Connect with us

ಬೆಂಗಳೂರು

ಕಾಂಗ್ರೆಸ್ ಒಕ್ಕಲಿಗ ಸಚಿವರು, ಶಾಸಕರ ನಿಯೋಗದಿಂದ ಸಿಎಂ ಭೇಟಿ; ಮುನಿರತ್ನ ವಿರುದ್ಧ ಕ್ರಮಕ್ಕೆ ಪತ್ರ – BJP MLA Munirathna Remarks Row

Published

on

ಬೆಂಗಳೂರು: ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ, ಕಾಂಗ್ರೆಸ್ ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಸಿಎಂ ನಿವಾಸ ಕಾವೇರಿಯಲ್ಲಿಂದು ಭೇಟಿಯಾದ ನಿಯೋಗ, ಸಿಎಂಗೆ ಮನವಿ ಪತ್ರ ಸಲ್ಲಿಸಿದರು. ನಿಯೋಗದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಎಂ.ಸಿ.ಸುಧಾಕರ್, ಶರತ್ ಬಚ್ಚೇಗೌಡ, ಮಾಗಡಿ ಬಾಲಕೃಷ್ಣ, ಮಾಲೂರು ಮಂಜೇಗೌಡ, ಕುಣಿಗಲ್ ರಂಗನಾಥ್, ಎಸ್​.ರವಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಸಿಎಂ ಭೇಟಿ ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, “ಮುನಿರತ್ನ ವಿರುದ್ಧ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿ ಪಡೆದು ಮತ್ತಷ್ಟು ಕ್ರಮ ಆಗಬೇಕು ಅಂತ ಸಿಎಂಗೆ ಮನವಿ ಮಾಡಿದ್ದೇವೆ. ಮುನಿರತ್ನ ಇಲ್ಲಸಲ್ಲದ ಟ್ವೀಟ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರಯತ್ನ ಮಾಡುತ್ತಿದ್ದಾರೆ. ಬಿಬಿಎಂಪಿಯಲ್ಲಿ ದಾಖಲೆ ಸುಟ್ಟು ಹಾಕಿದ ಇತಿಹಾಸ ಇದೆ. ಅಂತಹದರಲ್ಲಿ ಮುನಿರತ್ನ ‌ನಿಸ್ಸೀಮರು. ಕಾನೂನು ವ್ಯಾಪ್ತಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಂತಹ ಪ್ರಯತ್ನಕ್ಕೆ ಅವಕಾಶ ಕೊಡದಂತೆ ಸಿಎಂಗೆ ಮನವಿ ಮಾಡಿದ್ದೇವೆ. ನ್ಯಾಯಾಂಗದಲ್ಲಿ ಸರ್ಕಾರ ಗಟ್ಟಿಯಾಗಿ ಕೆಲಸ ಮಾಡಬೇಕು. ಸರ್ಕಾರಿ ವಕೀಲರು ದಾಖಲಾತಿ ಸಮೇತ ಅವರ ವಿರುದ್ಧ ವಾದ ಮಾಡಿ ಶಿಕ್ಷೆ ಕೊಡಿಸಬೇಕು. ಈ ಕೇಸ್​ನಲ್ಲಿ ಹೆಚ್ಚು ಗಮನಕೊಡುವಂತೆ ಮನವಿ ಮಾಡಿದ್ದೇವೆ” ಎಂದರು.

ಮುಂದುವರೆದು, “ಪ್ರತ್ಯೇಕ ತನಿಖೆ ತಂಡದಿಂದ ತನಿಖೆ ಮಾಡಲು ಮನವಿ ಮಾಡಿದ್ದೇವೆ. SIT, ಲೋಕಾಯುಕ್ತದಿಂದ ತನಿಖೆ ಮಾಡೋಕೆ ಸಾಧ್ಯನಾ ಅಂತ ಪರಿಶೀಲನೆ ಮಾಡೋದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ. ಮುನಿರತ್ನ ಶಾಸಕನಾಗಲು ಅನರ್ಹ. ಚುನಾವಣೆಗೆ ನಿಲ್ಲಲು ಕನಿಷ್ಠ ಅರ್ಹತೆ ಬೇಕು. ಆದರೆ ಅದು ಅವರಲ್ಲಿಲ್ಲ” ಎಂದರು.

ಅವರು ನಿಮ್ಮ ಪಕ್ಷದಲ್ಲಿದ್ದವರಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ, “ಮಗು ಹುಟ್ಟುತ್ತದೆ. ತಂದೆ-ತಾಯಿ ಬೆಳೆಸುತ್ತಾರೆ. ವಾತಾವರಣ ಸರಿ ಇದ್ದರೂ ಕೂಡಾ ಹುಟ್ಟುಗುಣ ಹಾಗೇ ಇರುತ್ತೆ. ಶಾಸಕನಾದ ನಂತರ ಅವರ ಬಣ್ಣ ಬಯಲಾಗಿದೆ. ಮುನಿರತ್ನ ವಿರುದ್ಧ ಮಹಿಳೆಯ ಸೀರೆ ಎಳೆದ ಕೇಸ್ ಸೇರಿ ಅನೇಕ ಕೇಸ್‌ಗಳಿವೆ. ಅವರ ಗ್ರಹಚಾರ ಕೆಟ್ಟಿದೆ. ಬಿಜೆಪಿ ಮುನಿರತ್ನ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು. ಕುಮಾರಸ್ವಾಮಿ, ಅಶೋಕ್, ರವಿ, ಅಮಿತ್ ಶಾ, ಮೋದಿ ಬಳಿ ಹೋಗಿ ಕ್ರಮಕ್ಕೆ ಒತ್ತಾಯ ಮಾಡಲಿ. ಇಲ್ಲದೇ ಹೋದರೆ ಇವರನ್ನು ಸಮಾಜ ವಿರೋಧಿ ಎನ್ನಬೇಕಾಗುತ್ತದೆ. ಮೂವರು ಮುನಿರತ್ನ ಪರ ಮಾತಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಬೇಕು” ಎಂದು ಒತ್ತಾಯಿಸಿದರು.

ನಾಗಮಂಗಲ ಘಟನೆ ಮುಚ್ಚಿ ಹಾಕೋಕೆ ಸರ್ಕಾರ ಮುನಿರತ್ನ ವಿಷಯ ದೊಡ್ಡದು ಮಾಡಲು ಮುಂದಾಗಿದೆ ಎಂಬ ಬಿಜೆಪಿ ಆರೋಪ‌ ವಿಚಾರವಾಗಿ ಪ್ರತಿಕ್ರಿಯಿಸಿ, “ನಾಗಮಂಗಲದಲ್ಲಿ ಹಿಂದೂಗಳು-ಮುಸ್ಲಿಮರು ಒಟ್ಟಾಗಿ ಗಣೇಶ ಬಿಟ್ಟಿದ್ದಾರೆ. ಬಿಜೆಪಿಯವರಿಗೆ ಇಷ್ಟು ಬೇಗ ಇದು ಮುಗಿದು ಹೋಯ್ತು ಅಂತ ಬೇಸರ ಇದೆ. ಮುಸ್ಲಿಮರು ಮತ್ತು ಹಿಂದೂಗಳು ಒಟ್ಟಾಗಿ ಇದ್ದಾರೆ‌. ಸಣ್ಣ ಪುಟ್ಟ ಗೊಂದಲ ಮಾಡೋರು ಬೇರೆ ಇದ್ದಾರೆ ಬಿಟ್ಟರೆ ಈಗ ಎಲ್ಲರೂ ಒಂದಾಗಿದ್ದಾರೆ. ಬಿಜೆಪಿ ಅವರು ಇದಕ್ಕೆ ಸಂತೋಷಪಡೋದು ಬಿಟ್ಟು ಸಮಿತಿ ಕಳಿಸಿದ್ದಾರೆ. ಇದಕ್ಕೇನು ಹೇಳೋಣ?. ಕೆರಗೋಡು, ನಾಗಮಂಗಲ ಕೇಸ್ ಪ್ರಯತ್ನ ಫೇಲ್ ಆಯ್ತು ಅಂತ ಬಿಜೆಪಿ ಅವರಿಗೆ ರಾತ್ರಿ ನಿದ್ರೆ ಇಲ್ಲವಂತೆ. ಇದನ್ನು ಬಿಟ್ಟು ಬೇರೆ ರಾಜಕೀಯ ಮಾಡಲಿ ಎಂದು ಟಾಂಗ್​ ಕೊಟ್ಟರು.

ಸಿಎಂ ಸಿದ್ದರಾಮಯ್ಯ ಭೇಟಿಯ ಬಳಿಕ ಮಾತನಾಡಿದ ಸಚಿವ ಎಂ.ಸಿ ಸುಧಾಕರ್​, “ಮುನಿರತ್ನ ಅವರು ಮಾತನಾಡಿರುವ ಆಡಿಯೋ ಬಂದಿದೆ. ಅದರಲ್ಲಿ ಒಕ್ಕಲಿಗ ಹಾಗೂ ದಲಿತರ ಕುರಿತಾಗಿ ಮಾತನಾಡಿರುವುದು ಖಂಡನೀಯ. ಅದು ಬಹಳಷ್ಟು ನೋವು ಉಂಟು ಮಾಡಿದೆ. ಸರ್ಕಾರ ಅವರನ್ನು ಬಂಧಿಸುವ ಕೆಲಸ ಮಾಡಿದೆ. ಇದೀಗ ಒಂದು ಆಡಿಯೋ ಮಾತ್ರ ಬೆಳಕಿಗೆ ಬಂದಿದೆ. ಈ ಹಿಂದೆ ಹಲವು ಬಾರಿ ಈ ರೀತಿ ಮಾತನಾಡಿದ್ದಾರೆ” ಎಂದು ಆರೋಪಿಸಿದರು.

ಹನುಮಂತರಾಯಪ್ಪ ಆಡಿಯೋ ವೈರಲ್ ವಿಚಾರವಾಗಿ,‌ “ಹನುಮಂತರಾಯಪ್ಪ ಆಡಿಯೋ ನಾನು ಕೇಳಿದ್ದೇನೆ. ಅವರೇನು ತಪ್ಪಾಗಿ ಮಾತಾಡಿಲ್ಲ. ಗುತ್ತಿಗೆಯಲ್ಲಿ ಆಗಿರುವ ಸಮಸ್ಯೆ ಪರಿಹಾರ ಮಾಡೋದಾಗಿ ಮಾತ್ರ ಹೇಳಿದ್ದಾರೆ. ಇದಕ್ಕೂ ಮುನಿರತ್ನ ಮಾತಾಡಿರೋದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ದೇಶ

ಬೆಂಗಳೂರು ಜೀವನ ವೆಚ್ಚಕ್ಕೆ ಸವಾಲು: ಮಹಿಳೆಯ ಬಜೆಟ್ ಟ್ರಾವೆಲ್ ಸ್ಟೋರಿ

Published

on

By

ಬೆಂಗಳೂರು: ಐಷಾರಾಮಿ ಜೀವನಶೈಲಿ ಮತ್ತು ಹೆಚ್ಚುತ್ತಿರುವ ವೆಚ್ಚಗಳಿಗೆ ಹೆಸರಾದ Bengaluru ನಗರದಲ್ಲಿ ಕೇವಲ 500 ರೂ.ಗಳಲ್ಲಿ ದಿನ ಕಳೆಯಲು ಸಾಧ್ಯವೇ ಎಂಬ ಪ್ರಶ್ನೆಗೆ ಯುವತಿ ನೀಡಿದ ಉತ್ತರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಶ್ಚಿಮ ಬಂಗಾಳ ಮೂಲದ ಪ್ರಿಯಾಂಕಾ ಮಂಡಲ್ ಎಂಬ ಮಹಿಳೆ, ಸೀಮಿತ ಬಜೆಟ್‌ನಲ್ಲಿ ನಗರ ಜೀವನ ಹೇಗಿರುತ್ತದೆ ಎಂಬುದನ್ನು ಪರೀಕ್ಷಿಸಲು ಮುಂದಾಗಿದ್ದರು. ದಿನವನ್ನು ಇಡ್ಲಿ ಉಪಹಾರದಿಂದ ಆರಂಭಿಸಿದ ಅವರು, ಕ್ಯಾಬ್ ಬದಲು ಮೆಟ್ರೋ ಪ್ರಯಾಣವನ್ನು ಆಯ್ಕೆ ಮಾಡಿಕೊಂಡರು. ಇದರಿಂದ ಖರ್ಚನ್ನು ಕಡಿಮೆ ಮಾಡಲು ಸಹಾಯವಾಯಿತು.

ಹಗಲಿನಲ್ಲಿ ಚಹಾ ತೆಗೆದುಕೊಂಡು ಸಣ್ಣ ವಿರಾಮ ಮಾಡಿಕೊಂಡ ಅವರು, ಮಧ್ಯಾಹ್ನ ಊಟದ ವೇಳೆಗೆ ಸವಾಲು ಎದುರಿಸಿದರು. ಆಹಾರದ ಬೆಲೆಗಳು ಹೆಚ್ಚಿರುವುದರಿಂದ, 120 ರೂ. ಒಳಗೆ ಊಟ ಮುಗಿಸುವ ಗುರಿ ಇಟ್ಟುಕೊಂಡು ಖರ್ಚನ್ನು ನಿಯಂತ್ರಿಸಿದರು.

ಸಂಜೆ ವೇಳೆ ವಡಾ ಪಾವ್ ಮತ್ತು ಚಹಾ ಸೇವಿಸಿ ದಿನವನ್ನು ಮುಗಿಸಿದ ಪ್ರಿಯಾಂಕಾ, ಅಚ್ಚರಿಯ ರೀತಿಯಲ್ಲಿ ತಮ್ಮ ಬಜೆಟ್‌ನಿಂದ ಸುಮಾರು 200 ರೂ. ಉಳಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಕಡಿಮೆ ಹಣದಲ್ಲೂ ಸರಿಯಾದ ಯೋಜನೆ ಇದ್ದರೆ ದಿನವನ್ನು ನಿರ್ವಹಿಸಬಹುದು ಎಂಬುದನ್ನು ಅವರು ತೋರಿಸಿದ್ದಾರೆ.

ಈ ವಿಡಿಯೋ ವೈರಲ್ ಆದ ಬಳಿಕ, ಹಲವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೆಲವರು Indira Canteen ನಲ್ಲಿ ಕಡಿಮೆ ದರದಲ್ಲಿ ಊಟ ಸಿಗುತ್ತದೆ ಎಂದು ಸಲಹೆ ನೀಡಿದ್ದಾರೆ. ಮತ್ತೊಬ್ಬರು, ಇದು ಒಬ್ಬರಿಗೆ ಮಾತ್ರ ಸಾಧ್ಯ, ಕುಟುಂಬದೊಂದಿಗೆ ಬದುಕುವುದು ಬೆಂಗಳೂರಿನಲ್ಲಿ ಕಷ್ಟಕರ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ, ಈ ಪ್ರಯೋಗ ನಗರ ಜೀವನದ ಖರ್ಚು ಹಾಗೂ ಬಜೆಟ್ ನಿರ್ವಹಣೆ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ಅಪರಾಧ

ಶಕ್ತಿ ಯೋಜನೆ ಹೆಸರಿನಲ್ಲಿ ಲೂಟಿ: BMTC ಸಿಬ್ಬಂದಿ ವಿರುದ್ಧ ಕಠಿಣ ಕ್ರಮ

Published

on

By

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುತ್ತಿದ್ದರೆ, Bangalore Metropolitan Transport Corporation ನಲ್ಲಿ ಕೆಲವು ನೌಕರರು ಇದನ್ನು ದುರುಪಯೋಗ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೆಲವು ನಿರ್ವಾಹಕರು ಪುರುಷ ಪ್ರಯಾಣಿಕರಿಗೆ ಉಚಿತ ಟಿಕೆಟ್ ನೀಡಿ, ಅವರಿಂದ ಹಣ ವಸೂಲಿ ಮಾಡುತ್ತಿದ್ದರೆಂಬ ಆಘಾತಕಾರಿ ವಿಚಾರ ಪತ್ತೆಯಾಗಿದೆ. ಕನ್ನಡದಲ್ಲಿ ಮಾತ್ರ ಮುದ್ರಿತವಾಗಿರುವ ಟಿಕೆಟ್ ಮಾಹಿತಿಯನ್ನು ಬಳಸಿಕೊಂಡು, ಕನ್ನಡ ಓದಲು ಬಾರದ ಹೊರರಾಜ್ಯದ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಈ ದಂಧೆ ನಡೆಸಲಾಗುತ್ತಿತ್ತು.

ಇನ್ನಷ್ಟು ಗಂಭೀರವಾಗಿ, ಅಧಿಕೃತ ಯುಪಿಐ ಕ್ಯೂಆರ್ ಕೋಡ್‌ಗಳನ್ನು ತೆಗೆದುಹಾಕಿ, ತಮ್ಮ ವೈಯಕ್ತಿಕ ಖಾತೆಗಳ ಕ್ಯೂಆರ್ ಕೋಡ್ ಮೂಲಕ ಹಣವನ್ನು ನೇರವಾಗಿ ತಮ್ಮ ಖಾತೆಗೆ ವರ್ಗಾಯಿಸಿಕೊಳ್ಳಲಾಗುತ್ತಿತ್ತು. ಈ ಮೂಲಕ ಸಾರಿಗೆ ನಿಗಮದ ಆದಾಯಕ್ಕೂ ನಷ್ಟ ಉಂಟಾಗಿದೆ.

ದೂರುಗಳ ಆಧಾರದ ಮೇಲೆ ನಡೆಸಿದ ತನಿಖೆಯಲ್ಲಿ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಈ ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಇದರಲ್ಲಿ ನಾಲ್ವರು ಪ್ರಮುಖ ನಿರ್ವಾಹಕರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಅವರ ಖಾತೆಗಳಲ್ಲಿ ಸಾವಿರಾರು ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ನಡೆದಿರುವುದು ದೃಢಪಟ್ಟಿದೆ.

ಈ ಘಟನೆ ಹಿನ್ನೆಲೆ, ಬಿಎಂಟಿಸಿ ಅಧಿಕಾರಿಗಳು ಉಳಿದ ಸಿಬ್ಬಂದಿಗಳ ಮೇಲೂ ನಿಗಾ ವಹಿಸಿದ್ದು, ಇಂತಹ ದುರುಪಯೋಗದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಒಟ್ಟಿನಲ್ಲಿ, ಸಾರ್ವಜನಿಕರಿಗೆ ನೀಡಲಾಗುತ್ತಿರುವ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುವ ಇಂತಹ ಘಟನೆಗಳು ಸಾರಿಗೆ ವ್ಯವಸ್ಥೆಯ ಮೇಲ್ವಿಚಾರಣೆ ಬಲಪಡಿಸುವ ಅಗತ್ಯವಿದೆ ಎಂಬುದನ್ನು ಸ್ಪಷ್ಟಪಡಿಸುತ್ತವೆ.

Continue Reading

ದೇಶ

ಜಮೀರ್ ವಿರುದ್ಧ ಮುಸ್ಲಿಂ ನಾಯಕರ ಅಸಮಾಧಾನ: ಕಾಂಗ್ರೆಸ್‌ಗೆ ಹೊಸ ತಲೆನೋವು

Published

on

By

ಬೆಂಗಳೂರು: ದಾವಣಗೆರೆ ಉಪಚುನಾವಣೆ ಮುಗಿದರೂ ಕಾಂಗ್ರೆಸ್ ಪಕ್ಷದ ಒಳಜಗಳ ಮಾತ್ರ ಇನ್ನೂ ಶಮನವಾಗಿಲ್ಲ. Indian National Congress ಒಳಗೆ ಬಂಡಾಯ, ಅಸಮಾಧಾನ ಮತ್ತಷ್ಟು ತೀವ್ರವಾಗುತ್ತಿದೆ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದ ವಿಚಾರವಾಗಿ ಆರಂಭವಾದ ಅಸಮಾಧಾನ ಈಗ ಚುನಾವಣೆಯ ಬಳಿಕವೂ ಮುಂದುವರಿದಿದೆ.

ಸಚಿವ Zameer Ahmed Khan ವಿರುದ್ಧ ಸ್ವಪಕ್ಷದವರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡದಿರುವುದು ಹಾಗೂ ಮುಸ್ಲಿಂ ನಾಯಕರನ್ನು ಮನವೊಲಿಸಲು ವಿಫಲವಾದ ಕಾರಣ, ಅವರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬರುತ್ತಿದೆ. ಈ ವಿಚಾರವಾಗಿ ಹೈಕಮಾಂಡ್‌ಗೆ ವರದಿ ಕೂಡ ಸಲ್ಲಿಕೆಯಾಗಿದೆ ಎನ್ನಲಾಗಿದೆ.

ಇನ್ನೊಂದೆಡೆ, ಡಿಸಿಎಂ D. K. Shivakumar ಪ್ರತಿಕ್ರಿಯಿಸಿ, ಈ ಸಂಬಂಧ ವರದಿಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಆರೋಪ-ಪ್ರತ್ಯಾರೋಪಗಳು ಸಹಜವಾದರೂ, ಪಕ್ಷವು ಎಲ್ಲವನ್ನೂ ಗಮನಿಸುತ್ತಿದೆ ಎಂದಿದ್ದಾರೆ.

ಈ ನಡುವೆ ಸಂಪುಟ ಪುನಾರಚನೆ ವಿಚಾರವೂ ಕಾಂಗ್ರೆಸ್‌ನಲ್ಲಿ ಮತ್ತೆ ಚರ್ಚೆಗೆ ಬಂದಿದೆ. ಸುಮಾರು 40ಕ್ಕೂ ಹೆಚ್ಚು ಹಿರಿಯ ಶಾಸಕರು ದೆಹಲಿಗೆ ತೆರಳಿ, Mallikarjun Kharge ಹಾಗೂ Rahul Gandhi ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಒತ್ತಾಯ ಮಂಡಿಸಲು ತಯಾರಾಗಿದ್ದಾರೆ.

ಇದರ ಜೊತೆಗೆ, ಮುಖ್ಯಮಂತ್ರಿ Siddaramaiah ಐದು ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸಚಿವರು ಸ್ಪಷ್ಟಪಡಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಒಟ್ಟಿನಲ್ಲಿ ದಾವಣಗೆರೆ ಉಪಚುನಾವಣೆ ಕಾಂಗ್ರೆಸ್‌ಗೆ ಒಳಜಗಳದ ಬಾಗಿಲು ತೆರೆದಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆಗಳ ಸಾಧ್ಯತೆ ಹೆಚ್ಚಾಗಿದೆ.

Continue Reading

Trending