Connect with us

ಬೆಂಗಳೂರು

ದರ್ಶನ್ ಬೆನ್ನಿಗೆ ಸಚಿವರು ನಿಂತರೆ ಅವರು ಅಪರಾಧಿಗಳೇ: ಛಲವಾದಿ ನಾರಾಯಣಸ್ವಾಮಿ – Renukaswamy Murder Case

Published

on

ಬೆಂಗಳೂರು : ಸಿನಿಮಾ ನಟರು, ರಾಜಕಾರಣಿಗಳು ಸೇರಿದಂತೆ ಜನಸಾಮಾನ್ಯರು ಯಾರೇ ಆಗಲಿ, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು. ಕೊಲೆಯಂತಹ ಕೆಟ್ಟ ದಾರಿಗೆ ನಟ ದರ್ಶನ್ ಇಳಿಯಬಾರದಿತ್ತು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಎಲ್ಲಾ ಮಾಧ್ಯಮದಲ್ಲೂ ದರ್ಶನ್ ವಿಷಯವೇ ಚರ್ಚೆಯಾಗುತ್ತಿದೆ. ಈ ವಿಷಯದಲ್ಲಿ ಜನರಿಗೆ ಬಹಳ ಕುತೂಹಲವಿದೆ. ರೇಣುಕಾಸ್ವಾಮಿಯನ್ನ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಇದು ಸರಿಯಾದ ಕ್ರಮ‌ವಲ್ಲ. ಕರೆದು ಬುದ್ಧಿ ಹೇಳಬಹುದಿತ್ತು. ಆದರೆ, ಹತ್ಯೆಯಂತಹ ಹೀನ ಕೃತ್ಯಕ್ಕೆ ಇಳಿದಿದ್ದು ಅಕ್ಷಮ್ಯ ಅಪರಾಧ ಎಂದರು.

ತನಿಖೆ ಮುಕ್ತಾಯಗೊಳಿಸಿದ ಪೊಲೀಸರು ಶಿಕ್ಷೆ ಆಗಲೇಬೇಕೆಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಯಾರೂ ಕೂಡ ಇಂತ ಕ್ರೂರ ಕೃತ್ಯಕ್ಕೆ ಕೈ ಹಾಕಬಾರದು. ಸಣ್ಣ ಪುಟ್ಟ ಸಮಸ್ಯೆ, ತಪ್ಪು ಆಗುತ್ತವೆ. ಅದಕ್ಕೆ ನ್ಯಾಯಾಲಯ ಇದೆ. ಪೊಲೀಸ್ ಇಲಾಖೆಯನ್ನ ಬಳಕೆ ಮಾಡಿಕೊಳ್ಳಬೇಕು. ಇಂತಹ ಕೆಟ್ಟ ದಾರಿ ಹಿಡಿಯಬಾರದಿತ್ತು. ನನ್ನನ್ನ ಯಾರೂ ಏನೂ ಮಾಡಲ್ಲ ಅನ್ನೋ ರೀತಿ ವರ್ತಿಸಿದ್ದು ಸರಿಯಲ್ಲ. ಸಿನಿಮಾ ಸ್ಟಾರ್ ಆಗಲಿ, ರಾಜಕಾರಣಿ ಅಗಲಿ, ಸಾಮಾನ್ಯ ಜನರೇ ಆಗಲಿ. ಇಂತಹ ಕೆಟ್ಟ ಕೆಲಸ ಮಾಡಬಾರದು. ಈ ವಿಷಯದಲ್ಲಿ ಯಾವುದೇ ಸಚಿವರು ಅವರ ಬೆನ್ನಿಗೆ ನಿಂತರೆ ಅವರು ಸಹ ಅಪರಾಧಿಗಳೇ ಎಂದರು.

ಕಾಂಗ್ರೆಸ್​ಗೆ ಕೋವಿಡ್ ಬಂದಿದೆ: ಕ್ಯಾಬಿನೆಟ್‌ನಲ್ಲಿ ಕೋವಿಡ್ ವರದಿ ಮಂಡನೆ ವಿಚಾರ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಛಲವಾದಿ, ಈಗ ಯಾವುದೇ ಕಾಯಿಲೆ ಇಲ್ಲ. ಕೋವಿಡ್ ಇರೋದು ಕಾಂಗ್ರೆಸ್‌ಗೆ ಮಾತ್ರ. ಅದಕ್ಕೆ ಔಷಧಿ ತಗೋಳೋದು ನೋಡಬೇಕು. ಕೋವಿಡ್ ಸಾಂಕ್ರಮಿಕ ಇಡೀ ಪ್ರಪಂಚವನ್ನೇ ನಡುಗಿಸಿತ್ತು. ಅಂತಹ ಸಂದರ್ಭದಲ್ಲಿ ನಮ್ಮ‌ ಜನರ ಪ್ರಾಣ ಕಾಪಾಡಿದರೆ ಸಾಕು ಎಂಬ ಪರಿಸ್ಥಿತಿಯಿತ್ತು. ಈ ಹಿಂದೆ ಆರೋಗ್ಯ ಸಚಿವ ಸುಧಾಕರ್, ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಎಷ್ಟು ಶ್ರಮ ವಹಿಸಿ ಕೆಲಸ‌ ಮಾಡಿದ್ದರು. ಅವರನ್ನ ಅಭಿನಂದಿಸದೆ ನಮ್ಮ ಮೇಲೆ ಸರ್ಕಾರ ಆಪಾದಿಸಿದೆ. ಬಿಜೆಪಿ ನಾಯಕರನ್ನ ಸಿಲುಕಿಸಬೇಕೆಂದು ಮುಯ್ಯಿಗೆ ಮುಯ್ಯಿ ಅಂತ ಕೆಲಸ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಉಡುಪಿ ಜಿಲ್ಲೆಯ ಉತ್ತಮ ಶಿಕ್ಷಕನ ಆಯ್ಕೆ ಮಾಡಿ, ಬಳಿಕ ರದ್ದು ಮಾಡಿದ ವಿಚಾರ ಸಂಬಂಧ ರಾಜ್ಯ ಸರ್ಕಾರ ಡಬಲ್ ಸ್ಟ್ಯಾಂಡ್ ತೆಗೆದುಕೊಂಡಿದೆ. ಎಸ್​ಡಿಪಿಐ ಸಂಘಟನೆ ದೂರು ನೀಡಿದ ಮೇರೆಗೆ ಪ್ರಶಸ್ತಿ ರದ್ದು ಮಾಡಿರುವುದು ಸರಿಯಲ್ಲ. ಹಿಜಾಬ್ ವಿಚಾರದಲ್ಲಿ ಇದ್ದರು ಎಂಬ ಕಾರಣಕ್ಕಾಗಿ ರದ್ದು ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಪ್ರಶ್ನಿಶಿಸಿದ ಛಲವಾದಿ, ನೀವೇ (ಸರ್ಕಾರ) ಉತ್ತಮ ಅಂತ ಮಾಡಿ, ದೂರು ಬಂದ ತಕ್ಷಣ ರದ್ದು ಮಾಡಿರುವುದು ತರವಲ್ಲ ಎಂದು ಸರ್ಕಾರಕ್ಕ ಚಾಟಿ ಬೀಸಿದರು.

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ಕ್ರೀಡೆ

ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!

Published

on

By

ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.

ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.

ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.

Continue Reading

ದೇಶ

K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ

Published

on

By

ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್‌ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.

ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.

ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ನೀಡಲಾಯಿತು.

ವಿಶೇಷವಾಗಿ, ಸ್ನೇಹಾ ಟಿ (ಎಂಎಸ್‌ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.

ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.

Continue Reading

Trending