Connect with us

ರಾಜ್ಯ

ಪುಟಾಣಿಗಳಿಂದ ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದಲ್ಲಿ ದಸರಾ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ

ಕಟೀಲು: ನಾಡ ಹಬ್ಬ ದಸರಾ ಹಬ್ಬದ ಪ್ರಯುಕ್ತ ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದಲ್ಲಿ ಪುಟ್ಟ ಮಕ್ಕಳಿಂದ ಭಜನಾ ಕಾರ್ಯಕ್ರಮಗಳನ್ನು ನಡೆಸಿದರು.

ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಾರಥಿನಗರದ ಪುಟ್ಟ ಮಕ್ಕಳು ನಡೆಸಿಕೊಟ್ಟ ಭಜನೆ ಕಾರ್ಯಕ್ರಮ ಎಲ್ಲರ ಮನಸೆಳೆಯಿತು. ಬೆಂಗಳೂರಿನಿಂದ ಬಂದ ಪೋಷಕರಾದ ಹರೀಶ್ ಅವರು ಮಾತನಾಡುತ್ತ ಭಾರತ ದೇಶದಲ್ಲಿ ದಸರಾ ಹಬ್ಬವು ಎಲ್ಲರ ಅಚ್ಚುಮೆಚ್ಚಿನ ಹಬ್ಬವಾಗಿದೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ದಸರಾ ಹಬ್ಬವು ತನ್ನದೇ ಆದ ವೈಶಿಷ್ಟತೆಯನ್ನು ಹೊಂದಿದೆ. ಮೈಸೂರಿನಲ್ಲಿ ನಡೆಯುವ ವಿಶೇಷ ದಸರಾ ಆಚರಣೆಯಂತೆ, ರಾಜ್ಯದ ಪ್ರತಿಯೊಂದು ದೇವಾಸ್ಧಾನದಲ್ಲಿ ದಸರಾವನ್ನು ಅಚರಿಸಲಾಗುವುದು, ಈ ದಸರಾ ಆಚರಣೆಯು ವಿಜಯನಗರ ಯುಗದಲ್ಲಿ ಹೆಚ್ಚು ಸಾಂಸ್ಕೃತಿಕ ಮತ್ತು ಕಲಾತ್ಮಕ ಆಯಾಮವನ್ನು ಪಡೆದುಕೊಳ್ಳಲು ಪ್ರಾರಂಭಿಸಿತು, ಕ್ರಿ.ಶ.1136 ರಿಂದ 1565 ರವರೆಗೆ ವಿಜಯನಗರದ ಅರಸರು ಕಲೆ ಮತ್ತು ಸಂಸ್ಕೃತಿಯ ಮಹತ್ವವನ್ನು ಗುರುತಿಸಿ ಉತ್ಸವಕ್ಕೆ ರಾಜಮನೆತನದ ಆಶ್ರಯವನ್ನು ನೀಡಿದರು, ಈ ಬೆಂಬಲವು ದಸರಾವನ್ನು ಸಂಪೂರ್ಣವಾಗಿ ಧಾರ್ಮಿಕ ಕಾರ್ಯಕ್ರಮದಿಂದ ರಾಜ್ಯದ ಕಲೆ, ಸಾಂಸ್ಕೃತಿಕ ಮತ್ತು ಪರಂಪರೆಯ ಭವ್ಯತೆಯನ್ನು ಹೆಚ್ಚಿಸುತ್ತಿದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.

ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.

ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.

ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:

“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.

Continue Reading

ದೇಶ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರ ಅಂಜನಾದ್ರಿ ಬೆಟ್ಟ ಭೇಟಿ – ಆಂಜನೇಯ ದರ್ಶನ ಪಡೆದು ವಿಶೇಷ ಪೂಜೆ

ಕೊಪ್ಪಳ, ಆಗಸ್ಟ್ 7 – ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ಕುಟುಂಬದ ಸದಸ್ಯರೊಂದಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ವಾಯುಪುತ್ರ ಹನುಮಂತನ ಜನ್ಮಸ್ಥಳವೆಂದು ಪರಿಗಣಿಸಲ್ಪಡುವ ಈ ಪವಿತ್ರ ಸ್ಥಳದಲ್ಲಿ ಅವರು 575 ಮೆಟ್ಟಿಲುಗಳನ್ನು 30 ನಿಮಿಷಗಳಲ್ಲಿ ಏರಿ ಭಕ್ತಿಯಿಂದ ದರ್ಶನ ಪಡೆದರು.


🌄 ಅಂಜನಾದ್ರಿ ಬೆಟ್ಟ – ಭಕ್ತರ ಆಸ್ಥೆಯ ಗಗನಚುಂಬಿ ಸಂಕೇತ

ಅಂಜನಾದ್ರಿ ಬೆಟ್ಟವು ಹನುಮಂತನ ಜನ್ಮಸ್ಥಳ ಎಂಬ ನಂಬಿಕೆಯಿಂದ ಹೆಸರಾಗಿದ್ದು, ಪ್ರತಿದಿನ ನೂರಾರು ಭಕ್ತರು ಇಲ್ಲಿ ಆಗಮಿಸುತ್ತಾರೆ. ಶ್ರೀ ರಾಮ, ಸೀತಾ ದೇವಿಗಳ ಮೂರ್ತಿಗಳೂ ಇಲ್ಲಿ ಪೂಜಿಸಲ್ಪಡುತ್ತವೆ. ಬೆಟ್ಟದ ಶಿಖರದಿಂದ ತುಂಗಭದ್ರಾ ನದಿಯ ನೋಟ, ಸೂರ್ಯಾಸ್ತದ ಸೌಂದರ್ಯ ಮತ್ತು ಹಂಪಿಯ ಇತಿಹಾಸದ ಅವಶೇಷಗಳು ಮನ ಮೋಹಿಸುತ್ತವೆ.


🛕 ಅಂಜನಾದ್ರಿ ಬೆಟ್ಟದ ಪ್ರಮುಖ ಅಂಶಗಳು:

  • 575 ಮೆಟ್ಟಿಲುಗಳನ್ನು ಏರಿ ಸ್ವಾಮಿದರ್ಶನ
  • ರಾಜ್ಯಪಾಲರಿಗೆ ಜಿಲ್ಲಾಡಳಿತದಿಂದ ಸನ್ಮಾನ
  • ದೇವಾಲಯದ ಆಂತರಿಕ ಶ್ರದ್ಧಾ ಭರವಸೆಯ ಸ್ಥಳ
  • ಹಂಪಿಯಿಂದ ನದಿ ದಾಟಿ ಬೋಟ್ ಮೂಲಕ ಪ್ರವೇಶದ ಅನುಕೂಲ
  • ರೈಲು ಮಾರ್ಗ: ಕೊಪ್ಪಳ ಅಥವಾ ಮುನಿರಾಬಾದ್‌ ಮೂಲಕ
  • ರಸ್ತೆ ಸಂಪರ್ಕ ಉತ್ತಮ, ವಿಮಾನ ಸಂಪರ್ಕ ಇಲ್ಲ

📜 ಅಂಜನಾದ್ರಿ ಅಭಿವೃದ್ಧಿಯ ಬಗ್ಗೆ ಸರ್ಕಾರದ ದೃಷ್ಟಿಕೋನ

ಹನುಮ ಮಾಲೆ ಸಂದರ್ಭದಲ್ಲಿ ಸಾವಿರಾರು ಭಕ್ತರು ಇಲ್ಲಿ ಆಗಮಿಸುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಾಗ್ದಾನ ನೀಡಿದ್ದರು. ರಾಜ್ಯ ಸರಕಾರ ಕೂಡ ಈ ಸ್ಥಳವೇ ಆಂಜನೇಯನ ಜನ್ಮಭೂಮಿ ಎಂದು ಧರ್ಮಗ್ರಂಥಗಳ ಆಧಾರದ ಮೇಲೆ ದೃಢಪಡಿಸಿದೆ.

Continue Reading

Trending