ಸಿನಿಮಾ
ವಿಜಯ್- ಸಮಂತಾ ʼಖುಷಿʼ ಸಿನಿಮಾ ರಿಲೀಸ್
ವಿಜಯ್ ದೇವರಕೊಂಡ ಹಾಗೂ ಸಮಂತಾ ರುತ್ ಪ್ರಭು ಈ ಬಾರಿ ಜೋಡಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇವರ ನಟನೆಯ ‘ಖುಷಿ’ ಸಿನಿಮಾ ಇಂದು (ಸೆಪ್ಟೆಂಬರ್೧) ತೆರೆಕಂಡಿದೆ. ‘ಖುಷಿ’ ಸಿನಿಮಾ ಪ್ರೇಕ್ಷಕರಿಗೆ ಖುಷಿ ನೀಡುತ್ತಾ?
ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಖುಷಿ’. ಎರಡು ವೈರುಧ್ಯ ಕುಟುಂಬಗಳ ಯುವಕ-ಯುವತಿ ನಡುವಿನ ಪ್ರೇಮಕಥೆಯಿದು.ಪ್ರೇಮಿಗಳು ತಮ್ಮ ವೈರುಧ್ಯಗಳ ನಡುವೆ ಪ್ರೀತಿಯನ್ನು ಹೇಗೆ ಕಾಪಾಡಿಕೊಂಡರು ಎಂಬುವುದೇ ಚಿತ್ರದ ಕಥೆ.ವೈರುಧ್ಯಗಳ ಕಥೆ ಸಾಮಾನ್ಯವಾದರೂ, ನಾಸ್ತಿಕ ರ್ಸಸ್ ಆಸ್ತಿಕ ಎಂಬ ವಿಷಯವನ್ನು ತಂದಿರುವುದು ಹೊಸತಾಗಿದೆ.ನಾಸ್ತಿಕತೆ ಗೆಲ್ಲುತ್ತದೆಯೋ, ಆಸ್ತಿಕತೆ ಗೆಲ್ಲುತ್ತದೆಯೋ ಎಂಬುದನ್ನು ನೀವು ಸಿನಿಮಾ ನೋಡಿದ ಬಳಿಕವೇ ತಿಳಿದುಕೊಳ್ಳಬೇಕು.ಸಮಂತಾ ಹಾಗೂ ವಿಜಯ್ ನಡುವಿನ ಕೆಮಿಸ್ಟ್ರಿ ಚಿತ್ರದ ತೂಕವನ್ನು ಹೆಚ್ಚಿಸುತ್ತದೆ.
ಕಾಶ್ಮೀರವನ್ನು ಚಿತ್ರದಲ್ಲಿ ಚೆನ್ನಾಗಿ ತೋರಿಸಿದ್ದಾರೆ. ಪ್ರೇಕ್ಷಕರ ನಗುವಿಗೆ ಕೊರತೆ ಮಾಡಿಲ್ಲ. ಈ ಬಾರಿ ಮೊದಲಿಗಿಂತ ಸ್ವಲ್ಪ ಬೇರೆ ರೀತಿಯ ಪಾತ್ರದಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ. ಎಂದಿನಂತೆ ತೂಕದ ಪಾತ್ರವನ್ನು ಆರಿಸಿಕೊಳ್ಳುವಲ್ಲಿ ಸಮಂತಾ ಯಶಸ್ವಿಯಾಗಿದ್ದಾರೆ.
ಸಂಗೀತ ನರ್ದೇಶಕ ಹೆಶಮ್ ಅಬ್ದುಲ್ ವಹಾಬ್ ಸಂಗೀತ ಇಂಪಾಗಿದೆ. ಇನ್ನು, ಕನ್ನಡ ಡಬ್ಬಿಂಗ್ ವಿಚಾರಕ್ಕೆ ಬಂದರೆ ಸಾಕಷ್ಟು ಉತ್ತಮ ಬೆಳವಣಿಗೆ ಆಗಿದ್ದನ್ನು ಗುರುತಿಸಬಹುದು. ಆದರೆ ಹಾಡುಗಳ ಭಾಷಾಂತರದಲ್ಲಿ ಇನ್ನೂ ಸ್ವಲ್ಪ ಸುಧಾರಿಸುವ ಅವಶ್ಯಕತೆ ಇದೆ ಎಂದೆನಿಸುತ್ತದೆ.
ಲವ್ ಸ್ಟೋರಿ ಇಷ್ಟಪಡುವ ಜನರು ಈ ಸಿನಿಮಾ ನೋಡಬಹುದು. ಕೊಟ್ಟ ಕಾಸಿಗೆ ಮೋಸವಿಲ್ಲವಾದರೂ, ಕಥೆಯಲ್ಲಿ ದೊಡ್ಡ ದೊಡ್ಡ ಟ್ವಿಸ್ಟ್ ಬಯಸುವ ಪ್ರೇಕ್ಷಕರ್ಗಕ್ಕೆ ಸ್ವಲ್ಪ ನಿರಾಸೆ ಆಗಬಹುದು. ತೀರಾ ಭಿನ್ನವಾದ ಕಥೆಯಲ್ಲದೇ ಹೋದದೂ ಸಿನಿಮಾದಲ್ಲಿ ಅಚ್ಚುಕಟ್ಟುತನ ಇರುವುದರಿಂದ ಒಮ್ಮೆ ನೋಡಬಹುದು.
ದೇಶ
ತಮಿಳು ಚಿತ್ರರಂಗಕ್ಕೆ ಸಿಎಂ ವಿಜಯ್ ಬಂಪರ್ ಗಿಫ್ಟ್: ದಿನಕ್ಕೆ 5 ಶೋಗಳಿಗೆ ಗ್ರೀನ್ ಸಿಗ್ನಲ್!
ಚೆನ್ನೈ: Vijay ನೇತೃತ್ವದ ತಮಿಳುನಾಡು ಸರ್ಕಾರ ಚಿತ್ರೋದ್ಯಮಕ್ಕೆ ಮಹತ್ವದ ಸಿಹಿಸುದ್ದಿ ನೀಡಿದೆ. ಹೊಸ ಸಿನಿಮಾ ಬಿಡುಗಡೆಯಾದ ಮೊದಲ ಒಂದು ವಾರದವರೆಗೆ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಸರ್ಕಾರ ಅಧಿಕೃತ ಅನುಮತಿ ನೀಡಿದ್ದು, ನಿರ್ಮಾಪಕರು ಹಾಗೂ ಚಿತ್ರಮಂದಿರ ಮಾಲೀಕರಲ್ಲಿ ಸಂತಸ ಮೂಡಿಸಿದೆ.
ಚಿತ್ರರಂಗದ ಪ್ರತಿನಿಧಿಗಳು, ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು ಹಾಗೂ ಚಿತ್ರೋದ್ಯಮದ ಪ್ರಮುಖರು ಮೇ 16ರಂದು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನೊಳಗೊಂಡ ಮನವಿ ಪತ್ರ ಸಲ್ಲಿಸಿದ್ದರು. ಚಿತ್ರಮಂದಿರಗಳ ಆರ್ಥಿಕ ಚೇತರಿಕೆ ಮತ್ತು ಪ್ರೇಕ್ಷಕರ ಅನುಕೂಲಕ್ಕಾಗಿ ದಿನಕ್ಕೆ ಐದು ಶೋಗಳಿಗೆ ಅವಕಾಶ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು.
ಈ ಮನವಿಯನ್ನು ಪರಿಗಣಿಸಿದ ಸರ್ಕಾರ, ಚಿತ್ರೋದ್ಯಮದ ಹಿತದೃಷ್ಟಿಯಿಂದ ಹೊಸ ಆದೇಶ ಹೊರಡಿಸಿದೆ. ಈ ಕುರಿತು Tamil Nadu Chief Minister’s Office ತನ್ನ ಅಧಿಕೃತ ‘ಎಕ್ಸ್’ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದೆ.
ಈ ಮೊದಲು ಜಾರಿಯಲ್ಲಿದ್ದ ಚಿತ್ರಮಂದಿರಗಳ ನಿಯಮ 14-ಎ ಪ್ರಕಾರ, ತಮಿಳುನಾಡಿನಲ್ಲಿ ದಿನಕ್ಕೆ ಕೇವಲ ನಾಲ್ಕು ಪ್ರದರ್ಶನಗಳಿಗೆ ಮಾತ್ರ ಅವಕಾಶವಿತ್ತು. ಹಬ್ಬ-ಹರಿದಿನಗಳು ಅಥವಾ ಸಾರ್ವಜನಿಕ ರಜಾದಿನಗಳಲ್ಲಿ ಮಾತ್ರ ವಿಶೇಷ ಅನುಮತಿ ಪಡೆದು ಐದನೇ ಪ್ರದರ್ಶನ ನಡೆಸಲಾಗುತ್ತಿತ್ತು.
ಆದರೆ ಹೊಸ ನಿಯಮದಂತೆ, ಯಾವುದೇ ಹೊಸ ಸಿನಿಮಾ ಬಿಡುಗಡೆಯಾದ ಬಳಿಕ ಮೊದಲ ಏಳು ದಿನಗಳವರೆಗೆ ಪ್ರತಿದಿನ ಐದು ಪ್ರದರ್ಶನಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಕ್ರಮದಿಂದ ಹೊಸ ಸಿನಿಮಾಗಳಿಗೆ ಹೆಚ್ಚಿನ ಆದಾಯ ಸಾಧ್ಯವಾಗಲಿದ್ದು, ಚಿತ್ರಮಂದಿರಗಳ ವ್ಯವಹಾರಕ್ಕೂ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.
ತಮಿಳು ಚಿತ್ರರಂಗದ ನಿರ್ಮಾಪಕರು, ವಿತರಕರು ಮತ್ತು ಥಿಯೇಟರ್ ಮಾಲೀಕರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, ಇದು ಚಿತ್ರೋದ್ಯಮಕ್ಕೆ “ಬೂಸ್ಟರ್ ಡೋಸ್” ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇಶ
ಬಸ್ ಕಂಡಕ್ಟರ್ನಿಂದ ಸೂಪರ್ ಸ್ಟಾರ್ ತನಕ: ರಜನಿಕಾಂತ್ ಅಪರೂಪದ ಫೋಟೋ ವೈರಲ್
ಬೆಂಗಳೂರು: ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ Rajinikanth ಅವರ ಹಳೆಯ ದಿನಗಳ ಅಪರೂಪದ ಗುರುತಿನ ಚೀಟಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಿನಿಮಾಗಳಿಗೆ ಬರುವ ಮೊದಲು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಂದರ್ಭದ ಈ ಐಡಿ ಕಾರ್ಡ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ಬೆಂಗಳೂರು ಸಾರಿಗೆ ಸಂಸ್ಥೆಯ ಡಿಪೋ ಸಂಖ್ಯೆ 4ರಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಜನಿಕಾಂತ್ ಅವರ ಅಧಿಕೃತ ಐಡಿ ಕಾರ್ಡ್ ಇಂಟರ್ನೆಟ್ನಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಅವರ ಮೂಲ ಹೆಸರು ‘ಶಿವಾಜಿ ರಾವ್ ಗಾಯಕ್ವಾಡ್’ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಯುವಕನಾಗಿದ್ದ ಸಂದರ್ಭದ ಫೋಟೋ ಕೂಡ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಒಂದು ಕಾಲದಲ್ಲಿ ಮೆಜೆಸ್ಟಿಕ್ನಿಂದ ಶ್ರೀನಗರ ಮಾರ್ಗದ ರೂಟ್ ನಂ.10ಎ ಬಸ್ನಲ್ಲಿ ಟಿಕೆಟ್ ನೀಡುತ್ತಿದ್ದ ರಜನಿಕಾಂತ್, ತಮ್ಮ ವಿಶಿಷ್ಟ ಸ್ಟೈಲ್ ಹಾಗೂ ಸಿಳ್ಳೆ ಮೂಲಕ ಪ್ರಯಾಣಿಕರ ಗಮನ ಸೆಳೆಯುತ್ತಿದ್ದರು ಎನ್ನುವ ನೆನಪುಗಳನ್ನು ಈ ಫೋಟೋ ಮತ್ತೆ ಜೀವಂತಗೊಳಿಸಿದೆ.
ಕೇವಲ ₹275 ಸಂಬಳದಿಂದ ಜೀವನ ಆರಂಭಿಸಿದ್ದ ಶಿವಾಜಿ ರಾವ್ ಗಾಯಕ್ವಾಡ್ ಅವರು ಇಂದು ಭಾರತೀಯ ಸಿನಿರಂಗದ ಅತಿ ದೊಡ್ಡ ತಾರೆಯರಲ್ಲಿ ಒಬ್ಬರಾಗಿರುವುದು ಅಭಿಮಾನಿಗಳಿಗೆ ಪ್ರೇರಣೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು “ಇದೇ ನಿಜವಾದ ಲೆಜೆಂಡ್ ಪಯಣ” ಎಂದು ಕಾಮೆಂಟ್ ಮಾಡುತ್ತಿದ್ದು, ಹಳೆಯ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ರಜನಿಕಾಂತ್ ಅವರ ಸರಳ ಜೀವನದಿಂದ ಆರಂಭವಾದ ಯಶೋಗಾಥೆ ಮತ್ತೆ ವೈರಲ್ ಆಗುತ್ತಿದ್ದಂತೆ, ಅವರ ಅಭಿಮಾನಿಗಳು ನೆಚ್ಚಿನ ನಟನ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾ ಸಂಭ್ರಮಿಸುತ್ತಿದ್ದಾರೆ.
ದೇಶ
‘ಡಾನ್ 3’ ತೊರೆದ ರಣವೀರ್ ಸಿಂಗ್ಗೆ ಸಂಕಷ್ಟ; FWICEನಿಂದ ಪರೋಕ್ಷ ಬ್ಯಾನ್?
ಮುಂಬೈ: ಬಾಲಿವುಡ್ ನಟ Ranveer Singh ಅವರಿಗೆ ಇದೀಗ ದೊಡ್ಡ ಸಂಕಷ್ಟ ಎದುರಾಗುವ ಸಾಧ್ಯತೆ ಕಾಣಿಸುತ್ತಿದೆ. ಬಹುನಿರೀಕ್ಷಿತ Don 3 ಸಿನಿಮಾದಿಂದ ದಿಢೀರನೆ ಹೊರನಡೆದ ಹಿನ್ನೆಲೆಯಲ್ಲಿ, ಸಿನಿಮಾ ನೌಕರರ ಒಕ್ಕೂಟವಾದ Federation of Western India Cine Employees ನಟನ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ.
Farhan Akhtar ನಿರ್ದೇಶನದ ಈ ಚಿತ್ರವನ್ನು Excel Entertainment ನಿರ್ಮಿಸುತ್ತಿತ್ತು. ಶೂಟಿಂಗ್ ಆರಂಭವಾಗಲು ಕೆಲವೇ ದಿನಗಳು ಬಾಕಿ ಇರುವಾಗ ರಣವೀರ್ ಸಿಂಗ್ ಸಿನಿಮಾ ತೊರೆದಿರುವುದು ನಿರ್ಮಾಣ ಸಂಸ್ಥೆಗೆ ಭಾರೀ ಆರ್ಥಿಕ ನಷ್ಟ ಉಂಟುಮಾಡಿದೆ ಎಂದು ಹೇಳಲಾಗಿದೆ. ಚಿತ್ರದ ಪ್ರಿ-ಪ್ರೊಡಕ್ಷನ್ ಹಾಗೂ ಯೋಜನೆಗಳಿಗೆ ಈಗಾಗಲೇ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿತ್ತು ಎನ್ನಲಾಗಿದೆ.
FWICE ಮುಖ್ಯ ಸಲಹೆಗಾರ Ashoke Pandit ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, “ಚಿತ್ರೀಕರಣಕ್ಕೆ ಕೆಲವೇ ದಿನಗಳಿರುವಾಗ ನಟರು ಸಿನಿಮಾದಿಂದ ಹೊರನಡೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದು ಸರಿಯಾದ ಬೆಳವಣಿಗೆ ಅಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
FWICE ಅಧ್ಯಕ್ಷ ಬಿ.ಎನ್. ತಿವಾರಿ, ಪ್ರಧಾನ ಕಾರ್ಯದರ್ಶಿ ಅಶೋಕ್ ದುಬೆ ಹಾಗೂ ಖಜಾಂಚಿ ಗಂಗೇಶ್ವರಲಾಲ್ ಶ್ರೀವಾಸ್ತವ್ ಭಾಗವಹಿಸಿದ್ದ ಉನ್ನತ ಮಟ್ಟದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಮೊದಲು ವಿವಾದವನ್ನು ಪರಿಹರಿಸಲು ನಿರ್ಮಾಪಕರ ಸಂಘದ ಮಟ್ಟದಲ್ಲೂ ರಾಜಿ ಸಂಧಾನದ ಪ್ರಯತ್ನ ನಡೆದಿತ್ತು. ರಣವೀರ್ ಸಿಂಗ್ ಮತ್ತು ಎಕ್ಸೆಲ್ ಎಂಟರ್ಟೈನ್ಮೆಂಟ್ ನಡುವೆ ನಷ್ಟ ಪರಿಹಾರ ಹಾಗೂ ಸೆಟಲ್ಮೆಂಟ್ ಕುರಿತು ಮಾತುಕತೆಗಳು ನಡೆದರೂ, ಅವು ಫಲಕಾರಿಯಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
ಇದೀಗ ಈ ಅಸಹಕಾರ ಕ್ರಮ ರಣವೀರ್ ಸಿಂಗ್ ಅವರ ಮುಂದಿನ ಸಿನಿಮಾಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಇತ್ತೀಚೆಗೆ ಬಿಡುಗಡೆಯಾದ ‘ಧುರಂಧರ್’ ಚಿತ್ರದ ಯಶಸ್ಸಿನ ಬಳಿಕ ಅವರ ಬೇಡಿಕೆ ಹೆಚ್ಚಾಗಿದ್ದರೂ, ಈ ಬೆಳವಣಿಗೆ ಬಾಲಿವುಡ್ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ರಣವೀರ್ ಸಿಂಗ್ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬ ಕುತೂಹಲ ಸಿನಿಪ್ರಿಯರಲ್ಲಿ ಹೆಚ್ಚಾಗಿದೆ.
-
ದೇಶ6 hours agoಕರ್ನಾಟಕಕ್ಕೆ ಹೊಸ ಸಿಎಂ? ಡಿಕೆ ಶಿವಕುಮಾರ್ ಪಾಲಿಗೆ ‘ಶುಭ ಶುಕ್ರವಾರ’ ಫಿಕ್ಸ್!
-
ದೇಶ10 hours agoಬಸ್ ಕಂಡಕ್ಟರ್ನಿಂದ ಸೂಪರ್ ಸ್ಟಾರ್ ತನಕ: ರಜನಿಕಾಂತ್ ಅಪರೂಪದ ಫೋಟೋ ವೈರಲ್
-
ಬೆಂಗಳೂರು7 hours ago“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!
-
ಕ್ರೀಡೆ7 hours ago“That’s a silly question!”: ಆರ್ಸಿಬಿ ಸೋಲಿನ ಬಳಿಕ ಪತ್ರಕರ್ತರ ಮೇಲೆ ಫಿಲಿಪ್ಸ್ ಸಿಡಿತ
-
ದೇಶ9 hours agoಸಿಎಂ ಬದಲಾವಣೆಯ ಬೆನ್ನಲ್ಲೇ ಡಿಕೆಶಿಗೆ ಮತ್ತೊಂದು ಶಾಕ್?
-
ದೇಶ9 hours agoಅಯ್ಯನ ಕೆರೆ ಕಲುಷಿತಗೊಳಿಸಲು ಯತ್ನ: ಸಿಬ್ಬಂದಿಯ ದಿಟ್ಟ ಕ್ರಮಕ್ಕೆ ಭಾರಿ ಮೆಚ್ಚುಗೆ
-
ಅಪರಾಧ10 hours agoಪಿಣರಾಯಿ ವಿಜಯನ್ ನಿವಾಸದ ಮೇಲೆ ಇಡಿ ದಾಳಿ: ಕೇರಳ ರಾಜಕೀಯದಲ್ಲಿ ಭಾರೀ ಸಂಚಲನ!
-
ಕ್ರೀಡೆ9 hours ago‘ಈ ಸಲ ಕಪ್ ನಮ್ದೇ’ ಘೋಷಣೆ ಜೋರಾಗಿದೆ: ಆರ್ಸಿಬಿ ಫೈನಲ್ಗೆ ಎಂಟ್ರಿ
