Connect with us

ರಾಜಕೀಯ

ನೀನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ: ಸಂಸದ ಸುಧಾಕರ್ʼಗೆ ಪ್ರದೀಪ್ ಈಶ್ವರ್ ಟಾಂಗ್

Published

on

ಚಿಕ್ಕಬಳ್ಳಾಪುರ: ನೀನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ ಎಂದು ಸಂಸದ ಸುಧಾಕರ್’ಗೆ ಶಾಸಕ ಪ್ರದೀಪ್ ಈಶ್ವರ್’ಗೆ ಸವಾಲು ಹಾಕಿದ್ದಾರೆ.

ನಗರಸಭೆ ಚುನಾವೆಣೆ ಬಳಿಕ ಮಾತನಾಡಿದ ಅವರು, ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಸುಧಾಕರ್‌ನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ದರೆ ಬಚಾವ್ ಆಗು ನೋಡೋಣ ಎಂದು ಏಕವಚನದಲ್ಲೇ ಸವಾಲು ಹಾಕಿದರು.

ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ 7-8 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸಂಸದರು ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ. ನನ್ನ ಒಂದು ಕೂದಲನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಯಲ್ಲಿ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ. ನಿನ್ನ ಅಖಾಡದಲ್ಲಿ ಬಂದು ನಾನು ನಿನ್ನನ್ನು ಹೊಡಿದಿದ್ದೇನೆ. ನಾನು ಒಬ್ಬ ಗಂಡಸು. ಮುಂದಿನ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ ಎಂದು ಹೇಳಿದರು.

ಶಾಸಕ ಪ್ರದೀಪ್ ಈಶ್ವರ್, ಸಂಸದ ಡಾ ಕೆ.ಸುಧಾಕರ್ ಮಧ್ಯೆ ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮತದಾನ ನಡೆದಿದ್ದು, ನ್ಯಾಯಾಲಯದ ನಿರ್ದೇಶನದ ಮೇರೆಗೆ ಫಲಿತಾಂಶ ಕಾಯ್ದಿರಿಸಲಾಗಿದೆ. ಆದರೂ ಚುನಾವಣೆಯಲ್ಲಿ ಜಯಗಳಿಸಿದ್ದೇವೆ ಎಂದು ಬಿಜೆಪಿಯವರು ವಿಜಯೋತ್ಸವ ಆಚರಿಸಿದ್ದಾರೆ.

ಒಟ್ಟು 31 ಸದಸ್ಯ ಬಲದ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ 9 ಸದಸ್ಯರು, 3 ಮಂದಿ ಪಕ್ಷೇತರರು, 6 ಜನ ಕಾಂಗ್ರೆಸ್ಸಿಗರು, ಸಂಸದರ ಮತ ಸೇರಿ ಬಿಜೆಪಿಗೆ ಒಟ್ಟು 19 ಮತಗಳು ಬಂದಿವೆ.

ಇನ್ನು ಕಾಂಗ್ರೆಸ್‌ 10 ಸದಸ್ಯರು, ಶಾಸಕ, ಎಂಎಲ್ಸಿ ಸೇರಿ 3, ಒಬ್ಬ ಪಕ್ಷೇತರ, ಇಬ್ಬರು ಜೆಡಿಎಸ್‌ ಸದಸ್ಯರ ಬೆಂಬಲದೊಂದಿಗೆ ಒಟ್ಟು 16 ಮತಗಳನ್ನು ಪಡೆದಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗುತ್ತಿದೆ.

ಶಾಸಕ ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್ ಹಾಗೂ ಎಂ.ಆರ್.ಸೀತಾರಾಂ ಮತದಾನ ಮಾಡಿದರು. ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್ ಹಾಗೂ ಎಂ.ಆರ್.ಸೀತಾರಾಂ ಮತದಾನ ಮಾಡಲು ಅರ್ಹರಲ್ಲ ಎಂದು ಡಾ.ಕೆ.ಸುಧಾಕರ್ ಬೆಂಬಲಿಗ ಹಾಗೂ ಮಾಜಿ ನಗರಸಭಾ ಸದಸ್ಯ ಆನಂದಬಾಬುರೆಡ್ಡಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ಕಾರಣ ಮತದಾನಕ್ಕೆ ಅವಕಾಶ ನೀಡಿ, ಚುನಾವಣೆ ನಡೆಸಲು ಕೋರ್ಟ್ ಸೂಚನೆ ನೀಡಿದ್ದರೂ ಫಲಿತಾಂಶ ರಿಟ್ ಅರ್ಜಿಯ ಫಲಿತಾಂಶಕ್ಕೆ ಒಳಪಟ್ಟಿರುವುದಾಗಿ ಆದೇಶಿಸಿತ್ತು. ಹಾಗಾಗಿ ಚುನಾವಣೆ ನಡೆದರೂ ಅಧಿಕೃತವಾಗಿ ಚುನಾವಣಾಧಿಕಾರಿ ಫಲಿತಾಂಶ ಪ್ರಕಟಗೊಂಡಿಲ್ಲ.

ಈ ನಡುವೆ ಚುನಾವಣೆ ಬಳಿಕ ಮಾತನಾಡಿದ ಸುಧಾಕರ್ ಅವರು, ನಮ್ಮ ಸದಸ್ಯರನ್ನು ಕಾಂಗ್ರೆಸ್‌ನವರು ಹೈಜಾಕ್ ಮಾಡಲು ಬಹಳಷ್ಟು ಪ್ರಯತ್ನ ಮಾಡಿದರು. ಶಾಸಕ ಪ್ರದೀಪ್ ಈಶ್ವರ್ ಉಡಾಫೆ ಮಾತುಗಳು, ದ್ವೇಷದ ರಾಜಕಾರಣ ಹೂಮಾಲೆಯಾಗಿ ನನ್ನ ಕೊರಳಿಗೆ ಬೀಳುತ್ತಿವೆ. ಇವರ ಡ್ಯಾನ್ಸ್ ಹೀಗೆ ಮುಂದುವರೆಯಲಿ. ಇನ್ನೂ ಮೂರು ವರ್ಷ ಹೀಗೆ ಮಾಡಿ. ಆಮೇಲೆ ಈ ರಾಜ್ಯ ದೇಶದಲ್ಲಿ ಎಲ್ಲೂ ಅವಕಾಶ ಇರಲ್ಲ. ಪ್ಲೀಸ್ ನೋಟ್ ಮೈ ಪಾಯಿಂಟ್ ಎಂದು ಹೇಳಿದ್ದರು.

ದೇಶ

“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್‌ ಟಾಂಗ್‌, ದಾವಣಗೆರೆ ರಾಜಕೀಯ ಕುತೂಹಲ

Published

on

By

ದಾವಣಗೆರೆ ದಕ್ಷಿಣ ಉಪಚುನಾವಣೆ ರಾಜಕೀಯ ಕಣ ದಿನೇದಿನೇ ರಂಗೇರುತ್ತಿದ್ದು, ಸಚಿವ ಜಮೀರ್‌ ಅಹ್ಮದ್‌ ಖಾನ್ ಅವರ ಆಗಮನದಿಂದ ಹೊಸ ತಿರುವು ಪಡೆದುಕೊಂಡಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಅವರು ಕೊನೆಗೂ ದಾವಣಗೆರೆಗೆ ಭೇಟಿ ನೀಡಿ ಪ್ರಚಾರ ಆರಂಭಿಸಿದ್ದಾರೆ.

ಟಿಕೆಟ್‌ ಹಂಚಿಕೆ ವೇಳೆ ಉಂಟಾದ ಗಲಾಟೆ ಸಂದರ್ಭದಲ್ಲಿ ಎಸ್‌ಎಸ್‌ ಮಲ್ಲಿಕಾರ್ಜುನ್ ಅವರು “ಯಾರ್ರಿ ಜಮೀರ್‌ ದಾವಣಗೆರೆ ಬಗ್ಗೆ ಮಾತನಾಡಲು” ಎಂದು ಹೇಳಿದ್ದರಿಂದ ವಿವಾದ ಸೃಷ್ಟಿಯಾಗಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಜಮೀರ್‌ ಅಸಮಾಧಾನಗೊಂಡಿದ್ದರು.

ಆದರೆ ಇದೀಗ ರಾಜಕೀಯ ವಾತಾವರಣ ಬದಲಾಗಿದ್ದು, ಜಮೀರ್‌ ಅವರನ್ನು ಸ್ವತಃ ಮಲ್ಲಿಕಾರ್ಜುನ್‌ ಅವರು ಸ್ವಾಗತಿಸಿ ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌, “ನಾವಿಬ್ಬರೂ ಸ್ನೇಹಿತರು. ಯಾವುದೇ ಬೇಸರ ಇಲ್ಲ. ಸಿಟ್ಟಿನಲ್ಲಿ ಹೇಳಿದ ಮಾತು ಅಷ್ಟೇ,” ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಅವರು ಪರೋಕ್ಷವಾಗಿ ಟಾಂಗ್ ಕೊಡುತ್ತಾ, “ನನ್ನ ಕ್ಷೇತ್ರ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನು ಸುಮ್ಮನೆ ಇರ್ತಿನಾ?” ಎಂದು ಪ್ರತಿಕ್ರಿಯೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್‌, “ಈಗ ಎಲ್ಲವೂ ಬಗೆಹರಿದಿದೆ. ನಾವು ಬಹಳ ವರ್ಷಗಳಿಂದ ಸ್ನೇಹಿತರು,” ಎಂದು ಹೇಳಿದರು.

ಈ ಬೆಳವಣಿಗೆ ದಾವಣಗೆರೆ ರಾಜಕೀಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್‌ ಬಲ ಹೆಚ್ಚಿದಂತೆ ಕಾಣುತ್ತಿದೆ.

Continue Reading

ದೇಶ

ಜಮೀರ್ ಅಹ್ಮದ್‌ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರಿಯ ನಾಯಕನಾಗಿ ಹೊರಹೊಮ್ಮುತ್ತಿರುವ ವಸತಿ ಸಚಿವ Zameer Ahmed Khan ಅವರಿಗೆ ಎಐಸಿಸಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರ ಪ್ರಭಾವವನ್ನು ಗಮನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಈ ನಿರ್ಧಾರ ಕೈಗೊಂಡಿದ್ದಾರೆ.

ಪ್ರಸ್ತುತ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಜಮೀರ್ ಅಹ್ಮದ್, ರಾಜ್ಯದ ಉಪಚುನಾವಣೆಗಳ ಪ್ರಚಾರಕ್ಕೆ ಬರಲು ಸಾಧ್ಯವಾಗದೇ ಬ್ಯುಸಿಯಾಗಿದ್ದಾರೆ. ಕೇರಳದ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಲ್ಲಿಯೇ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾಗವಹಿಸಲು ಜಮೀರ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಕೇರಳದ ಪ್ರಚಾರ ಕಾರ್ಯದಿಂದ ಬಿಡುವಿಲ್ಲ ಎಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ Siddaramaiah ಸೂಚನೆ ಇದ್ದರೂ, ಎಐಸಿಸಿ ನಾಯಕತ್ವದಿಂದಲೇ ತಡೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದಕ್ಕೂ ನಡುವೆ, ಎಐಸಿಸಿ ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನ ಸದಸ್ಯರಾಗಿ ಜಮೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವಿಗೆ ಕೇರಳದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ನಾಯಕತ್ವದ ಮಟ್ಟದಲ್ಲೂ ಬದಲಾವಣೆ ಸಾಧ್ಯತೆಗಳಿವೆ ಎಂಬ ಚರ್ಚೆ ನಡೆಯುತ್ತಿದೆ.

ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಈ ನೇಮಕಾತಿ ನಡೆದಿದ್ದು, ಜಮೀರ್ ಅವರ ಜನಪ್ರಿಯತೆ ದಿನೇದಿನೇ ಏರುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದಲ್ಲೂ ಉಪಚುನಾವಣೆಗಳ ನಡುವೆ ಅವರ ಗೈರುಹಾಜರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಸೋಮಣ್ಣ ವಿರುದ್ಧ ಸಿಎಂ ಸಿಡಿತ: “ಕೆಲಸವಿಲ್ಲದ ಮಂತ್ರಿ!”

Published

on

By

ಬಾಗಲಕೋಟೆ: ಬಿಜೆಪಿ ನಾಯಕ V. Somanna ವಿರುದ್ಧ ಮುಖ್ಯಮಂತ್ರಿ Siddaramaiah ತೀವ್ರ ವಾಗ್ದಾಳಿ ನಡೆಸಿದ್ದು, “ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ, ಅವರಿಗೆ ಯಾವುದೇ ಕಡತ ಹೋಗುವುದಿಲ್ಲ” ಎಂದು ಟೀಕಿಸಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ನಾವು ಸೋಲುತ್ತೇವೆ ಎಂಬ ಭಯದಿಂದ ಬಿಜೆಪಿ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋಮಣ್ಣ ಅವರಿಗೆ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಮಯವಿಲ್ಲ” ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಸ್ಥಾನ ಕುರಿತು ಬಿಜೆಪಿ ನಾಯಕರು ಮಾತನಾಡುವುದಕ್ಕೆ ಯಾವುದೇ ಅರ್ಥವಿಲ್ಲ, ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ ಎಂದರು.

ಬಿಜೆಪಿಯ ಮೇಲೆ ವಾಗ್ದಾಳಿ ಮುಂದುವರೆಸಿದ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಾತಿನಲ್ಲಿ ಸತ್ಯವಿಲ್ಲ, ನಡೆದಲ್ಲಿ ನಂಬಿಕೆ ಇಲ್ಲ” ಎಂದು ಟೀಕಿಸಿದರು. ಜೊತೆಗೆ, ಪಕ್ಷದಿಂದ ಉಚ್ಛಾಟನೆಯಾದ Basanagouda Patil Yatnal ಅವರನ್ನು ಮತ್ತೆ ಪ್ರಚಾರಕ್ಕೆ ಕರೆತಂದು ಬಳಸಿಕೊಳ್ಳುತ್ತಿರುವುದು ಬಿಜೆಪಿ ದ್ವಂದ್ವ ನೀತಿಗೆ ಉದಾಹರಣೆ ಎಂದು ಹೇಳಿದರು.

ಇಂಧನ ಹಾಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಮಾತನಾಡಿದ ಅವರು, “ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇವಲ ವಿತರಣೆಯನ್ನು ಮಾಡುತ್ತದೆ” ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ Narendra Modi ಅವರ ಮನೆಗೆ ಮುತ್ತಿಗೆ ಹಾಕಬೇಕು ಎಂಬ ಹೇಳಿಕೆಯನ್ನೂ ನೀಡಿದರು.

ಇನ್ನೂ, ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, Rahul Gandhi, Sonia Gandhi, Mallikarjun Kharge ಮತ್ತು Priyanka Gandhi ಅವರೇ ಪಕ್ಷದ ಹೈಕಮಾಂಡ್ ಎಂದು ಹೇಳಿದರು.

ಒಟ್ಟಿನಲ್ಲಿ, ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.

Continue Reading

Trending