Connect with us

ದೇಶ

ನಾಳೆಯೇ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ: 3 ರಾಜ್ಯಗಳ ಸಿಎಂಗಳು ಸೇರಿ ಘಟಾನುಘಟಿಗಳ ಉಪಸ್ಥಿತಿ

ವಯನಾಡು, ಕೇರಳ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಕೇರಳದ ವಯನಾಡುಗೆ ಭೇಟಿ ನೀಡಲಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಂದು ನಾಮಪತ್ರ ಸಲ್ಲಿಸಲಿದ್ದು, ತಾಯಿ ಸೋನಿಯಾ ಈ ಸಂದರ್ಭದಲ್ಲಿ ಅವರ ಜೊತೆಗಿರಲಿದ್ದಾರೆ. ಇದಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳು ಮತ್ತು ಇತರ ರಾಷ್ಟ್ರೀಯ ಹಿರಿಯ ಕಾಂಗ್ರೆಸ್ ನಾಯಕರು ಕೂಡ ಬುಧವಾರ ಕೇರಳಕ್ಕೆ ಭೇಟಿ ನೀಡಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರೋಡ್​ ಶೋ: ಪ್ರಿಯಾಂಕಾ ಗಾಂಧಿಯವರ ನಾಮಪತ್ರ ಸಲ್ಲಿಕೆಗೂ ಮುಂಚೆ ಕಲ್ಪೆಟ್ಟಾದಲ್ಲಿ ರೋಡ್ ಶೋ ನಡೆಯಲಿದೆ. ಈ ರೋಡ್ ಶೋನ ಕೊನೆಯ ಕ್ಷಣದ ವ್ಯವಸ್ಥೆಗಳ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕಾಸರಗೋಡು ಲೋಕಸಭಾ ಸದಸ್ಯ ರಾಜ್ ಮೋಹನ್ ಉನ್ನಿಥಾನ್ ಅವರು ಐಎಎನ್​​ಎಸ್ ನೊಂದಿಗೆ ಮಾತನಾಡಿ, “ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಂಗಳವಾರ ಮೈಸೂರಿಗೆ ತಲುಪಿ, ಅವತ್ತು ಸಂಜೆ ಅಲ್ಲಿಂದ ನೇರವಾಗಿ ವಯನಾಡ್​ಗೆ ಆಗಮಿಸಲಿದ್ದಾರೆ” ಎಂದು ಹೇಳಿದರು.

ಬುಧವಾರ ಕಣ್ಣೂರು ತಲುಪಲಿರುವ ಸೋನಿಯಾ: “ಸೋನಿಯಾ ಗಾಂಧಿ ಬುಧವಾರ ಕಣ್ಣೂರಿಗೆ ತಲುಪಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಪ್ರಿಯಾಂಕಾ ನಾಮಪತ್ರ ಸಲ್ಲಿಸುವ ಮುನ್ನ ವಯನಾಡ್ ತಲುಪಲಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಅವತ್ತು ವಯನಾಡ್​ಗೆ ಬರಲಿದ್ದಾರೆ.” ಎಂದು ಉನ್ನಿಥಾನ್ ಮಾಹಿತಿ ನೀಡಿದರು. ಒಂದು ದಶಕದ ನಂತರ ಸೋನಿಯಾ ಗಾಂಧಿ ಅವರು ಕೇರಳಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.

ಪ್ರಿಯಾಂಕಾಗೆ ಪತಿ ವಾದ್ರಾ, ಸೋನಿಯಾ – ರಾಹುಲ್ ಸಾಥ್​:​“ಬುಧವಾರ ನಾಮಪತ್ರ ಸಲ್ಲಿಸುವ ಮೊದಲು ಪ್ರಿಯಾಂಕಾ ಮತ್ತು ಇತರ ನಾಯಕರು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಆದರೆ ಸೋನಿಯಾ ಗಾಂಧಿ ರೋಡ್ ಶೋನಲ್ಲಿ ಭಾಗವಹಿಸಲ್ಲ. ಪ್ರಿಯಾಂಕಾ ನಾಮಪತ್ರ ಸಲ್ಲಿಸುವಾಗ ಸೋನಿಯಾ ಅವರೊಂದಿಗೆ ಇರಲಿದ್ದಾರೆ. ಪ್ರಿಯಾಂಕಾ ಅವರೊಂದಿಗೆ ರಾಬರ್ಟ್ ವಾದ್ರಾ ಮತ್ತು ರಾಹುಲ್ ಗಾಂಧಿ ಕೂಡ ಇರಲಿದ್ದಾರೆ” ಎಂದು ಉನ್ನಿಥಾನ್ ಹೇಳಿದರು.

ಪ್ರಿಯಾಂಕಾ ಮತ್ತು ರಾಹುಲ್ ಮಂಗಳವಾರ ರಾತ್ರಿ ಸುಲ್ತಾನ್ ಬತ್ತೇರಿಯಲ್ಲಿ ಉಳಿಯಲಿದ್ದು, ಅವರ ತಾಯಿ ಸೋನಿಯಾ ಗಾಂಧಿ ಬುಧವಾರ ಅವರೊಂದಿಗೆ ಸೇರಲಿದ್ದಾರೆ ಎಂದು ಉನ್ನಿಥಾನ್ ಹೇಳಿದರು. “ಪ್ರಿಯಾಂಕಾ ಮುಂದಿನ ವಾರ ಮತ್ತೆ ವಯನಾಡ್​ಗೆ ಭೇಟಿ ನೀಡಿ, ಆದಷ್ಟೂ ಹೆಚ್ಚು ಜನರನ್ನು ಭೇಟಿಯಾಗಲಿದ್ದಾರೆ. ಅವರು ಐದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬುದರಲ್ಲಿ ನಮಗೆ ಯಾವುದೇ ಸಂದೇಹವಿಲ್ಲ” ಎಂದು ಉನ್ನಿಥಾನ್ ತಿಳಿಸಿದ್ದಾರೆ.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending