Connect with us

ಬೆಂಗಳೂರು

ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

Published

on

ಬೆಂಗಳೂರು: ”ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಹುಳಿ ಹಿಂಡಲು ಕೆಲ ಬಿಜೆಪಿಗರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಹಾಳು ಮಾಡುವ ಹುನ್ನಾರ ನಡೆದಿದೆ. ಸಿ.ಪಿ.ಯೋಗೇಶ್ವರ್ ಅವರು ಮೇಲೆ ಇದ್ದಾರೆ. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ” ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಭಾನುವಾರ ಸಂಜೆ ಮಂಡ್ಯ ಜಿಲ್ಲೆಯಿಂದ ಮರಳಿದ ಬಳಿಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯಾಗಿ ಯೋಗೇಶ್ವರ್​​ಗೆ ಜೆಡಿಎಸ್ ಚಿಹ್ನೆ ಅಡಿ ನಿಲ್ಲಿಸಲಾಗುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿ, ”ಅವರು ಏನು ಮಾಡುತ್ತಾರೆ ಎನ್ನುವುದು ನನಗೆ ಗೊತ್ತಿಲ್ಲ. ಎಲ್ಲವನ್ನೂ ಮಾಧ್ಯಮಗಳಲ್ಲಿ ಗಮನಿಸುತ್ತಿದ್ದೇನೆ. ಅವರು ಬೇರೆ ಬೇರೆ ಪಕ್ಷಗಳ ಮುಖಂಡರ ಜೊತೆ, ಪಕ್ಕದ ಮದ್ದೂರು ಕ್ಷೇತ್ರದ ಶಾಸಕರ ಜೊತೆಯೂ ಸಂಪರ್ಕದಲ್ಲಿದ್ದಾರೆ ಅಂತ ಚರ್ಚೆ ನಡೆಯುತ್ತಿದೆ. ಎಲ್ಲವನ್ನೂ ಬಿಜೆಪಿ ವರಿಷ್ಠರು ಗಮನಿಸುತ್ತಿದ್ದಾರೆ” ಎಂದು ಹೇಳಿದರು.

ಇನ್ನೂ ನಿರ್ಧಾರ ಮಾಡಿಲ್ಲ: ”ಚನ್ನಪಟ್ಟಣ ವಿಚಾರವಾಗಿ ಅಭ್ಯರ್ಥಿ ಘೋಷಣೆ ಬಾಕಿ ಇದೆ. ಈಗಾಗಲೇ ಬಿಜೆಪಿ ವರಿಷ್ಠ ನಾಯಕರೇ ಹಲವು ಬಾರಿ ಹೇಳಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ಕ್ಷೇತ್ರದ ಬಗ್ಗೆ ನೀವೇ ಅಂತಿಮ ನಿರ್ಧಾರ ತೆಗೆದುಕೊಳ್ಳಿ ಎಂದಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಸ್ಪರ್ಧಿಸಿರುವ ಕ್ಷೇತ್ರ ಎನ್ನುವುದು ಅವರಿಗೆ ಗೊತ್ತಿದೆ. ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಚನ್ನಪಟ್ಟಣದಲ್ಲಿ ನಾವು ಘೋಷಣೆ ಮಾಡುತ್ತೇವೆ. ಚನ್ನಪಟ್ಟಣ ವಿಚಾರದಲ್ಲಿ ಇನ್ನೂ ನಾವು ಯಾವುದೇ ನಿರ್ಧಾರ ಮಾಡಿಲ್ಲ” ಎಂದರು.

ನನ್ನ ವರ್ಚಸ್ಸು ಕುಗ್ಗಿಸುವ ಹುನ್ನಾರ: ”ಕಾಂಗ್ರೆಸ್ ನಾಯಕರಲ್ಲಿ ಏನಾದರೂ ಮಾಡಿ ಕುಮಾರಸ್ವಾಮಿ ವರ್ಚಸ್ಸು ಕುಗ್ಗಿಸಬೇಕು ಅನ್ನುವುದು ಕೆಲವರ ಉದ್ದೇಶ. ನಾನು ಎಲ್ಲಾ ಬಿಜೆಪಿ ನಾಯಕರ ಬಗ್ಗೆ ಹೀಗೆ ಹೇಳುತ್ತಿಲ್ಲ. ಕೆಲವರಿಗೆ ಈ ಮೈತ್ರಿಯನ್ನು ಜೀರ್ಣಿಸಿಕೊಳ್ಳುವುದು ಕಷ್ಟವಾಗುತ್ತಿದೆ” ಎಂದು ದೂರಿದರು.

”ಮೈತ್ರಿಯನ್ನು ಹಾಳು ಮಾಡಲು ಕೆಲವರು ಹೀಗೆ ಮಾಡುತ್ತಿರಬಹುದು. ನನ್ನ ಗಮನಕ್ಕೂ ಹಲವಾರು ವಿಚಾರಗಳು ಬರುತ್ತಿವೆ. ಯೋಗೇಶ್ವರ್ ಅವರು ಉಪ ಮುಖ್ಯಮಂತ್ರಿಯನ್ನು ಈಗಾಗಲೇ ಎರಡು ಬಾರಿ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ. ಅವರು ಏತಕ್ಕೆ ಭೇಟಿ ಮಾಡಿದ್ದರು ಎಂಬುದು ನನಗೆ ಬೇಕಿಲ್ಲ” ಎಂದು ಹೇಳಿದರು.

ಬಿಜೆಪಿಯ ಕೆಲವರು ಕಾಂಗ್ರೆಸ್ ಜೊತೆ ಶಾಮೀಲು: ”ಬಿಜೆಪಿಯಲ್ಲಿ ಇರುವಂತಹ ಕೆಲವೇ ಕೆಲವರು ಕುಮಾರಸ್ವಾಮಿಗೆ ದೆಹಲಿಮಟ್ಟದಲ್ಲಿ ಉತ್ತಮ ಬಾಂಧವ್ಯ ಇದೆ. ಹೀಗಾಗಿ, ಅವರಿಗೆ ಏನಾದರೂ ಸಮಸ್ಯೆ ಉದ್ಭವ ಮಾಡಬೇಕು ಎನ್ನುವ ಕಾರಣಕ್ಕೆ ಇಂತಹ ಪ್ರಕರಣಗಳನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಅಂತ ಕೆಲವರು ಮಾತಾಡಿಕೊಳ್ಳುತ್ತಿದ್ದಾರೆ. ಅದು ನನ್ನ ಕಿವಿಗೂ ಬಿದ್ದಿದೆ. ಬಿಜೆಪಿ – ಜೆಡಿಎಸ್ ಮೈತ್ರಿಗೆ ಹುಳಿ ಹಿಂಡುವವರು ಬಹಳಷ್ಟು ಜನ ಇದ್ದಾರೆ. ಒಟ್ಟಾರೆ ಕುಮಾರಸ್ವಾಮಿಯನ್ನು ಹಾಳು ಮಾಡಲು ಹೊರಟಿದ್ದಾರೆ. ಅವರ ಪ್ರಯತ್ನ ಫಲ ಕೊಡುವುದಿಲ್ಲ” ಎಂದು ಕುಮಾರಸ್ವಾಮಿ ಕಿಡಿಕಾರಿದರು.

”ಹುಳಿ ಹಿಂಡುವವರು ನಮ್ಮ ಪಕ್ಷದಲ್ಲಿ ಇಲ್ಲ. ಆದರೆ ಅಲ್ಲಿನ ಹುಳಿ ಹಿಂಡುವವರು ಕಾಂಗ್ರೆಸ್ ನಾಯಕರ ಜೊತೆ ಸೇರಿಕೊಂಡಿದ್ದಾರೆ. ಅದು ನನಗೆ ಗೊತ್ತಿದೆ. ಪ್ರಧಾನಮಂತ್ರಿ ಅವರನ್ನು ಅಸ್ಥಿರಗೊಳಿಸಲು ಅವರು ಕಾಂಗ್ರೆಸ್ ನಾಯಕರೊಂದಿಗೆ ಸೇರಿಕೊಂಡು ಮಸಲತ್ತು ಮಾಡುತ್ತಿರಬಹುದು. ಇದೆಲ್ಲವನ್ನು ಗಮನಿಸುತ್ತಿದ್ದೇನೆ. ಇದಕ್ಕೆ ನಾನು ಅವಕಾಶ ಕೊಡಬೇಕಾ?” ಎಂದು ಪ್ರಶ್ನಿಸಿದರು.

ಇಂತಹ ಕುತಂತ್ರಕ್ಕೆ ನಾನು ಯಾಕೆ ಬಲಿಯಾಗಬೇಕು? ನೋಡೋಣ, ಮುಂದೆ ಅಭ್ಯರ್ಥಿ ತೀರ್ಮಾನ‌ ಮಾಡುತ್ತೇವೆ. ನನಗೆ ಬೇಕಿರುವುದು ಪ್ರಧಾನಮಂತ್ರಿಯವರಿಗೆ ಶಕ್ತಿ ತುಂಬುವುದಷ್ಟೇ. ಆ ನಿಟ್ಟಿನಲ್ಲಿ ನಾನು ತೀರ್ಮಾನ ಮಾಡುತ್ತೇನೆ. ಆ ನಿಟ್ಟಿನಲ್ಲಿ ಚನ್ನಪಟ್ಟಣ ಸೀಟು ಗೆಲ್ಲಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಹುನ್ನಾರಕ್ಕೆ ಬಲಿ ಆಗುವುದಿಲ್ಲ” ಎಂದರು.

ಎನ್‌ಡಿಎ ಅಭ್ಯರ್ಥಿ ನಿಲ್ಲುತ್ತಾರೆ: ನಿಮ್ಮ ಕುಟುಂಬದಿಂದಲೇ ಯಾರಾದರೂ ಸ್ಪರ್ಧೆ ಮಾಡುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿ, ”ಇಲ್ಲಿವರೆಗೂ ಎಲ್ಲೂ ನಮ್ಮ ಕುಟುಂಬದವರು ಸ್ಪರ್ಧೆ ಮಾಡುತ್ತಾರೆ ಎಂದು ನಾನು ಹೇಳಿಲ್ಲ. ನಾನು ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ನೂರು ಬಾರಿ ಹೇಳಿದ್ದಾರೆ. ಚುನಾವಣೆಯಲ್ಲಿ ನಿಲ್ಲಲ್ಲ.. ಇನ್ನು ಮೂರು ವರ್ಷ ಕಾಯುತ್ತೇನೆ ಎಂದು ಅವರು ಹೇಳಿದ್ದಾರೆ. ನಿಖಿಲ್ ಕುಮಾರಸ್ವಾಮಿ ನಿಲ್ಲುತ್ತಾರೆ ಎಂದು ನಾನೇನಾದರೂ ಹೇಳಿದ್ದೀನಾ? ಎನ್‌ಡಿಎ ಅಭ್ಯರ್ಥಿ ನಿಲ್ಲುತ್ತಾರೆ ಎಂದು ನಾನು ಹೇಳಿರುವುದು. ಅದು ಬಿಜೆಪಿಯಿಂದ ಅಥವಾ ಜೆಡಿಎಸ್​ನಿಂದ ಆದರೂ ಆಗಬಹುದು ಅಂತ ಅಷ್ಟೇ. ಅಭ್ಯರ್ಥಿ ನಿಲ್ಲಿಸಲೇಬೇಕಲ್ವಾ? ಪಲಾಯನ ಮಾಡೋಕಾಗುತ್ತಾ?” ಎಂದು ಪ್ರತಿಕ್ರಿಯಿಸಿದರು.

”ಯಾವುದೇ ಕಾರಣಕ್ಕೂ ಕಾಂಗ್ರೆಸ್ ಇಲ್ಲಿ ಲಾಭ ಪಡೆಯಲು ಸಾಧ್ಯವಿಲ್ಲ. ಏಕೆಂದರೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಬಲಯುತವಾಗಿಲ್ಲ. ಆ ಪಕ್ಷಕ್ಕೆ ಅಲ್ಲಿ ಕಾರ್ಯಕರ್ತರ ಪಡೆಯೇ ಇಲ್ಲ. ಹಣದ ಮುಖಾಂತರ ಅಧಿಕಾರದ ದುರುಪಯೋಗದ ಮೂಲಕ ರಾಜಕಾರಣ ಮಾಡಬೇಕು ಅಷ್ಟೆ. ಕಳೆದ 25 ವರ್ಷಗಳಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ 3ನೇ ಸ್ಥಾನದಲ್ಲಿದೆ. ಈಗ ಕಾಂಗ್ರೆಸ್​​ನ ಕುತಂತ್ರಕ್ಕೆ ಕೆಲವರು ಬಲಿಯಾಗಲು ಹೊರಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಅಪರಾಧ

ಆವಲಹಳ್ಳಿ ದಾಳಿ: ಅಕ್ರಮ ಜಿಲೆಟಿನ್ ದಾಸ್ತಾನು ಪತ್ತೆ, 225 ಕಡ್ಡಿ ವಶ

Published

on

ಬೆಂಗಳೂರು: ರಾಜ್ಯ ರಾಜಧಾನಿಯ ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಭಾರಿ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಧಾನಸೌಧ ಲೇಔಟ್‌ ಸಮೀಪದ ಯರಪ್ಪನಹಳ್ಳಿ ಗ್ರಾಮದ ಕ್ವಾರಿ ಮೇಲೆ ದಾಳಿ ನಡೆಸಿದ ಪೊಲೀಸರು ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್‌ಗಳನ್ನು ಪತ್ತೆಹಚ್ಚಿದ್ದಾರೆ.

ಪೊಲೀಸರ ಪ್ರಕಾರ, ವೆಂಕಟೇಶ್ವರ ಗ್ರಾನೈಟ್ಸ್ ಕ್ರಶರ್‌ಗೆ ಸೇರಿದ ಕ್ವಾರಿಯಲ್ಲಿ ಕಲ್ಲುಬಂಡೆಗಳನ್ನು ಸ್ಫೋಟಿಸಲು ಬಳಸುವ 225 ಜಿಲೆಟಿನ್ ಕಡ್ಡಿಗಳು ಹಾಗೂ 50 ಡಿಟೊನೇಟರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಸ್ಥಳೀಯರಿಂದ ಬಂದ ಮಾಹಿತಿಯ ಆಧಾರದ ಮೇಲೆ ಆವಲಹಳ್ಳಿ ಠಾಣೆ ಪೊಲೀಸರು ದಾಳಿ ನಡೆಸಿ ಈ ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.

ಕ್ವಾರಿ ಮಾಲೀಕರಾದ ವೆಂಕಟರಮಣರೆಡ್ಡಿ ಹಾಗೂ ಉಸ್ತುವಾರಿ ಲೋಕೇಶ್‌ರೆಡ್ಡಿ ಅವರು ಸರ್ಕಾರದಿಂದ ಅಗತ್ಯವಾದ ಪರವಾನಗಿ ಪಡೆಯದೇ ಈ ಸ್ಪೋಟಕಗಳನ್ನು ಸಂಗ್ರಹಿಸಿ ಬಳಸುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಜೊತೆಗೆ, ಸುರಕ್ಷತಾ ನಿಯಮಗಳನ್ನು ಪಾಲಿಸದೇ ರಾತ್ರಿ ವೇಳೆ ಕಲ್ಲುಬಂಡೆಗಳನ್ನು ಸ್ಫೋಟಿಸುತ್ತಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಶರ್ ಮಾಲೀಕರು, ಉಸ್ತುವಾರಿ ಹಾಗೂ ಕ್ವಾರಿಯಲ್ಲಿ ಸ್ಫೋಟಕ ಬಳಕೆಯಲ್ಲಿ ತೊಡಗಿದ್ದ ವಿಕಾಸ್, ತೋಹಿದ್ ಮತ್ತು ಸಂದೀಪ್ ವಿರುದ್ಧ ನಿರ್ಲಕ್ಷ್ಯ ಆರೋಪ ಹಾಗೂ ಸ್ಫೋಟಕಗಳ ಕಾಯಿದೆ 1884 ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈ ಸ್ಪೋಟಕಗಳನ್ನು ಕೇವಲ ಕಲ್ಲುಬಂಡೆ ಸ್ಫೋಟಕ್ಕೆ ಮಾತ್ರ ಬಳಸಲಾಗಿತ್ತೇ ಅಥವಾ ಬೇರೆ ದುರುದ್ದೇಶವಿದೆಯೇ ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ. ಈ ನಡುವೆ, ವೈಟ್‌ಫೀಲ್ಡ್ ಉಪ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಸ್ಥಳೀಯ ಪ್ರದೇಶದಲ್ಲಿ ಈ ಘಟನೆ ಆತಂಕ ಮೂಡಿಸಿದ್ದು, ಭದ್ರತಾ ಕ್ರಮಗಳ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ.

Continue Reading

ಅಪರಾಧ

ಬಿಟ್‌ಕಾಯಿನ್ ಹಗರಣ: ನಲಪಾಡ್‌ಗೆ ಎಸ್‌ಐಟಿ ಚಾರ್ಜ್‌ಶೀಟ್ ಶಾಕ್

Published

on

ಬೆಂಗಳೂರು: 6 ವರ್ಷಗಳ ಹಿಂದಿನ ಬಿಟ್‌ಕಾಯಿನ್ ಹಗರಣವು (Karnataka Bitcoin Scam) ಮತ್ತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಮುಖಂಡ Mohammed Nalapad ಅವರಿಗೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ.

ವಿಶೇಷ ತನಿಖಾ ದಳ (SIT) ಇದೀಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ನಲಪಾಡ್ ಕೂಡ ಈ ಹಗರಣದಲ್ಲಿ ಪಾಲುದಾರರಾಗಿದ್ದು ಹಣದ ಲಾಭ ಪಡೆದಿದ್ದಾರೆ ಎಂಬುದನ್ನು ಉಲ್ಲೇಖಿಸಿದೆ. ಹಗರಣದ ಪ್ರಮುಖ ಆರೋಪಿ ಎಂದು ಗುರುತಿಸಲ್ಪಟ್ಟಿರುವ ಹ್ಯಾಕರ್ ಶ್ರೀಕೃಷ್ಣ @ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರೊಂದಿಗೆ ನಲಪಾಡ್ ನಂಟು ಹೊಂದಿದ್ದರೆಂಬ ಅಂಶವೂ ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ.

ಎಸ್‌ಐಟಿ ಆರೋಪಗಳ ಪ್ರಕಾರ, ಬಿಟ್‌ಕಾಯಿನ್ ನಗದೀಕರಣಕ್ಕಾಗಿ ನಲಪಾಡ್ ಅವರು ಹ್ಯಾಕರ್ ಶ್ರೀಕಿಯನ್ನು ಸಂಪರ್ಕಿಸಿದ್ದರೆಂದು ತಿಳಿದುಬಂದಿದೆ. ಮುಂಬೈ ಮೂಲದ ಸ್ನೇಹಿತ ಹಾಗೂ ಖಂಡೇವಾಲ ಮೂಲಕ ಹವಾಲಾ ಜಾಲದ ಮೂಲಕ ಹಣವನ್ನು ನಗದೀಕರಿಸಿರುವ ಆರೋಪವೂ ಇದೆ. ಈ ಪ್ರಕ್ರಿಯೆಯಲ್ಲಿ ಕಮಿಷನ್ ರೂಪದಲ್ಲಿ ನಲಪಾಡ್‌ಗೂ ಹಣ ಸಂದಾಯವಾಗಿರುವುದಾಗಿ ತನಿಖಾ ವರದಿಯಲ್ಲಿ ಹೇಳಲಾಗಿದೆ.

ಇದೀಗ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಕೂಡ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿಗೊಳಿಸಿದೆ. ಇದಕ್ಕೂ ಮುನ್ನ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಅವರನ್ನು ಇಡಿ ಸುಮಾರು 16 ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಈ ನಡುವೆ, Enforcement Directorate ಹಾಗೂ Special Investigation Team Karnataka ತನಿಖೆ ಮುಂದುವರೆಸುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

Continue Reading

ದೇಶ

ಕನಕಪುರದಲ್ಲಿ ಡಿಕೆಶಿ ವರ್ತನೆಗೆ ಬಿಜೆಪಿ ತೀವ್ರ ಆಕ್ರೋಶ

Published

on

ಬೆಂಗಳೂರು: ತಮ್ಮ ತವರು ಕ್ಷೇತ್ರ ಕನಕಪುರದಲ್ಲಿ ನಡೆದ ಒಂದು ಘಟನೆ ಇದೀಗ ರಾಜ್ಯ ರಾಜಕೀಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿಗಳೂ ಆಗಿರುವ D. K. Shivakumar ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಅರ್ಧ ತಿಂದ ಸೇಬುಗಳನ್ನು ಕಾರ್ಯಕರ್ತರತ್ತ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಭಾನುವಾರ ಕನಕಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ, ಸೇಬುಗಳಿಂದ ತಯಾರಿಸಿದ ಬೃಹತ್ ಹಾರವನ್ನು ಕ್ರೇನ್ ಮೂಲಕ ಡಿ.ಕೆ.ಶಿವಕುಮಾರ್ ಅವರಿಗೆ ಹಾಕಲಾಗಿತ್ತು. ಕಾರ್ಯಕ್ರಮದ ಬಳಿಕ ಅವರು ಎರಡು ಸೇಬುಗಳನ್ನು ಕಚ್ಚಿ ತಿಂದ ನಂತರ ಉಳಿದ ಅರ್ಧ ಸೇಬುಗಳನ್ನು ಒಂದರ ನಂತರ ಒಂದಾಗಿ ಪಕ್ಷದ ಕಾರ್ಯಕರ್ತರತ್ತ ಎಸೆದು ಸ್ಥಳದಿಂದ ತೆರಳಿದ್ದಾರೆ. ಈ ಘಟನೆ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ರಾಜಕೀಯ ಚರ್ಚೆ ತೀವ್ರಗೊಂಡಿದೆ.

ಈ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿರುವ Bharatiya Janata Party, ಈ ನಡೆ ಕಾಂಗ್ರೆಸ್ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದೆ. ಎಕ್ಸ್ (ಹಳೆಯ ಟ್ವಿಟರ್)ನಲ್ಲಿ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಮತದಾರರ ಮೇಲೆ ಗೌರವವಿಲ್ಲದ ವರ್ತನೆ ಇದು ಎಂದು ಕಿಡಿಕಾರಿದೆ. “ಯಾರ ಮತಗಳಿಂದ ಅಧಿಕಾರಕ್ಕೆ ಬಂದಿದ್ದಾರೋ ಅವರ ಮೇಲೆಯೇ ಅವಮಾನಕಾರಿ ನಡೆ ತೋರಿಸುವುದು ಸರಿಯಲ್ಲ” ಎಂದು ಬಿಜೆಪಿ ಹೇಳಿದೆ.

ಇದೇ ವೇಳೆ, ಸಾರ್ವಜನಿಕ ಗೌರವವನ್ನು ಮಾತಿನಲ್ಲಿ ಅಲ್ಲ, ನಡೆ-ನುಡಿಯಲ್ಲಿ ತೋರಿಸಬೇಕು ಎಂಬ ಸಂದೇಶವನ್ನು ಬಿಜೆಪಿ ನೀಡಿದೆ. ಸಾರ್ವಜನಿಕರು ಭಿಕ್ಷೆ ಬೇಡುವವರಲ್ಲ, ಗೌರವಕ್ಕೆ ಅರ್ಹರು ಎಂದು ಕೂಡ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ರಾಜಕೀಯ ವಾಗ್ವಾದವನ್ನು ಮತ್ತಷ್ಟು ತೀವ್ರಗೊಳಿಸಿದೆ.

Continue Reading

Trending