Connect with us

ಬೆಂಗಳೂರು

Pushpa-2 ವಿವಾದ: KGF ಅಥವಾ ನಟ ಯಶ್ ಗೆ ಅಪಮಾನ ಮಾಡಿಲ್ಲ; ಚಿತ್ರ ವಿತರಕ ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟನೆ

Published

on

ಬಳ್ಳಾರಿ: ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರದ ವಿಚಾರವಾಗಿ ಕನ್ನಡ ಕೆಜಿಎಫ್ ಚಿತ್ರ ಅಥವಾ ನಟ ಯಶ್ ಗೆ ಅಪಮಾನವಾಗುವ ರೀತಿಯಲ್ಲಿ ತಾನು ಮಾತನಾಡಿಲ್ಲ ಎಂದು ಚಿತ್ರ ವಿತರಕ ಲಕ್ಷ್ಮೀಕಾಂತ ರೆಡ್ಡಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ‘ನಟರಾಜ’ ಸಿನಿಮಾ ಮಂದಿರಗಳ ಮಾಲೀಕ, ಚಿತ್ರ ವಿತರಕ ಲಕ್ಷ್ಮೀಕಾಂತ ರೆಡ್ಡಿ, ‘ತೆಲುಗಿನ ಪುಷ್ಪ–2’ ಚಿತ್ರದ ವಿತರಕನಾಗಿ ಅದರ ಯಶಸ್ಸು ಬಯಸಿದ್ದೇನೆಯೇ ಹೊರತು, ನಟ ಯಶ್‌ ಅವರನ್ನಾಗಿಲಿ, ಅವರ ಕೆಜಿಎಫ್‌ ಸರಣಿಯ ಚಿತ್ರಗಳನ್ನಾಗಲಿ ಅಪಮಾನಿಸಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ನಟ ಅಲ್ಲು ಅರ್ಜುನ್‌ ನಟನೆಯ ಚಿತ್ರ ‘ಪುಷ್ಪ–2’ ಸಿನಿಮಾದ ಅಖಿಲ ಕರ್ನಾಟಕ ವಿತರಣೆಯನ್ನು ನಾನೇ ಪಡೆದುಕೊಂಡಿದ್ದೇನೆ. ಇತ್ತೀಚೆಗೆ ಚಿತ್ರತಂಡ ಹೈದರಾಬಾದ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಗೆ ನಾನೂ ಹೋಗಿದ್ದೆ. ಚಿತ್ರ ಕೆಜಿಎಫ್‌–2 ಸಿನಿಮಾದ ದಾಖಲೆಯನ್ನೂ ಮೀರಿ ಯಶಸ್ಸು ಗಳಿಸಲಿ ಎಂದು ಅಲ್ಲಿ ಆಶಿಸಿದ್ದೆ.

ಇದರಲ್ಲಿ ತಪ್ಪು ಹುಡುಕಿರುವ ಕೆಲ ಮಂದಿ ಸಾಮಾಜಿಕ ಮಾಧ್ಯಮದಲ್ಲಿ ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ಸಿನಿಮಾವೊಂದು ದಾಖಲೆಗಳನ್ನೂ ಮೀರಲಿ ಎಂದು ನಿರ್ಮಾಪಕರು, ವಿತರಕರು ಆಶಿಸುವುದು ಸಾಮಾನ್ಯ. ಇಲ್ಲಿ ಯಶ್‌ ಅವರನ್ನಾಗಲಿ, ಅವರ ಸಿನಿಮಾಗಳನ್ನಾಗಲಿ ಅಪಮಾನಿಸುವುದು ಉದ್ದೇಶವಲ್ಲ’ ಎಂದು ಅವರು ಹೇಳಿದರು.

ನಟ ಯಶ್ ಗೆ ಅಪಮಾನ ಮಾಡಿಲ್ಲ

ಅಂತೆಯೇ ನಟ ಯಶ್‌ ಅವರ ಹಲವು ಸಿನಿಮಾಗಳನ್ನು ತೆಲುಗಿನಲ್ಲಿ ನಾನೇ ವಿತರಣೆ ಮಾಡಿದ್ದೇನೆ. ಕನ್ನಡದ ಹಲವು ಸಿನಿಮಾಗಳನ್ನೂ ವಿತರಿಸಿದ್ದೇನೆ. ‘ನಟರಾಜ’ ಸಿನಿಮಾ ಮಂದಿರಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಿದ್ದೇನೆ. ಕನ್ನಡವನ್ನಾಗಲಿ, ಕನ್ನಡದ ಸಿನಿಮಾಗಳನ್ನಾಗಲಿ ನಾನು ಕಡೆಗಣಿಸಿಲ್ಲ. ನಟ ಯಶ್ ಅವರನ್ನು ನಾನು ಅಪಮಾನಿಸಿಲ್ಲ’ ಎಂದು ಅವರು ತಿಳಿಸಿದರು.

‘ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತದ ಚಿತ್ರಗಳು ದೇಶದ ಚಿತ್ರರಂಗದಲ್ಲಿ ಪಾರಮ್ಯ ಮರೆಯುತ್ತಿವೆ. ಮೊದಲಿಗೆ ‘ಬಾಹುಬಲಿ’ ಯಶಸ್ಸು ಕಂಡಿತು. ಅದರ ದಾಖಲೆ ಯಾರೂ ಮುರಿಯಲಾಗದು ಎಂದು ಹೇಳಲಾಯಿತು. ಯಶ್‌ ಅವರ ‘ಕೆಜಿಎಫ್‌’ ಎಲ್ಲ ದಾಖಲೆಗಳನ್ನು ಮುರಿಯಿತು. ‘ಕಾಂತಾರ’ ಚಿತ್ರ ಮತ್ತೊಂದು ಹಂತ ಮೇಲೇರಿತು. ‘ಪುಷ್ಪ–2’ ಕೂಡ ಪ್ಯಾನ್‌ ಇಂಡಿಯಾ ಚಿತ್ರ. ಅದು ದಾಖಲೆಗಳನ್ನು ಮೀರಲಿ ಎಂಬುದರಲ್ಲಿ ಯಾವ ತಪ್ಪೂ ಇಲ್ಲ’ ಎಂದು ಲಕ್ಷ್ಮೀಕಾಂತ ರೆಡ್ಡಿ ಹೇಳಿದರು.

ಒಂದು ಪುಷ್ಪ 10 ಕೆಜಿಎಫ್ ಗೆ ಸಮ ಎಂದಿದ್ದ ಚಿತ್ರತಂಡ

ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಪುಷ್ಪ ಚಿತ್ರತಂಡ ಒಂದು ಪುಷ್ಪ ಚಿತ್ರ 10 ಕೆಜಿಎಫ್ ಗೆ ಸಮ ಎಂದು ಹೇಳಿತ್ತು. ಇದು ಅಭಿಮಾನಿಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ಅಂದಹಾಗೆ ತೆಲುಗಿನ ‘ಪುಷ್ಪ–2: ದ ರೂಲ್‌’ ಚಿತ್ರ ಡಿಸೆಂಬರ್‌ 5ರಂದು ಬಿಡುಗಡೆಯಾಗುತ್ತಿದೆ. ಅಲ್ಲು ಅರ್ಜುನ್‌ ನಟನೆಯ ಈ ಚಿತ್ರವನ್ನು ಸುಕುಮಾರ್‌ ನಿರ್ದೇಶಿಸಿದ್ದಾರೆ.

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ಕ್ರೀಡೆ

ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!

Published

on

By

ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.

ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.

ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.

Continue Reading

ದೇಶ

K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ

Published

on

By

ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್‌ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.

ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.

ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ನೀಡಲಾಯಿತು.

ವಿಶೇಷವಾಗಿ, ಸ್ನೇಹಾ ಟಿ (ಎಂಎಸ್‌ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.

ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.

Continue Reading

Trending