Connect with us

ಸುತ್ತ ಮುತ್ತ

ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಡಿಸೆಂಬರ್ ನಲ್ಲಿ ಮಂಡ್ಯಕ್ಕೆ ಭೇಟಿ

Published

on

ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಡಿಸೆಂಬರ್ ನಲ್ಲಿ ಮಂಡ್ಯಕ್ಕೆ ಭೇಟಿ

ಕರ್ನಾಟಕದ ಸಕ್ಕರೆ ನಾಡು ಖ್ಯಾತಿಯ ಮಂಡ್ಯ ನಗರಕ್ಕೆ ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ದಂಪತಿ ಸಮೇತವಾಗಿ ಆಗಮಿಸಲಿದ್ದಾರೆ. ಹಲ್ಲೆಗೆರೆಯ ಭೂತಾಯಿ ಟ್ರಸ್ಟ್ ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಜಾಗತಿಕ ಮಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ವಧರ್ಮ ಸಮನ್ವಯ ಕೇಂದ್ರವನ್ನು (ಮದರ್ ಅರ್ಥ್ ಆಧ್ಯಾತ್ಮಿಕ ಕೇಂದ್ರ) ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ, ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಲ್ಲೆಗೆರೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ,ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ಮಂಡ್ಯದ ಹಲ್ಲೆಗೆರೆಯ ಭೂತಾಯಿ ಟ್ರಸ್ಟ್ ನ ಅಧ್ಯಕ್ಷ, ಡಾ. ಲಕ್ಷ್ಮಿನರಸಿಂಹ ಮೂರ್ತಿ,ಸಚಿವ ಎನ್.ಚಲುವರಾಯಸ್ವಾಮಿ,ಶಾಸಕರಾದ ದಿನೇಶ್ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ ನೇತೃತ್ವದ ನಿಯೋಗವು ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆಸಿ ನಿಯೋಗವು ಮನವಿ ಮಾಡಿತು.

Continue Reading

ದೇಶ

Heavy Rain Alert: ಮುಂಬೈ, ಥಾಣೆ, ರೈಗಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ರೆಡ್ ಅಲರ್ಟ್

Published

on

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ಮುಂಬೈ, ಥಾಣೆ ಮತ್ತು ರೈಗಡ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಮುಂದಿನ ಕೆಲ ಗಂಟೆಗಳಲ್ಲಿ ಭಾರೀದಿಂದ ಅತಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಗಂಟೆಗೆ 70ರಿಂದ 80 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಪರಿಸ್ಥಿತಿಯಲ್ಲಿ ಉಂಟಾದ ಬದಲಾವಣೆಯ ಹಿನ್ನೆಲೆಯಲ್ಲಿ ಮೊದಲು ನೀಡಿದ್ದ ಆರೆಂಜ್ ಅಲರ್ಟ್ ಅನ್ನು ರೆಡ್ ಅಲರ್ಟ್‌ಗೆ ಪರಿವರ್ತಿಸಲಾಗಿದೆ. ಇದೇ ವೇಳೆ ಪಾಲ್ಘರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಮುಂದುವರಿಸಲಾಗಿದೆ.

IMD ಎಚ್ಚರಿಕೆ ಪ್ರಕಾರ, ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಇದೆ. ನಗರ ಪ್ರದೇಶಗಳಲ್ಲಿ ನೀರು ನಿಲ್ಲುವುದು, ಕೆಲವೆಡೆ ಹಠಾತ್ ಪ್ರವಾಹ, ನದಿಗಳ ನೀರಿನ ಮಟ್ಟ ಏರಿಕೆ, ಭೂಕುಸಿತ ಹಾಗೂ ಬಂಡೆ ಕುಸಿತದಂತಹ ಘಟನೆಗಳು ಸಂಭವಿಸಬಹುದು ಎಂದು ತಿಳಿಸಲಾಗಿದೆ. ರಸ್ತೆ, ರೈಲು, ವಿಮಾನ ಮತ್ತು ದೋಣಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯೂ ಇದೆ.

ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಕೂಡ ಸಾರ್ವಜನಿಕರಿಗೆ ಅನಗತ್ಯವಾಗಿ ಹೊರಗೆ ತೆರಳದಂತೆ ಮನವಿ ಮಾಡಿದೆ. ಮರಗಳು, ಹಳೆಯ ಕಟ್ಟಡಗಳು, ವಿದ್ಯುತ್ ಕಂಬಗಳು ಹಾಗೂ ಜಾಹೀರಾತು ಫಲಕಗಳ ಸಮೀಪ ನಿಲ್ಲದಂತೆ ಸೂಚಿಸಿದೆ. ಕಡಲತೀರ, ಜಲಾವೃತ ಪ್ರದೇಶಗಳು ಹಾಗೂ ಅಪಾಯಕಾರಿ ಸ್ಥಳಗಳಿಂದ ದೂರವಿರುವಂತೆ ಎಚ್ಚರಿಕೆ ನೀಡಲಾಗಿದೆ.

ನಗರದಾದ್ಯಂತ 15,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ತುರ್ತು ಪರಿಸ್ಥಿತಿ ನಿರ್ವಹಣೆಗೆ ನಿಯೋಜಿಸಲಾಗಿದ್ದು, ಪರಿಸ್ಥಿತಿಯನ್ನು ಹಿರಿಯ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ತುರ್ತು ಪರಿಸ್ಥಿತಿಯಲ್ಲಿ BMC ಸಹಾಯವಾಣಿ 1916ಗೆ ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

Continue Reading

ದೇಶ

ಆರು ತಿಂಗಳ ಬಳಿಕ ಕೆಆರ್‌ಎಸ್‌ ಜಲಾಶಯಕ್ಕೆ ಜೀವಕಳೆ! ಒಳಹರಿವು ಏರಿಕೆಯಿಂದ ಮಂಡ್ಯ ಜನರಲ್ಲಿ ಸಂತಸ

Published

on

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಎಂದೇ ಕರೆಯಲ್ಪಡುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಬರೊಬ್ಬರಿ ಆರು ತಿಂಗಳ ಸುದೀರ್ಘ ಕಾಯುವಿಕೆಯ ನಂತರ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಈ ಸುದ್ದಿ ರೈತರು ಮತ್ತು ಜಿಲ್ಲೆಯ ಜನರಲ್ಲಿ ಹೊಸ ಆಶಾಭಾವ ಮೂಡಿಸಿದೆ.

ಒಳಹರಿವಿನಲ್ಲಿ ಗಮನಾರ್ಹ ಏರಿಕೆ

ನಿನ್ನೆ ಕೇವಲ 1,449 ಕ್ಯೂಸೆಕ್‌ ಇದ್ದ ಒಳಹರಿವಿನ ಪ್ರಮಾಣ ಇಂದು 4,291 ಕ್ಯೂಸೆಕ್‌ಗೆ ಜಿಗಿದಿದೆ. ಕಾವೇರಿ ಜಲಾನಯನ ಪ್ರದೇಶದ ಕೆಲವೆಡೆ ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಈ ಏರಿಕೆ ಕಂಡುಬಂದಿದ್ದು, ಜಲಾಶಯಕ್ಕೆ ಮತ್ತೆ ಜೀವಕಳೆ ಬಂದಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದಿನ ಜಲಾಶಯ ಮಟ್ಟ – ಸಂಪೂರ್ಣ ಮಾಹಿತಿ

124.80 ಅಡಿ ಗರಿಷ್ಠ ಮಟ್ಟದ ಸಾಮರ್ಥ್ಯದ ಈ ಜಲಾಶಯದಲ್ಲಿ ಸದ್ಯ 80.90 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದಿಂದ ಪ್ರಸ್ತುತ 764 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಕೆಆರ್‌ಎಸ್‌ ಜಲಾಶಯದ ಇಂದಿನ ಸ್ಥಿತಿಗತಿ:

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ನೀರಿನ ಮಟ್ಟ: 80.90 ಅಡಿ
  • ಒಳಹರಿವು: 4,291 ಕ್ಯೂಸೆಕ್
  • ಹೊರಹರಿವು: 764 ಕ್ಯೂಸೆಕ್
  • ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 11.487 ಟಿಎಂಸಿ

ರೈತರಿಗೆ ನಿರೀಕ್ಷೆಯ ಬೆಳಕು

ಕಳೆದ ಆರು ತಿಂಗಳಿನಿಂದ ಒಳಹರಿವಿನ ಕೊರತೆಯಿಂದ ಆತಂಕದಲ್ಲಿದ್ದ ಮಂಡ್ಯ ಭಾಗದ ರೈತರಿಗೆ ಈ ಬೆಳವಣಿಗೆ ನಿರೀಕ್ಷೆಯ ಬೆಳಕು ಮೂಡಿಸಿದೆ. ಮುಂಗಾರು ಮಳೆ ಮುಂದುವರಿದಲ್ಲಿ ಒಳಹರಿವಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

Continue Reading

ದೇಶ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಮುಚ್ಚಳ: ಪುಣೆಗೆ ರೆಡ್ ಅಲರ್ಟ್ ಘೋಷಣೆ

Published

on

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಮಳೆಯಿಂದ ಮುಂಬೈ (Mumbai) ಮತ್ತು ಪುಣೆ (Pune) ನಡುವಿನ ರಸ್ತೆ ಹಾಗೂ ರೈಲು ಸಂಪರ್ಕ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮುಂಜಾನೆ ಕರ್ಜತ್-ಲೋನಾವಾಲಾ (Karjat-Lonavala) ನಡುವಿನ ಬೋರ್ ಘಾಟ್ (Bhor Ghat) ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ.

ಖಂಡಾಲಾ (Khandala) ಮತ್ತು ಮಂಕಿ ಹಿಲ್ (Monkey Hill) ನಡುವಿನ ರೈಲ್ವೆ ಹಳಿಗಳ ಮೇಲೆ ಬೃಹತ್ ಬಂಡೆಗಳು ಕುಸಿದು ಬಿದ್ದ ಪರಿಣಾಮ ಮೂರೂ ಪ್ರಮುಖ ರೈಲು ಮಾರ್ಗಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇದರ ಪರಿಣಾಮವಾಗಿ ಡೆಕ್ಕನ್ ಕ್ವೀನ್ (Deccan Queen), ಸಿಂಹಗಡ ಎಕ್ಸ್‌ಪ್ರೆಸ್ (Sinhagad Express) ಸೇರಿದಂತೆ 16ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಸಾವಿರಾರು ಪ್ರಯಾಣಿಕರು ವಿವಿಧ ರೈಲು ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದಾರೆ.

ಇದೇ ವೇಳೆ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಹೊಸ ಸುರಂಗ ಮಾರ್ಗದ ಸಮೀಪವೂ ಮಣ್ಣು ಕುಸಿದಿರುವ ಹಿನ್ನೆಲೆಯಲ್ಲಿ ಹೆದ್ದಾರಿಯನ್ನು ಮುಚ್ಚಲಾಗಿದೆ. ಹಳೆಯ ರಾಷ್ಟ್ರೀಯ ಹೆದ್ದಾರಿಯಲ್ಲೂ ಮಳೆ ನೀರು ತುಂಬಿಕೊಂಡಿದ್ದು, ವಾಹನಗಳು ಹಲವು ಗಂಟೆಗಳ ಕಾಲ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡಿವೆ. ಹಲವೆಡೆ ಕಿಲೋಮೀಟರ್‌ಗಟ್ಟಲೆ ವಾಹನಗಳ ಸಾಲು ಕಂಡುಬಂದಿದೆ.

ಹವಾಮಾನ ಇಲಾಖೆ ಮುಂದಿನ ಕೆಲವು ಗಂಟೆಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಪುಣೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಪರಿಸ್ಥಿತಿ ಸುಧಾರಿಸುವವರೆಗೆ ಸಾರ್ವಜನಿಕರು ಅನಗತ್ಯವಾಗಿ ಮುಂಬೈ-ಪುಣೆ ನಡುವೆ ಪ್ರಯಾಣ ಮಾಡಬಾರದು ಎಂದು ಪೊಲೀಸರು ಹಾಗೂ ಆಡಳಿತ ಎಚ್ಚರಿಕೆ ನೀಡಿದ್ದಾರೆ. ರಕ್ಷಣಾ ಸಿಬ್ಬಂದಿ ಭೂಕುಸಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ.

Continue Reading

Trending