ಬೆಂಗಳೂರು
ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಏನಾಗಿರಲಿಲ್ಲ: ಆರ್ ಅಶೋಕ್
ಬೆಂಗಳೂರು: ಕಾಂಗ್ರೆಸ್ (Congress) ಬದಲು ಜೆಡಿಎಸ್ನಿಂದಲೇ (JDS) ಯೋಗೇಶ್ವರ್ ನಿಲ್ಲಬಹುದಿತ್ತು. ಎನ್ಡಿಎಗೆ ಅನುಕೂಲ ಆಗುತ್ತಿತ್ತು. ಸಿಪಿವೈ (CP Yogeshwar) ಈಗ ಪಕ್ಷ ದ್ರೋಹ ಮಾಡಿ ಹೋಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok) ಕಿಡಿಕಾರಿದ್ದಾರೆ.
ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಏನಾಗಿರಲಿಲ್ಲ. ಬಿಜೆಪಿಯ ಸಿದ್ಧಾಂತದಿಂದ ಬಂದವರಲ್ಲ. ಸೈಕಲ್ ಪಾರ್ಟಿ, ಪಕ್ಷೇತರ, ಬೇರೆ ಬೇರೆ ಪಕ್ಷದಿಂದ ಬಂದವರು. ನಾವೂ ಕೂಡ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಗಂಭೀರವಾಗಿ ಮಾಡಿದ್ದೆವು, ಹೈಕಮಾಂಡ್ ಜೊತೆ ಚರ್ಚೆ ಮಾಡಿದ್ದೆವು. ಅವರು ಐದು ಕಡೆಯಿಂದ ಬಿ ಫಾರಂ ತಂದಿದ್ದರು ಎಂದು ಸುದ್ದಿ ಇದೆ. ನಮ್ಮ ಮಾತು ಕೇಳದೆ ಕಾಂಗ್ರೆಸ್ ಸೇರಿದ್ದಾರೆ ಎಂದರು.
ನಾವೆಲ್ಲರೂ ಇದು ಜೆಡಿಎಸ್ ಟಿಕೆಟ್, ಹೆಚ್ಡಿಕೆ ಅವರೇ ತೀರ್ಮಾನ ಮಾಡಬೇಕು ಅಂತನೇ ಹೇಳಿಕೊಂಡು ಬಂದಿದ್ದೆವು. ಹೆಚ್ಡಿಕೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಜೆಡಿಎಸ್ ಚಿನ್ಹೆಯಡಿ ಸ್ಪರ್ಧೆಗೆ ಆಫರ್ ಕೊಟ್ಟರು. ಯಾವ ಚಿನ್ಹೆ ಆದರೇನು ಇಲ್ಲಿದ್ದರೆ ಎನ್ಡಿಎಯಿಂದನೇ ಸ್ಪರ್ಧೆ ಮಾಡುತ್ತಿದ್ದರು. ಸಿಪಿವೈ ನಮ್ಮಲ್ಲಿ ಸೀನಿಯರ್ ಲೀಡರ್ ಆಗಿದ್ದರು. ಈಗ ಕಾಂಗ್ರೆಸ್ನಲ್ಲಿ ಲಾಸ್ಟ್ ಬೆಂಚ್ ಆಗುತ್ತಾರೆ. ಅವರನ್ನು ಅಲ್ಲಿ ಬೆಳೆಯಲು ಡಿಕೆಶಿ ಬಿಡಲ್ಲ. ಕಾಂಗ್ರೆಸ್ ಸೇರಿ ಸಿಪಿವೈ ತಮ್ಮ ಭವಿಷ್ಯ ಹಾಳು ಮಾಡಿಕೊಂಡರು ಎಂದು ವಾಗ್ದಾಳಿ ನಡೆಸಿದರು.
ದೇಶ
“ಡಿಕೆಶಿ ಗುಂಪುಕಟ್ಟುವ ರಾಜಕಾರಣಿ ಅಲ್ಲ”; ಶಾಸಕ ಬಾಲಕೃಷ್ಣ
ನವದೆಹಲಿ: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಮಾಗಡಿ ಶಾಸಕ H. C. Balakrishna ಡಿಸಿಎಂ D. K. Shivakumar ಪರವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. “ಡಿಕೆ ಶಿವಕುಮಾರ್ ಅವರು ಗುಂಪುಕಟ್ಟಿಕೊಂಡು ರಾಜಕೀಯ ಮಾಡುವವರಲ್ಲ. ಅವರು ಹೈಕಮಾಂಡ್ಗೆ ನಿಷ್ಠೆಯಿಂದ ಇರುವ ನಾಯಕ” ಎಂದು ಹೇಳಿದ್ದಾರೆ.
ದೆಹಲಿಯಲ್ಲಿ https://hosasuddi.in/ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ Siddaramaiah ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಚರ್ಚೆಗೆ ಕರೆದಿರುವುದರಿಂದ ಇಂದು ಏನಾದರೂ ಸ್ಪಷ್ಟ ತೀರ್ಮಾನ ಹೊರಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
“ರಾಜ್ಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು. ಎಲ್ಲವೂ ಸ್ಪಷ್ಟವಾಗಬೇಕು. ಮುಂದಿನ ಚುನಾವಣೆಯ ದೃಷ್ಟಿಯಿಂದ ಇದು ಅಗತ್ಯ” ಎಂದು ಬಾಲಕೃಷ್ಣ ಅಭಿಪ್ರಾಯಪಟ್ಟರು.
ಸಿಎಂ ಜೊತೆ ಕೆಲವು ಸಚಿವರು ದೆಹಲಿಗೆ ತೆರಳಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಇದರಲ್ಲಿ ವಿಶೇಷ ಏನೂ ಇಲ್ಲ. ಈ ಹಿಂದೆಯೂ ಸಿಎಂ ದೆಹಲಿಗೆ ಹೋಗುವಾಗ ಸಚಿವರು ಜೊತೆಯಾಗುತ್ತಿದ್ದರು. ಕುತೂಹಲದಿಂದ 3-4 ಸಚಿವರು ಹೋಗಿರಬಹುದು” ಎಂದು ಹೇಳಿದರು.
ಇದಲ್ಲದೆ, “2028ರ ವಿಧಾನಸಭೆ ಚುನಾವಣೆ ಕಾಂಗ್ರೆಸ್ಗೆ ಬಹಳ ಮುಖ್ಯ. ಈಗಿನ ಗೊಂದಲ ಪರಿಹಾರವಾದರೆ ಮುಂದಿನ ಚುನಾವಣೆಗೆ ಅನುಕೂಲವಾಗಲಿದೆ. ಆದರೆ ನಾವು ಮಾತನಾಡಿದ ಕೂಡಲೇ ಏನೂ ಆಗುವುದಿಲ್ಲ. ಹೈಕಮಾಂಡ್ಗೆ ಎಲ್ಲವೂ ಗೊತ್ತಿದೆ. ಅವರ ತೀರ್ಮಾನವೇ ಅಂತಿಮ” ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಬಾಲಕೃಷ್ಣ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ದೇಶ
ಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್ ಶೇರಿಂಗ್ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ Satish Jarkiholi ದಿಢೀರ್ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ಇತ್ತೀಚಿನ ದೆಹಲಿ ಪ್ರವಾಸದ ಬೆನ್ನಲ್ಲೇ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಮುಂದಾಗಿರುವುದು ಕಾಂಗ್ರೆಸ್ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆ ಮತ್ತೆ ವೇಗ ಪಡೆದುಕೊಂಡಿದ್ದು, ಪಕ್ಷದೊಳಗಿನ ಸಮೀಕರಣಗಳು ಬದಲಾಗುವ ಸಾಧ್ಯತೆಗಳ ಬಗ್ಗೆ ಮಾತುಕತೆ ಜೋರಾಗಿದೆ.
ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದರೂ, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಇದೇ ಹಿನ್ನೆಲೆ ಅಹಿಂದ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಆಪ್ತ ವಲಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಜಾರಕಿಹೊಳಿ ಅವರ ದೆಹಲಿ ಭೇಟಿ, ಡಿಕೆಶಿ ಬಣಕ್ಕೆ ಹೊಸ ಸವಾಲು ತಂದೊಡ್ಡಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ Mallikarjun Kharge ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಕಾಂಗ್ರೆಸ್ನೊಳಗಿನ ನಾಯಕತ್ವ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ.
ದೇಶ
16 ವರ್ಷದ ಸೂಪರ್ಹಿಟ್ ಜೋಡಿಗೆ ಭವ್ಯ ಗೌರವ: ‘ಕ್ರೇಜಿ-ಬ್ರಹ್ಮ’ ಕಾರ್ಯಕ್ರಮ
ಬೆಂಗಳೂರು: ಕನ್ನಡ ಚಿತ್ರರಂಗದ ಅದ್ಭುತ ಜೋಡಿಯಾದ V. Ravichandran ಹಾಗೂ Hamsalekha ಅವರ ಸಿನಿ ಪಯಣವನ್ನು ಸಂಭ್ರಮಿಸುವ ಸಲುವಾಗಿ ಮೇ 30ರಂದು ‘ಕ್ರೇಜಿ-ಬ್ರಹ್ಮ’ ರೀಯೂನಿಯನ್ ಮೆಗಾ ಈವೆಂಟ್ ಆಯೋಜಿಸಲಾಗಿದೆ.
ಕೆಂಗೇರಿ ಬಳಿಯ ಜೆ.ಕೆ. ಗ್ರ್ಯಾಂಡ್ ಅರೆನಾದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಭಾಗಿಯಾಗುವ ನಿರೀಕ್ಷೆಯಿದೆ. ಪ್ರಸ್ತುತ್ ಇನ್ನೋವೇಟಿವ್ ಕ್ರಿಯೇಷನ್ಸ್ ಮತ್ತು ಸೊಲ್ಯೂಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್ ಹಾಗೂ ಕಲಾಲೂಹ ಸಂಸ್ಥಾಪಕಿ ಡಾ. ಚೇತನಾ ಆರ್.ಎಸ್. ಈ ಅದ್ಧೂರಿ ಸಮಾರಂಭವನ್ನು ಆಯೋಜಿಸಿದ್ದಾರೆ.
1980 ಮತ್ತು 90ರ ದಶಕದಲ್ಲಿ ರವಿಚಂದ್ರನ್ ನಟನೆಯ ಹಾಗೂ ನಿರ್ದೇಶನದ ಸಿನಿಮಾಗಳಿಗೆ ಹಂಸಲೇಖ ಸಂಗೀತ ನೀಡಿದ್ದ ಹಾಡುಗಳು ಭಾರೀ ಜನಪ್ರಿಯತೆ ಪಡೆದಿದ್ದವು. ಸುಮಾರು 16 ವರ್ಷಗಳ ಕಾಲ ಈ ಜೋಡಿ ಕನ್ನಡ ಸಿನಿರಂಗದಲ್ಲಿ ಅಚ್ಚಳಿಯದ ಗುರುತು ಮೂಡಿಸಿತ್ತು.
ಕಾರ್ಯಕ್ರಮಕ್ಕೆ ಸಾಮಾನ್ಯ ಹಾಗೂ ವಿ.ಐ.ಪಿ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಬುಕ್ ಮೈ ಶೋ ಮೂಲಕ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರೇಕ್ಷಕರಿಗೆ ಯಾವುದೇ ತೊಂದರೆ ಆಗದಂತೆ ಪಾರ್ಕಿಂಗ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಸಮಾರಂಭದ ಕುರಿತು ಮಾತನಾಡಿದ ಹಂಸಲೇಖ, “ಇದು ಎಲ್ಲರಿಗೂ ಒಂದು ಈವೆಂಟ್ ಆಗಿರಬಹುದು. ಆದರೆ ನಮ್ಮಿಬ್ಬರಿಗೆ ಇದೊಂದು ವಿಶೇಷ ವಿದ್ಯಮಾನ. ರವಿಚಂದ್ರನ್ ಅವರ ಕಟೌಟ್ ನೋಡಿ ತುಂಬಾ ಖುಷಿಯಾಯಿತು. ಪಕ್ಕದಲ್ಲೇ ನನ್ನ ಕಟೌಟ್ ಕೂಡ ಹಾಕಿದ್ದಾರೆ. ಕಾರ್ಯಕ್ರಮ ಇನ್ನೂ ಅದ್ಭುತವಾಗಿರುತ್ತದೆ” ಎಂದು ಹೇಳಿದರು.
ಕ್ರೇಜಿಸ್ಟಾರ್ ರವಿಚಂದ್ರನ್ ಮಾತನಾಡಿ, “ನನ್ನ ಹಾಗೂ ಹಂಸಲೇಖ ಅವರ ಕಾಂಬಿನೇಶನ್ನಲ್ಲಿ ನೂರಾರು ಸೂಪರ್ ಹಿಟ್ ಹಾಡುಗಳು ಬಂದಿವೆ. ‘ಪ್ರೇಮಲೋಕ’ದಿಂದ ಆರಂಭವಾದ ನಮ್ಮ ಜೋಡಿ ಇಂದಿಗೂ ಜನಮನದಲ್ಲಿ ಜೀವಂತವಾಗಿದೆ. ನಾವು ಸಿನಿಮಾಗಳಲ್ಲಿ ಒಟ್ಟಿಗೆ ಕೆಲಸ ಮಾಡದೇ ಇರಬಹುದು. ಆದರೆ ನನ್ನ ಮನಸ್ಸಿನಲ್ಲಿ ಅವರು, ಅವರ ಮನಸ್ಸಿನಲ್ಲಿ ನಾನು ಸದಾ ಇರುತ್ತೇವೆ. ಒಂದೇ ದೇಹ ಎರಡು ಜೀವ ಇದ್ದ ಹಾಗೆ” ಎಂದು ಭಾವುಕರಾದರು.
ಇದೇ ವೇಳೆ, ಮೇ 30ರಂದು ತಮ್ಮ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಶಾಲು, ಕೇಕ್ ಹಾಗೂ ಹಾರಗಳನ್ನು ತರಬಾರದು ಎಂದು ರವಿಚಂದ್ರನ್ ಮನವಿ ಮಾಡಿದ್ದಾರೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ರವಿಚಂದ್ರನ್ ಮತ್ತು ಹಂಸಲೇಖ ಅವರ 80 ಅಡಿ ಕಟೌಟ್ಗಳನ್ನು ಅನಾವರಣಗೊಳಿಸಲಾಗಿದೆ.
-
ದೇಶ2 hours ago‘ಕಾಕ್ರೋಚ್ ಜನತಾ ಪಾರ್ಟಿ’ಗೆ ಅಧಿಕೃತ ರೂಪ? ಚುನಾವಣಾ ಆಯೋಗಕ್ಕೆ ಅರ್ಜಿ
-
ದೇಶ3 hours agoಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ
-
ಕ್ರೀಡೆ3 hours agoಕೊಹ್ಲಿಗೆ ಜೊತೆಯಾಗೋದು ಯಾರು? ಆರ್ಸಿಬಿ ಪ್ಲೇಯಿಂಗ್ ಇಲೆವೆನ್ ಗೊಂದಲ
-
ದೇಶ2 hours agoಸಿದ್ದರಾಮಯ್ಯ ರಾಜೀನಾಮೆ ಊಹಾಪೋಹಕ್ಕೆ ಹೊಸ ತಿರುವು; ಡಿಕೆಶಿಗೆ ಮತ್ತೆ ನಿರಾಸೆಯೇ?
-
ದೇಶ1 hour agoಇಂದಿರಾ ಭವನದಲ್ಲಿ ಮೂರು ಸುತ್ತಿನ ಸಭೆ; ಕರ್ನಾಟಕ ಸಿಎಂ ಬದಲಾವಣೆ ಚರ್ಚೆ ತೀವ್ರ
-
ಆರೋಗ್ಯ1 hour agoWHO ಎಚ್ಚರಿಕೆ ಬಳಿಕ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮ; ವಿಜಯವಾಡದಲ್ಲಿ ಕ್ಯಾಂಪ್
-
ದೇಶ35 minutes agoದೆಹಲಿಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ; ಕನ್ನಡ ಭವನದಲ್ಲಿ ಸಚಿವರ ಉಪಹಾರ ಸಭೆ
-
ದೇಶ6 hours ago‘ಡಾನ್ 3’ ತೊರೆದ ರಣವೀರ್ ಸಿಂಗ್ಗೆ ಸಂಕಷ್ಟ; FWICEನಿಂದ ಪರೋಕ್ಷ ಬ್ಯಾನ್?
