ರಾಜಕೀಯ
ಸಿದ್ದರಾಮಯ್ಯನವರು ಏಕೆ ರಾಜೀನಾಮೆ ಕೊಡ್ಬೇಕು, ಹಾಗಾದ್ರೆ ಕುಮಾರಸ್ವಾಮಿ ಕೊಡ್ತಾರಾ: ಅಚ್ಚರಿ ಮೂಡಿಸಿದ ಜಿ ಟಿ ದೇವೇಗೌಡ ಹೇಳಿಕೆ
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಎಫ್ ಐರ್ ದಾಖಲಿಸಿ ತನಿಖೆ ನಡೆಸುತ್ತಿದ್ದರೆ ಇತ್ತ ಇಡಿ ಸಹ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸು ದಾಖಲಿಸುತ್ತಿದ್ದಂತೆ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಗ್ರಹಿಸುತ್ತಿದ್ದರೆ, ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಸಿದ್ದರಾಮಯ್ಯ ಪರವಾಗಿ ಮಾತನಾಡಿ ಅಚ್ಚರಿ ಮೂಡಿಸಿದ್ದಾರೆ.
ಇಂದು ಮೈಸೂರು ದಸರಾ ಉದ್ಘಾಟನೆಯಾದ ನಂತರ ವೇದಿಕೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಾತನಾಡಿ ಸುದ್ದಿಯಾಗಿದ್ದಾರೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದರು. ಹಾಗಾದರೆ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರಾ? ಎಂದು ಜೆಡಿಎಸ್ ನಾಯಕರ ವಿರುದ್ದನೇ ಹರಿಹಾಯ್ದರು. ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು ಹೌದು. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಬಾರಿ ಸಿಎಂ ಆಗಿದ್ದಾರೆ, ಎಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಇದಕ್ಕೆ ಕಾರಣ. ಎಂತಹ ಸಂದರ್ಭದಲ್ಲಿಯೂ ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ ಎಂದರು.
ಉಪ ಚುನಾವಣೆ ವೇಳೆ ಸಿದ್ದರಾಮಯ್ಯರನ್ನು ಸೋಲಿಸಲಿಕ್ಕೆ ನಾವು ತೀರ್ಮಾನ ಮಾಡಿದ್ವಿ. ಆದರೆ ಸಿದ್ದರಾಮಯ್ಯ ಆ ಚುನಾವಣೆಯಲ್ಲಿ ಗೆದ್ದರು. ಇದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರಿಗೆ ಇದೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಕಾರಣ. ಸಚಿವ ಮಹದೇವಪ್ಪ ಎಲ್ಲಾ ಸಚಿವ ಸ್ಥಾನವನ್ನು ಪಡೆದಿದ್ದಾರೆ. ಒಬ್ಬ ದಲಿತ ನಾಯಕನನ್ನು ರಾಜ್ಯ ಮಟ್ಟಕ್ಕೆ ಕೊಂಡೊಯ್ದದ್ದು ಸಿದ್ದರಾಮಯ್ಯ ಎಂದು ಹೇಳುವ ಮೂಲಕ ಸಿಎಂ, ಡಿಸಿಎಂ, ಸಚಿವ ಮಹದೇವಪ್ಪರನ್ನು ಶಾಸಕ ಜಿ ಟಿ ದೇವೇಗೌಡ ಹಾಡಿ ಹೊಗಳಿದರು.
ಸಿದ್ದರಾಮಯ್ಯ ಯಾವತ್ತೂ ಕುಟುಂಬ ನೋಡಿದವರಲ್ಲ. ಈಗ ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್ ಐ ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ, ಜೆಡಿಎಸ್ ನಲ್ಲಿ ಇರೋರು ಇಲ್ವಾ, ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ, ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ, ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ ಎಂದು ಪ್ರಶ್ನಿಸಿದರು.
136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ. ರಾಜೀನಾಮೆ ಕೊಡಿ, ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ? ಒಂದು ಅತ್ಯಾಚಾರ, ಕೊಲೆ ಪ್ರಕರಣವನ್ನು ತಿಂಗಳು ಗಟ್ಟಲೆ ಮಾಧ್ಯಮ ತೋರಿಸುತ್ತದೆ. ಒಂದು ಎಫ್ ಐ ಆರ್ ನಾ ಎಷ್ಟು ದಿನ ತೋರಿಸುತ್ತೀರಾ? ಯಾರ ಯಾರ ಮೇಲೆ ಎಫ್ ಐ ಆರ್ ಆಗಿದ್ಯೋ ಅವರೆಲ್ಲರೂ ರಾಜೀನಾಮೆ ಕೊಡಿ. ಎಲ್ಲಾ ವಿಧಾನಸೌಧದ ಮುಂದೆ ನಿಂತುಕೊಳ್ಳಿ, ಬನ್ನಿ ನೋಡೋಣ. ಕೇಂದ್ರದಿಂದ ರಾಜ್ಯಕ್ಕೆ ಏನು ತರಬೇಕೋ ಅದನ್ನು ನೋಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ ಎಂದು ಕಿಡಿಕಾರಿದರು.
ದೇಶ
638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ
ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.
ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.
ದೇಶ
ಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಅನುಗುಣವಾಗಿ ತಾವು ಹಾಗೂ ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಡಿಕೆ ಸುರೇಶ್ ಅವರು “ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಇನ್ನೇನು ಕೇಳೋದೇ ಇಲ್ಲವಾ ನಿಮಗೆ? ಮೂರು ತಿಂಗಳುಗಳಿಂದ ಇದೇ ವಿಚಾರ ಕೇಳ್ತಿದ್ದೀರಿ. ದಯವಿಟ್ಟು ಇನ್ನು ಮುಂದೆ ಈ ಪ್ರಶ್ನೆ ಕೇಳಬೇಡಿ” ಎಂದು ಅವರು ತಿರುಗೇಟು ನೀಡಿದರು.
ಹೈಕಮಾಂಡ್‌ಗೆ ಎಲ್ಲವೂ ತಿಳಿದಿದ್ದು, ಅಂತಿಮ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. “ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಬೇಕು, ಡಿಕೆ ಶಿವಕುಮಾರ್ ಕೂಡ ನಡೆದುಕೊಳ್ಳಬೇಕು” ಎಂದು ಸಿಎಂ ಹೇಳಿದರು.
ಡಿಕೆ ಸುರೇಶ್ ಅವರ ಹೇಳಿಕೆ ಕುರಿತು ಪ್ರಶ್ನೆ ಕೇಳಿದಾಗ, “ಅವರು ಏನು ಹೇಳಿದ್ರು ಅಂದ್ರೆ ಅವರನ್ನೇ ಕೇಳಿ. ನನಗೆ ಯಾಕೆ ಕೇಳ್ತೀರಾ?” ಎಂದು ಅಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆಗಳು ಜೋರಾಗಿರುವ ನಡುವೆಯೇ ಸಿಎಂ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಚುನಾವಣೆ
BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.
ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.
ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
-
ದೇಶ13 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ20 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ19 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ12 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ20 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ದೇಶ20 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ಕ್ರೀಡೆ13 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ಅಪರಾಧ12 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
