ಕ್ರೀಡೆ
ಚೆಸ್ ಒಲಿಂಪಿಯಾಡ್: ಭಾರತದ ‘ರಾಜ’, ‘ರಾಣಿ’ಯರಿಗೆ ಐತಿಹಾಸಿಕ ಚಿನ್ನ – Chess Olympiad 2024
ಬುಡಾಪೆಸ್ಟ್(ಹಂಗೆರಿ): ಯುವ ಚೆಸ್ ತಾರೆಯರನ್ನೊಳಗೊಂಡ ಭಾರತದ ಪುರುಷ ಮತ್ತು ಮಹಿಳೆಯರ ತಂಡಗಳು 45ನೇ ಆವೃತ್ತಿಯ ಚೆಸ್ ಒಲಿಂಪಿಯಾಡ್ನಲ್ಲಿ ಭಾನುವಾರ ಚೊಚ್ಚಲ ಸ್ವರ್ಣ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿವೆ.
ಪುರುಷರ ತಂಡ ಕೊನೆಯ ಸುತ್ತಿನ ಪಂದ್ಯದಲ್ಲಿ ಸ್ಲೊವೇನಿಯಾವನ್ನು 3.5-0.5ರಿಂದ ಮಣಿಸಿತು. ಮಹಿಳಾ ತಂಡ ನಿರ್ಣಾಯಕ ಸುತ್ತಿನಲ್ಲಿ ಅಜರ್ಬೈಜಾನ್ ವಿರುದ್ಧ 3.5-0.5 ಅಂತರದಿಂದ ಜಯ ಸಾಧಿಸಿ ಸ್ವರ್ಣ ಪದಕ ಗೆದ್ದುಕೊಂಡಿತು.
18 ವರ್ಷದ ವಿಶ್ವ ಚಾಂಪಿಯನ್ಶಿಪ್ ಚಾಲೆಂಜರ್ ಡಿ.ಗುಕೇಶ್ ಮತ್ತು 21 ವರ್ಷದ ಅರ್ಜುನ್ ಎರಿಗೈಸ್ ಪ್ರಮುಖ ಗೇಮ್‌ಗಳಲ್ಲಿ ಮತ್ತೊಮ್ಮೆ ಅತ್ಯುತ್ತಮ ಪ್ರದರ್ಶನ ತೋರಿದರೆ, 19 ವರ್ಷದ ಆರ್.ಪ್ರಜ್ಞಾನಂದ ಅಂತಿಮ ಸುತ್ತಿನಲ್ಲಿ ಫಾರ್ಮ್ಗೆ ಮರಳಿ ಭಾರತದ ಗೆಲುವಿನ ಹಾದಿ ಸುಗಮಗೊಳಿಸಿದರು. ನಾಲ್ಕನೇ ಬೋರ್ಡ್‌ನಲ್ಲಿ 29 ವರ್ಷದ ವಿದಿತ್ ಗುಜ್ರಾತಿ ಪಾಯಿಂಟ್ ಸಾಧಿಸಿ ತಂಡಕ್ಕೆ ಮತ್ತೊಂದು ಭರ್ಜರಿ ಜಯ ತಂದುಕೊಟ್ಟರು.
ಸ್ಲೊವೇನಿಯಾದ ವ್ಲಾಡಿಮಿರ್ ಫೆಡೋಸೀವ್ ವಿರುದ್ಧ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಗುಕೇಶ್ ಅದ್ಭುತ ತಂತ್ರಗಾರಿಕೆಯಿಂದ ಗೆದ್ದು ಬೀಗಿದರು. ಅಚ್ಚರಿಯ ಸೆಂಟರ್ ಕೌಂಟರ್ ಡಿಫೆನ್ಸ್ ಆಟದಿಂದ ಜನ್ ಸುಬೆಲಿ ವಿರುದ್ಧ ಅರ್ಜುನ್ ಎರಿಗೈಸಿ ಮೂರನೇ ಬೋರ್ಡ್‌ನಲ್ಲಿ ಗೆದ್ದರು. ಆಂಟನ್ ಡೆಮ್ಚೆಂಕೊ ವಿರುದ್ಧ ಆರ್. ಪ್ರಜ್ಞಾನಂದ ಭರ್ಜರಿ ಗೆಲುವು ಕಂಡರು.
- ಸ್ಮರಣೀಯ ವಿಜಯದ ನಂತರ ಮಾತನಾಡಿದ ಗುಕೇಶ್, “ವಿಶೇಷವಾಗಿ ನನ್ನ ಆಟದ ಬಗ್ಗೆ ಮತ್ತು ನಾವು ಒಂದು ತಂಡವಾಗಿ ಹೇಗೆ ಆಡಿದ್ದೇವೆ ಎಂಬುದರ ಬಗ್ಗೆ ನನಗೆ ಹೆಮ್ಮೆ ಇದೆ” ಎಂದು ಹರ್ಷ ವ್ಯಕ್ತಪಡಿಸಿದರು.
- ಮಹಿಳಾ ತಂಡದ ಪರ 33ರ ಹರೆಯದ ಡಿ.ಹರಿಕಾ ಉತ್ತಮ ಪ್ರದರ್ಶನ ತೋರಿದರೆ, 18ರ ಹರೆಯದ ದಿವ್ಯಾ ದೇಶ್ ಮುಖ್ ತಮ್ಮ ಎದುರಾಳಿ ಗಿವರ್ ಬೆಯ್ದುಲ್ಲಯೇವಾ ಅವರನ್ನು ಹಿಂದಿಕ್ಕಿ ಮೂರನೇ ಸುತ್ತಿನಲ್ಲಿ ವೈಯಕ್ತಿಕ ಚಿನ್ನದ ಪದಕ ಗಳಿಸಿದರು. 23ರ ಹರೆಯದ ಆರ್.ವೈಶಾಲಿ ಡ್ರಾ ಸಾಧಿಸಿದ ನಂತರ, 21 ವರ್ಷದ ವಂತಿಕಾ ಅಗರ್ವಾಲ್ ಕೊನೆಯ ಪಂದ್ಯದಲ್ಲಿ ಬಾಲಾಜಯೇವಾ ಖಾನಿಮ್ ವಿರುದ್ಧ ಗೆಲುವು ದಾಖಲಿಸಿದರು.
- ನಾಲ್ಕು ವೈಯಕ್ತಿಕ ಚಿನ್ನ: ಎರಡು ಚಿನ್ನದ ಪದಕಗಳ ಹೊರತಾಗಿ ಭಾರತೀಯ ಆಟಗಾರರು ತಮ್ಮ ಬೋರ್ಡ್ಗಳಲ್ಲಿ ಅತ್ಯುತ್ತಮ ವೈಯಕ್ತಿಕ ಪ್ರದರ್ಶನದಿಂದ ಹೆಚ್ಚು ಸ್ವರ್ಣ ಪದಕಗಳನ್ನು ಗೆದ್ದರು. ಮುಕ್ತ ವಿಭಾಗದಲ್ಲಿ(Open Section) ಗುಕೇಶ್ ಮತ್ತು ಎರಿಗೈಸ್ ಮೊದಲ ಮತ್ತು ಮೂರನೇ ಬೋರ್ಡ್‌ನಲ್ಲಿ ಚಿನ್ನದ ಪದಕಗಳನ್ನು ಗೆದ್ದರೆ, ಮಹಿಳಾ ವಿಭಾಗದಲ್ಲಿ ದಿವ್ಯಾ ದೇಶ್ಮುಖ್ ಮತ್ತು ವಂತಿಕಾ ಅಗರ್ವಾಲ್ ಕ್ರಮವಾಗಿ ಮೂರು ಮತ್ತು ನಾಲ್ಕನೇ ಬೋರ್ಡ್‌ನಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನಕ್ಕಾಗಿ ಚಿನ್ನ ಪದಕಕ್ಕೆ ಕೊರಳೊಡ್ಡಿದರು.
- ಕಳೆದ ಒಲಿಂಪಿಯಾಡ್ ವಿಜೇತ ಉಜ್ಬೇಕಿಸ್ತಾನ್ ವಿರುದ್ಧ 2-2 ಗೋಲುಗಳ ಅಂತರದಲ್ಲಿ ಡ್ರಾ ಸಾಧಿಸಿದ ಭಾರತದ ಪುರುಷರು ಒಟ್ಟು 22 ಪಂದ್ಯಗಳಲ್ಲಿ 21 ಅಂಕಗಳನ್ನು ಗಳಿಸಿದ್ದಾರೆ. ಒಟ್ಟು 44 ಪಂದ್ಯಗಳ ಪೈಕಿ ಭಾರತ ತಂಡವು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋಲನುಭವಿಸಿತು.
- ಐದು ವಿಶ್ವ ಚಾಂಪಿಯನ್ಶಿಪ್ ಪ್ರಶಸ್ತಿಗಳನ್ನು ಗೆದ್ದಿರುವ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಈ ವೇಳೆ ಉಪಸ್ಥಿತರಿದ್ದರು.
- ಬೆಳ್ಳಿ, ಕಂಚು ಗೆದ್ದ ದೇಶಗಳು: ಮುಕ್ತ ವಿಭಾಗದಲ್ಲಿ ಅಮೆರಿಕ ಬೆಳ್ಳಿ, ಉಜ್ಬೇಕಿಸ್ತಾನ ಕಂಚಿನ ಪದಕ ಗೆದ್ದುಕೊಂಡರೆ, ಮಹಿಳೆಯರ ವಿಭಾಗದಲ್ಲಿ ಕಜಕಿಸ್ತಾನ ಬೆಳ್ಳಿ, ಅಮೆರಿಕ ಕಂಚಿನ ಪದಕ ಪಡೆಯಿತು.
ಕ್ರೀಡೆ
ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.
ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.
ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.
ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.
ಆರ್ಸಿಬಿ ಬ್ಯಾಟಿಂಗ್ ವಿವರ:
- ವಿರಾಟ್ ಕೊಹ್ಲಿ – 28 (18)
- ಫಿಲ್ ಸಾಲ್ಟ್ – 46 (30)
- ದೇವದತ್ತ ಪಡಿಕಲ್ – 50 (29)
- ರಜತ್ ಪಾಟೀದಾರ್ – 48* (19)
- ಟಿಮ್ ಡೇವಿಡ್ – 70* (25)
ಕ್ರೀಡೆ
ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!
ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.
ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.
ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.
ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.
ಕ್ರೀಡೆ
ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!
ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.
ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.
ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.
ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
-
ದೇಶ21 hours ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ21 hours agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ಚುನಾವಣೆ3 hours agoDavangere By Election 2026 : 25 ಅಭ್ಯರ್ಥಿಗಳ ಕಣ: ಮುಸ್ಲಿಂ ಅಭ್ಯರ್ಥಿಗಳೇ ಗೇಮ್ಚೇಂಜರ್?
-
ದೇಶ4 hours agoX ನಲ್ಲಿ ವೈರಲ್ ಆದ CA ಕಥೆ: ನಂಬಲೇಬೇಕಾ ಅಥವಾ ಕೇವಲ ಕಥೆಯಾ?
-
ಚುನಾವಣೆ4 hours agoಎಐಎಡಿಎಂಕೆ vs ಡಿಎಂಕೆ: ಸೀಟ್ ಶೇರಿಂಗ್ನಲ್ಲಿ ಭಾರಿ ಪೈಪೋಟಿ
-
ದೇಶ22 hours ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ6 hours agoತಾಲಿಬಾನ್ ವಿರುದ್ಧ ಪಾಕಿಸ್ತಾನದ ಆಪರೇಷನ್: ನೂರಾರು ಉಗ್ರರು ಸಾವು
-
ದೇಶ20 hours agoಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
