Connect with us

ಬೆಂಗಳೂರು

ಕುಡಿಯುವ ನೀರು ಸರಬರಾಜು-ಪಂಪಿಂಗ್ ಸ್ಟೇಷನ್ ವೀಕ್ಷಿಸಿ ಡಿಕೆಶಿ ಹೇಳಿದ್ದೇನು..?

Published

on

ಬೆಂಗಳೂರು: ಸಿಲಿಕಾನ್ ಸಿಟಿ ತಾತಗುಣಿಯವರೆಗೆ ಕಾವೇರಿ ಕುಡಿಯುವ ನೀರನ್ನು ಪಂಪ್ ಮಾಡುವ ಕನಕಪುರ ತಾಲೂಕಿನ ಹಾರೋಹಳ್ಳಿಯಲ್ಲಿ 5 ನೇ ಹಂತದ ಪಂಪಿಂಗ್ ಸ್ಟೇಷನ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವೀಕ್ಷಣೆ ಮಾಡಿದರು,
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಸರ್ಕಾರ ಇದನ್ನು ಪ್ರಾರಂಭ ಮಾಡಿದೆ, ಏನಾದರೂ ಮಾಡಿ 110 ಹಳ್ಳಿಗಳಿಗೂ ನೀರು ಕೂಡಬೇಕು ಎಂದು ಹೇಳಿ ಒಂದು ಕಾರ್ಯಕ್ರಮವನ್ನು ರೂಪಿಸಿ, ಅನೇಕ ಸಮಸ್ಯೆಗಳನ್ನು ಬಗೆಹರಿಸಿ ವಿಜಯದಶಮಿಗೆ ಉದ್ಘಾಟನೆ ಮಾಡಲು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು,
ಇಡೀ ಬೆಂಗಳೂರಿಗೆ 1400 ಎಂಎಲ್ಡಿ ನೀರು ಸರಬರಾಜು ಆಗ್ತಿದೆ, ಈಗ 750 ಎಂಎಲ್ಡಿ ನೀರು ಹೊಸದಾಗಿ ಸೇರ್ಪಡೆ ಆಗ್ತಿದೆ, ಕನಿಷ್ಠ 10 ವರ್ಷ ಬೆಂಗಳೂರು ನಗರಕ್ಕೆ ಇನ್ನೂ ಯಾವುದೇ ರೀತಿಯ ತೊಂದರೆಗಳು ಆಗಬಾರದು ಎಂಬ ದೃಷ್ಟಿಯಿಂದ ಈ ಕಾರ್ಯಕ್ರಮ ರೂಪಿಸಿದ್ದೇವೆ, ಟ್ಯಾಂಕರ್ ಬಂದ್ ಮಾಡಿ ಮನೆ ಮನೆಗೆ ಹೋಗಿ ನೀರು ಕೊಡಲು ಮನೆ ಮನೆಗೂ ಜಲ ಇದು ನಮ್ಮ ಸಂಕಲ್ಪ ಎಂದು ಡಿಕೆಶಿ ತಿಳಿಸಿದರು,
ಯಶವಂತಪುರ, ಬ್ಯಾಟರಾಯನಪುರ, ಬೊಮ್ಮನಹಳ್ಳಿ, ಮಹದೇವಪುರ, ಕೆಆರ್ ಪುರ ಹೀಗೆ ಎಲ್ಲಾ ಭಾಗಗಳಿಗೂ ನೀರನ್ನು ಒದಗಿಸಿಕೊಡಲಿದ್ದೇವೆ, ಎಸ್ ಟಿ ಸೋಮಶೇಖರ್ ಅವರ ಕ್ಷೇತ್ರದಲ್ಲಿ ಸ್ವಲ್ಪ ಸಮಸ್ಯೆಯಿದೆ ಈದನ್ನು ನಾನು ಸಿಎಂ ಮಾತಾಡಿ ಸಮಸ್ಯೆ ಬಗೆಹರಿಸೋ ಕೆಲಸ ಮಾಡ್ತೀವಿ ಎಂದರು,

ಶಾಸಕ ಎಸ್.ಟಿ ಸೋಮಶೇಖರ್ ಮಾತನಾಡಿ, ಹಲವು ವರ್ಷಗಳ ಪರಿಶ್ರಮದಿಂದ 110 ಹಳ್ಳಿ ವ್ಯಾಪ್ತಿಯ ಜೊತೆಗೆ 111 ನೇ ಹಳ್ಳಿ ಮಲ್ಲಸಂದ್ರ ಗ್ರಾಮಕ್ಕೂ ಕುಡಿಯುವ ನೀರಿನ ವ್ಯವಸ್ಥೆಗೆ ಕಾಲ ಕೂಡಿಬಂದಿದೆ. ಹಲವು ಬಾರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ.ಶಿವಕುಮಾರ್ ಅವರ ಬಳಿ ಚರ್ಚಿಸಿದ್ದು ಸತತ ಪ್ರಯತ್ನದ ಫಲವಾಗಿ ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿದಂತಾಗುತ್ತಿದೆ. ವಿಜಯದಶಮಿಯ ಒಳಗಾಗಿ 111 ಹಳ್ಳಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ಕುಡಿಯುವ ನೀರಿನ ಸರಬರಾಜು ಮಾಡಲಾಗುತ್ತದೆ. ಎಂದು ತಿಳಿಸಿದರು.

ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್,ಕಾಂಗ್ರೆಸ್ ಮುಖಂಡರಾದ ಬಿ.ಆರ್. ಶಿವಮಾದಯ್ಯ,ಅಮೃತ್ ಗೌಡ, ಚಿಕ್ಕ ರಾಜು,ದೇವರಾಜು, ಗೋಪಾಲಕೃಷ್ಣ,ಮಣ್ಣಿನ ಮಗ ರಾಮಕೃಷ್ಣ,ಟಿ.ಪ್ರಭಾಕರ್ ಎಂ. ಹರೀಶ್ ಕುಮಾರ್, ಎನ್. ಗುರುದೇವ್ ಸೇರಿದಂತೆ ಸ್ಥಳೀಯ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

ದೇಶ

MLA ವಾಹನ ಬಳಕೆಗೆ ಹೊಸ ನಿಯಮ ಜಾರಿ; ವೇತನ, ಪಿಂಚಣಿಯಿಂದಲೇ ಶುಲ್ಕ ಕಡಿತ!

Published

on

ಬೆಂಗಳೂರು, ಜು.8: ಶಾಸಕರ ಭವನದಲ್ಲಿರುವ ಸರ್ಕಾರಿ ವಾಹನಗಳ ದುರುಪಯೋಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ವಿಧಾನಸಭಾ ಸಚಿವಾಲಯ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ನು ಮುಂದೆ ಜನಪ್ರತಿನಿಧಿಗಳ ಆಪ್ತ ಸಹಾಯಕರು, ಬೆಂಬಲಿಗರು ಅಥವಾ ಅತಿಥಿಗಳು ಶಿಫಾರಸು ಪತ್ರದ ಆಧಾರದ ಮೇಲೆ ಸರ್ಕಾರಿ ವಾಹನಗಳನ್ನು ಪಡೆದು ಬೆಂಗಳೂರು ನಗರದ ಹೊರಗೆ ಸಂಚರಿಸಲು ಅವಕಾಶ ಇರುವುದಿಲ್ಲ.

ಹೊಸ ಮಾರ್ಗಸೂಚಿಯ ಪ್ರಕಾರ, ಶಾಸಕರ ಭವನದ ಸರ್ಕಾರಿ ವಾಹನಗಳ ಸಂಚಾರವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ತುರ್ತು ಪರಿಸ್ಥಿತಿ ಅಥವಾ ವಿಮಾನ ನಿಲ್ದಾಣಕ್ಕೆ ತೆರಳುವಂತಹ ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ, ಬೆಂಗಳೂರಿನ ಗಡಿ ದಾಟಬೇಕಾದರೆ ವಿಧಾನಸಭಾಧ್ಯಕ್ಷರ ಲಿಖಿತ ಅನುಮತಿ ಕಡ್ಡಾಯವಾಗಲಿದೆ.

ವಿಧಾನಸಭಾ ಸಚಿವಾಲಯದ ಮಾಹಿತಿ ಪ್ರಕಾರ, ಸೀಮಿತ ಸಂಖ್ಯೆಯ ವಾಹನಗಳು ಮತ್ತು ಚಾಲಕರ ಲಭ್ಯತೆಯಿಂದಾಗಿ ಹಲವು ಬಾರಿ ಹಾಲಿ ಶಾಸಕರಿಗೂ ತುರ್ತು ಸಂದರ್ಭದಲ್ಲಿ ವಾಹನ ಸಿಗದ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈ ಸಮಸ್ಯೆ ನಿವಾರಣೆ ಹಾಗೂ ಸಾರ್ವಜನಿಕ ಆಸ್ತಿಯ ಸಮರ್ಪಕ ಬಳಕೆಯನ್ನು ಖಚಿತಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನೊಂದು ಪ್ರಮುಖ ಬದಲಾವಣೆಯಾಗಿ, ನಗದುರಹಿತ (Cashless) ವಸೂಲಾತಿ ವ್ಯವಸ್ಥೆ ಜಾರಿಗೆ ತರಲಾಗಿದೆ. ವಾಹನ ಸಂಚರಿಸಿದ ಪ್ರತಿ ಕಿಲೋಮೀಟರ್‌ಗೆ ನಿಗದಿಪಡಿಸಿದ ಶುಲ್ಕವನ್ನು ಹಾಲಿ ಶಾಸಕರ ವೇತನದಿಂದ ಹಾಗೂ ಮಾಜಿ ಶಾಸಕರ ಪಿಂಚಣಿಯಿಂದ ನೇರವಾಗಿ ಕಡಿತಗೊಳಿಸಲಾಗುತ್ತದೆ.

ಈ ವ್ಯವಸ್ಥೆಯಿಂದ ಶಾಸಕರ ಹೆಸರಿನಲ್ಲಿ ಯಾರು ಸರ್ಕಾರಿ ವಾಹನ ಬಳಸಿದ್ದಾರೆ ಎಂಬ ಸಂಪೂರ್ಣ ದಾಖಲೆ ಲಭ್ಯವಾಗಲಿದ್ದು, ಪಾರದರ್ಶಕತೆ ಹೆಚ್ಚುವ ಜೊತೆಗೆ ಸಾರ್ವಜನಿಕ ಹಣದ ದುರುಪಯೋಗಕ್ಕೂ ಪರಿಣಾಮಕಾರಿ ತಡೆ ಬೀಳಲಿದೆ ಎಂದು ವಿಧಾನಸಭಾ ಸಚಿವಾಲಯ ತಿಳಿಸಿದೆ. ಹೊಸ ನಿಯಮಗಳು ಸರ್ಕಾರಿ ಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ಆಡಳಿತದಲ್ಲಿ ಉತ್ತರದಾಯಿತ್ವ ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.

Continue Reading

ದೇಶ

‘ಟೀಮ್ ಬೆಂಗಳೂರು ಅಲ್ಲ, ಟೀಮ್ ಕರ್ನಾಟಕ’ : ಜಾಗತಿಕ ಹೂಡಿಕೆದಾರರಿಗೆ ಡಿಕೆ ಶಿವಕುಮಾರ್ ಮಹತ್ವದ ಸಂದೇಶ

Published

on

ಬೆಂಗಳೂರು, ಜು.8: ಕರ್ನಾಟಕವನ್ನು ಜಾಗತಿಕ ಹೂಡಿಕೆ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಜಾಗತಿಕ ಹೂಡಿಕೆದಾರರ ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಇದು ಕೇವಲ ಟೀಮ್ ಬೆಂಗಳೂರು ಅಲ್ಲ, ಟೀಮ್ ಕರ್ನಾಟಕ. ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ” ಎಂದು ಹೇಳಿದರು.

ಸುಮಾರು 200ಕ್ಕೂ ಹೆಚ್ಚು ಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್ (GCC) ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದು, ಬೆಂಗಳೂರಿನ ಅಭಿವೃದ್ಧಿ, ಕೈಗಾರಿಕಾ ವಿಸ್ತರಣೆ ಹಾಗೂ ಭವಿಷ್ಯದ ಹೂಡಿಕೆಗಳ ಕುರಿತು ಸರ್ಕಾರಕ್ಕೆ ಹಲವು ಮಹತ್ವದ ಸಲಹೆಗಳನ್ನು ನೀಡಿದ್ದಾರೆ ಎಂದು ಸಿಎಂ ತಿಳಿಸಿದರು. ಜಾಗತಿಕ ಕಂಪನಿಗಳು ಸರ್ಕಾರದ ಆಡಳಿತದ ಮೇಲೆ ವಿಶ್ವಾಸ ವ್ಯಕ್ತಪಡಿಸಿರುವುದು ಸಂತಸದ ವಿಷಯ ಎಂದರು.

‘Beyond Bengaluru’ ಯೋಜನೆಯಡಿ ಐಟಿ-ಬಿಟಿ ಹಾಗೂ ಕೈಗಾರಿಕೆಗಳನ್ನು ಬೆಂಗಳೂರಿನ ಹೊರಗಿನ 2-Tier ಮತ್ತು 3-Tier ನಗರಗಳಿಗೆ ವಿಸ್ತರಿಸಲು ಸರ್ಕಾರ ಹೊಸ ಕೈಗಾರಿಕಾ ನೀತಿಯನ್ನು ರೂಪಿಸುತ್ತಿದೆ. ಈ ಪ್ರದೇಶಗಳಲ್ಲಿ ಉದ್ಯಮ ಆರಂಭಿಸುವ ಕಂಪನಿಗಳಿಗೆ ಕಡಿಮೆ ದರದಲ್ಲಿ ಜಾಗ, ಕಟ್ಟಡ ಹಾಗೂ ಅಗತ್ಯ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನೂ ಸಿಎಂ ನೀಡಿದರು.

ರಾಜ್ಯದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಹೂಡಿಕೆದಾರರನ್ನು ರಾಜ್ಯದ ಎಲ್ಲ ಭಾಗಗಳಿಗೆ ಆಕರ್ಷಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಉದ್ಯೋಗ ಸೃಷ್ಟಿಗೆ ಸಹಕರಿಸುವ ಕೈಗಾರಿಕೆಗಳಿಗೆ ಅಗತ್ಯ ಸಬ್ಸಿಡಿ ಮತ್ತು ಪ್ರೋತ್ಸಾಹಕ ಯೋಜನೆಗಳನ್ನು ಸರ್ಕಾರ ನೀಡಲಿದೆ ಎಂದರು.

ಇದೇ ವೇಳೆ, ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಮುಂಚೂಣಿಗೆ ತರುವ ಉದ್ದೇಶದಿಂದ ಅತ್ಯಾಧುನಿಕ AI University ಸ್ಥಾಪಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ವಿಶ್ವವಿದ್ಯಾಲಯದ ರೂಪುರೇಷೆಗಳ ಕುರಿತು ಜಾಗತಿಕ ತಂತ್ರಜ್ಞಾನ ತಜ್ಞರು ಹಾಗೂ GCC ಮುಖ್ಯಸ್ಥರಿಂದ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Continue Reading

ದೇಶ

Karnataka SIR : ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಳ್ಳು ಮಾಹಿತಿ? ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ಸಲ್ಲಿಕೆ

Published

on

ಬೆಂಗಳೂರು, ಜು.8: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಸುಳ್ಳು ಹಾಗೂ ದಾರಿ ತಪ್ಪಿಸುವ ಮಾಹಿತಿಯನ್ನು ಹರಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ಈ ಸಂಬಂಧ ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರಿಗೆ ಅಧಿಕೃತ ದೂರು ಸಲ್ಲಿಸಿದೆ.

ಬಿಜೆಪಿ ನೀಡಿರುವ ದೂರಿನಲ್ಲಿ, ಭಾರತೀಯ ಚುನಾವಣಾ ಆಯೋಗವು ಸಂವಿಧಾನದ ವಿಧಿ 324ರ ಅಡಿಯಲ್ಲಿ ಸ್ಥಾಪಿತವಾದ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಮತದಾರರ ಪಟ್ಟಿಯ ಸಿದ್ಧತೆ ಮತ್ತು ಪರಿಷ್ಕರಣೆ ಅದರ ಕಾನೂನುಬದ್ಧ ಕರ್ತವ್ಯವಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ, ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಸೆಕ್ಷನ್ 15ರ ಅನ್ವಯ ಪ್ರತಿಯೊಂದು ಚುನಾವಣಾ ಕ್ಷೇತ್ರಕ್ಕೂ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಅಧಿಕಾರ ಆಯೋಗಕ್ಕಿದೆ ಎಂದು ತಿಳಿಸಲಾಗಿದೆ.

ಬಿಜೆಪಿ ಪ್ರಕಾರ, ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಉದ್ದೇಶ ಮತದಾರರ ಪಟ್ಟಿಯನ್ನು ನಿಖರವಾಗಿಡುವುದು, ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯನ್ನು ತಡೆಯುವುದು, ಮೃತಪಟ್ಟವರ ಹೆಸರನ್ನು ತೆಗೆದುಹಾಕುವುದು ಹಾಗೂ ಅನರ್ಹ ವ್ಯಕ್ತಿಗಳ ಹೆಸರು ಸೇರ್ಪಡೆಯಾಗದಂತೆ ನೋಡಿಕೊಳ್ಳುವುದಾಗಿದೆ.

ಆದರೆ ಕಾಂಗ್ರೆಸ್, ಬಿಜೆಪಿ ಪ್ರೇರಣೆಯಿಂದಲೇ SIR ಪ್ರಕ್ರಿಯೆ ನಡೆಯುತ್ತಿದೆ ಎಂದು ಕರಪತ್ರಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಆರೋಪ ಮಾಡುತ್ತಿದೆ ಎಂದು ಬಿಜೆಪಿ ದೂರಿನಲ್ಲಿ ಹೇಳಿದೆ. ಚುನಾವಣಾ ಆಯೋಗವು ಬಿಜೆಪಿ ಜೊತೆಗೂಡಿ ಮತದಾರರ ಹೆಸರುಗಳನ್ನು ತೆಗೆದುಹಾಕುತ್ತಿದೆ ಎಂಬ ಆರೋಪವು ಆಯೋಗದ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಪ್ರಯತ್ನವಾಗಿದೆ ಎಂದು ಬಿಜೆಪಿ ವಾದಿಸಿದೆ.

ಇಂತಹ ಸುಳ್ಳು ಮಾಹಿತಿಯಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗುವ ಸಾಧ್ಯತೆ ಇದ್ದು, ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಚುನಾವಣಾ ಸಿಬ್ಬಂದಿಯ ಸುರಕ್ಷತೆಗೂ ಅಪಾಯ ಎದುರಾಗಬಹುದು ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, SIR ಪ್ರಕ್ರಿಯೆಗೆ ಅಡ್ಡಿಪಡಿಸದಂತೆ ಚುನಾವಣಾ ಆಯೋಗ ಕ್ರಮ ವಹಿಸಬೇಕೆಂದು ಬಿಜೆಪಿ ತನ್ನ ದೂರಿನಲ್ಲಿ ಆಗ್ರಹಿಸಿದೆ.

ಸೂಚನೆ: ಈ ಆರೋಪಗಳು ಬಿಜೆಪಿಯ ದೂರಿನಲ್ಲಿರುವ ಅಂಶಗಳಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಈ ಕುರಿತು ಅಧಿಕೃತ ಪ್ರತಿಕ್ರಿಯೆ ಇನ್ನೂ ಪ್ರಕಟವಾಗಿಲ್ಲ.

Continue Reading

Trending