ಬೆಂಗಳೂರು
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧದ 2 ಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದಲ್ಲದೇ, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಗೋಪಾಲ್ ಜೋಶಿ ಬಂಧಿಸಬೇಕೆಂದು ಪ್ರತಿಭಟಿಸಿದರು.