Connect with us

ಬೆಂಗಳೂರು

ರಾಜಭವನ ರಾಜಕೀಯ ಭವನ ಆಗಬಾರದು’: ಎನ್​ಡಿಎ ನಾಯಕರ ಪ್ರಾಸಿಕ್ಯೂಷನ್​ ಅನುಮತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಕಾಂಗ್ರೆಸ್​ ಮನವಿ – Congress appeals to governor

ಬೆಂಗಳೂರು: ಎನ್​ಡಿಎ ನಾಯಕರ ವಿರುದ್ಧದ ಪ್ರಕರಣಗಳ ಸಂಬಂಧವೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಸಂಸದರು ನಾಯಕರು ಎನ್​​​ಡಿಎ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಆಗ್ರಹಿಸಿದರು. ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್ ನಾಯಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದ ಚುಕ್ಕಾಣಿಯಂತೆ ರಾಜ್ಯಪಾಲರು ವರ್ತಿಸುತ್ತಿದ್ದಾರೆ. ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ್ದು, ಪಾದಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿಲ್ಲ. ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, “ಯಾರೋ ದೂರು ಕೊಟ್ಟರೆಂದು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಆದರೆ, ಬಿಜೆಪಿ ಜೆಡಿಎಸ್‌ನವರ ವಿರುದ್ಧ ತನಿಖಾ ವರದಿ ಸಲ್ಲಿಸಲು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುತ್ತಿಲ್ಲ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುವ ಅಗತ್ಯವಿಲ್ಲ ಎಂದರೂ ಕೊಟ್ಟರು. ಹೀಗಾಗಿ ರಾಜಭವನ ರಾಜಕೀಯ ಭವನ ಆಗಬಾರದು. ಸಂವಿಧಾನದಡಿ ರಚನೆಯಾದ ಪೀಠ ರಾಜ್ಯಪಾಲರದ್ದು‌. ಇಂತಹ ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗಬಾರದು. ನ್ಯಾಯಸಮ್ಮತವಾಗಿ ಈ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡಿ ಎಂದು ಮನವಿ ಮಾಡಿದ್ದೇವೆ” ಎಂದರು.

ನಾಲ್ವರ ಪ್ರಾಸಿಕ್ಯೂಷನ್ ಅರ್ಜಿ ಇತ್ಯರ್ಥ: “ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ, ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಅರ್ಜಿ ಸಂಬಂಧ ನಮ್ಮ ಬಳಿ ಏನೂ ಇಲ್ಲ. ಎಲ್ಲಾ ಡಿಸ್ಪೋಸ್ ಮಾಡಿದ್ದೀವಿ ಎಂದು ರಾಜ್ಯಪಾಲರು ಹೇಳಿದ್ದಾರೆ. ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಎಚ್ಚರಿಸಿದ ಬಳಿಕ ಎನ್​ಡಿಎ ನಾಯಕರ ಮೇಲಿನ ಅರ್ಜಿಗಳ ಸಂಬಂಧ ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ. ರಾಜ್ಯಪಾಲರ ಜೊತೆ ಏನು ಮಾತನಾಡಿದ್ದೇವೆ ಎಂಬುದನ್ನು ಎಲ್ಲವನ್ನೂ ಹೇಳುವುದಕ್ಕೆ ಆಗುವುದಿಲ್ಲ. ರಾಜ್ಯಪಾಲರ ಹುದ್ದೆ, ರಾಜಭವನದ ಗೌರವವನ್ನು ಕಾಪಾಡಬೇಕೆಂದು ಮನವಿ ಮಾಡಿದ್ದೇವೆ. ರಾಜ್ಯಪಾಲರು ಮಾತನಾಡಿದ್ದನ್ನೆಲ್ಲಾ ಹೇಳೋಕಾಗಲ್ಲ. ಆದರೆ ನಮ್ಮ ಕಚೇರಿಯಲ್ಲಿ ಆ ದಾಖಲೆಗಳಿಲ್ಲ ಅಂದಿದ್ದಾರೆ. ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಅಂದಿದ್ದಾರೆ” ಎಂದರು.

ಇದಕ್ಕೂ ಮುನ್ನ ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ, “ಸಿದ್ದರಾಮಯ್ಯ ಪರವಾಗಿ ನಾವು ರಾಜಭವನ ಚಲೋ ಮಾಡುತ್ತಿಲ್ಲ. ರಾಜ್ಯಪಾಲರ ಆದೇಶದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದೇವೆ. ರಾಜ್ಯಪಾಲರ ಕಚೇರಿ ದುರಪಯೋಗ ಆಗುತ್ತಿದೆ. ಇದರ ವಿರುದ್ಧ ನಮ್ಮ ಹೋರಾಟವಾಗಿದೆ. ಮುಖ್ಯಮಂತ್ರಿ ವಿಚಾರದಲ್ಲಿ ಒಂದೇ ದಿನದಲ್ಲಿ ನೋಟಿಸ್ ನೀಡಿರುವುದು ಎಲ್ಲರಿಗೂ ಗೊತ್ತು. ಈ ಹಿಂದೆ ರಾಜ್ಯಪಾಲರ ಬಳಿ ಹಲವರ ಫೈಲ್​ಗಳು ಹೋಗಿವೆ. ಜನಪ್ರತಿನಿದಿಗಳ ವಿರುದ್ಧ ತನಿಖೆ ಮಾಡುವುದಕ್ಕೆ ಫೈಲ್ ಹೋಗಿದೆ. ಇಲ್ಲಿ ಸೆಲೆಕ್ಟಿವ್ ಸ್ಯಾಂಕ್ಷನ್ ಆಗಿದೆ. ರಾಜ್ಯಪಾಲರು ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬೇಕು. ಪಕ್ಷದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು” ಎಂದರು.

“ನಿರಾಣಿ ಸೇರಿದಂತೆ ಹಲವರ ವಿರುದ್ಧ ಫೈಲ್ ಇವೆ. ಬೇರೆ ಕೇಸ್​ಗಳಿಗೂ ಆದೇಶ ನೀಡಿ. ಕಾನೂನು ಪರವಾಗಿ ಕೆಲಸ ಮಾಡಬೇಕು. ಸಂವಿಧಾನ ಪೀಠಕ್ಕೆ ಗೌರವ ತನ್ನಿ” ಎಂದು ಆಗ್ರಹಿಸಿದರು.

ಬೆಂಗಳೂರು

ನಗರದ ಕಸ ಸಮಸ್ಯೆ ದೂರಾಗಿಸಲು BBMP ಕ್ರಮ: ದೂರು ನೀಡಲು ಪ್ರತ್ಯೇಕ ಕೇಂದ್ರ ಸ್ಥಾಪನೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರು ಸದಾ ಶ್ರಮವಹಿಸಿತ್ತಾರೆ. ಆದರೂ, ನಗರದಲ್ಲಿನ ಕಸದ ಸಮಸ್ಯೆ ಮಾತ್ರ ದೂರಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕಸ ಎಸೆದು ಹೋಗುವವರನ್ನು ಹಿಡಿದುಕೊಡಲು ಬಿಬಿಎಂಪಿ ಕ್ರಮ ಕೈಗೊಂಡಿದ್ದು, ವಾಟ್ಸಪ್ ಸಂಖ್ಯೆಯೊಂದನ್ನು ಜನತೆಗೆ ನೀಡಿದೆ.

ಕಸ ಎಸೆಯುವವರ ಫೋಟೋ ತೆಗೆದು 9448197197 ಈ ನಂಬರ್‌ಗೆ ಕಳಿಸಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಾಲಿಕೆ ಹೇಳಿದೆ,

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ಟಿಪ್ಪರ್ ಗಳ ಮೂಲಕ ಪ್ರತಿನಿತ್ಯ ಮನೆ-ಮನೆ ಭೇಟಿ ನೀಡಿ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಆದರೂ ಕೂಡಾ ನಾಗರಿಕರು ಆಟೋ ಟಿಪ್ಪರ್ ಗಳಿಗೆ ತ್ಯಾಜ್ಯವನ್ನು ನೀಡದೇ ರಾತ್ರಿ ವೇಳೆ ಅಥವಾ ಕೆಲಸಕ್ಕೆ ಹೋಗುವ ಸಮಯದಲ್ಲಿ ರಸ್ತೆ ಬದಿ, ಪಾದಚಾರಿ ಮಾರ್ಗ, ಖಾಲಿ ಸ್ಥಳ ಹಾಗೂ ರಾಜಕಾಲುವೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡಿ ಹೋಗುತ್ತಾರೆ. ಇದರಿಂದ ನಗರದ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ.

ತ್ಯಾಜ್ಯ ಬಿಸಾಡುವುದರ ಜೊತೆಗೆ ಕಟ್ಟಡಗಳ ಭಗ್ನಾವಶೇಷಗಳನ್ನು ಕೂಡಾ ರಸ್ತೆ ಬದಿ, ಖಾಲಿ ಜಾಗದಲ್ಲಿ ಸುರಿದು ಹೋಗುತ್ತಾರೆ. ಅದಲ್ಲದೆ ಅನುಪಯುಕ್ತ ವಸ್ತುಗಳನ್ನು ಕೂಡ ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಾರೆ. ಆದ್ದರಿಂದ ಪಾಲಿಕೆಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್‌ಗಳಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದನ್ನು ಶಾಶ್ವತವಾಗಿ ತಪ್ಪಿಸಲು ಕ್ರಮ ಕೈಗೊಂಡಿದೆ.

ನಗರದಲ್ಲಿ ಕಸ ಸುರಿಯುವ ಸ್ಥಳ (ಬ್ಲಾಕ್ ಸ್ಪಾಟ್) ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಿರುವ ಬಿಬಿಎಂಪಿ, ಇದಕ್ಕಾಗಿ ದೂರು ಕೇಂದ್ರ ಸ್ಥಾಪಿಸಿ ಪ್ರತ್ಯೇಕವಾಗಿ ವಾಟ್ಸಪ್ ಸಂಖ್ಯೆಯನ್ನು ನೀಡಿದೆ. ಜನರು ಸದರಿ ವಾಟ್ಸಪ್ ಸಂಖ್ಯೆಗೆ ಸಂದೇಶದ ಮೂಲಕ ದೂರು ದಾಖಲಿಸಬಹುದಾಗಿದೆ.

ಜನರಪು 9448197197 ಈ ಸಂಖ್ಯೆಗೆ ಛಾಯಾಚಿತ್ರದೊಂದಿಗೆ ಸಂದೇಶ ಕಳುಹಿಸುವ ಮೂಲಕ ದೂರು ದಾಖಲಿಸಬಹುದು. ಆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ತ್ಯಾಜ್ಯ/ಕಸ ವಿಲೇವಾರಿ ಮಾಡಿ ಸಮಸ್ಯೆ ಬಗೆಹರಿಸಲಿದ್ದಾರೆ.

Continue Reading

ಬೆಂಗಳೂರು

ಜಾತಿ ಗಣತಿ ಮರು ಸಮೀಕ್ಷೆ: ಇಂದು ವಿಶೇಷ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕದಲ್ಲಿ ಜಾತಿ ಗಣತಿಯನ್ನು ಮತ್ತೊಮ್ಮೆ ಸಮೀಕ್ಷೆಗೆ ಒಳಪಡಿಸುವ ಕುರಿತಾದ ಚರ್ಚೆಗಳು ತೀವ್ರಗೊಂಡಿವೆ. ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಜಾತಿ ಗಣತಿಗೆ ತಡೆಯೊಡ್ಡಿರುವ ಹಿನ್ನೆಲೆಯಲ್ಲಿ, ಗುರುವಾರ ನಡೆಯಲಿರುವ ವಿಶೇಷ ಸಂಪುಟ ಸಭೆಯ ಮೇಲೆ ಎಲ್ಲರ ಕಣ್ಣಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಭೆಯಲ್ಲಿ ವರಿಷ್ಠರ ಸೂಚನೆಯ ಆಧಾರದಲ್ಲಿ ಮರು ಸಮೀಕ್ಷೆಗೆ ಒಪ್ಪಿಗೆ ನೀಡುತ್ತಾರೆಯೇ ಇಲ್ಲವೇ ತಡೆಗೆ ಕಾರಣವಾದ ವಿಷಯಗಳ ಬಗ್ಗೆ ಸಂಪುಟ ಸದಸ್ಯರಿಗೆ ವಿವರಣೆ ನೀಡುತ್ತಾರೆಯೇ ಎಂಬ ಕುತೂಹಲ ಮೂಡಿದೆ.

ಜಾತಿ ಗಣತಿಯ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ಈ ವಿಶೇಷ ಸಂಪುಟ ಸಭೆಯನ್ನು ಆಯೋಜಿಸಿದ್ದರು. ಆದರೆ, ಕಾಂಗ್ರೆಸ್ ವರಿಷ್ಠರ ತಡೆಯಿಂದಾಗಿ ಈ ಸಭೆಯ ಉದ್ದೇಶವೇ ಬದಲಾಗಿರುವ ಸಾಧ್ಯತೆ ಇದೆ. ಇಂದಿನ ಸಭೆಯಲ್ಲಿ ಕಾಂತರಾಜು ಆಯೋಗದ ವರದಿಯನ್ನು ಒಪ್ಪಿಕೊಂಡು, ಹೊಸ ಸಮೀಕ್ಷೆಗೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಈ ಮರು ಸಮೀಕ್ಷೆಯನ್ನು ಮೂರು ತಿಂಗಳ ಒಳಗೆ ಪೂರ್ಣಗೊಳಿಸಲು ಗಡುವು ವಿಧಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಡಿ.ಕೆ. ಶಿವಕುಮಾರ್ ಹೊರತುಪಡಿಸಿ, ಸಂಪುಟದ ಉಳಿದ ಸದಸ್ಯರಿಗೆ ವರಿಷ್ಠರ ನಿರ್ದೇಶನದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರು ಈ ಬಗ್ಗೆ ಸಂಪುಟ ಸಭೆಯಲ್ಲಿ ವಿವರಣೆ ನೀಡುವ ಸಾಧ್ಯತೆ ಇದೆ. “ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ಮರು ಸಮೀಕ್ಷೆ ನಡೆಸುವುದು ನನ್ನ ವೈಯಕ್ತಿಕ ನಿರ್ಧಾರವಲ್ಲ. ಇದು ವರಿಷ್ಠರ ತೀರ್ಮಾನ. ಕಾಂತರಾಜು ಆಯೋಗದ ವರದಿಯನ್ನು ನಾವು ಒಪ್ಪಿಕೊಂಡಿದ್ದೇವೆ. ಹೀಗಾಗಿ, ಕಡಿಮೆ ಅವಧಿಯಲ್ಲಿ ಮತ್ತೊಮ್ಮೆ ಗಣತಿ ನಡೆಸಲು ವರಿಷ್ಠರು ಸೂಚಿಸಿದ್ದಾರೆ,” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು, “ವಾಸ್ತವ ನೆಲೆಗಟ್ಟಿನಲ್ಲಿ ವೈಜ್ಞಾನಿಕವಾಗಿ ಜಾತಿ ಗಣತಿಯನ್ನು ಮರು ಸಮೀಕ್ಷೆ ನಡೆಸಬೇಕೆಂದು ಕರ್ನಾಟಕ ಸರಕಾರಕ್ಕೆ ಸೂಚಿಸಲಾಗಿದೆ. ಹಿಂದಿನ ಜಾತಿ ಸಮೀಕ್ಷೆ 10 ವರ್ಷಗಳ ಹಿಂದೆ ನಡೆದಿತ್ತು. ಈಗ ಸಾಕಷ್ಟು ಬದಲಾವಣೆಗಳಾಗಿವೆ. ಹಲವು ಸಮುದಾಯಗಳು ಒಬಿಸಿಯಲ್ಲಿ ಸೇರಿಕೊಂಡಿವೆ. ಈ ಎಲ್ಲವನ್ನೂ ಜಾತಿ ಸಮೀಕ್ಷೆ ಒಳಗೊಳ್ಳಬೇಕು,” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರಕಾರದ ಈ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಕಾಂಗ್ರೆಸ್ ಸರಕಾರ ತಾನೇ ನಡೆಸಿದ ಜಾತಿ ಸಮೀಕ್ಷೆಯ ವರದಿಯನ್ನು ಕಸದ ಬುಟ್ಟಿಗೆ ಎಸೆದಿದೆ. ರಾಜ್ಯದ ಜನತೆಯ ತೆರಿಗೆ ಹಣವಾದ 165 ಕೋಟಿ ರೂಪಾಯಿಗಳನ್ನು ವ್ಯರ್ಥಗೊಳಿಸಲಾಗಿದೆ. ಇದಕ್ಕೆ ಸಿದ್ದರಾಮಯ್ಯ ಅವರು ಜನತೆಯ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು,” ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. “ಕೇವಲ ದತ್ತಾಂಶದ ಗೊಂದಲವೇ ಇದಕ್ಕೆ ಕಾರಣವಿರಲಾರದು. ದತ್ತಾಂಶದ ಬಗ್ಗೆ ಅನುಮಾನವಿದ್ದರೆ, ಕಾಂಗ್ರೆಸ್ ಇಷ್ಟು ವರ್ಷ ಸುಮ್ಮನಿರುವ ಅಗತ್ಯವಿರಲಿಲ್ಲ. ಈ ಬಗ್ಗೆ ಸಿದ್ದರಾಮಯ್ಯ ಜನತೆಗೆ ಸ್ಪಷ್ಟನೆ ನೀಡಬೇಕು,” ಎಂದು ಬಿಜೆಪಿ ಒತ್ತಾಯಿಸಿದೆ.

Continue Reading

ಅಪರಾಧ

ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಹೆಡ್ ಕಾನ್ಸ್‍ಟೇಬಲ್!

ಬೆಂಗಳೂರು: ಪೊಲೀಸ್ ಠಾಣೆಯೊಂದರಲ್ಲೇ ಸಿಬ್ಬಂದಿಗಳು ಹೊಡೆದಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ, ಠಾಣೆಯ ಹೆಡ್ ಕಾನ್ಸ್‍ಟೇಬಲ್ ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಆರೋಪ ಹೊರಿಸಲಾಗಿದ್ದು ಈ ಬಗ್ಗೆ ದೂರು ದಾಖಲಾಗಿದೆ,
ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳಾ ಪೇದೆಗೆ ಅಲ್ಲೇ ಹೆಡ್ ಕಾನ್ಸ್‍ಟೇಬಲ್ ಆಗಿರುವ ಬಿಜಿ ಗೋವಿಂದರಾಜು ಎಂಬುವವರು ಬೂಟುಗಾಲಿನಲ್ಲಿ ಒದ್ದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ, ಜೂನ್ 10 ರಂದು ಈ ಘಟನೆ ನಡೆದಿದೆ, ರಾತ್ರಿ ಕಂಪ್ಯೂಟರ್ ವಿಭಾಗದಲ್ಲಿ ಮಹಿಳಾ ಪೇದೆ ರೇಣುಕಾ ಕರ್ತವ್ಯ ನಿರ್ವಹಿಸುತ್ತಿದ್ದರು,
ಈ ವೇಳೆ ರೇಣುಕಾ ಮನೆ ಬಿಟ್ಟು ಹೋಗಿ ಠಾಣೆ ಸೇರಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಊಟ ಮಾಡಿಸುತ್ತಿದ್ದರು, ಆಗ ಹೆಡ್ ಕಾನ್ಸ್‍ಟೇಬಲ್ ಗೋವಿಂದರಾಜು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಮಾತ್ರವಲ್ಲದೇ ಮೂರ್ನಾಲ್ಕು ಬಾರಿ ಬೂಟುಗಾಲಿನಿಂದ ಒದ್ದಿದ್ದಾರೆ ಎಂದು ಆರೋಪಸಲಾಗಿದೆ,
ಕಾನ್ಸ್‍ಟೇಬಲ್ ರೇಣುಕಾ ದೂರು ಆಧರಿಸಿ ಹೆಡ್ ಕಾನ್ಸಟೇಬಲ್ ಗೋವಿಂದರಾಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

Continue Reading

Trending