ಕ್ರೀಡೆ
ಪಾಕಿಸ್ತಾನಕ್ಕೆ ಹೋಗೋದಿಲ್ಲ ಇಂಡಿಯನ್ ಕ್ರಿಕೆಟ್ ಟೀಂ ಅಮಿತ್ ಶಾ

ನವದೆಹಲಿ: ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಗೊಂಡ ಬೆನ್ನಲ್ಲೇ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಗೆ ಪಾಕ್ ಪ್ರವಾಸ ಕೈಗೊಳ್ಳುವ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಇದೀಗ ಭಾರತ ಪ್ರವಾಸದ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ,
ಈ ಬಗ್ಗೆ ಮಾತನಾಡಿರುವ ಅವರು ಪಾಕಿಸ್ತಾನದಲ್ಲಿ ಎಲ್ಲಿಯವರೆಗೆ ಶಾಂತಿ ನೆಲೆಸುವುದಿಲ್ಲವೋ ಅಲ್ಲಿಯವರೆಗೆ ಭಾರತ ಪಾಕ್ ಗೆ ಕಾಲಿಡುವುದಿಲ್ಲ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ,
ಪಾಕಿಸ್ತಾನವು ನಿರಂತರ ಸಂವಾದ, ದಾಳಿ ಸಹಬಾಳ್ವೆ ನಡೆಸಲು ಸಾದ್ಯವಿಲ್ಲ, ಅವರು ಎಲ್ಲಿಯವರೆಗೆ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವವರೆಗೂ ನಾವು ಪಾಕಿಸ್ತಾನದೊಂದಿಗೆ ಮಾತುಕತೆಗೆ ಮುಂದಾಗುವುದಿಲ್ಲ ಹಾಗೂ ಯಾವ ವ್ಯವಹಾರವನ್ನು ಮಾಡುವುದಿಲ್ಲ ಎಂದರು,
ಇನ್ನು ಚಾಂಪಿಯನ್ಸ್ ಟ್ರೋಫೀ ಬಗ್ಗೆ ಪಿಸಿಬಿ ಪ್ರತಿಕ್ರಿಯಿಸಿದ್ದು, ಈ ಬಾರಿ ಟೂರ್ನಿ ಕೇವಲ ಪಾಕಿಸ್ತಾನದಲ್ಲೆ ನಡೆಯಲಿದೆ, ಹೈ ಬ್ರಿಡ್ ಮಾದರಿಯಲ್ಲಿ ನಡೆಸಲು ನಾವು ಒಪ್ಪುವುದಿಲ್ಲ ಎಂದು ಹೇಳಿದೆ,
ಇತ್ತೀಚಿಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಮುಂಬರುವ ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಪ್ರಯಾಣಿಸಬೇಕೇ ಅಥವಾ ಇಲ್ಲವೇ ಎಂಬುದು ಸಂಪೂರ್ಣವಾಗಿ ಭಾರತ ಸರ್ಕಾರದ ಕೈಯಲ್ಲಿದೆ ಎಂದು ಹೇಳಿದ್ದರು,
ಇದೀಗ ಭಾರತ ಪ್ರವಾಸದ ಬಗ್ಗೆ ಕೇಂದ್ರ ಸರ್ಕಾರ ತಮ್ಮ ನಿರ್ಧಾರನ್ನು ಕೈಗೊಂಡಿದ್ದು ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಹೋಗುವುದು ಅನುಮಾನ ಎನ್ನಲಾಗಿದೆ,
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
ಕ್ರೀಡೆ
ಭಾರತೀಯ ತಂಡದ ಕೋಚ್ ಗೌತಮ್ ಗಂಭೀರ್ ವಿರುದ್ಧ ಟೀಕೆ, ಬಿಸಿಸಿಐ ಸಹಾಯಕ ಕೋಚ್ ಮಾರ್ನೆ ಮಾರ್ಕೆಲ್-ಟೆನ್ ಡೊಶ್ಕಾಟೆ ಬದಲಾವಣೆ ಸಾಧ್ಯತೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ಕೋಚಿಂಗ್ ಶೈಲಿಯನ್ನು ಮಾಜಿ ಕ್ರಿಕೆಟಿಗರು ಸೇರಿದಂತೆ ಸುನಿಲ್ ಗವಾಸ್ಕರ್, ರಿಕಿ ಪಾಂಟಿಂಗ್ ಸೇರಿದಂತೆ ಹಲವು ಹಿರಿಯರು ಭಾರೀ ಟೀಕೆ ಮಾಡಿದ್ದಾರೆ. ಈ ಟೀಕೆಗಳಿಗೆ ಸಂಬಂಧಿಸಿ, ಗಂಭೀರ್ ಮನವಿ ಮಾಡಿಕೊಂಡ ಸಹಾಯಕ ಕೋಚ್‌ಗಳಾದ ಮಾರ್ನೆ ಮಾರ್ಕೆಲ್ (ಬೌಲಿಂಗ್ ಕೋಚ್) ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತಿವೆ.
ಕಳೆದ ವರ್ಷ ಜುಲೈನಲ್ಲಿ ಗಂಭೀರ್ ಭಾರತದ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಮನವಿ ಮೇರೆಗೆ ಐಪಿಎಲ್ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ ಅಭಿಷೇಕ್ ನಾಯರ್, ಮಾರ್ಕೆಲ್ ಮತ್ತು ಡೊಶ್ಕಾಟೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧ ವೈಟ್ ವಾಷ್ ಹಾಗೂ ಆಸ್ಟ್ರೇಲಿಯಾ ತಂಡದ ಸೋಲುಗಳು ಬಿಸಿಸಿಐನಲ್ಲಿ ಅಸಮಾಧಾನ ಮೂಡಿಸಿದ ಕಾರಣ, ಮೊದಲನೆಯದಾಗಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಹುದ್ದೆಯಿಂದ ವಜಾಗೊಂಡಿದ್ದರು.
ಇದೇ ಹಿನ್ನೆಲೆಯಲ್ಲಿ, ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಸಹ ಇನ್ನೂ ಸಹ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಂಡದ ಆಯ್ಕೆ ಪ್ರಕ್ರಿಯೆ, ಆಟಗಾರರ ಕಾರ್ಯದೊತ್ತಡ, ಪಿಚ್ ಅನ್ವಯ 11 ಆಟಗಾರರ ಆಯ್ಕೆ ಮತ್ತು ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್‌ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ವ್ಯಕ್ತಪಡಿಸಿದೆ.
ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಥಾನಕ್ಕೂ ಸವಾಲು ಎದುರಾಗಿದೆ. 2023ರ ಜುಲೈನಲ್ಲಿ ನೇಮಕಗೊಂಡ ಈ ಸಮಿತಿ ಮುಖ್ಯಸ್ಥರ ನೇತೃತ್ವದಲ್ಲಿ ಭಾರತ ತಂಡದ ಪ್ರದರ್ಶನ ಕಳೆದ ಒಂದು ವರ್ಷದಿಂದ ತೀರಾ ಕಳಪೆಯಾಗಿದ್ದು, ಸಮರ್ಥ ಆಟಗಾರರ ಆಯ್ಕೆಯಲ್ಲಿ ನಿರಂತರ ಎಡವಾಟಗಳು ನಡೆದಿವೆ ಎಂದು ವಿಶ್ಲೇಷಣೆಗಳು ತಿಳಿಸುತ್ತಿವೆ.
ಕ್ರೀಡೆ
ಕನ್ನಡಿಗ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟ

ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರು ‘ಹುಬ್ಬಳ್ಳಿ ಟೈಗರ್ಸ್’ ತಂಡಕ್ಕೆ 13.20 ಲಕ್ಷ ರೂಪಾಯಿಗೆ ಮಾರಾಟ ಆಗಿದ್ದು, ಈ ಮೊತ್ತವು ಮಹಾರಾಜ ಟ್ರೋಫಿಯ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಯಾಗಿದೆ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಉತ್ತಮ ಪ್ರದರ್ಶನ ನೀಡಿ, ಅವರು ಈ ಯಶಸ್ಸಿಗೆ ಪಾತ್ರರಾಗಿದ್ದಾರೆ.
ಕಳೆದ ಐಪಿಎಲ್ ಪಂದ್ಯಾವಳಿಯಲ್ಲಿ ಗಾಯದಿಂದ ಕೆಲವು ಪಂದ್ಯಗಳಿಂದ ದೂರ ಉಳಿದರೂ, ದೇವದತ್ ಪಡಿಕ್ಕಲ್ ಅವರ ಸಾಮರ್ಥ್ಯ ಎಲ್ಲರ ಮನಸ್ಸಿಗೆ ತಲುಪಿತ್ತು. 2024ರ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌ನಿಂದ ಹೊರಬಂದ ಬಳಿಕ ಆರ್‌ಸಿಬಿ ತಂಡವು ಅವರನ್ನು 3.20 ಕೋಟಿ ರೂಪಾಯಿಗೆ ಖರೀದಿಸಿದೆ. ಇದೀಗ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು 13.20 ಲಕ್ಷ ರೂಪಾಯಿಗೆ ದೇವದತ್ ಪಡಿಕ್ಕಲ್ ಅವರನ್ನು ಪಡೆದಿದ್ದು, ಇದು ಟೂರ್ನಿಯ ದಾಖಲೆಯ ಬೆಲೆಯಾಗಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಜುಲೈ 15ರಂದು ಬೆಂಗಳೂರಿನಲ್ಲಿ ಆಯೋಜಿಸಿದ ಈ ಹರಾಜಿನಲ್ಲಿ ದೇವದತ್ ಪಡಿಕ್ಕಲ್ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಕನ್ನಡಿಗ ಕ್ರಿಕೆಟಿಗರಾಗಿದ್ದಾರೆ. ಮಹಾರಾಜ ಟ್ರೋಫಿಯಲ್ಲಿ ಪ್ರತಿ ಫ್ರಾಂಚೈಸಿಯು ಕನಿಷ್ಠ ಇಬ್ಬರು ಸ್ಥಳೀಯ ಆಟಗಾರರನ್ನು ತಂಡದಲ್ಲಿ ಇರಿಸಬೇಕು ಎಂಬ ನಿಯಮವಿದ್ದು, ಇದರಿಂದ ಸ್ಥಳೀಯ ಪ್ರತಿಭೆಗಳ ಪ್ರೋತ್ಸಾಹಕ್ಕೆ ದೊಡ್ಡ ಅವಕಾಶ ಸಿಗುತ್ತದೆ.
ಈ ವರ್ಷದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಭಿಮಾನಿಗಳಿಗೆ ಮೈದಾನದಲ್ಲಿ ವೀಕ್ಷಣೆಗೆ ಅವಕಾಶ ಇಲ್ಲ. ಆದರೂ ದೇವದತ್ ಪಡಿಕ್ಕಲ್ ಅವರ ಸಾಧನೆ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಯುವ ಕ್ರಿಕೆಟಿಗರಿಗೆ ಪ್ರೇರಣೆಯಾಗಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ