅಭಿಮಾನಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.
Bengaluruನ ಬಿ. ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ, Instagramನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮೋಸಕ್ಕೆ ಒಳಗಾಗಿದ್ದಾರೆ. ಆತ ತನ್ನನ್ನು M. Chinnaswamy Stadium ಟಿಕೆಟ್ ಕೌಂಟರ್ ಹಿರಿಯ ಮೇಲ್ವಿಚಾರಕ ಸುಮಿತ್ ಬಿಸ್ವಾಲ್ ಎಂದು ಪರಿಚಯಿಸಿಕೊಂಡು ನಂಬಿಕೆ ಮೂಡಿಸಿದ್ದಾನೆ.
ಮೊದಲಿಗೆ ಎರಡು ಟಿಕೆಟ್‌ಗಳಿಗೆ ₹3,700 ಕೇಳಿದ ಆರೋಪಿಯು, ಬಳಿಕ ಭದ್ರತಾ ಠೇವಣಿ, ಐಡಿ ಕಾರ್ಡ್ ಮತ್ತು ಫುಡ್ ಕೂಪನ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾನೆ. ಪಂದ್ಯದ ದಿನ ಗೇಟ್ ನಂ.10 ಬಳಿ ಬರಲು ಹೇಳಿ ನಕಲಿ ಇಮೇಲ್ ದೃಢೀಕರಣವನ್ನೂ ಕಳುಹಿಸಿದ್ದಾನೆ.
ಆತನ ಮಾತು ನಂಬಿದ ಟೆಕ್ಕಿ, ತನ್ನ ಹಾಗೂ ತಾಯಿಯ ಖಾತೆಯಿಂದ ಯುಪಿಐ ಮೂಲಕ ಒಟ್ಟು ₹1.46 ಲಕ್ಷ ವರ್ಗಾವಣೆ ಮಾಡಿದ್ದಾರೆ. ಆದರೆ ಹಣ ಪಡೆದ ಬಳಿಕ ಆರೋಪಿಯು ಟಿಕೆಟ್ ನೀಡದೆ ಸಂಪರ್ಕ ಕಡಿತಗೊಳಿಸಿದ್ದಾನೆ.
ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಐಪಿಎಲ್ ಟಿಕೆಟ್ ಖರೀದಿಸುವಾಗ ಅಧಿಕೃತ ವೆಬ್‌ಸೈಟ್ ಅಥವಾ ಮಾನ್ಯ ಮಾರಾಟಗಾರರ ಮೂಲಕವೇ ಖರೀದಿಸಲು ಸಲಹೆ ನೀಡಿದ್ದಾರೆ. ಅನಧಿಕೃತ ಲಿಂಕ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವ್ಯವಹಾರ ಮಾಡುವುದರಿಂದ ಇಂತಹ ಮೋಸಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.
ಕ್ರೀಡೆ
“ಆ ಮಾತುಗಳು ನನ್ನದಲ್ಲ”: ಯುವಿ ಸ್ಪಷ್ಟನೆ, ಧೋನಿ-ಕಪಿಲ್‌ಗೆ ಕ್ಷಮೆ
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ Yuvraj Singh ಅವರು ವಿಶ್ವಕಪ್ ವಿಜೇತ ನಾಯಕರುಗಳಾದ Mahendra Singh Dhoni ಮತ್ತು Kapil Dev ಅವರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ಇತ್ತೀಚಿನ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಯುವರಾಜ್, ತಮ್ಮ ತಂದೆ Yograj Singh ನೀಡಿದ್ದ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಕ್ಷಮೆಯಾಚನೆ ಮಾಡಿದ್ದಾರೆ. “ನನ್ನ ತಂದೆಯ ಮಾತುಗಳಿಗಾಗಿ ನಾನು ಹೃತ್ಪೂರ್ವಕವಾಗಿ ಕ್ಷಮೆ ಕೇಳುತ್ತೇನೆ. ಆ ಮಾತುಗಳು ನನ್ನವು ಅಲ್ಲ ಎಂಬುದು ನಿಮಗೆ ತಿಳಿದಿದೆ. ನೀವು ಇಬ್ಬರೂ ಭಾರತಕ್ಕೆ ನೀಡಿದ ಕೊಡುಗೆ ಅಪಾರ” ಎಂದು ಯುವರಾಜ್ ಹೇಳಿದ್ದಾರೆ.
ಈ ಹಿಂದೆ ಯೋಗರಾಜ್ ಸಿಂಗ್ ಹಲವಾರು ಬಾರಿ ಧೋನಿ ಮತ್ತು ಕಪಿಲ್ ದೇವ್ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದರು. ವಿಶೇಷವಾಗಿ, ಯುವರಾಜ್ ಅವರ ವೃತ್ತಿಜೀವನದ ಸಂಕಷ್ಟದ ಸಂದರ್ಭದಲ್ಲಿ ಕೆಲವು ಆಟಗಾರರು ಬೆಂಬಲ ನೀಡಲಿಲ್ಲ ಎಂದು ಆರೋಪಿಸಿದ್ದರು. 2011ರ ವಿಶ್ವಕಪ್ ವೇಳೆ ತಂಡದ ಆಯ್ಕೆ ವಿಚಾರದಲ್ಲಿ ಧೋನಿ ವಿರುದ್ಧವೂ ಯೋಗರಾಜ್ ಟೀಕಿಸಿದ್ದರು.
ಇದೇ ವೇಳೆ, 1983ರ ವಿಶ್ವಕಪ್ ಸಮಯದಲ್ಲಿ ಕಪಿಲ್ ದೇವ್ ವಿರುದ್ಧವೂ ಗಂಭೀರ ಆರೋಪಗಳನ್ನು ಮಾಡಿದ್ದರಿಂದ ಈ ವಿಚಾರ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಈ ಎಲ್ಲಾ ಹೇಳಿಕೆಗಳಿಂದ ಕ್ರಿಕೆಟ್ ವಲಯದಲ್ಲಿ ವಿವಾದ ಉಂಟಾಗಿತ್ತು.
ಈಗ ಯುವರಾಜ್ ಸಿಂಗ್ ಸ್ವತಃ ಮುಂದಾಗಿ ಕ್ಷಮೆ ಕೇಳಿರುವುದು ವಿವಾದಕ್ಕೆ ತೆರೆ ಬೀಳುವ ಸೂಚನೆ ನೀಡಿದೆ. ಕ್ರೀಡಾ ವಲಯದಲ್ಲಿ ಪರಸ್ಪರ ಗೌರವ ಮುಖ್ಯ ಎಂಬ ಸಂದೇಶವನ್ನು ಅವರು ಈ ಮೂಲಕ ನೀಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತವಾಗುತ್ತಿದೆ.
-
ದೇಶ23 hours agoವೇದಿಕೆ ಮೇಲೆಯೇ ಕುಸಿದ ಸಂತೋಷ್ ಹೆಗ್ಡೆ – ತಕ್ಷಣ ಆಸ್ಪತ್ರೆಗೆ ದಾಖಲಾತಿ
-
ಚುನಾವಣೆ13 hours ago“ನಾಲ್ಕು ಮದುವೆಗೆ ಬ್ರೇಕ್” – ಶಾ ಘೋಷಣೆ ಸಂಚಲನ
-
ದೇಶ9 hours agoಪ್ರಚಾರ ವೇಳೆ ಕಾರು ತಡೆದು ಹಲ್ಲೆ: ತರೂರ್ ಬೆಂಗಾವಲು ಮೇಲೆ ದಾಂಧಲೆ
-
ದೇಶ23 hours agoಸೋಮಣ್ಣ ವಿರುದ್ಧ ಸಿಎಂ ಸಿಡಿತ: “ಕೆಲಸವಿಲ್ಲದ ಮಂತ್ರಿ!”
-
ದೇಶ8 hours agoಜಮೀರ್ ಅಹ್ಮದ್ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!
-
ಕ್ರೀಡೆ8 hours ago“ಆ ಮಾತುಗಳು ನನ್ನದಲ್ಲ”: ಯುವಿ ಸ್ಪಷ್ಟನೆ, ಧೋನಿ-ಕಪಿಲ್‌ಗೆ ಕ್ಷಮೆ
-
ಆರೋಗ್ಯ7 hours agoಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
-
ದೇಶ4 hours agoಕಾಂಗ್ರೆಸ್ ಒಳಜಗಳ ಬಯಲು: ರಾಹುಲ್ ನಿಲುವಿಗೆ ಹಿರಿಯರ ವಿರೋಧ
