Connect with us

ರಾಜಕೀಯ

ಮುಸ್ಲಿಂ ಯುವಕರ ಬೈಕ್‌ ರ‍್ಯಾಲಿಗೆ ಅನುಮತಿ – ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ

Published

on

ಮಂಗಳೂರು: ಈದ್ ಮಿಲಾದ್ (Eid Milad) ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ (Bike Rally) ಪೊಲೀಸರು ಅನುಮತಿ ನೀಡಿದ ಬಳಿಕ ಬಂಟ್ವಾಳ (Bantwal) ತಾಲೂಕಿನ ಬಿ.ಸಿ ರೋಡ್‌ನಲ್ಲಿ (B C Road) ಮತ್ತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿತ್ತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪೊಲೀಸರು ಈದ್ ಮಿಲಾದ್ ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿ ಅನುಮತಿ ನೀಡಿದ್ದರು. ಈ ವೇಳೆ ಬೈಕ್ ರ‍್ಯಾಲಿ ಮಾಡುತ್ತಾ ಯುವಕರು ಹಸಿರು ಧ್ವಜವನ್ನು ಹಾರಿಸಿದರು. ಇದನ್ನು ಕಂಡ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರ‍್ಯಾಲಿ ವಿರೋಧಿಸಿ ಬಜರಂಗದಳ ಹಾಗೂ ವಿಹೆಚ್‌ಪಿ ಹಿಂದೂ ಸಂಘಟನೆಗಳು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಅಲ್ಲದೇ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಬಳಿಕ ಎಚ್ಚೆತ್ತ ಪೊಲೀಸರು ಮುಸ್ಲಿಂ ಯುವಕರಿಂದ ಹಸಿರು ಧ್ವಜ ಹಾಗೂ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಏನಿದರ ಹಿನ್ನೆಲೆ?
ಬಜರಂಗದಳ (Bajarangadala) ಹಾಗೂ ವಿಹೆಚ್‌ಪಿಯಿಂದ (VHP) ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು

ಪೊಲೀಸರು ಬಿಗಿ ಬಂದೋಬಸ್ತ್‌ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಮುಸ್ಲಿಂ ಯುವಕರ ಬೈಕ್ ರ‍್ಯಾಲಿಗೆ ಅನುಮತಿ ನೀಡಿದ್ದು, ಬೈಕ್ ರ‍್ಯಾಲಿ ವೇಳೆ ಮುಸ್ಲಿಂ ಯುವಕರು ಹಸಿರು ಬಾವುಟ ಹಾರಿಸಿರುವುದು ತ್ರೀವ ಆಕ್ರೋಶ ಉಂಟಾಗಿದೆ. ಮತ್ತೆ ಉದ್ವಿಗ್ನ ಪರಿಸ್ಥಿತಿ ತಲುಪಿದೆ.

ದೇಶ

ಕಾಂಗ್ರೆಸ್‌ನಲ್ಲಿ ಭೂಕಂಪ: ನಜೀರ್ ಅಹ್ಮದ್‌ಗೆ ಸುರ್ಜೇವಾಲಾ ಅಲ್ಟಿಮೇಟಂ

Published

on

By

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಳಅಸಮಾಧಾನ ತೀವ್ರಗೊಂಡಿರುವ ನಡುವೆಯೇ, ರಾಜ್ಯ ಉಸ್ತುವಾರಿ Randeep Singh Surjewala ಅವರು ಸಿಎಂ ರಾಜಕೀಯ ಕಾರ್ಯದರ್ಶಿ Naseer Ahmed ಅವರಿಗೆ ಕಠಿಣ ಡೆಡ್‌ಲೈನ್ ನೀಡಿದ್ದಾರೆ.

ಇಂದು (ಏಪ್ರಿಲ್ 13) ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿರುವ ಸುರ್ಜೇವಾಲಾ, ಸಮಯಕ್ಕೆ ರಾಜೀನಾಮೆ ನೀಡದಿದ್ದರೆ ಅವರನ್ನು ಸ್ಥಾನದಿಂದ ವಜಾಗೊಳಿಸಲು ಮುಖ್ಯಮಂತ್ರಿ Siddaramaiah ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, “ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಕೊಡಬಹುದು. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಕೆಲವು ನಾಯಕರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ನಸೀರ್ ಅಹ್ಮದ್ ಅವರು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆಂದು ಸಿಎಂ ಹೇಳಿದ್ದಾರೆ.

ಇದಕ್ಕೂ ಮೊದಲು ಸುರ್ಜೇವಾಲಾ ಅವರು ಸಚಿವ Zameer Ahmed Khan, Abdul Jabbar ಹಾಗೂ ನಸೀರ್ ಅಹ್ಮದ್ ವಿರುದ್ಧ ವರದಿ ಸಲ್ಲಿಸಿದ್ದರು. ಈಗಾಗಲೇ ಅಬ್ದುಲ್ ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದನ್ನು D. K. Shivakumar ಅಂಗೀಕರಿಸಿದ್ದಾರೆ.

ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Continue Reading

ದೇಶ

ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

Published

on

By

ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ G. Parameshwara ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅದೇನು ಗ್ಯಾಂಬ್ಲಿಂಗ್ ಅಲ್ಲ, ಶಾಸಕರು ತಮ್ಮ ಅರ್ಹತೆಯ ಆಧಾರದಲ್ಲಿ ಕೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕೇಳುವುದು ಸಹಜ. ಆದರೆ ಅಂತಿಮ ನಿರ್ಧಾರ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಕೈಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಪಕ್ಷ ಪುನಾರಚನೆ ಕುರಿತು ಮಾತನಾಡಿದ ಪರಮೇಶ್ವರ್, “ನಾಯಕತ್ವ ವಿಚಾರವಾಗಲಿ, ಸಚಿವ ಸಂಪುಟ ಪುನಾರಚನೆ ಆಗಲಿ, ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈಗ ಪುನಾರಚನೆ ಚರ್ಚೆ ನಡೆಯುತ್ತಿದೆ. ಅಧ್ಯಕ್ಷ ಸ್ಥಾನ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇವೆ” ಎಂದು ಹೇಳಿದರು.

ಇನ್ನೂ ದಾವಣಗೆರೆ ಕ್ಷೇತ್ರದಲ್ಲಿ Abdul Jabbar ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಅವರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿದರು. D. K. Shivakumar ಹೊಸ ಸಮಿತಿ ರಚನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪುನಾರಚನೆ ನಡೆದರೆ ಹಿರಿಯರು ಸ್ಥಾನ ಬಿಟ್ಟುಕೊಡಬೇಕಾದರೆ ನಾವು ಒಪ್ಪಲೇಬೇಕು. ಹೈಕಮಾಂಡ್ ತೀರ್ಮಾನಕ್ಕೆ ಯಾರೂ ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Continue Reading

ದೇಶ

ಡಿಕೆ ಶಿವಕುಮಾರ್ ದೊಡ್ಡ ನಿರ್ಧಾರ: ಸಮಿತಿ ಡಿಸ್ಮಿಸ್!

Published

on

By

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿದ್ದ Abdul Jabbar ಅವರ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ D. K. Shivakumar ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ಜಬ್ಬಾರ್ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದಲೇ ವಿಸರ್ಜಿಸಲಾಗಿದೆ ಎಂದು ಶಿವಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೊಸ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ತೀವ್ರಗೊಂಡಿದೆ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಚುನಾವಣೆಯ ನಂತರವೂ ಮುಂದುವರಿದಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಬಂಡಾಯ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಘಟಕದ ಮೇಲೂ ಪರಿಣಾಮ ಬೀರಿದೆ.

ಶನಿವಾರವೇ ಅಬ್ದುಲ್ ಜಬ್ಬಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶ ಇನ್ನಷ್ಟೇ ಬಾಕಿ ಇದ್ದರೂ, ಕಾಂಗ್ರೆಸ್‌ನಲ್ಲಿ ಉಂಟಾದ ಒಳಜಗಳ ಪಕ್ಷಕ್ಕೆ ತಲೆನೋವಾಗುವ ಸಾಧ್ಯತೆ ಇದೆ. ಹೊಸ ಸಮಿತಿಯ ರಚನೆ ಮೂಲಕ ಅಸಮಾಧಾನ ಶಮನಗೊಳಿಸಲು ನಾಯಕತ್ವ ಮುಂದಾಗಿದೆ.

Continue Reading

Trending