Connect with us

ದೇಶ

ತಿರುಪತಿ ಲಡ್ಡು ಬಗ್ಗೆ ಪ್ರಕಾಶ್ ರಾಜ್ ಏನಂದ್ರು, ಪವನ್ ಕಲ್ಯಾಣ್ ಗರಂ ಆಗಿದ್ದೇಕೆ.. ಪುರಿ ಜಗನ್ನಾಥ ಪ್ರಸಾದದಲ್ಲೂ..?

Published

on

ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಸನಾತನ ಧರ್ಮ ರಕ್ಷಣೆಗೆ ಆಂಧ್ರ ಡಿಸಿಎಂ ಪವನ್​ ಕಲ್ಯಾಣ್​ ಕರೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಪವನ್​ ಕಲ್ಯಾಣ್​ ವಿರುದ್ಧ ಪ್ರಕಾಶ್​ ರಾಜ್​ ನಡುವೆ ಟ್ವೀಟಾಸ್ತ್ರ ಬಿಟ್ಟಿದ್ದಾರೆ. ತಮಿಳು ನಟ ಕಾರ್ತಿಗೂ ಕ್ಲಾಸ್​ ಪವನ್​ ಕಲ್ಯಾಣ್​ ತಗೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ತಿರುಪತಿಯಂತೆ ಪುರಿ ಜಗನ್ನಾಥ ದೇಗುಲದಲ್ಲಿ ಪ್ರಸಾದಕ್ಕೆ ಬಳಸುವ ತುಪ್ಪದ ಪರೀಕ್ಷೆಗೆ ಆಡಳಿತ ಮಂಡಳಿ ಮುಂದಾಗಿದೆ.

ತಿರುಪತಿ ಲಡ್ಡು ವಿಷಯದಲ್ಲಿ ರಾಜಕೀಯ ಟಾಕ್​ ವಾರ್​ ಜೋರು

ತಿರುಪತಿ ಲಡ್ಡು ವಿವಾದ ದೇಶಾದ್ಯಂತ ಭಾರೀ ವಿವಾದವನ್ನೇ ಸೃಷ್ಟಿಸಿದೆ. ಇದರ ಜೊತೆಗೆ ಲಡ್ಡು ವಿವಾದ ರಾಜಕೀಯ ಟಾಕ್​ ವಾರ್​ ತಿರುವು ಪಡೆದಿದೆ. ಆಂಧ್ರದ ಡಿಸಿಎಂ ಪವನ್​ ಕಲ್ಯಾಣ್​ ಮತ್ತು ನಟ ಪ್ರಕಾಶ್​ ರಾಜ್​ ನಡುವೆ ಸಂತಾನ ಸಂಘರ್ಷ ಮತ್ತಷ್ಟು ಜೋರಾಗಿದೆ.

ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಡಿಸಿಎಂ ಪವನ್​ ಕಲ್ಯಾಣ್​, ದೇವಾಯಲಗಳ ರಕ್ಷಣೆಗೆ ರಾಷ್ಟ್ರಮಟ್ಟದಲ್ಲಿ ಸನಾತನ ಧರ್ಮ ರಕ್ಷಣಾ ಮಂಡಳಿ ಸ್ಥಾಪನೆ ಅಗತ್ಯ. ಆ ಕಾಲ ಸನ್ನಿಹಿತವಾಗಿದೆ ಎಂದಿದ್ದರು. ಇದಕ್ಕೆ ತಿರುಗೇಟು ನೀಡಿದ ನಟ ಪ್ರಕಾಶ್​ ರಾಜ್​. ನಿಮ್ಮ ಲೋಕಲ್​ ವಿಚಾರವನ್ನು ರಾಷ್ಟ್ರಮಟ್ಟದಲ್ಲಿ ದೊಡ್ಡದ್ಯಾಕೆ ಮಾಡ್ತೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು. ಪ್ರಕಾಶ್​ ರಾಜ್​ರ ಈ ಟ್ವೀಟ್​ಗೆ ಪವನ್​​ ಕಲ್ಯಾಣ್​ ಖಡಕ್​ ವಾರ್ನಿಂಗ್​ ನೀಡಿದ್ದಾರೆ.

ಪವನ್​ ಕಲ್ಯಾಣ್, ಆಂಧ್ರ ಡಿಸಿಎಂ

ನನ್ನನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದರು, ನನ್ನ ವ್ಯಂಗ್ಯವಾಡಿದರೂ, ನನ್ನ ರೋಡಿಗೆಳೆದರು ಮೌನವಾಗಿದ್ದೆ. ಆದ್ರೆ, ವೈಸಿಪಿ ಪರ ನಿಂದಿಸೋ ನಾಯಕರಿಗೆ ಪ್ರತ್ಯೇಕವಾಗಿ ಹೇಳ್ತಿದ್ದೀನಿ. ಸನಾತನ ಧರ್ಮದ ವಿಚಾರಕ್ಕೆ ಬರಬೇಡಿ, ತಪ್ಪಾಗಿದ್ರೆ, ತಪ್ಪಾಗಿದೆ ಅಂತ ಒಪ್ಪಿಕೊಳ್ಳಿ. ಇಲ್ಲ ನಮಗೆ ಸಂಬಂಧ ಇಲ್ಲ ಅಂತಾ ಹೇಳಿ. ಅಷ್ಟೇ ಮಾತ್ರ ಅಡ್ಡಾದಿಡ್ಡಿಯಾಗಿ ಮಾತಾಡಿದ್ರೆ, ಯಾರು ಕ್ಷಮಿಸಲ್ಲ. ನೀವು ಹಿಂದೂಗಳೇ.

ತಿರುಪತಿ ಲಡ್ಡು ವಿವಾದ ಈಗ ಪವನ್ ಕಲ್ಯಾಣ್ ಹಾಗೂ ಪ್ರಕಾಶ್ ರಾಜ್ ನಡುವಿನ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ. ಸದ್ಯ ಇಬ್ಬರ ನಡುವೆ ಮಾತಿನ ಚಕಮಕಿ ಅಂತೂ ಆರಂಭ ಆಗಿದೆ. ಪವನ್ ಕಲ್ಯಾಣ್ ಏಟಿಗೆ ಪ್ರಕಾಶ್ ರಾಜ್ ತಿರುಗೇಟು ಕೊಟ್ಟಿದ್ದು, ಸೆ.30ರ ನಂತರ ನಿಮ್ಮ ಪ್ರತಿ ಮಾತಿಗೂ ಉತ್ತರಿಸುತ್ತೇನೆ ಎಂದಿದ್ದಾರೆ.

ಪವನ್​ ಪವನ್​ ಕಲ್ಯಾಣ್​ ಬಳಿ ಕ್ಷಮೆಯಾಚಿಸಿದ ತಮಿಳು ನಟ ಕಾರ್ತಿ

ಇನ್ನು ಲಡ್ಡು ವಿವಾದದ ಬಿಸಿ ತಮಿಳು ನಟ ಕಾರ್ತಿಗೂ ತಟ್ಟಿದೆ. ತಮ್ಮ ಚಿತ್ರದ ಪ್ರಚಾರದ ವೇಳೆ ನಿರೂಪಕಿ ಕೇಳಿದ ಪ್ರಶ್ನೆಗೆ ಕಾರ್ತಿ, ಇದೊಂದು ಸೂಕ್ಷ್ಮ ವಿಷಯ. ಈಗ ಮಾತು ಬೇಡ ಎಂದಿದ್ದರು. ಇದಕ್ಕೆ ಗರಂ ಆದ ಪವನ್​ ಕಲ್ಯಾಣ್​, ಲಡ್ಡುವನ್ನು ಸೂಕ್ಷ್ಮ ವಿಚಾರ ಎಂದು ಕರೆಯುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ರು. ಇದರ ಬೆನ್ನಲ್ಲೇ ನಟ ಕಾರ್ತಿ ನನ್ನ ಕಾಮೆಂಟ್​ಗಳಿಂದ ಉಂಟಾದ ಉದ್ದೇಶಪೂರ್ವಕ ತಪ್ಪು ತಿಳುವಳಿಕೆಗಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ತಿರುಪತಿ ಬೆನ್ನಲ್ಲೇ ಜಗನ್ನಾಥ ದೇಗುಲದಲ್ಲೂ ತುಪ್ಪದ ಪರೀಕ್ಷೆ

ತಿರುಪತಿಯ ಲಡ್ಡು ಲಡಾಯಿ ಬೆನ್ನಲ್ಲೇ ಇತರೆ ರಾಜ್ಯಗಳು ಎಚ್ಚೆತ್ತುಕೊಂಡಿವೆ. ಒಡಿಶಾದ ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ನೈವೇದ್ಯ ತಯಾರಿಸಲು ಬಳಸುವ ತುಪ್ಪದ ಗುಣಮಟ್ಟವನ್ನ ಪರೀಕ್ಷಿಸಲು ಒಡಿಶಾ ಸರ್ಕಾರ ನಿರ್ಧರಿಸಿದೆ. ತಿರುಪತಿ ಲಡ್ಡು ವಿವಾದದಿಂದ ಆರಂಭದಲ್ಲಿ ಗೊಂದಲದಲ್ಲಿದ್ದ ಭಕ್ತರು, ತಿಮ್ಮಪ್ಪನ ದರ್ಶನಕ್ಕೆ ಮುಂದಾಗ್ತಿದ್ದಾರೆ. ಕಳೆದ 4 ದಿನಗಳಲ್ಲಿ 14 ಲಕ್ಷ ಲಡ್ಡುಗಳನ್ನು ಭಕ್ತರು ಸ್ವೀಕರಿಸಿದ್ದಾರೆ.

ದೇಶ

“ನರಕದಲ್ಲಿ ಬದುಕಬೇಕಾಗುತ್ತದೆ”: ಇರಾನ್‌ಗೆ ಟ್ರಂಪ್ ಎಚ್ಚರಿಕೆ

Published

on

By

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಹಾರ್ಮುಜ್ ಜಲಸಂಧಿಯನ್ನು ಕೂಡಲೇ ಮುಕ್ತಗೊಳಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ಮ Truth Social ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಇರಾನ್ ಮೂಲಸೌಕರ್ಯಗಳ ಮೇಲೆ ಭಾರೀ ದಾಳಿ ನಡೆಯಬಹುದು. ಇತಿಹಾಸದಲ್ಲಿ ಕಾಣದ ರೀತಿಯ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ” ಎಂದು ಕಠಿಣ ಭಾಷೆಯಲ್ಲಿ ಹೇಳಿದ್ದಾರೆ.

ಇದರ ಬೆನ್ನಲ್ಲೇ, ಇರಾನ್ ಒಳಗೆ ಪತನಗೊಂಡಿದ್ದ ಎಫ್-15 ಯುದ್ಧವಿಮಾನ ಕಮಾಂಡರ್‌ರನ್ನು ಅಮೆರಿಕಾ ವಿಶೇಷ ಪಡೆಗಳು ಯಶಸ್ವಿಯಾಗಿ ರಕ್ಷಿಸಿರುವುದನ್ನು ಟ್ರಂಪ್ ಶ್ಲಾಘಿಸಿದ್ದಾರೆ. ಶತ್ರು ಪ್ರದೇಶದಲ್ಲಿದ್ದ ಗಾಯಗೊಂಡ ಸೈನಿಕರನ್ನು ಸುರಕ್ಷಿತವಾಗಿ ಕರೆತಂದಿರುವುದು ಸಾಹಸಮಯ ಕಾರ್ಯಾಚರಣೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದೀಗ ಹಾರ್ಮುಜ್ ಜಲಸಂಧಿ ವಿವಾದ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಗಲ್ಫ್ ರಾಷ್ಟ್ರಗಳಿಂದ ಯುರೋಪ್ ಮತ್ತು ಏಷ್ಯಾಕ್ಕೆ ತೈಲ ಸಾಗಾಣಿಕೆ ಮಾಡುವ ಪ್ರಮುಖ ಮಾರ್ಗವೇ ಇದು. ಇರಾನ್ ಈ ಮಾರ್ಗದ ಮೇಲೆ ನಿಯಂತ್ರಣ ಸಾಧಿಸಿರುವುದರಿಂದ ಜಾಗತಿಕ ತೈಲ ಬೆಲೆ ಏರಿಕೆಯ ಆತಂಕ ಎದುರಾಗಿದೆ.

ಇದರ ನಡುವೆ ಇರಾನ್ ಕೂಡ ತಿರುಗೇಟು ನೀಡಿದ್ದು, “ನಮ್ಮ ಮೇಲೆ ದಾಳಿ ಮಾಡಿದರೆ ಅಮೆರಿಕದ ಸೇನಾ ನೆಲೆಗಳ ಮೇಲೆ ಪ್ರತಿದಾಳಿ ನಡೆಸುತ್ತೇವೆ” ಎಂದು ಎಚ್ಚರಿಸಿದೆ.

ಒಟ್ಟಿನಲ್ಲಿ, ಅಮೆರಿಕಾ-ಇರಾನ್ ನಡುವಿನ ವಾಕ್ಸಮರ ಮತ್ತು ಯುದ್ಧದ ವಾತಾವರಣ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಜಾಗತಿಕ ಶಾಂತಿಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

Continue Reading

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ದೇಶ

ಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ

Published

on

By

ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಕ್ಕೂ ಜಗಳ-ಕೇಸು ಸಾಮಾನ್ಯವಾಗಿರುವ ಸಂದರ್ಭದಲ್ಲೇ, ಬಿಹಾರದ ಒಂದು ಹಳ್ಳಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಿದೆ. ಕಲಿಯಾಚಕ್ ಗ್ರಾಮ ಕಳೆದ 118 ವರ್ಷಗಳಿಂದ ಯಾವುದೇ ಅಪರಾಧ ದಾಖಲಾಗದೇ ಶಾಂತಿಯುತ ಜೀವನ ನಡೆಸುತ್ತಿರುವುದು ವಿಶೇಷ.

ನಳಂದ ಜಿಲ್ಲೆಯ ಈ ಗ್ರಾಮದಲ್ಲಿ ಸ್ಥಾಪನೆಯಾದ ದಿನದಿಂದಲೂ ಗಂಭೀರ ಅಪರಾಧಗಳೇ ನಡೆದಿಲ್ಲ. ಅಷ್ಟೇ ಅಲ್ಲ, ಇಷ್ಟು ವರ್ಷಗಳಲ್ಲಿ ಪೊಲೀಸ್ ಸೈರನ್ ಕೂಡ ಕೇಳಿಸಿಲ್ಲ ಎಂಬುದು ಆಶ್ಚರ್ಯಕರ ಸಂಗತಿ. ಗ್ರಾಮದಲ್ಲಿ ಯಾವುದೇ ಸಣ್ಣಪುಟ್ಟ ವಿವಾದಗಳು ಉಂಟಾದರೂ, ಹಿರಿಯರು ಕೂತು ಸಮಸ್ಯೆಯನ್ನು ಪರಿಹರಿಸುತ್ತಾರೆ.

ಈ ಗ್ರಾಮ ಹಿಲ್ಸಾ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ. ಆದರೆ ಪೊಲೀಸ್ ದಾಖಲೆಗಳಲ್ಲಿ ಈ ಗ್ರಾಮದಿಂದ ಒಂದೇ ಒಂದು ದೂರು ಕೂಡ ಇಲ್ಲದಿರುವುದು ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದೆ.

ಗ್ರಾಮದಲ್ಲಿ ಸುಮಾರು 60 ಕುಟುಂಬಗಳು, 500 ಜನರು ವಾಸಿಸುತ್ತಿದ್ದು, ವಿವಿಧ ಜಾತಿ-ವರ್ಗಗಳ ಜನರು ಸಹೋದರತ್ವದಿಂದ ಬದುಕುತ್ತಿದ್ದಾರೆ. “ಗ್ರಾಮದ ಸಮಸ್ಯೆಗಳನ್ನು ಗ್ರಾಮದಲ್ಲೇ ಬಗೆಹರಿಸಬೇಕು” ಎಂಬುದು ಇವರ ಮೂಲ ತತ್ವವಾಗಿದೆ.

ಈ ಶಾಂತಿಯುತ ವಾತಾವರಣಕ್ಕೆ ಪ್ರಮುಖ ಕಾರಣ ಮಾಜಿ ಪಂಚಾಯಿತಿ ಅಧ್ಯಕ್ಷ ಸಾಧು ಶರಣ್ ಸಿಂಗ್ ಅವರ ಮಾರ್ಗದರ್ಶನ. ಅವರ ಪ್ರಯತ್ನದಿಂದ ಈ ಗ್ರಾಮ ಮಾದರಿಯಾಗಿ ರೂಪುಗೊಂಡಿದೆ.

ಇಲ್ಲಿನ ಯುವಕರು ಕೆಟ್ಟ ಅಭ್ಯಾಸಗಳಿಂದ ದೂರವಿದ್ದು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳತ್ತ ಗಮನ ಹರಿಸುತ್ತಿದ್ದಾರೆ.

ಗಮನಿಸಿ: ಮೇಲಿನ ವಿವರಗಳು ಬಿಹಾರದ ಕಲಿಯಾಚಕ್ ಗ್ರಾಮದ ಕುರಿತು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಆಧರಿಸಿವೆ. ಇದು ಅಪರಾಧ ಮುಕ್ತ ಗ್ರಾಮವಾಗಿ ದೇಶದಲ್ಲಿ ವಿಶೇಷ ಮನ್ನಣೆಯನ್ನು ಗಳಿಸಿದೆ.

ಒಟ್ಟಿನಲ್ಲಿ, ಕಲಿಯಾಚಕ್ ಗ್ರಾಮವು ಒಗ್ಗಟ್ಟು, ಸಹೋದರತ್ವ ಮತ್ತು ಶಾಂತಿಯುತ ಬದುಕಿನ ನಿಜವಾದ ಮಾದರಿಯಾಗಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ.

Continue Reading

Trending