Connect with us

ಬೆಂಗಳೂರು

ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ: ಸಿಪಿ ಯೋಗೇಶ್ವರ್

ಬೆಂಗಳೂರು: ಜೆಡಿಎಸ್‌ನಿಂದ (JDS) ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ (CP Yogeshwar) ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ವಿಚಾರವಾಗಿ ನಾನು ಅವಕಾಶ ಕೊಟ್ಟರೆ ಎನ್‌ಡಿಎ (NDA) ಅಭ್ಯರ್ಥಿ ಆಗುತ್ತೇನೆ. ಆದರೆ ಅವಕಾಶ ಸಿಗಬೇಕು ಅಷ್ಟೇ. ನಾನು ನನ್ನ ಪಾರ್ಟನರ್ ಕುಮಾರಸ್ವಾಮಿ (HD Kumaraswamy) ಮೂರು ದಿನಗಳಿಂದ ಚರ್ಚೆ ಮಾಡುತ್ತಿದ್ದೇವೆ. ನಾನು ಜೆಡಿಎಸ್‌ನಿಂದ ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಆದರೆ ಅವರು ಆಗಲ್ಲ ಅಂತಿದ್ದಾರೆ. ಕುಮಾರಸ್ವಾಮಿ ಮನಸ್ಸಿನಲ್ಲಿ ಅವರ ಮಗನಿಗೆ ಟಿಕೆಟ್ ಕೊಡಬೇಕು ಎಂದು ಆಸೆ ಇದೆ. ಅವರ ಮನಸಲ್ಲೇ ಆತರಹ ಇದ್ದರೆ ಏನು ಮಾಡೋದಕ್ಕೆ ಆಗುತ್ತದೆ ಎಂದು ಪ್ರಶ್ನಿಸಿದರು.

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರು ಅವರ ಕುಟುಂಬದವರಿಗೇ ಟಿಕೆಟ್ ಕೊಡಬೇಕು ಎಂದು ಆಸೆಯಿದೆ. ತಾವು ರಾಜೀನಾಮೆ ಕೊಟ್ಟ ನಂತರದಿಂದಲೂ ನಿಖಿಲ್‌ಗೆ ನಿಲ್ಲಿಸಬೇಕು ಎಂದು ಅವರ ಮನಸಿನಲ್ಲಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತಿದ್ದಾರೆ. ಮನಸಲ್ಲಿ ಆ ಭಾವನೆ ಇರುವಾಗ ಏನು ಬಲವಂತ ಸಾಧ್ಯ? ಜೆಡಿಎಸ್ ಚಿನ್ಹೆಯಲ್ಲಿ ನಿಲ್ಲಿ ಎಂದು ಅವರು ಮುಕ್ತವಾಗಿ ಹೇಳಿಲ್ಲ. ಅವರ ಪಕ್ಷದ ಮುಖಂಡರು ಬಂದಾಗ ಹೇಳಿದ್ದರೂ ಅಷ್ಟೇ. ನಾನು ನನ್ನ ತಾಲೂಕಿನ ಜನರ ಜೊತೆಗೂ ಇದರ ಬಗ್ಗೆ ಚರ್ಚೆ ಮಾಡಿದ್ದೇನೆ. ಬಹಳ ಭಿನ್ನಾಭಿಪ್ರಾಯ ಬಂದಿದೆ. ಇಷ್ಟು ವರ್ಷ ವಿರೋಧ ಮಾಡಿಕೊಂಡು ಬಂದಿದ್ದೀರಿ, ಈಗ ಮೈತ್ರಿ ಆಗಿದೆ. ಈಗ ಅನಾವಶ್ಯಕವಾಗಿ ಜೆಡಿಎಸ್‌ಗೆ ಹೋಗುವುದು ಬೇಡ ಅಂತ ತಾಲೂಕಿನಲ್ಲಿ ಅಭಿಪ್ರಾಯ ಬಂದಿದೆ. ಮೊದಲೇ ನನಗೆ ಪಕ್ಷಾಂತರಿ ಎಂದು ಕರೆಯುತ್ತಾರೆ. ಹಾಗಾಗಿ ಬಿಜೆಪಿಯಿಂದಲೇ ನಿಲ್ಲಿ ಎಂದು ಹೇಳುತ್ತಿದ್ದಾರೆ. ನಾನು ಬಿಜೆಪಿಯಿಂದಲೇ ನಿಲ್ಲಲು ನಿರ್ಧರಿದ್ದೇನೆ. ಆದರೆ ನನಗೆ ಯಾರೂ ಬೆಂಬಲ ಕೊಡುತ್ತಿಲ್ಲ ಎಂದು ಹೇಳಿದರು.

ಆರೋಪ ಮಾಡಬೇಡಿ
ಯೋಗೀಶ್ವರ್ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದಾರೆಂಬ ಹೆಚ್‌ಡಿಕೆ ಆರೋಪ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿಯವರೇ ನನ್ನ ಮೇಲೆ ಅನಾವಶ್ಯಕವಾಗಿ ಆರೋಪ ಮಾಡುವ ಅಗತ್ಯ ಇಲ್ಲ. ಟಿಕೆಟ್ ಕೊಡದಿದ್ದರೆ ನಿಮ್ಮ ಮಗನಿಗೇ ಕೊಡಿ. ಆದರೆ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದೆ ಎಂದು ಅನಾವಶ್ಯಕ ಆರೋಪ ಮಾಡುವುದು ಬೇಡ. ನಾನು ಇಲ್ಲಿಯವರೆಗೆ ಕಾಂಗ್ರೆಸ್‌ನ ಯಾವ ನಾಯಕರನ್ನೂ ಭೇಟಿ ಮಾಡಿಲ್ಲ. ಭೇಟಿ ಮಾಡಿದರೂ ತಪ್ಪೇನಿಲ್ಲ ಆದರೆ ಇಲ್ಲಿಯವರೆಗೆ ಯಾರನ್ನೂ ಭೇಟಿ ಮಾಡಿಲ್ಲ. ಭೇಟಿ ಆಗುವುದಾದರೇ ಭೇಟಿ ಆಗುತ್ತೇನೆ. ಮುಚ್ಚುಮರೆ ಮಾಡಲ್ಲ. ಆದರೆ ಈವರೆಗೆ ಯಾರನ್ನೂ ಭೇಟಿ ಮಾಡಿಲ್ಲ ಎಂದರು.

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂದು ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಈ ಸಂದರ್ಭದಲ್ಲಿ ಯಡಿಯೂರಪ್ಪನವರು ಈ ಹೇಳಿಕೆ ಕೊಡುವ ಅಗತ್ಯವಿರಲಿಲ್ಲ. ಅವರೇ ತೀರ್ಮಾನ ಮಾಡಬೇಕು. ಆದರೆ ಕುಮಾರಸ್ವಾಮಿ ಅವರಿಗೆ ದೊಡ್ಡ ಮನಸು ಇದ್ದಿದ್ದರೆ ಅನುಕೂಲ ಆಗುತ್ತಿತ್ತು. ಅವರು ಉದ್ದೇಶಪೂರ್ವಕ ಈ ಹೇಳಿಕೆ ಕೊಟ್ಟಿದ್ದಾರೆ. ಇದರ ಹಿಂದೆ ದುರುದ್ದೇಶ ಇದೆ ಎಂದು ಕಿಡಿಕಾರಿದರು.

ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ಜೆಡಿಎಸ್ ಆಫರ್‌ನ್ನು ತಿರಸ್ಕರಿಸಿ, ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡು ಇದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದರು.

ಬೆಂಗಳೂರು

ಕಾಲ್ತುಳಿತ ದುರಂತ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ ಜೂ.​ 24 ಕೊನೆಯ ದಿನ: ನಿವೃತ್ತ ನ್ಯಾಯಾಧೀಶರಿಂದ ಜಾಹೀರಾತು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವು ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗವು ವಿಚಾರಣೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ದುರ್ಘಟನೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ.

ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದರೆ ಹಾಗೂ 50ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದರು. ರಾಜ್ಯ ಸರ್ಕಾರವು ಮ್ಯಾಜಿಸ್ಟ್ರೇಟ್, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರಾದ ಕುನ್ನಾ ಅವರ ನೇತೃತ್ವದ ಆಯೋಗ ರಚಿಸಿದೆ. ಈ ಸಂಬಂಧ ಪ್ರತ್ಯೇಕ ತನಿಖೆ ನಡೆಸುತ್ತಿದೆ. ದುರ್ಘಟನೆ ವೇಳೆ ಘಟನೆಯ ವಾಸ್ತವಾಂಶದ ವಿವರಗಳು, ಮಾಹಿತಿ ಹಾಗೂ ಸತ್ಯ ಸಂಗತಿಗಳ ತಿಳಿದಿರುವ ಸಾರ್ವಜನಿಕರು ಆಯೋಗಕ್ಕೆ ತಿಳಿಸಬಹುದಾಗಿದೆ.

ತನಿಖಾ ಆಯೋಗಕ್ಕೆ ಹೇಳಿಕೆ ನೀಡಲು ಹಾಗೂ ಸಾಕ್ಷ್ಯ ದಾಖಲೆಗಳನ್ನು ಒದಗಿಸಲು ಇಚ್ಛಿಸುವವರು ಎರಡು ಪ್ರತಿಗಳಲ್ಲಿ ದೃಢೀಕೃತ ಪ್ರಮಾಣ ಪತ್ರದೊಂದಿಗೆ ಸಲ್ಲಿಸಬಹುದಾಗಿದೆ. ಜೂನ್ 24ರ ಒಳಗೆ ಸಹಿ ಮಾಡಿದ ಹಾಗೂ ಸ್ಕ್ಯಾನ್ ಮಾಡಿದ ಪ್ರಮಾಣಪತ್ರ ಹಾಗೂ ದಾಖಲೆಗಳೊಂದಿಗೆ cdinqcom@gmail.com ಕಳುಹಿಸಬೇಕು.

ಅಲ್ಲದೇ ಕೊಠಡಿ ಸಂಖ್ಯೆ 12, ಒಂದನೇ ಮಹಡಿ, ಹಳೆಕಟ್ಟಡ, ಕುಮಾರಕೃಪಾ ಅತಿಥಿ ಗೃಹ, ಬೆಂಗಳೂರು-560001. ಈ ಕಚೇರಿ ವಿಳಾಸಕ್ಕೆ ಕೊರಿಯರ್ ಮಾಡಬಹುದಾಗಿದೆ ಎಂದು ದಿನಪತ್ರಿಕೆಗಳಲ್ಲಿ ಒಳಾಡಳಿತ ಇಲಾಖೆಯು ಜಾಹೀರಾತು ನೀಡಿದೆ

Continue Reading

ಬೆಂಗಳೂರು

 ಇಂದು ಶ್ರೀನಿವಾಸಪುರ ತಾಲೂಕು ಬಂದ್

ಕೋಲಾರ: ಹಣ್ಣುಗಳ ರಾಜ ಮಾವಿನ ಹಣ್ಣಿಗೆ (Mango) ಬೆಲೆ ಕುಸಿದ ಹಿನ್ನೆಲೆ ಇಂದು ಕೋಲಾರದ (Kolar) ಶ್ರೀನೀವಾಸಪುರ (Srinivaspur) ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.

ಮಾವು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಿದ್ದು, ಮಾವು ಬೆಳೆಗಾರರರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಸಾಥ್ ಕೊಟ್ಟಿವೆ. ಮಾವು ಬೆಳೆಗೆ ಬೆಲೆ ಕುಸಿತ ಹಿನ್ನೆಲೆ ಕಂಗಾಲಾಗಿರುವ ಮಾವು ಬೆಳೆಗಾರರು, ಆಂದ್ರಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಬಂದ್‌ಗೆ ಕರೆ ಕೊಡಲಾಗಿದೆ. ಮಾವು ಬೆಳೆಗಾರರ ಬಂದ್‌ಗೆ ಬಿಜೆಪಿ, ಜೆಡಿಎಸ್ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಒಂದು ಟನ್ ಮಾವು 3 ರಿಂದ 4 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ.

ಇನ್ನು ಶ್ರೀನಿವಾಸಪುರದಲ್ಲಿ ಮಾವು ರಸ್ತೆಯಲ್ಲಿ ಸುರಿದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸಪುರದ ಬಸ್ ನಿಲ್ದಾಣದಲ್ಲಿ ಮಾವು ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Continue Reading

ಬಿಬಿಎಂಪಿ

ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಜು.1ರಿಂದ ಹೊಸ ನಿಯಮ ಜಾರಿಗೆ..!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶಿಸಿದೆ.

ಈ ಸಂಬಂಧ ಸೋಮವಾರ ಆದೇಶ ಹೊರಡಿಸಿರುವ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ ಅವರು, ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿದೆ. ಆದುದರಿಂದ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆಇ-ಖಾತಾವನ್ನು ಆನ್‌ಲೈನ್‌ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿಸಲ್ಲಿ ಸುವವರು ಮೊದಲು ಇ- ಖಾತಾವನ್ನು ಪಡೆದಿರಬೇಕಿದೆ.

ಹೀಗಾಗಿ ಜು. 1ರಿಂದ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರುಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇ-ಖಾತಾ ಸಲ್ಲಿಸದ ಅರ್ಜಿಗಳನ್ನು ಕಟ್ಟಡ ನಕ್ಷೆ ಮಂಜೂರಾತಿಗೆ ಪರಿಗಣಿಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು, ನಂಬಿಕೆಯೊಂದಿಗೆ ಪರಿಶೀಲನೆ ವ್ಯವಸ್ಥೆ ಅಡಿಯಲ್ಲಿ ನಿಗದಿತ ಕಾಲಮಿತಿಯಲ್ಲಿ ತಾತ್ಕಾಲಿಕ ನಕ್ಷೆ ಮಂಜೂರಾತಿ ಹೊಣೆಯನ್ನು ಸಂಬಂಧಪಟ್ಟ ಸಹಾಯಕ ನಿರ್ದೇಶಕ (ನಗರ ಯೋಜನೆ) ಅವರಿಗೆ ನೀಡಲಾಗಿದೆ. ಒಂದು ವೇಳೆ ಸಹಾಯಕ ನಿರ್ದೇಶಕ (ನಗರ ಯೋಜನೆ) ನಿಗದಿತ ಕಾಲ ಮಿತಿಯಲ್ಲಿ ಅರ್ಜಿಗಳನ್ನು ಪರಿಶೀಲಿಸದಿದ್ದರೆ ತಂತ್ರಾಶದಲ್ಲಿ ಅರ್ಜಿಗಳಿಗೆ ಸ್ವಯಂಚಾಲಿತವಾಗಿ ಡೀಮ್ಡ್ ಅನುಮೋದನೆ ದೊರೆಯಲಿದೆ.

ಒಂದು ವೇಳೆ ನಕ್ಷೆ ಮಂಜೂರಾತಿ ಅರ್ಜಿಗಳು ಇ-ಖಾತಾ ಸೇರಿದಂತೆ ಇನ್ನಿತರ ದಾಖಲೆಗಳನ್ನು ಸಲ್ಲಿಸದೇ ಡೀಮ್ ಅನುಮೋದನೆ ದೊರೆತರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಿ ನಿಯಮದ ಪ್ರಕಾರ ಶಿಸ್ತು ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

5 ಲಕ್ಷ ನಾಗರಿಕರಿಗೆ ಅಂತಿಮ ಇ-ಖಾತಾ ವಿತರಣೆ

ಬಿಬಿಎಂಪಿ ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೂ 5 ಲಕ್ಷ ನಾಗರಿಕರು ಅಂತಿಮ ಇ-ಖಾತಾ ಪಡೆದಿದ್ದಾರೆ ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್ ತಿಳಿಸಿದ್ದಾರೆ.

25 ಲಕ್ಷಕ್ಕಿಂತ ಹೆಚ್ಚು ಕರಡು ಇ-ಖಾತಾಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ನಾಗರಿಕರು ತಮ್ಮ ಆಧಾರ್‌ ಸಂಖ್ಯೆ, ಮಾರಾಟ ದಸ್ತಾವೇಜಿನ ಸಂಖ್ಯೆ, ಆಸ್ತಿಯ ತೆರಿಗೆ ಐ.ಡಿ, ಬೆಸ್ಕಾಂ ಸಂಖ್ಯೆ (ಖಾಲಿ ಜಾಗಕ್ಕೆ ಐಚ್ಛಿಕ) ಮತ್ತು ಆಸ್ತಿಯ ಫೋಟೋ ಹಾಕಬೇಕು. ಈ ಮಾಹಿತಿಗಳನ್ನು ನೀಡಿದ ನಂತರ ನಾಗರಿಕರಿಗೆ ಅಂತಿಮ ಇ-ಖಾತಾ ಕನಿಷ್ಠ 1 ರಿಂದ 2 ದಿನಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ನಡೆಸುತ್ತಿದ್ದಾರೆ. ಮತ್ತು ಇಷ್ಟೇ ಸಂಖ್ಯೆಯವರಿಗೆ ಇ-ಖಾತಾ ಅನುಮೋದನೆ ದೊರೆಯುತ್ತಿದೆ. ಈವರೆಗೆ ಸುಮಾರು 5 ಲಕ್ಷ ನಾಗರಿಕರು ತಮ್ಮ ಇ-ಖಾತಾ ಪಡೆದುಕೊಂಡಿದ್ದಾರೆ. ಅರ್ಜಿ ಸಲ್ಲಿಕೆಯಾದ 1 ರಿಂದ 2 ದಿನಗಳಲ್ಲಿ ಇ-ಖಾತಾ ಅನುಮೋದಿತವಾಗಲಿದೆ. ನಾಗಕರಿರು ಇ-ಖಾತಾವನ್ನು ಆನ್‌ಲೈನ್‌ BBMPeAasthi.karnataka.gov.in ಮೂಲಕ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ

Continue Reading
Advertisement

Trending