Connect with us

ಕ್ರೀಡೆ

ಇದೇ ಕಾರಣಕ್ಕೆ ನಾನು ಟಿ20​ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದೆ: 3 ತಿಂಗಳ ಬಳಿಕ ಸತ್ಯ ಬಿಚ್ಚಿಟ್ಟ ರೋಹಿತ್​ ಶರ್ಮಾ​! – Rohit Sharma T20 Retirement Reason

Published

on

ಹೈದರಾಬಾದ್​: ಈ ವರ್ಷ ಭಾರತ ಕ್ರಿಕೆಟ್​ ತಂಡಕ್ಕೆ ಅದೃಷ್ಟದ ವರ್ಷವೆಂದೇ ಹೇಳಲಾಗುತ್ತಿದೆ. ಕಾರಣ 17 ವರ್ಷಗಳ ಬಳಿಕ ಟೀಂ ಇಂಡಿಯಾ ವಿಶ್ವಕಪ್​ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ಜೂನ್​ ತಿಂಗಳಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​​ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಅಜೇಯವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಮಣಿಸಿ ಎರಡನೇ ಬಾರಿಗೆ ಟಿ20 ವಿಶ್ವಕಪ್​ ಎತ್ತಿ ಹಿಡಿದಿತ್ತು.

2007ರಲ್ಲಿ ಕ್ಯಾಪ್ಟನ್​ ಕೂಲ್ ಧೋನಿ ನಾಯಕತ್ವದಲ್ಲಿ ಭಾರತ ಕಪ್ ಗೆದ್ದಿದ್ದರೇ, ಇದೀಗ 2024ರಲ್ಲಿ ರೋಹಿತ್​ ಶರ್ಮಾ ನಾಯಕತ್ವದಲ್ಲಿ ಈ ಸಾಧನೆ ಮಾಡಿತ್ತು. ಇನ್ನು ಈ ಪಂದ್ಯ ಗೆಲ್ಲುತ್ತಿದ್ದಂತೆ ಹಿಂದೂಸ್ಥಾನದ ಪ್ರತಿ ಮನೆಗಳಲ್ಲಿ ಸಂಭ್ರಮಾಚರಣೆ ಮನೆ ಮಾಡಿತ್ತು. ಅದರಲ್ಲೂ ಕ್ರಿಕೆಟ್ ಅಭಿಮಾನಿಗಳಂತೂ ಪಟಾಕಿ ಸಿಡಿಸಿ ಸಿಹಿ ತಿನಿಸುಗಳನ್ನು ಹಂಚಿ ತಮ್ಮ ಖುಷಿ ವ್ಯಕ್ತಪಡಿಸಿದ್ದರು. ಇಷ್ಟೆಲ್ಲ ಖುಷಿಯಲ್ಲಿರುವಾಗಲೇ ನಾಯಕ ರೋಹಿತ್ ಶರ್ಮಾ ಹಾಗೂ ರನ್ ಮೆಷಿನ್ ವಿರಾಟ್ ಕೊಹ್ಲಿ ದಿಢೀರ್​ ನಿವೃತ್ತಿ ಘೋಷಿಸಿ ಕ್ರೀಡಾ ಪ್ರಿಯರಿಗೆ ಶಾಕ್​ ನೀಡಿದ್ದರು. ಕಪ್ ಗೆದ್ದಿದ್ದಕ್ಕೆ ಸಂಭ್ರಮಿಸಬೇಕೋ ಅಥವಾ ಈ ಆಟಗಾರರು ನಿವೃತ್ತಿ ಘೋಷಿಸಿದ್ದಕ್ಕೆ ಬೇಸರಪಡಬೇಕೋ ಎಂದು ಗೊತ್ತಿಲ್ಲದ್ದ ಸ್ಥಿತಿಗೆ ಅಭಿಮಾನಿಗಳು ತಲುಪಿದ್ದರು.

ರೋಹಿತ್​ ನೀಡಿದ ಕಾರಣ: ಇನ್ಮುಂದೆ ರೋಹಿತ್​ ಮತ್ತು ವಿರಾಟ್​ ಇಲ್ಲದೇ ಟಿ20 ಪಂದ್ಯಗಳನ್ನು ಹೇಗೆ ನೋಡುವುದು ಎಂದು ಅಭಿಮಾನಿಗಳು ದುಃಖ ಹೊರಹಾಕಿದ್ದರು. ಆದರೆ, ತಮ್ಮ ನಿವೃತ್ತಿಗೆ ಕಾರಣ ಏನು ಎಂಬುದರ ಬಗ್ಗೆ ರೋಹಿತ್​​ ಶರ್ಮಾ ಎಲ್ಲೂ ಮಾತನಾಡಿರಲಿಲ್ಲ. ಇದೀಗ 3 ತಿಂಗಳ ಬಳಿಕ ಹಿಟ್​ಮ್ಯಾನ್​ ತಮ್ಮ ನಿವೃತ್ತಿಗೆ ಕಾರಣ ತಿಳಿಸಿದ್ದಾರೆ.

ಹೌದು, ಇತ್ತೀಚೆಗಷ್ಟೇ ಯೂಟ್ಯೂಬ್​ ಚಾನೆಲ್​ವೊಂದರಲ್ಲಿ ನಡೆದ ಸಂದರ್ಶನದಲ್ಲಿ ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ, ವಯಸ್ಸಾಗುತ್ತಿರುವ ಕಾರಣ ಟಿ20ಗೆ ನಿವೃತ್ತಿ ಘೋಷಿಸಿದ್ದೀರಾ ಎಂದು ಆ್ಯಂಕರ್​​ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಹಿಟ್​ಮ್ಯಾನ್​, 17 ವರ್ಷಗಳ ಕಾಲ ಟಿ20 ಸ್ವರೂಪದಲ್ಲಿ ಆಡಿದ್ದೇನೆ. ನನಗೆ ಇನ್ನೂ ಮೂರು ಸ್ವರೂಪದಲ್ಲಿ ಆಡುವ ಸಾಮರ್ಥ್ಯ ಇತ್ತು. ಆದರೆ ಯುವ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನಿವೃತ್ತಿ ಘೋಷಿಸಲು ಇದು ಉತ್ತಮ ಸಮಯವಾಗಿತ್ತು. ಅಲ್ಲದೇ ಮುಂದೆ ಇಂತಹ ಅವಕಾಶ ಸಿಗುವುದಿಲ್ಲ ಎಂದು ಭಾವಿಸಿ ಅಂದೇ ನಾನು ವಿದಾಯ ಹೇಳುವ ತೀರ್ಮಾನ ಮಾಡಿ ಘೋಷಣೆ ಮಾಡಿದೆ ಎಂದು ತಿಳಿಸಿದ್ದಾರೆ.

ಸದ್ಯ ರೋಹಿತ್​ ನಾಯಕತ್ವದಲ್ಲಿ ಭಾರತ ತಂಡ ಬಾಂಗ್ಲಾ ವಿರುದ್ದ ಟೆಸ್ಟ್​ ಸರಣಿ ಆಡುತ್ತಿದ್ದು, ಮೊದಲ ಪಂದ್ಯವನ್ನು 280 ರನ್​ಗಳಿಂದ ಗೆದ್ದಿರುವ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಸನ್ನಾಹದಲ್ಲಿದೆ.

ಕ್ರೀಡೆ

ಕೊಹ್ಲಿ ಹೋಲಿಕೆಗೆ ಬಾಬರ್ ಅಜಮ್ ಕಿಡಿ: ಪತ್ರಿಕಾಗೋಷ್ಠಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ

Published

on

By

ಕರಾಚಿ: ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್‌ಮನ್ Babar Azam ಮತ್ತೆ ಸುದ್ದಿಯಲ್ಲಿದ್ದಾರೆ. Pakistan Super League (PSL 2026) ವೇಳೆ ಪತ್ರಿಕಾಗೋಷ್ಠಿಯಲ್ಲಿ ಕೇಳಲಾದ ಪ್ರಶ್ನೆಗೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿರುವುದು ವೈರಲ್ ಆಗಿದೆ.

ಪೇಶಾವರ್ ಝಲ್ಮಿ ತಂಡದ ನಾಯಕನಾಗಿರುವ ಬಾಬರ್, ಹೈದರಾಬಾದ್ ಕಿಂಗ್ಸ್‌ಮೆನ್ ವಿರುದ್ಧದ ಪಂದ್ಯದಲ್ಲಿ 43 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಪಂದ್ಯವನ್ನು ಕೊನೆಗೊಳಿಸದೆ ಔಟ್ ಆದ ಬಗ್ಗೆ ಪ್ರಶ್ನೆ ಕೇಳಲಾಯಿತು. ವಿಶೇಷವಾಗಿ, ಅವರನ್ನು Virat Kohli ಜತೆ ಹೋಲಿಸಿ ಪ್ರಶ್ನೆ ಕೇಳಿದಾಗ ಬಾಬರ್ ಅಸಮಾಧಾನ ವ್ಯಕ್ತಪಡಿಸಿದರು.

“ಈ ಹೋಲಿಕೆಗಳನ್ನು ಇಲ್ಲಿ ಮುಗಿಸಿಬಿಡಿ. ನಿಮ್ಮಲ್ಲೇ ಇಟ್ಟುಕೊಳ್ಳಿ. ಪಂದ್ಯವನ್ನು ಫಿನಿಶ್ ಮಾಡಿಲ್ಲ ಎಂಬುದು ತಪ್ಪು ಕಲ್ಪನೆ” ಎಂದು ಅವರು ಸ್ಪಷ್ಟವಾಗಿ ಹೇಳಿದರು. ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಬಾಬರ್ ಅಜಮ್ ಅವರನ್ನು ಪಾಕಿಸ್ತಾನದ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲಾದರೂ, ಟಿ20 ಕ್ರಿಕೆಟ್‌ನಲ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ. ಈ PSL ಸೀಸನ್‌ನಲ್ಲಿ ಅವರು ಎರಡು ಪಂದ್ಯಗಳಲ್ಲಿ 82 ರನ್ ಗಳಿಸಿದ್ದರೂ, ಸ್ಟ್ರೈಕ್ ರೇಟ್ ಮತ್ತು ಬೌಂಡರಿಗಳ ಕೊರತೆ ಚರ್ಚೆಗೆ ಕಾರಣವಾಗಿದೆ.

ಒಟ್ಟಿನಲ್ಲಿ, ಕೊಹ್ಲಿ ಹೋಲಿಕೆ ಪ್ರಶ್ನೆ ಮತ್ತೆ ಬಾಬರ್ ಮೇಲೆ ಒತ್ತಡ ಹೆಚ್ಚಿಸಿದ್ದು, ಮುಂದಿನ ಪಂದ್ಯಗಳಲ್ಲಿ ಅವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ಕ್ರೀಡೆ

ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!

Published

on

By

ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.

ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.

ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.

Continue Reading

Trending