ಬೆಂಗಳೂರು
ಪ್ರಧಾನಿ ನರೇಂದ್ರಮೋದಿ ವಿರುದ್ದ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ

ಬೆಂಗಳೂರು; ಕಾಂಗ್ರೆಸ್ ಭವನದಲ್ಲಿ ಹರಿಯಾಣ ಚುನಾವಣೆ ಪ್ರಚಾರ ವೇಳೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರ್ಕಾರ ವಿರುದ್ದ ಸುಳ್ಳು ಅರೋಪ ಮಾಡಿರುವ ಪ್ರಧಾನಿ ನರೇಂದ್ರಮೋದಿರವರ ವಿರುದ್ದ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ.
ಎಸ್.ಮನೋಹರ್ ರವರು ಮಾತನಾಡಿ ಪ್ರಧಾನಿ ನರೇಂದ್ರಮೋದಿ ರವರು ಭ್ರಷ್ಟಚಾರಿಗಳು, ಅತ್ಯಚಾರಿಗಳು, ಭೂಹಗರಣದಲ್ಲಿ ಸಿಲುಕಿರುವ ಬಿಜೆಪಿ, ಜೆಡಿಎಸ್ ನಾಯಕರುಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್, ಬಿ.ವೈ.ವಿಜಯೇಂದ್ರ, ಪ್ರಜ್ವಲ್ ರೇವಣ್ಣನಂತಹವರ ಜೊತೆಯಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ.
ಇಡಿ ರಾಷ್ಟ್ರದ ಜನರು ತಲೆತಗ್ಗಿಸುವ ವಿಚಾರವಾಗಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಉರುಳಿಸಲು ಕೇಂದ್ರ ಬಿಜೆಪಿ ಸರ್ಕಾರ ಪ್ರಯತ್ನ ಮಾಡುತ್ತಿದೆ, ಹಲವಾರು ರಾಜ್ಯಗಳಲ್ಲಿ ಅಪರೇಷನ್ ಕಮಲ ಮೂಲಕ ರಾಜ್ಯ ಸರ್ಕಾರವನ್ನು ಉರುಳಿಸಿದ ಅಪಕೀರ್ತಿ ಇದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಅನ್ನರಾಮಯ್ಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. 40ವರ್ಷಗಳ ಸಾರ್ವಜನಿಕ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯ ಕ್ಷೇತ್ರದಲ್ಲಿ ಇದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ದ ಸುಳ್ಳು ಅರೋಪ ಮಾಡಿರುವ ಪ್ರಧಾನಿ ನರೇಂದ್ರಮೋದಿರವರು ಕೊಡಲೆ ರಾಷ್ಟ್ರ ಮತ್ತು ಜನತೆಯ ಮುಂದೆ ಕ್ಷಮೆ ಹೇಳಬೇಕು ಎಂದು ಒತ್ತಾಯ ಮಾಡಿದರು.