ದೇಶ
ರಾಹುಲ್ ಹೇಳಿಕೆ ಉಲ್ಲೇಖಿಸಿ ಪ್ರತ್ಯೇಕ ಖಲಿಸ್ತಾನ ರಾಷ್ಟ್ರ ಬೇಡಿಕೆ ಮುಂದಿಟ್ಟ ಉಗ್ರ ಪನ್ನುನ್
ನವದೆಹಲಿ: ಭಾರತ ಸರ್ಕಾರ ನಿಷೇಧಿಸಿದ ಖಲಿಸ್ತಾನಿ ಪರ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ರಾಹುಲ್ ಗಾಂಧಿ (Rahul Gandhi) ಹೇಳಿಕೆಯನ್ನು ಉಲ್ಲೇಖಿಸಿ ಪ್ರತ್ಯೇಕ ಖಲಿಸ್ತಾನ್ ರಾಷ್ಟ್ರ (Khalistan Nation) ಬೇಡಿಕೆಯನ್ನು ಮತ್ತೊಮ್ಮೆ ಮುಂದಿಟ್ಟಿದ್ದಾನೆ.
ವಾಷಿಂಗ್ಟನ್‌ನಲ್ಲಿರುವ ಗುರುಪತ್‌ವಂತ್ ಸಿಂಗ್ ಪನ್ನುನ್ ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾನೆ.
ಹೇಳಿಕೆಯಲ್ಲಿ ಏನಿದೆ?
ಅನೇಕ ಖಲಿಸ್ತಾನ್ ಪರ ಸಿಖ್ಖರು ಹಾಜರಿದ್ದ ವಾಷಿಂಗ್ಟನ್ ಡಿಸಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅವರು SFJ ಯ ಜಾಗತಿಕ ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹ ಅಭಿಯಾನವನ್ನು ಸಮರ್ಥಿಸಿಕೊಂಡಿದ್ದಾರೆ. ಭಾರತದಲ್ಲಿ ಸಿಖ್ಖರಿಗೆ ಪೇಟ, ಕಡವನ್ನು ಧರಿಸಿ ಗುರುದ್ವಾರಕ್ಕೆ ಹೋಗುವುದಕ್ಕೆ ಅನುಮತಿ ನೀಡಲಾಗುತ್ತದೆಯೇ ಎಂಬುದರ ಬಗ್ಗೆ ಯೋಚಿಸಬೇಕಿದೆ ಎಂದು ಹೇಳಿದ್ದಾರೆ.
ಭರತದ ಸಿಖ್ಬರ್ ಬಗ್ಗೆ ರಾಹುಲ್ ಆಡಿರುವ ಮಾತು ದಿಟ್ಟತನದಿಂದ ಕೂಡಿರುವುದು ಮಾತ್ರವಲ್ಲ 1947 ರಿಂದ ಭಾರತದಲ್ಲಿ ಸಿಖ್ಖರು ಎದುರಿಸುತ್ತಿರುವ ವಾಸ್ತವಿಕ ಇತಿಹಾಸದಲ್ಲಿ ಎದುರಿಸುತ್ತಿರವ ಸಮಸ್ಯೆಯನ್ನು ತಿಳಿಸಿದೆ. ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆ ಸಿಖ್ಖರ ತಾಯ್ನಾಡಾಗಿ ಖಲಿಸ್ತಾನ ಪ್ರತ್ಯೇಕ ರಾಷ್ಟ್ರ ಸ್ಥಾಪಿಸಬೇಕೆಂಬ ಪಂಜಾಬ್ ಸ್ವಾತಂತ್ರ್ಯದ ಜನಾಭಿಪ್ರಾಯ ಸಂಗ್ರಹಣೆಯ ಸಮರ್ಥನೆಯನ್ನು ದೃಢೀಕರಿಸುತ್ತದೆ ಎಂದು ಹೇಳಿದ್ದಾನೆ.
ರಾಹುಲ್ ಹೇಳಿದ್ದೇನು?
ಸಿಖ್ಖರು (Sikhs) ಟರ್ಬನ್, ಖಡಗ ಧರಿಸುವುದಕ್ಕೆ ಹೆದರುವಂತಾಗಿದೆ. ಇದು ಒಬ್ಬ ವ್ಯಕ್ತಿ ಮತ್ತು ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲಾ ಧರ್ಮಗಳಲ್ಲೂ ಇಂತಹ ಸ್ಥಿತಿ ಇದೆ. ಸ್ವಾತಂತ್ರ್ಯಾನಂತರದ ಇತಿಹಾಸದಲ್ಲಿ, ಸಿಖ್ ಸಮುದಾಯದ ಮೇಲೆ ಹತ್ಯಾಕಾಂಡ ನಡೆದ ಸಂದರ್ಭವಿತ್ತು. ಆಗ 3,000 ಅಮಾಯಕ ಸಿಖ್ಖರನ್ನು ಕೊಲ್ಲಲಾಯಿತು. ಆ ಸಂದರ್ಭದಲ್ಲಿ ನನ್ನ ಕೆಲವು ಸಹೋದರರು ಪೇಟ ಧರಿಸುವುದನ್ನೇ ಬಿಟ್ಟರು ಎಂದು ರಾಹುಲ್ ಹೇಳಿದ್ದರು.
ಗುರುಪತ್‌ವಂತ್ ಸಿಂಗ್ ಪುನ್ನುನ್ ಹೇಳಿಕೆ ಬಂದ ಹಿನ್ನೆಲೆಯಲ್ಲಿ ಬಿಜೆಪಿ ರಾಹುಲ್ ಗಾಂಧಿಯನ್ನು ಟೀಕಿಸಿದೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ನಿಜಕ್ಕೂ ಭಾರತದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರು ಭಾರತದ ಸಾಮಾಜಿಕ ರಚನೆಯನ್ನು ನಾಶಮಾಡಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪನ್ನುನ್ ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಅಮೆರಿಕ ಮೂಲದ ಸಿಖ್ ಫಾರಿ ಜಸ್ಟಿಸ್‌ನ (ಎಸ್‌ಎಫ್‌ಜೆ) ಮುಖ್ಯಸ್ಥನಾಗಿದ್ದಾನೆ. ಮಾತ್ರವಲ್ಲದೇ ಭಾರತೀಯ ತನಿಖಾ ಸಂಸ್ಥೆಗಳಿಗೆ ಮೋಸ್ಟ್ ವಾಂಟೆಡ್ ವ್ಯಕ್ತಿಯಾಗಿದ್ದಾನೆ
ದೇಶ
“ಮೌನ ಏಕೆ?” – ಮೋದಿ ಸರ್ಕಾರದ ವಿರುದ್ಧ ಟಿಎಂಸಿ ಆಕ್ರೋಶ
ನವದೆಹಲಿ: ಕೋಲ್ಕತ್ತಾಗೆ ಪಾಕಿಸ್ತಾನ ನೀಡಿರುವ ಬೆದರಿಕೆ ವಿಚಾರ ರಾಜಕೀಯವಾಗಿ ಮತ್ತಷ್ಟು ಕಾವು ಪಡೆದಿದೆ. ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ Abhishek Banerjee ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಿಲಿಗುರಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ರಕ್ಷಣಾ ಸಚಿವ Khawaja Asif ಕೊಲ್ಕತ್ತಾವನ್ನು ಗುರಿಯಾಗಿಸುವುದಾಗಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದರು. “ನೆರೆ ರಾಷ್ಟ್ರದಿಂದ ಇಂತಹ ಬೆದರಿಕೆ ಬಂದರೂ ಪ್ರಧಾನಿ Narendra Modi, ಗೃಹ ಸಚಿವ Amit Shah ಮತ್ತು ರಕ್ಷಣಾ ಸಚಿವ Rajnath Singh ಮೌನವಾಗಿರುವುದು ಅಚ್ಚರಿಯ ಸಂಗತಿ” ಎಂದು ಟೀಕಿಸಿದರು.
ಅಭಿಷೇಕ್ ಬ್ಯಾನರ್ಜಿ ತಮ್ಮ ಭಾಷಣದಲ್ಲಿ, “ನಮ್ಮ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದ ದಿನ ಪಾಕಿಸ್ತಾನಕ್ಕೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ” ಎಂದು ಎಚ್ಚರಿಕೆಯ ಮಾತುಗಳನ್ನೂ ಆಡಿದರು. ಪಾಕಿಸ್ತಾನದ ಬೆದರಿಕೆಗೆ ಗಟ್ಟಿಯಾದ ಪ್ರತಿಕ್ರಿಯೆ ನೀಡದ ಕೇಂದ್ರ ಸರ್ಕಾರದ ನಡೆ ಪ್ರಶ್ನಾರ್ಹ ಎಂದು ಹೇಳಿದರು.
ಇನ್ನೂ ಮುಂದೆ, ಕೇಂದ್ರ ನಾಯಕರು ಪಶ್ಚಿಮ ಬಂಗಾಳಕ್ಕೆ ಬಂದು ಟಿಎಂಸಿ ವಿರುದ್ಧ ಪ್ರಚಾರ ಮಾಡುವುದರಲ್ಲಿ ನಿರತರಾಗಿದ್ದು, ನಮ್ಮನ್ನು ಬಾಂಗ್ಲಾದೇಶಿಗಳು ಅಥವಾ ಪಾಕಿಸ್ತಾನಿಗಳು ಎಂದು ಕರೆಯುತ್ತಿದ್ದಾರೆ. ಆದರೆ ನೇರ ಬೆದರಿಕೆ ಎದುರಾದಾಗ ಅವರು ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದರು.
ಈ ಹೇಳಿಕೆಗಳು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಕಾವು ಹೆಚ್ಚಿಸಿದ್ದು, ಬಿಜೆಪಿ-ಟಿಎಂಸಿ ನಡುವೆ ವಾಗ್ವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ದೇಶ
ಬೆಂಗಳೂರು ಹೃದಯ ಸ್ಪರ್ಶಿ ಕಥೆ: ಯುವತಿಗೆ ನೆರವಾದ ಅಪರಿಚಿತರು
ಬೆಂಗಳೂರು: ಸಿಲಿಕಾನ್ ಸಿಟಿಯ ಕತ್ತಲ ರಾತ್ರಿಯಲ್ಲಿ ಯುವತಿಯೊಬ್ಬಳಿಗೆ ರಕ್ಷೆಯಾಗಿ ನಿಂತ ಸಾರಿಗೆ ಸಿಬ್ಬಂದಿ ಹಾಗೂ ಬೈಕ್ ಟ್ಯಾಕ್ಸಿ ಚಾಲಕನ ಮಾನವೀಯತೆ ಈಗ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ನಗರದ ಗದ್ದಲದ ನಡುವೆ ಮಾನವೀಯ ಮೌಲ್ಯಗಳು ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಸೋಮವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಐಶ್ವರ್ಯ ಎಂಬ ಯುವತಿ Bangalore Metropolitan Transport Corporation ಬಸ್‌ನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ನಿಲ್ದಾಣದಿಂದ ಕಾಡುಗೋಡಿಗೆ ಬಂದಿಳಿದಿದ್ದರು. ಆ ಸಮಯದಲ್ಲಿ ಸುತ್ತಮುತ್ತ ಸಂಪೂರ್ಣ ಕತ್ತಲು ಆವರಿಸಿಕೊಂಡಿದ್ದು, ರಸ್ತೆಗಳಲ್ಲಿ ಜನರ ಓಡಾಟವೂ ಇರಲಿಲ್ಲ. ನಿರ್ಜನ ಪ್ರದೇಶದಲ್ಲಿ ಒಬ್ಬಳೇ ಸಿಲುಕಿದ ಯುವತಿ ಮನೆಗೆ ತೆರಳಲು ಕ್ಯಾಬ್ ಬುಕ್ ಮಾಡಲು ಪ್ರಯತ್ನಿಸಿದರೂ ಯಾವುದೇ ವಾಹನ ಲಭ್ಯವಾಗಲಿಲ್ಲ.
ಈ ಸಂದರ್ಭದಲ್ಲಿ ಯುವತಿಯ ಸ್ಥಿತಿಯನ್ನು ಗಮನಿಸಿದ ಬಿಎಂಟಿಸಿ ಸಿಬ್ಬಂದಿ, ಆಕೆಯನ್ನು ಬಸ್ ಸ್ಟಾಪ್‌ನಲ್ಲಿ ಬಿಟ್ಟು ತೆರಳದೆ ಸುರಕ್ಷಿತ ವಾಹನ ಸಿಗುವವರೆಗೂ ಅಲ್ಲಿಯೇ ಉಳಿದುಕೊಂಡರು. ಅವರ ಈ ಕಾಳಜಿ ಮಾನವೀಯತೆಗೆ ಉತ್ತಮ ಉದಾಹರಣೆಯಾಗಿದೆ.
ಅದೇ ಸಮಯದಲ್ಲಿ ಆ ಮಾರ್ಗವಾಗಿ ಬಂದ Rapido ಚಾಲಕನೊಬ್ಬ ಯುವತಿಯ ನೆರವಿಗೆ ಧಾವಿಸಿದರು. ಬಿಎಂಟಿಸಿ ಸಿಬ್ಬಂದಿ ಚಾಲಕನ ವಿವರಗಳನ್ನು ಖಚಿತಪಡಿಸಿಕೊಂಡ ಬಳಿಕವೇ ಯುವತಿಯನ್ನು ಅವರೊಂದಿಗೆ ಕಳುಹಿಸಿದರು. ವಿಶೇಷವೆಂದರೆ, ಆ ಚಾಲಕ ಯಾವುದೇ ಹಣ ಪಡೆಯದೆ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಘಟನೆಯ ಕುರಿತು ಐಶ್ವರ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ತಮಗೆ ನೆರವಾದ ಬಿಎಂಟಿಸಿ ಸಿಬ್ಬಂದಿ ಮತ್ತು ರ‍್ಯಾಪಿಡೋ ಚಾಲಕನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಹೃದಯಸ್ಪರ್ಶಿ ಘಟನೆ ಈಗ ವೈರಲ್ ಆಗಿ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.
ದೇಶ
ಇರಾನ್ ಶಾಕ್: ಹೊಸ ಸರ್ವೋಚ್ಚ ನಾಯಕ ಗಂಭೀರ ಸ್ಥಿತಿ!
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿರುವ ಬೆನ್ನಲ್ಲೇ ಇರಾನ್ ರಾಜಕೀಯ ವಲಯದಲ್ಲಿ ಸಂಚಲನಕಾರಿ ಮಾಹಿತಿ ಹೊರಬಂದಿದೆ. ಹೊಸದಾಗಿ ಸರ್ವೋಚ್ಚ ನಾಯಕರಾಗಿ ಆಯ್ಕೆಯಾಗಿರುವ Mojtaba Khamenei ಅವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ.
ವರದಿಗಳ ಪ್ರಕಾರ, Qom ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆಡಳಿತಾತ್ಮಕ ನಿರ್ಧಾರಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಫೆಬ್ರವರಿ 28ರಂದು ನಡೆದ ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಗುಪ್ತಚರ ಮೂಲಗಳು ಸೂಚಿಸಿವೆ.
ಈ ದಾಳಿಯಲ್ಲೇ ಅವರ ತಂದೆ, ಇರಾನ್‌ನ ಹಿಂದಿನ ಸರ್ವೋಚ್ಚ ನಾಯಕ Ali Khamenei ಮೃತಪಟ್ಟಿರುವುದಾಗಿ ಹೇಳಲಾಗಿದೆ. ಶಿಯಾ ಧರ್ಮಗುರುಗಳ ಕೇಂದ್ರವಾಗಿರುವ ಕೋಮ್‌ನಲ್ಲಿ ಅವರ ಅಂತ್ಯಕ್ರಿಯೆ ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.
ಯುದ್ಧದ ಆರಂಭದಿಂದಲೇ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಹೆಸರಿನಲ್ಲಿ ಪ್ರಕಟವಾಗಿರುವ ಹೇಳಿಕೆಗಳನ್ನು ರಾಜ್ಯ ಮಾಧ್ಯಮಗಳು ಓದುತ್ತಿದ್ದರೂ, ಅವರ ಧ್ವನಿ ದಾಖಲೆ ಇಲ್ಲದಿರುವುದು ಅವರ ಆರೋಗ್ಯದ ಬಗ್ಗೆ ಅನುಮಾನ ಮೂಡಿಸಿದೆ.
ಇದಲ್ಲದೆ, Iran ಸರ್ಕಾರ ಕೃತಕ ಬುದ್ಧಿಮತ್ತೆ ಬಳಸಿ ಬಿಡುಗಡೆ ಮಾಡಿದ ವಿಡಿಯೋವೂ ಚರ್ಚೆಗೆ ಕಾರಣವಾಗಿದೆ. ಇದರಲ್ಲಿ ಖಮೇನಿ ಯುದ್ಧ ತಂತ್ರಗಳನ್ನು ಪರಿಶೀಲಿಸುತ್ತಿರುವಂತೆ ತೋರಿಸಲಾಗಿದೆ.
ಒಟ್ಟಿನಲ್ಲಿ, ಇರಾನ್‌ನಲ್ಲಿ ನಾಯಕತ್ವದ ಅನಿಶ್ಚಿತತೆ ಹಾಗೂ ಯುದ್ಧದ ಪರಿಣಾಮ ಜಾಗತಿಕ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟಿಸಿದೆ.
-
ದೇಶ23 hours agoಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್?: AI ರೇಸ್ನಲ್ಲಿ ಟೆಕ್ ದೈತ್ಯರ ಹೊಸ ಹೆಜ್ಜೆ
-
ದೇಶ23 hours agoವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ
-
ಚುನಾವಣೆ22 hours ago‘ಆಪರೇಷನ್ ಸಿಂಧೂರ್’ ವಿವಾದ: ಕಾಂಗ್ರೆಸ್ ವಿರುದ್ಧ ಮೋದಿ ತೀವ್ರ ಆರೋಪ
-
ದೇಶ22 hours agoಹಾರ್ಮುಜ್ ಸಮಸ್ಯೆ ಪರಿಹಾರಕ್ಕೆ ಭಾರತ ಪ್ರಮುಖ ಪಾತ್ರ?: ಇರಾನ್ ವಿಶ್ವಾಸ
-
ದೇಶ1 hour agoಇರಾನ್ ಶಾಕ್: ಹೊಸ ಸರ್ವೋಚ್ಚ ನಾಯಕ ಗಂಭೀರ ಸ್ಥಿತಿ!
-
ದೇಶ24 hours agoಹೊರ್ಮುಜ್ ಜಲಸಂಧಿ ತೆರೆಯಲ್ಲ: ಇರಾನ್ ಕಠಿಣ ನಿಲುವು
-
ದೇಶ3 hours agoಪಾಕಿಸ್ತಾನ ಬೆದರಿಕೆ: ಮೋದಿ ಮೌನಕ್ಕೆ ಮಮತಾ ಕಿಡಿ!
-
ದೇಶ3 hours ago4 ಗಂಟೆಗೂ ಬೋರ್ ಇಲ್ಲ: ಕೊಹ್ಲಿ ರಿವ್ಯೂ ವೈರಲ್
