ಬೆಂಗಳೂರು
ಲೋಕಸಭೆಗೆ ಬೊಮ್ಮಾಯಿ ಕಣಕ್ಕಿಳಿಸಲು ಬಿಜೆಪಿ ಪ್ಲಾನ್!? ಕೈ ತಪ್ಪುತ್ತಾ ವಿಪಕ್ಷ ಸ್ಥಾನ?

ಬೆಂಗಳೂರು, ಸೆಪ್ಟೆಂಬರ್ 02: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದ್ದು, ಬಿಜೆಪಿ ಹೈಕಮಾಂಡ್ ಸಹ ಗೆಲ್ಲುವ ನಾಯಕರನ್ನ ಕಣಕ್ಕಿಳಿಸಲು ಚಿಂತನೆ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಹಾವೇರಿ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ
ಲೋಕಸಭಾ ಚುನಾವಣೆಯಲ್ಲಿ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ ಹೊಸ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಬಿಜೆಪಿ ನಾಯಕತ್ವವು ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ಇನ್ನೂ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಆಯ್ಕೆಯಾಗಿದ್ದಾರೆ. ಶಿಗ್ಗಾಂವಿ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸೇರಿದರೂ ಹಾವೇರಿ ಜಿಲ್ಲೆಯಲ್ಲಿ ಮಾಜಿ ಸಿಎಂ ಗಣನೀಯ ಪ್ರಭಾವ ಹೊಂದಿದ್ದಾರೆ. ಅದಲ್ಲದೇ ಮುಖ್ಯಮಂತ್ರಿ ಆಗಿದ್ದಾಗ ಹಾವೇರಿ ಜಿಲ್ಲೆಯ ಅಭಿವೃದ್ಧಿಗಾಗಿ ಮಾಡಿದ ಕೆಲಸಗಳನ್ನು ಹೈಕಮಾಂಡ್ ಗಮನಿಸಿದ್ದು, ಇವು ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಗೆಲ್ಲಿಸುತ್ತವೆ ಎಂಬ ಚಿಂತನೆಯಲ್ಲಿ ಪಕ್ಷದ ನಾಯಕರು ಇದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಗದಗ ಜಿಲ್ಲೆಯ ಕೆಲ ಕ್ಷೇತ್ರಗಳು ಕೂಡ ಬರಲಿದ್ದು, ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಏಕೆಂದರೆ ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಹೀನಾಯ ಪ್ರದರ್ಶನ ತೋರಿದ್ದು, ಗದಗ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಶಿರಹಟ್ಟಿ ಹಾಗೂ ಹಾವೇರಿಯ 6 ಕ್ಷೇತ್ರಗಳ ಪೈಕಿ ಶಿಗ್ಗಾಂವಿಯಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.ಇತ್ತ ಕಾಂಗ್ರೆಸ್ ತನ್ನ ಶಕ್ತಿಯನ್ನ ವೃದ್ದಿಸಿಕೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಳಿಕ ಐದು ಚುನಾವಣಾ ಗ್ಯಾರಂಟಿಗಳಿಗೆ ಜನರಿಂದ ಬರುವ ಪ್ರತಿಕ್ರಿಯೆ ಕಾಂಗ್ರೆಸ್ ಅನ್ನು ಆತ್ಮವಿಶ್ವಾಸದ ಅಲೆಯಲ್ಲಿ ತೇಲಾಡಿಸುತ್ತಿದೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ಕಷ್ಟಸಾಧ್ಯ ಎನ್ನುವ ಮಾತುಗಳು ಕೇಳಿ ಬಂದಿವೆ.
ಇನ್ನೂ ಈ ಬಗ್ಗೆ ಧಾರವಾಡ ವಿಭಾಗದ ಚುನಾವಣಾ ಉಸ್ತುವಾರಿ ಲಿಂಗರಾಜ್ ಪಾಟೀಲ್, ಹಾವೇರಿಯಲ್ಲಿ ಬಿಜೆಪಿಗಿರುವ ಸವಾಲಿನ ಬಗ್ಗೆ ನಮಗೆ ಅರಿವಿದೆ. ಹಾವೇರಿಗೆ ಸಮರ್ಥ ಅಭ್ಯರ್ಥಿಯನ್ನು ಘೋಷಿಸುತ್ತೇವೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಸರ್ವೇ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ. ಶಿವಕುಮಾರ್ ಉದಾಸಿ ಅವರು 2009ರಿಂದ ಹಾವೇರಿಯಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ಆದರೆ, ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇದರಿಂದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ್ ಕಲ್ಕೋಟಿ, ಒಬಿಸಿ ನಾಯಕ ರಾಜಶೇಖರ್ ಕತ್ತೆಗೌಡರ್ ಬಿಜೆಪಿ ಟಿಕೆಟ್‌ಗೆ ಲಾಬಿ ನಡೆಸಿದ್ದಾರೆ. ಇನ್ನೂ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ವಿಳಂಬದ ಕುರಿತು ಈಗಾಗಲೇ ಬಿಜೆಪಿ ಪಕ್ಷದ ವಿರುದ್ದ ಕಾಂಗ್ರೆಸ್ ನಾಯಕರು ಸಾಕಷ್ಟು ಟೀಕೆ ಟಿಪ್ಪಣಿಗಳನ್ನ ನಡೆಸಿದ್ದು, ಇತ್ತ ಲೋಕಸಭಾ ಚುನಾವಣಾ ಸಿದ್ದತೆ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ಗುರುವಾರ ಬಿಜೆಪಿ ನಾಯಕರ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ವಿಧಾನಸಭಾ ವಿರೋಧ ಪಕ್ಷದ ನಾಯಕನ ನೇಮಕ ವಿಳಂಬದ ಬಗ್ಗೆಯೂ ಚರ್ಚೆ ನಡೆದಿದೆ. ಜೊತೆಗೆ ಬಸವರಾಜ ಬೊಮ್ಮಾಯಿ ಪಾತ್ರದ ಬಗ್ಗೆಯೂ ಮಾತುಕತೆ ನಡೆದಿದೆ. ಹಾವೇರಿಯಿಂದ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೆಸರು ಕೇಳಿಬರುತ್ತಿದೆ. ಅವರು ಎರಡು ಬಾರಿ ಈ ಸ್ಥಾನಕ್ಕೆ ಸ್ಪರ್ಧಿಸಿದರು ಮತ್ತು 2014 ರಲ್ಲಿ 43% ಮತಗಳನ್ನು ಪಡೆದಿದ್ದರು, ಇನ್ನೂ 2019 ರಲ್ಲಿ ಉದಾಸಿ ವಿರುದ್ಧ ಸೋತ DR ಪಾಟೀಲ್ ಮತ್ತು ಕಾನೂನು ಸಚಿವ HK ಪಾಟೀಲ್ ಅವರ ಪುತ್ರ ಕೃಷ್ಣ ಪಾಟೀಲ್ ಇತರ ಸಂಭಾವ್ಯರಲ್ಲಿ ಸೇರಿದ್ದಾರೆ. ಪಕ್ಷ ಬಯಸಿದರೆ ನಾನು ಸ್ಪರ್ಧಿಸಲು ಸಿದ್ಧ ಎಂದು ಸಲ್ಲಿಂ ಅಹ್ಮದ್ ಹೇಳಿದ್ದಾರೆ.
ಬೆಂಗಳೂರು
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನ ಆಕರ್ಷಕ ಪ್ರತಿಕೃತಿಗಳು

ಬೆಂಗಳೂರು: ಲಾಲ್‌ಬಾಗ್ ಉದ್ಯಾನದಲ್ಲಿ ನಾಳೆ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಗಾಜಿನ ಮನೆಯಲ್ಲಿ ಸ್ಥಾಪಿಸಿರುವ ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನವರ ಐಕ್ಯ ಮಂಟಪದ ಪ್ರತಿಕೃತಿಗಳು.
ತೋಟಗಾರಿಕೆ ಇಲಾಖೆ ವಿವಿಧ ರೀತಿಯ ಆಕರ್ಷಕ ಹೂವುಗಳಿಂದ ಗಾಜಿನ ಮನೆಯನ್ನು ಅಲಂಕಾರಗೊಳಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳು ಬಣ್ಣ ಬಣ್ಣದ ಹೂಸಸಿಗಳೊಂದಿಗೆ ಶೃಂಗಾರಗೊಂಡಿವೆ. ಈ ಪ್ರದರ್ಶನದಲ್ಲಿ ಆಂಥೋರಿಯಂ, ಗುಲಾಬಿ, ಆರ್ಕಿಡ್, ಜರ್ಬೇರಾ ಮತ್ತು ಸುಗಂಧ ರಾಜ ಸೇರಿದಂತೆ ಹಲವಾರು ಶೀತ ವಲಯದ ಹೂಗಳು ನೋಡುಗರ ಕಣ್ಮನ ಸೆಳೆಯಲಿವೆ.
ಬೋನ್ಸಾಯ್ ವನವನ್ನು ನವೀಕರಿಸಿ ವಿಭಿನ್ನ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಬೋನ್ಸಾಯ್ ಸಸಿಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಜೊತೆಗೆ ಇಕೆಬಾನಾ, ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಯ ಪ್ರದರ್ಶನವೂ ಈ ಶೋನಲ್ಲಿ ಒಳಗೊಂಡಿವೆ.
ಸುಮಾರು 2.5 ಲಕ್ಷದಿಂದ 3 ಲಕ್ಷ ಹೂವುಗಳಿಂದ ನಿರ್ಮಿತವಾಗಿರುವ ಗಾಜಿನ ಮನೆಯಲ್ಲಿ, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರಿನ ಕೋಟೆ ಪ್ರತಿಕೃತಿ ಸ್ಥಾಪಿಸಲಾಗಿದೆ. ಇದರ ಮುಂಭಾಗದಲ್ಲಿ ಅಶ್ವಾರೂಢ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳು ಹಾಗೂ ಹಿಂಭಾಗದಲ್ಲಿ ಐಕ್ಯ ಮಂಟಪದ ಪ್ರತಿಕೃತಿ ಇದೆ.
ಪ್ರವೇಶ ಶುಲ್ಕ:
- ಸಾಮಾನ್ಯ ದಿನ: ₹80
- ರಜಾದಿನಗಳು ಮತ್ತು ವಾರಾಂತ್ಯ: ₹100
ಈ ಪ್ರದರ್ಶನವು ನೈಸರ್ಗಿಕ ಸೌಂದರ್ಯ ಹಾಗೂ ಐತಿಹಾಸಿಕ ಮಹತ್ವವನ್ನು ಒಗ್ಗೂಡಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸುವ ನಿರೀಕ್ಷೆಯಿದೆ.
ಬೆಂಗಳೂರು
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.
ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.
2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.
ಬೆಂಗಳೂರು
ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.
ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.
ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.
ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!