Connect with us

ದೇಶ

ಕಚ್ಚಾ ತೈಲಬೆಲೆ ಇಳಿಕೆಯಾದರೂ ಪೆಟ್ರೋಲ್, ಡೀಸೆಲ್ ದುಬಾರಿ ಯಾಕೆ!

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆಯಾಗಿಲ್ಲ, ಜನರ ಜೇಬಿಗೆ ಕತ್ತರಿ ಬೀಳುತ್ತಿದೆ, ಆದ್ರೆ ತೈಲ ಕಂಪನಿಗಳು ಮಾತ್ರ ಭರ್ಜರಿ ಲಾಭ ಗಳಿಸುತ್ತಲೇ ಇದೆ, ರಷ್ಟಾ-ಉಕ್ರೇನ್, ಇಸ್ರೇಲ್-ಲೆಬೆನಾನ್ ಯುದ್ಧದ ನಡುವೆಯೂ ಕಚ್ಚಾ ತೈಲದರ ಇಳಿಯುತ್ತಲೇ ಇದೆ, ಇದರಿಂದ ಭಾರತದ ತೈಲ ಕಂಪನಿಗಳು ಲೀಟರ್ ಪೆಟ್ರೋಲ್ ಗೆ 15 ರೂ, ಹಾಗೂ ಲೀಟರ್ ಡೀಸೆಲ್ ಗೆ 12 ರೂ ಲಾಭ ಮಾಡುತ್ತಿದೆ,
ಕಚ್ಚಾ ತೈಲ ಬೆಲೆ ಕುಸಿತದ ಹಿನ್ನೆಲೆಯಲ್ಲಿ ದೇಶದ ಸರ್ಕಾರಿ ಸ್ವಾಮ್ಯದ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ ಪೆಟ್ರೋಲ್ ಕಂಪನಿ ಭರ್ಜರಿ ಲಾಭಗಳಿಸುತ್ತಿವೆ, ಈ ಬಗ್ಗೆ ಇಸಿಎಆರ್ ವರದಿ ನೀಡಿದ್ದು, ಎಲ್ಲೆಡೆ ತೀವ್ರ ಚರ್ಚೆಗೆ ಗ್ರಾಸವಾಗಿದೆ, ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಯುತ್ತಿದ್ದರೂ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆಯಾಗ್ತಿಲ್ಲ, ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳೋದು ಕಂಪನಿ ವಿವೇಚನೆಗೆ ಬಿಡಲಾಗಿದೆ,
ಪ್ರತಿನಿತ್ಯ ಪೆಟ್ರೋಲ್ ಹಾಗೂ ಡೀಸೆಲ್ ಹಾಕಿಸುವಾಗ ಸಾರ್ವಜನಿಕರು ತೈಲ ಕಂಪನಿಗಳಲ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದು, ಹಿಡಿಶಾಪ ಹಾಕುತ್ತಿದ್ದಾರೆ ,

ದೇಶ

“ಉರ್ಕೆ ಉಂಡ್ರಾ?”: ಮಧುಗಿರಿಯಲ್ಲಿ ‘ಸಿಎಂ ಆಗಿ’ ಘೋಷಣೆಗೆ ಪರಮೇಶ್ವರ್ ತೆಲುಗಿನಲ್ಲಿ ತಿರುಗೇಟು

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ “ಸಿಎಂ ಆಗಬೇಕು” ಎಂಬ ಘೋಷಣೆ ಕೇಳಿಬಂದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಯೊಬ್ಬರು “ನೀವು ಸಿಎಂ ಆಗಬೇಕು” ಎಂದು ಕೂಗಿದ ಪ್ರಸಂಗ ನಡೆದಿದೆ.

ಭಾಷಣದ ಅಂತ್ಯದಲ್ಲಿ ಈ ಘೋಷಣೆ ಕೇಳಿಬಂದಾಗ, ಪರಮೇಶ್ವರ್ ಅವರು ಕ್ಷಣಮಾತ್ರ ನಿಂತು ಕಾರ್ಯಕರ್ತನ ಮಾತಿಗೆ ತೆಲುಗಿನಲ್ಲಿ ಪ್ರತಿಕ್ರಿಯಿಸಿದರು. “ಉರ್ಕೆ ಉಂಡ್ರ… ನೀನು ಸಿಎಂ ಅಂಟ?” ಎಂದು ಹೇಳಿ, “ನಾನು ಸಿಎಂ ಆಗಬೇಕಂತೆ… ಸುಮ್ಮನಿರು” ಎಂದು ಹಾಸ್ಯಭರಿತವಾಗಿ ಹೇಳಿ ಕಾರ್ಯಕರ್ತನ ಬಾಯಿ ಮುಚ್ಚಿಸಿದರು.

ಈ ದೃಶ್ಯ ಅಲ್ಲಿದ್ದ ಜನರಲ್ಲಿ ನಗೆರಸ ಮೂಡಿಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಾಜಕೀಯ ವಲಯದಲ್ಲೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಪರಮೇಶ್ವರ್ ಅವರ ಪ್ರತಿಕ್ರಿಯೆ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಭಿವೃದ್ಧಿ, ಮೂಲಸೌಕರ್ಯ ಬಲಪಡಿಸುವುದು ಮತ್ತು ಸಾರ್ವಜನಿಕ ಸೇವೆ ಸುಧಾರಣೆ ಕುರಿತು ಗೃಹ ಸಚಿವರು ಮಾತನಾಡಿದರು. ಆದರೆ “ಸಿಎಂ ಆಗಿ” ಘೋಷಣೆಯ ಘಟನೆ ಸಮಾರಂಭದ ಪ್ರಮುಖ ಹೈಲೈಟ್ ಆಗಿದೆ.

Continue Reading

ದೇಶ

ACTOR SRI LEELA : ಬಹುಭಾಷಾ ನಟಿ ಶ್ರೀಲೀಲಾ ಎಂಬಿಬಿಎಸ್ ಪದವಿ ಪೂರ್ಣ

ಬೆಂಗಳೂರು/ಮುಂಬೈ: ಬಹುಭಾಷಾ ನಟಿ ಶ್ರೀಲೀಲಾ ತಮ್ಮ ಎಂಬಿಬಿಎಸ್ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮುಂಬೈನ ಡಿ.ವೈ. ಪಾಟೀಲ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಅವರು ಅಧಿಕೃತವಾಗಿ ಪದವಿ ಸ್ವೀಕರಿಸಿದ್ದಾರೆ. ಫೆಬ್ರವರಿ 10ರಂದು ನಡೆದ ಸಮಾರಂಭದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ಅಭಿಮಾನಿಗಳಿಂದ ಪ್ರಶಂಸೆಯ ಸುರಿಮಳೆ ಹರಿದುಬಂದಿದೆ.

24 ವರ್ಷದ ನಟಿ ಮೆರೂನ್ ಬಣ್ಣದ ಪದವಿ ಗೌನ್ ಮತ್ತು ಕ್ಯಾಪ್ ಧರಿಸಿ ವೇದಿಕೆಯ ಮೇಲೆ ಹೆಜ್ಜೆ ಹಾಕಿದ ದೃಶ್ಯಗಳು ಅಭಿಮಾನಿಗಳ ಮನಸೆಳೆದಿವೆ. ಒಂದು ವಿಡಿಯೋದಲ್ಲಿ ತಮ್ಮ ಹೆಸರನ್ನು ಘೋಷಿಸುವ ಮೊದಲು ಸಹಪಾಠಿಗಳೊಂದಿಗೆ ಸಾಲಿನಲ್ಲಿ ನಿಂತು ಕಾಯುತ್ತಿರುವುದು ಕಾಣಿಸುತ್ತದೆ. ನಂತರ ಪ್ರಮಾಣಪತ್ರವನ್ನು ನಗುಮೊಗದಿಂದ ಸ್ವೀಕರಿಸಿದ ಅವರು, ವೇದಿಕೆಯಿಂದ ಇಳಿಯುವಾಗ ಕುಟುಂಬ ಸದಸ್ಯರನ್ನು ಅಪ್ಪಿಕೊಂಡು ಸಂತಸ ವ್ಯಕ್ತಪಡಿಸಿದರು.

ಬಿಡುವಿಲ್ಲದ ಚಿತ್ರರಂಗದ ವೃತ್ತಿಜೀವನದ ನಡುವೆಯೂ ವೈದ್ಯಕೀಯ ಶಿಕ್ಷಣವನ್ನು ಸಮತೋಲನಗೊಳಿಸಿರುವ ಶ್ರೀಲೀಲಾ ಅವರ ಸಾಧನೆಗೆ ಅಭಿಮಾನಿಗಳು ಹಾಗೂ ಸಿನಿ ವಲಯದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಹಲವು ಭಾಷೆಗಳ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ವಿದ್ಯಾಭ್ಯಾಸವನ್ನು ಕಡೆಗಣಿಸದೇ ಯಶಸ್ವಿಯಾಗಿ ಮುಗಿಸಿರುವುದು ಯುವಜನತೆಗೆ ಸ್ಪೂರ್ತಿಯಾಗಿದೆ.

ನಟನೆ ಜೊತೆಗೆ ವೈದ್ಯಕೀಯ ಕ್ಷೇತ್ರದಲ್ಲೂ ತಮ್ಮ ಹೆಜ್ಜೆ ಇಟ್ಟಿರುವ ಶ್ರೀಲೀಲಾ ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದ್ದು, “ಡಾಕ್ಟರ್ ಶ್ರೀಲೀಲಾ” ಎಂದು ಅಭಿಮಾನಿಗಳು ಕರೆದಾಡುತ್ತಿದ್ದಾರೆ.

Continue Reading

ದೇಶ

BHARATH BANDH : ದೇಶವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರ ಹೋರಾಟ, ಹಲವು ರಾಜ್ಯಗಳಲ್ಲಿ ಬಂದ್ ಪರಿಣಾಮ

ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಇಂದು ದೇಶಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ. ಸುಮಾರು 30 ಕೋಟಿ ಕಾರ್ಮಿಕರನ್ನು ಸಜ್ಜುಗೊಳಿಸಲಾಗಿದೆ ಎಂದು ಸಂಘಟನೆಗಳು ತಿಳಿಸಿವೆ.

ಹೊಸ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ನಡೆಯುತ್ತಿರುವ ಈ ಮುಷ್ಕರಕ್ಕೆ ಅಸ್ಸಾಂ, ತಮಿಳುನಾಡು, ಪಾಂಡಿಚೇರಿ, ಕೇರಳ, ಒಡಿಶಾ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೇಕ ಕಡೆ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದು, ಸಾರಿಗೆ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದೆ.

ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ಅವರು ದೇಶಾದ್ಯಂತ ಉತ್ತಮ ಬೆಂಬಲ ಸಿಗುತ್ತಿದೆ ಎಂದು ತಿಳಿಸಿದ್ದಾರೆ.


ಮುಷ್ಕರದ ಪ್ರಮುಖ ಬೇಡಿಕೆಗಳು:

• ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು
• ಬೀಜ ಕರಡು ಮಸೂದೆ ಮತ್ತು ವಿದ್ಯುತ್ ತಿದ್ದುಪಡಿ ಮಸೂದೆ ಹಿಂತೆಗೆದುಕೊಳ್ಳಬೇಕು
• ಖಾಸಗೀಕರಣ ಹಾಗೂ ಕಾರ್ಪೊರೇಟ್ ಸ್ನೇಹಿ ಸುಧಾರಣೆಗಳಿಗೆ ವಿರೋಧ
• ಮನರೇಗಾ ಯೋಜನೆ ಕುರಿತ ನಿರ್ಧಾರಗಳನ್ನು ಹಿಂತೆಗೆದುಕೊಳ್ಳಬೇಕು

ಸಿಐಟಿಯು, ಎಐಟಿಯುಸಿ, ಐಎನ್‌ಟಿಯುಸಿ, ಎಚ್‌ಎಂಎಸ್ ಸೇರಿದಂತೆ ಹಲವು ಪ್ರಮುಖ ಕಾರ್ಮಿಕ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.


ರಾಜ್ಯವಾರು ಬಂದ್ ಪರಿಣಾಮ

ನವದೆಹಲಿ: ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆ; ಬ್ಯಾಂಕಿಂಗ್, ವಿಮೆ, ಅಂಚೆ, ಸಾರಿಗೆ, ಆರೋಗ್ಯ ಹಾಗೂ ಗಣಿಗಾರಿಕೆ ಕ್ಷೇತ್ರಗಳಿಗೆ ಪರಿಣಾಮ.

ತಮಿಳುನಾಡು – ಕೇರಳ: ಬಸ್ ಸಂಚಾರದಲ್ಲಿ ವ್ಯತ್ಯಯ; ಕೆಲವು ಕಡೆ ಸರ್ಕಾರದ ಬೆಂಬಲ.

ಗೋವಾ: ಮಿಶ್ರ ಪ್ರತಿಕ್ರಿಯೆ; ಬ್ಯಾಂಕಿಂಗ್ ಸೇವೆಗಳ ಮೇಲೆ ಭಾಗಶಃ ಪರಿಣಾಮ.

ಪಶ್ಚಿಮ ಬಂಗಾಳ: ಜನಜೀವನ ಬಹುತೇಕ ಸಾಮಾನ್ಯ.

ಮಧ್ಯ ಪ್ರದೇಶ: ರಕ್ಷಣಾ ಸಂಸ್ಥೆಗಳ 25 ಸಾವಿರಕ್ಕೂ ಹೆಚ್ಚು ನೌಕರರು ತಡವಾಗಿ ಕರ್ತವ್ಯಕ್ಕೆ ಹಾಜರಾದರು.

ದೇಶಾದ್ಯಂತ ಮುಷ್ಕರದ ಪರಿಣಾಮ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತಿದ್ದು, ಜನಜೀವನದ ಮೇಲೆ ಮಿಶ್ರ ಪರಿಣಾಮ ಕಂಡುಬಂದಿದೆ.

Continue Reading

Trending