Connect with us

ದೇಶ

Breaking News ಆರ್‍ಎಸ್‍ಎಸ್ ಕಚೇರಿಗೆ ನುಗ್ಗಿದ ಪೊಲೀಸರು-ತಡರಾತ್ರಿ ಮಂಡ್ಯದಲ್ಲಿ ಮತ್ತೊಂದು ಕಿರಿಕ್!

Published

on

ಮಂಡ್ಯ: ಗಣೇಶೋತ್ಸವ ಮೆರವಣಿಗೆಯ ವೇಳೆ ಕಲ್ಲು ತೂರಾಟ ಹಾಗೂ ಪೆಟ್ರೋಲ್ ಬಾಂಬ್ ಸ್ಪೋಟದ ಘಟನೆ ಮಾಸುವ ಬೆನ್ನಲ್ಲೇ ಮಂಡ್ಯದಲ್ಲಿ ಭಾನುವಾರ ತಡರಾತ್ರಿ ಮತ್ತೊಂದು ವಿವಾದ ನಡೆದಿದೆ, ಪಾಂಡವಪುರದಲ್ಲಿರುವ ಆರ್‍ಎಸ್‍ಎಸ್ ಕಚೇರಿಗೆ ಏಕಾಏಕಿ ನುಗ್ಗಿದ ಪೊಲೀಸರು ಅಲ್ಲಿದ್ದವರನ್ನು ವಶಕ್ಕೆ ಪಡೆಯಲು ವಿಫಲ ಯತ್ನ ನಡೆಸಿದ್ದಾರೆ, ರೂಚ್ಚಿಗೆದ್ದ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ರಸ್ತೆ ತಡೆದು ಪ್ರತಿಭಟನೆಯನ್ನೂ ನಡೆಸಿದ್ದಾರೆ,
ಶರಣ್ ಪಂಪ್‍ವೆಲ್ ಮಂಡ್ಯಕ್ಕೆ ಬಂದಿದ್ದಾರೆಂಬ ಮಾಹಿತಿಯ ಮೇಲೆ ಪೊಲೀಸರು ಆರ್‍ಎಸ್‍ಎಸ್ ಕಚೇರಿಗೆ ತೆರಳಿದ್ದರು, ಆದರೆ ಪೊಲೀಸರಿಗೆ ಶರಣ್ ಪೆಂಪ್‍ವೆಲ್ ಅಥವಾ ಬೇರಾವುದೇ ವ್ಯಕ್ತಿಗಳ ಮುಖ ಪರಿಚಯ ಇರಲಿಲ್ಲ, ಹೀಗಾಗಿ ಅಲ್ಲಿದ್ದ ಕಾರ್ಯಕರ್ತರನ್ನೇ ಬಂಧಿಸಿ ಎಳೆದೊಯ್ಯಲು ಮುಂದಾದರು ಎಂದು ಆರೋಪಿಸಲಾಗಿದೆ, ಅದರೆ ಸುತ್ತಮುತ್ತಲಿದ್ದ ಜನರು ಒಗ್ಗೂಡಿ ಯಾವುದೇ ನೋಟಿಸ್ ಅಥವಾ ಎಫ್‍ಐಆರ್ ಇಲ್ಲದೇ ಹೀಗೆ ಎಳೆದೊಯ್ಯಲು ಸಾಧ್ಯವಿಲ್ಲ ಎಂದು ಪ್ರತಿಭಟಿಸಿ ಪೊಲೀಸರಿಗೆ ರಸ್ತೆ ತಡೆ ವಿಧಿಸಿದರು,
ಕೊನೆಗೆ ಅಲ್ಲಿದ್ದ 10-15 ಪೊಲೀಸರು 70 ಕ್ಕೂ ಹೆಚ್ಚು ಮಂದಿಯ ಆಕ್ರೋಶಕ್ಕೆ ಮಣಿದಿದ್ದಾರೆನ್ನಲಾಗಿದೆ, ಕೊನೆಗೆ ಜಿಲ್ಲಾ ಎಸ್‍ಪಿ ಮಲ್ಲಿಕಾರ್ಜುನ ಬಾಲದಂಡಿಯವರು ಸ್ಧಳಕ್ಕೆ ಬುವವರೆಗೂ ಪೊಲೀಸರು ಇಲ್ಲಿಂದ ಹೋಗಬಾರದು, ಕಚೇರಿಯ ಒಳಗೆ ಬೂಟುಗಾಲಿನಲ್ಲಿ ನುಗ್ಗಿದ ಎಲ್ಲಾ ಪೊಲೀಸರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದರು,
ಈ ವೇಳೆ ಪ್ರತಿಕ್ರಿಯಿಸಿದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿ ಮಾರ್ಕಡೇಯ, ಬಿಜೆಪಿ ಮುಖಂಡ ಮಂಜಣ್ಣ ವಿಎಚ್‍ಪಿಯ ಬಾಲು, ಪುನೀತ್, ಕೇಶವ ಮತ್ತಿತರರು ನಾವು ಬೈಟಕ್ ನಡೆಸುತ್ತಿರುವಾಗಿ ಪೊಲೀಸರು ಅಕ್ರಮವಾಗಿ ನಮ್ಮನ್ನು ಬಂಧಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ,
ತಡರಾತ್ರಿ 1.30 ಕ್ಕೆ ಮಲ್ಲಿಕಾರ್ಜುನ ಬಾಲದಂಡಿಯವರು ಸ್ಧಳಕ್ಕೆ ಧಾವಿಸಿ ಪರಿಸ್ಧಿತಿಯನ್ನು ತಿಳಿಗೊಳಿಸಿದ್ದಾರೆ,

ದೇಶ

ಬೆಂಗಳೂರು ಗ್ರಾಮಾಂತರದಲ್ಲಿ ರಸ್ತೆ ಕಾಮಗಾರಿ ಸ್ಥಗಿತ: ಡಾಂಬರು ದರ 40% ಏರಿಕೆ

Published

on

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧದ ಪರಿಣಾಮ ಇದೀಗ ಕರ್ನಾಟಕದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಮೇಲೂ ನೇರ ಪರಿಣಾಮ ಬೀರಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ (Bengaluru Rural) ಸುಮಾರು 98 ಕಿಲೋಮೀಟರ್ ರಸ್ತೆ ಕಾಮಗಾರಿಗಳು ಡಾಂಬರು (Bitumen) ಕೊರತೆ ಹಾಗೂ ಬೆಲೆ ಏರಿಕೆಯಿಂದ ಸ್ಥಗಿತಗೊಂಡಿವೆ.

ಲೋಕೋಪಯೋಗಿ ಇಲಾಖೆ ಮೂಲಗಳ ಪ್ರಕಾರ, ಮಧ್ಯಪ್ರಾಚ್ಯದಿಂದ ಭಾರತಕ್ಕೆ ಆಮದಾಗುವ ಬಿಟುಮೆನ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಸಾಗಣೆ ವೆಚ್ಚವೂ ಗಣನೀಯವಾಗಿ ಹೆಚ್ಚಿದೆ. ಕಚ್ಚಾ ತೈಲದ ಬೆಲೆ ಏರಿಕೆಯ ಪರಿಣಾಮ ಕಳೆದ ಎರಡು ತಿಂಗಳಲ್ಲಿ ಡಾಂಬರು ದರವು ಶೇ.35 ರಿಂದ 40ರಷ್ಟು ಏರಿಕೆಯಾಗಿದೆ. ಮೇ ತಿಂಗಳಲ್ಲಿ ಪ್ರತಿ ಮೆಟ್ರಿಕ್ ಟನ್‌ಗೆ ₹52 ಸಾವಿರ ಇದ್ದ VG-30 ದರ್ಜೆಯ ಡಾಂಬರು ಇದೀಗ ₹72 ಸಾವಿರ ದಾಟಿದ್ದರೆ, VG-40 ದರ ₹78 ಸಾವಿರಕ್ಕೆ ಏರಿಕೆಯಾಗಿದೆ.

ದರ ಏರಿಕೆಯಿಂದ ಈಗಾಗಲೇ ಟೆಂಡರ್ ಪಡೆದಿರುವ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿ ಕಿಲೋಮೀಟರ್ ರಸ್ತೆ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ₹8 ರಿಂದ ₹10 ಲಕ್ಷ ವೆಚ್ಚವಾಗುತ್ತಿದೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ. ಸರ್ಕಾರ ದರ ಪರಿಷ್ಕರಣೆ ಮಾಡಬೇಕು, ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಆಮದು ಸುಂಕ ಕಡಿಮೆ ಮಾಡಬೇಕು ಅಥವಾ ಸಬ್ಸಿಡಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಧ್ಯಪ್ರಾಚ್ಯದ ಪರಿಸ್ಥಿತಿ ಶೀಘ್ರ ಸುಧಾರಿಸದಿದ್ದರೆ, ಮುಂಗಾರು ಬಳಿಕವೂ ರಸ್ತೆ ಕಾಮಗಾರಿಗಳನ್ನು ಪುನರಾರಂಭಿಸುವುದು ಕಷ್ಟವಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಸಂಚಾರ ತೊಂದರೆ ಹೆಚ್ಚುವುದರ ಜೊತೆಗೆ ಸಾವಿರಾರು ಕಾರ್ಮಿಕರ ಉದ್ಯೋಗಕ್ಕೂ ಆತಂಕ ಎದುರಾಗಲಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ಗ್ರಾಮಾಂತರ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ರಂಜಿತ್ ಕುಮಾರ್, “ಡಾಂಬರು ಲಭ್ಯವಾಗದ ಕಾರಣ 98 ಕಿ.ಮೀ ರಸ್ತೆ ಕಾಮಗಾರಿ ಸ್ಥಗಿತಗೊಂಡಿದೆ. ಬೆಲೆ ಏರಿಕೆ ಹಾಗೂ ನಿರಂತರ ಮಳೆಯೂ ಕಾಮಗಾರಿಗೆ ಅಡ್ಡಿಯಾಗಿದೆ. ಗುತ್ತಿಗೆದಾರರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

Continue Reading

ದೇಶ

40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ನ್ಯೂಜಿಲ್ಯಾಂಡ್‌ಗೆ; FTA ಮೂಲಕ ಹೊಸ ಅಧ್ಯಾಯ

Published

on

ಆಕ್ಲೆಂಡ್: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ (Free Trade Agreement – FTA) ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧದಲ್ಲಿ ಐತಿಹಾಸಿಕ ಮೈಲಿಗಲ್ಲು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ. ಕಳೆದ 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು **ನ್ಯೂಜಿಲ್ಯಾಂಡ್ (New Zealand)**ಗೆ ಭೇಟಿ ನೀಡುತ್ತಿರುವುದು ವಿಶೇಷವಾಗಿದ್ದು, ಈ ಭೇಟಿ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ, ಆರ್ಥಿಕ ಹಾಗೂ ವ್ಯೂಹಾತ್ಮಕ ಸಹಕಾರಕ್ಕೆ ಹೊಸ ದಿಕ್ಕು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಆಕ್ಲೆಂಡ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅತ್ಯಂತ ಕಡಿಮೆ ಅವಧಿಯಲ್ಲಿ ಭಾರತ-ನ್ಯೂಜಿಲ್ಯಾಂಡ್ FTA ಯಶಸ್ವಿಯಾಗಿ ಪೂರ್ಣಗೊಳಿಸಿದ ನ್ಯೂಜಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ (Christopher Luxon) ಹಾಗೂ ಅವರ ಸರ್ಕಾರವನ್ನು ಅಭಿನಂದಿಸಿದರು. ಕಳೆದ ವರ್ಷ ಹೋಲಿ ಹಬ್ಬದ ವೇಳೆ ಲಕ್ಸನ್ ಭಾರತಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡ ಅವರು, ಅಂದೇ ಆರಂಭವಾದ ಮಾತುಕತೆಗಳು ಇಂದು ಐತಿಹಾಸಿಕ ಒಪ್ಪಂದದ ರೂಪ ಪಡೆದಿವೆ ಎಂದರು.

ಪ್ರಧಾನಿ ಮೋದಿ ಅವರ ಪ್ರಕಾರ, ಈ ಒಪ್ಪಂದವು ಕೇವಲ ವ್ಯಾಪಾರಕ್ಕೆ ಸೀಮಿತವಾಗಿಲ್ಲ. ಭಾರತ ಮತ್ತು ನ್ಯೂಜಿಲ್ಯಾಂಡ್ ಈಗ ವ್ಯೂಹಾತ್ಮಕ ಪಾಲುದಾರಿಕೆ (Strategic Partnership) ಮೂಲಕ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಕಡಲ ಭದ್ರತೆ, ಆರ್ಥಿಕ ಬೆಳವಣಿಗೆ ಹಾಗೂ ಜಾಗತಿಕ ಶಾಂತಿಗೆ ಒಟ್ಟಾಗಿ ಕಾರ್ಯನಿರ್ವಹಿಸಲಿವೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಂಚಿಕೊಂಡಿರುವ ಎರಡೂ ರಾಷ್ಟ್ರಗಳು ಸಹಜ ಪಾಲುದಾರರಾಗಿವೆ ಎಂದು ಅವರು ಹೇಳಿದರು.

FTA ಜಾರಿಯಾದ ಬಳಿಕ ಎರಡೂ ದೇಶಗಳ ಉದ್ಯಮಿಗಳು, ರೈತರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಮಹಿಳಾ ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ನುರಿತ ವೃತ್ತಿಪರರಿಗೆ ಹೊಸ ವ್ಯಾಪಾರ, ಹೂಡಿಕೆ ಮತ್ತು ಉದ್ಯೋಗ ಅವಕಾಶಗಳು ಸಿಗಲಿವೆ. ದ್ವಿಪಕ್ಷೀಯ ಆರ್ಥಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವಲ್ಲಿ ಈ ಒಪ್ಪಂದ ಮಹತ್ವದ ಪಾತ್ರ ವಹಿಸಲಿದೆ ಎಂಬ ವಿಶ್ವಾಸವನ್ನು ಎರಡೂ ದೇಶಗಳ ನಾಯಕರು ವ್ಯಕ್ತಪಡಿಸಿದ್ದಾರೆ.

Continue Reading

ದೇಶ

ಲೋಕಸಭೆ-ವಿಧಾನಸಭೆ ಚುನಾವಣೆ ಒಂದೇ ದಿನ? 2029 ಗುರಿಯಾಗಿಸಿಕೊಂಡ ಕೇಂದ್ರದ ಯೋಜನೆ

Published

on

ನವದೆಹಲಿ: ದೇಶದಲ್ಲಿ ಹಲವು ವರ್ಷಗಳಿಂದ ಚರ್ಚೆಯಾಗುತ್ತಿರುವ ‘ಒಂದು ದೇಶ-ಒಂದು ಚುನಾವಣೆ’ (One Nation One Election) ವ್ಯವಸ್ಥೆಯನ್ನು 2029ರ ಲೋಕಸಭೆ ಚುನಾವಣೆ (Lok Sabha Election 2029) ವೇಳೆಗೆ ಜಾರಿಗೆ ತರಲು ಜಂಟಿ ಸಂಸದೀಯ ಸಮಿತಿ (JPC) ಕಾರ್ಯಚಟುವಟಿಕೆಗಳನ್ನು ವೇಗಗೊಳಿಸಿದೆ. ಈ ಕುರಿತು ಜೆಪಿಸಿ ಅಧ್ಯಕ್ಷ ಪಿ.ಪಿ. ಚೌಧರಿ ಮಾಹಿತಿ ನೀಡಿದ್ದು, ಎಲ್ಲಾ ರಾಜ್ಯಗಳು ಹಾಗೂ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ ಸರ್ವಾನುಮತದ ಕಾರ್ಯವಿಧಾನ ರೂಪಿಸಲು ಸಮಿತಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ಗೋವಾದಲ್ಲಿ ನಡೆದ ಸಮಾಲೋಚನಾ ಸಭೆಯ ಬಳಿಕ ಮಾತನಾಡಿದ ಅವರು, ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಒಂದೇ ವೇಳೆ ನಡೆಸುವ ಸಾಧ್ಯತೆಗಳ ಬಗ್ಗೆ ತಜ್ಞರು, ನಾಗರಿಕ ಸಮಾಜ ಹಾಗೂ ವಿವಿಧ ವಲಯಗಳ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದರು. ಸಮಿತಿಯ ಪ್ರಾಥಮಿಕ ಸಮಾಲೋಚನೆಗಳಲ್ಲಿ ಭಾಗವಹಿಸಿದ ಸುಮಾರು 99 ಪ್ರತಿಶತ ನಾಗರಿಕರು ಈ ಪ್ರಸ್ತಾಪಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ದೆಹಲಿ ಹಾಗೂ ಗೋವಾ ಸೇರಿದಂತೆ ಹಲವು ರಾಜ್ಯಗಳಿಗೆ ಜೆಪಿಸಿ ಭೇಟಿ ನೀಡಿ ಸಂವಿಧಾನ ತಜ್ಞರು, ಶಿಕ್ಷಣ ತಜ್ಞರು ಮತ್ತು ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದೆ. ರಾಜ್ಯ ವಿಧಾನಸಭೆಗಳ ಅವಧಿಯನ್ನು ಲೋಕಸಭೆ ಚುನಾವಣೆಯೊಂದಿಗೆ ಹೊಂದಾಣಿಕೆ ಮಾಡುವ ಕುರಿತು ಅಭಿಪ್ರಾಯ ಸಂಗ್ರಹ ನಡೆಯುತ್ತಿದೆ.

ಜೆಪಿಸಿ ಪ್ರಕಾರ, ಒಂದು ದೇಶ-ಒಂದು ಚುನಾವಣೆ ಜಾರಿಯಾದರೆ ಪದೇಪದೇ ಜಾರಿಯಾಗುವ ಮಾದರಿ ನೀತಿ ಸಂಹಿತೆ (Model Code of Conduct) ಸಮಸ್ಯೆ ಕಡಿಮೆಯಾಗಲಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗಲಿದೆ. ಜೊತೆಗೆ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಪ್ರಮಾಣ ಕಡಿಮೆಯಾಗುವುದರಿಂದ ಶಿಕ್ಷಣ ಕ್ಷೇತ್ರಕ್ಕೂ ಅನುಕೂಲವಾಗಲಿದೆ. ಪ್ರತ್ಯೇಕ ಚುನಾವಣೆಗಳಿಗೆ ಆಗುವ ಸಾವಿರಾರು ಕೋಟಿ ರೂಪಾಯಿ ವೆಚ್ಚವನ್ನು ಉಳಿತಾಯ ಮಾಡಿ ಮೂಲಸೌಕರ್ಯ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಬಳಸುವ ಅವಕಾಶ ಸಿಗಲಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

Continue Reading

Trending