Connect with us

ದೇಶ

ಪುನೀತ್​​ ರಾಜ್‌ಕುಮಾರ್ ಕಣ್ಮರೆಯಾಗಿ ಇಂದಿಗೆ 3 ವರ್ಷ: ಅಭಿಮಾನಿಗಳ ಎದೆಯಲ್ಲಿ ಅರಳಿದ ‘ಬೆಟ್ಟದ ಹೂ’

Published

on

ಅಕ್ಟೋಬರ್​ 29, 2021. ಕರುನಾಡಿಗೆ ಬರಸಿಡಿಲು ಬಡಿದ ದಿನ. ಚಿತ್ರರಂಗದಲ್ಲಿ ಕತ್ತಲು ಆವರಿಸಿದ ಕ್ಷಣ. ಇಡೀ ಕರ್ನಾಟಕವೇ ಕಣ್ಣೀರಿಟ್ಟ ಸನ್ನೀವೇಶ ಬಹುಶಃ ಈಗಲೂ ಬಹುತೇಕರ ಕಣ್ಣ ಮುಂದೆ ಬರುತ್ತದೆ. ಪವರ್​​ ಸ್ಟಾರ್​​, ಯುವರತ್ನ, ನಗುಮೊಗದ ಒಡೆಯ, ಚಂದನವನದ ರಾಜಕುಮಾರ.. ಹೀಗೆ ಸಾಕಷ್ಟು ಹೆಸರುಗಳಿಂದ ಕರೆಸಿಕೊಳ್ಳುತ್ತಿದ್ದ ಪುನೀತ್​​ ರಾಜ್​​​ಕುಮಾರ್​​​ ಕೊನೆ ಬಾರಿ ಉಸಿರಾಡಿದ ದಿನವದು. ಆದ್ರೆ ಅವರ ನೆನಪು ಮಾತ್ರ ಇಂದಿಗೂ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದೇ ಉಳಿದಿದೆ. ಇಂದು ಅವರ ಮೂರನೇ ಪುಣ್ಯಸ್ಮರಣೆ ನಡೆಯುತ್ತಿದೆ.

ಕಡಿಮೆ ಸಂಖ್ಯೆಯ ಸಿನಿಮಾಗಳ ಮೂಲಕವೇ ಇಡೀ ಭಾರತೀಯ ಚಿತ್ರರಂಗದ ಮನಗೆದ್ದಿದ್ದ ‘ಬೆಟ್ಟದ ಹೂ’ ಹಠಾತ್​​ ಹೃದಯಾಘಾತದಿಂದ ಮುದುಡಿತು. ಭವಿಷ್ಯದಲ್ಲಿ ಉಜ್ವಲಿಸಬೇಕಿದ್ದ ನಟ ಸಾರ್ವಭೌಮನ ಅಂಜನೀಪುತ್ರ ವಿಧಿಯಾಟದ ಮುಂದೆ ಮಿಂಚಿ ಮರೆಯಾಯಿತು. ಕಂಠೀರವ ಸ್ಟೇಡಿಯಂನಲ್ಲಿರಿಸಿದ ಅಪ್ಪು ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಅಕ್ಟೋಬರ್​​ 29 ಮತ್ತು 30ರಂದು ಜನಸಾಮಾಮ್ಯರು ಪಡೆದರು. ಸಾಗರೋಪಾದಿಯಲ್ಲಿ ಹರಿದು ಬಂದ ಕನ್ನಡಿಗರ ಸಂಖ್ಯೆಯೇ ಸೂಪರ್​ ಸ್ಟಾರ್​ ಸ್ಟಾರ್​​ಡಮ್​ ಏನೇಂಬುದನ್ನು ಒತ್ತಿ ಹೇಳಿತ್ತು.

ಅಮೋಘ ಅಭಿನಯ ಮಾತ್ರವಲ್ಲದೇ ತಮ್ಮ ಸರಳತೆ, ನಗು ಮತ್ತು ಮಾನವೀಯ ಕಾರ್ಯಗಳಿಂದಲೂ ಅತಿ ಹೆಚ್ಚು ಜನಪ್ರಿಯರಾದವರಿವರು. ಅವರ ಸಾಮಾಜಿಕ ಕಾರ್ಯಗಳನ್ನು ಧರ್ಮಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮುಂದುವರಿಸಿದ್ದಾರೆ. ಅಭಿಮಾನಿಗಳು ಕೂಡಾ ಇಂದಿಗೂ ಅಪ್ಪು ಹೆಸರಲ್ಲಿ ಸಮಾಜ ಸೇವೆ ನಡೆಸುತ್ತಿದ್ದಾರೆ. ಇಂದು ಪುನೀತ್​ ರಾಜ್​ಕುಮಾರ್​​ ಅವರ ಮೂರನೇ ಪುಣ್ಯಸ್ಮರಣೆ ಹಿನ್ನೆಲೆ, ವಿವಿಧೆಡೆ ವಿವಿಧ ಪುಣ್ಯಕಾರ್ಯಗಳು ಜರುಗುತ್ತಿವೆ. ಅಪ್ಪುನನ್ನು ಸ್ಮರಿಸುವ ಕಾರ್ಯ ಮುಂದುವರಿದಿವೆ. ಈಗಾಗಲೇ ಹಲವೆಡೆ ಪುನೀತ್​ ರಾಜ್​​​ಕುಮಾರ್​ ಹೆಸರಲ್ಲಿ ದೇಗುಲಗಳು ನಿರ್ಮಾಣಗೊಂಡಿವೆ. ಇದು ಅಭಿಮಾನಿಗಳ ಅಭಿಮಾನಕ್ಕೆ ಹಿಡಿದ ಕೈಗನ್ನಡಿ.

1975ರ ಮಾರ್ಚ್​​ 17ರಂದು ಚೆನ್ನೈನಲ್ಲಿ ಕನ್ನಡ ಚಿತ್ರರಂಗದ ನಟಸಾರ್ವಭೌಮ ರಾಜ್​ಕುಮಾರ್​​ ಅವರ ಕಿರಿಯ ಪುತ್ರನಾಗಿ ಜನಿಸಿದ ಪುನೀತ್​ ರಾಜ್​​​ಕುಮಾರ್​​​ 2021ರ ಅಕ್ಟೋಬರ್​​ 29ರಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. 1999ರಲ್ಲಿ ಅಶ್ವಿನಿ ಅವರೊಂದಿಗೆ ದಾಂಪತ್ಯ ಜೀವನ ಆರಂಭಿಸಿ, ವಂದಿತಾ ಮತ್ತು ದ್ರಿತಿ ಎಂಬಿಬ್ಬರು ಹೆಣ್ಣು ಮಕ್ಕಳ ಮುದ್ದಿನ ಅಪ್ಪನಾದರು. ಶಿವರಾಜ್​​​ಕುಮಾರ್​​, ರಾಘವೇಂದ್ರ ರಾಜ್​ಕುಮಾರ್​​​, ಪೂರ್ಣಿಮಾ ಮತ್ತು ಲಕ್ಷ್ಮಿ ಒಡಹುಟ್ಟಿದವರು. ಮದಡಿ ಅಶ್ವಿನಿ ಪತಿ ನಡೆಸಿಕೊಂಡು ಬಂದ ಕೆಲಸಗಳನ್ನು ಮುಂದುವರಿಸಿದ್ದಾರೆ. ಸಹೋದರರು ತಮ್ಮನ ಸೇವೆಯನ್ನು ಸದಾ ಸ್ಮರಿಸುವ ಮೂಲಕ ತಮ್ಮ ಪ್ರೀತಿ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಈ ಮೂಲಕ ಒಂದೊಳ್ಳೆ ಕೂಡು ಕುಟುಂಬ ಎಂಬುದನ್ನು ರಾಜ್​ ಫ್ಯಾಮಿಲಿ ಸಾಬೀತುಪಡಿಸಿವೆ.

ದೇಶ

“ಮೌನ ಏಕೆ?” – ಮೋದಿ ಸರ್ಕಾರದ ವಿರುದ್ಧ ಟಿಎಂಸಿ ಆಕ್ರೋಶ

Published

on

By

Bengal election news

ನವದೆಹಲಿ: ಕೋಲ್ಕತ್ತಾಗೆ ಪಾಕಿಸ್ತಾನ ನೀಡಿರುವ ಬೆದರಿಕೆ ವಿಚಾರ ರಾಜಕೀಯವಾಗಿ ಮತ್ತಷ್ಟು ಕಾವು ಪಡೆದಿದೆ. ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ Abhishek Banerjee ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿಲಿಗುರಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ರಕ್ಷಣಾ ಸಚಿವ Khawaja Asif ಕೊಲ್ಕತ್ತಾವನ್ನು ಗುರಿಯಾಗಿಸುವುದಾಗಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದರು. “ನೆರೆ ರಾಷ್ಟ್ರದಿಂದ ಇಂತಹ ಬೆದರಿಕೆ ಬಂದರೂ ಪ್ರಧಾನಿ Narendra Modi, ಗೃಹ ಸಚಿವ Amit Shah ಮತ್ತು ರಕ್ಷಣಾ ಸಚಿವ Rajnath Singh ಮೌನವಾಗಿರುವುದು ಅಚ್ಚರಿಯ ಸಂಗತಿ” ಎಂದು ಟೀಕಿಸಿದರು.

ಅಭಿಷೇಕ್ ಬ್ಯಾನರ್ಜಿ ತಮ್ಮ ಭಾಷಣದಲ್ಲಿ, “ನಮ್ಮ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದ ದಿನ ಪಾಕಿಸ್ತಾನಕ್ಕೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ” ಎಂದು ಎಚ್ಚರಿಕೆಯ ಮಾತುಗಳನ್ನೂ ಆಡಿದರು. ಪಾಕಿಸ್ತಾನದ ಬೆದರಿಕೆಗೆ ಗಟ್ಟಿಯಾದ ಪ್ರತಿಕ್ರಿಯೆ ನೀಡದ ಕೇಂದ್ರ ಸರ್ಕಾರದ ನಡೆ ಪ್ರಶ್ನಾರ್ಹ ಎಂದು ಹೇಳಿದರು.

ಇನ್ನೂ ಮುಂದೆ, ಕೇಂದ್ರ ನಾಯಕರು ಪಶ್ಚಿಮ ಬಂಗಾಳಕ್ಕೆ ಬಂದು ಟಿಎಂಸಿ ವಿರುದ್ಧ ಪ್ರಚಾರ ಮಾಡುವುದರಲ್ಲಿ ನಿರತರಾಗಿದ್ದು, ನಮ್ಮನ್ನು ಬಾಂಗ್ಲಾದೇಶಿಗಳು ಅಥವಾ ಪಾಕಿಸ್ತಾನಿಗಳು ಎಂದು ಕರೆಯುತ್ತಿದ್ದಾರೆ. ಆದರೆ ನೇರ ಬೆದರಿಕೆ ಎದುರಾದಾಗ ಅವರು ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದರು.

ಈ ಹೇಳಿಕೆಗಳು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಕಾವು ಹೆಚ್ಚಿಸಿದ್ದು, ಬಿಜೆಪಿ-ಟಿಎಂಸಿ ನಡುವೆ ವಾಗ್ವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Continue Reading

ದೇಶ

ಬೆಂಗಳೂರು ಹೃದಯ ಸ್ಪರ್ಶಿ ಕಥೆ: ಯುವತಿಗೆ ನೆರವಾದ ಅಪರಿಚಿತರು

Published

on

By

ಬೆಂಗಳೂರು: ಸಿಲಿಕಾನ್ ಸಿಟಿಯ ಕತ್ತಲ ರಾತ್ರಿಯಲ್ಲಿ ಯುವತಿಯೊಬ್ಬಳಿಗೆ ರಕ್ಷೆಯಾಗಿ ನಿಂತ ಸಾರಿಗೆ ಸಿಬ್ಬಂದಿ ಹಾಗೂ ಬೈಕ್ ಟ್ಯಾಕ್ಸಿ ಚಾಲಕನ ಮಾನವೀಯತೆ ಈಗ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ನಗರದ ಗದ್ದಲದ ನಡುವೆ ಮಾನವೀಯ ಮೌಲ್ಯಗಳು ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಸೋಮವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಐಶ್ವರ್ಯ ಎಂಬ ಯುವತಿ Bangalore Metropolitan Transport Corporation ಬಸ್‌ನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ನಿಲ್ದಾಣದಿಂದ ಕಾಡುಗೋಡಿಗೆ ಬಂದಿಳಿದಿದ್ದರು. ಆ ಸಮಯದಲ್ಲಿ ಸುತ್ತಮುತ್ತ ಸಂಪೂರ್ಣ ಕತ್ತಲು ಆವರಿಸಿಕೊಂಡಿದ್ದು, ರಸ್ತೆಗಳಲ್ಲಿ ಜನರ ಓಡಾಟವೂ ಇರಲಿಲ್ಲ. ನಿರ್ಜನ ಪ್ರದೇಶದಲ್ಲಿ ಒಬ್ಬಳೇ ಸಿಲುಕಿದ ಯುವತಿ ಮನೆಗೆ ತೆರಳಲು ಕ್ಯಾಬ್ ಬುಕ್ ಮಾಡಲು ಪ್ರಯತ್ನಿಸಿದರೂ ಯಾವುದೇ ವಾಹನ ಲಭ್ಯವಾಗಲಿಲ್ಲ.

ಈ ಸಂದರ್ಭದಲ್ಲಿ ಯುವತಿಯ ಸ್ಥಿತಿಯನ್ನು ಗಮನಿಸಿದ ಬಿಎಂಟಿಸಿ ಸಿಬ್ಬಂದಿ, ಆಕೆಯನ್ನು ಬಸ್ ಸ್ಟಾಪ್‌ನಲ್ಲಿ ಬಿಟ್ಟು ತೆರಳದೆ ಸುರಕ್ಷಿತ ವಾಹನ ಸಿಗುವವರೆಗೂ ಅಲ್ಲಿಯೇ ಉಳಿದುಕೊಂಡರು. ಅವರ ಈ ಕಾಳಜಿ ಮಾನವೀಯತೆಗೆ ಉತ್ತಮ ಉದಾಹರಣೆಯಾಗಿದೆ.

ಅದೇ ಸಮಯದಲ್ಲಿ ಆ ಮಾರ್ಗವಾಗಿ ಬಂದ Rapido ಚಾಲಕನೊಬ್ಬ ಯುವತಿಯ ನೆರವಿಗೆ ಧಾವಿಸಿದರು. ಬಿಎಂಟಿಸಿ ಸಿಬ್ಬಂದಿ ಚಾಲಕನ ವಿವರಗಳನ್ನು ಖಚಿತಪಡಿಸಿಕೊಂಡ ಬಳಿಕವೇ ಯುವತಿಯನ್ನು ಅವರೊಂದಿಗೆ ಕಳುಹಿಸಿದರು. ವಿಶೇಷವೆಂದರೆ, ಆ ಚಾಲಕ ಯಾವುದೇ ಹಣ ಪಡೆಯದೆ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಘಟನೆಯ ಕುರಿತು ಐಶ್ವರ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ತಮಗೆ ನೆರವಾದ ಬಿಎಂಟಿಸಿ ಸಿಬ್ಬಂದಿ ಮತ್ತು ರ‍್ಯಾಪಿಡೋ ಚಾಲಕನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಹೃದಯಸ್ಪರ್ಶಿ ಘಟನೆ ಈಗ ವೈರಲ್ ಆಗಿ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

Continue Reading

ದೇಶ

ಇರಾನ್ ಶಾಕ್: ಹೊಸ ಸರ್ವೋಚ್ಚ ನಾಯಕ ಗಂಭೀರ ಸ್ಥಿತಿ!

Published

on

By

ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿರುವ ಬೆನ್ನಲ್ಲೇ ಇರಾನ್ ರಾಜಕೀಯ ವಲಯದಲ್ಲಿ ಸಂಚಲನಕಾರಿ ಮಾಹಿತಿ ಹೊರಬಂದಿದೆ. ಹೊಸದಾಗಿ ಸರ್ವೋಚ್ಚ ನಾಯಕರಾಗಿ ಆಯ್ಕೆಯಾಗಿರುವ Mojtaba Khamenei ಅವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ.

ವರದಿಗಳ ಪ್ರಕಾರ, Qom ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆಡಳಿತಾತ್ಮಕ ನಿರ್ಧಾರಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಫೆಬ್ರವರಿ 28ರಂದು ನಡೆದ ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಗುಪ್ತಚರ ಮೂಲಗಳು ಸೂಚಿಸಿವೆ.

ಈ ದಾಳಿಯಲ್ಲೇ ಅವರ ತಂದೆ, ಇರಾನ್‌ನ ಹಿಂದಿನ ಸರ್ವೋಚ್ಚ ನಾಯಕ Ali Khamenei ಮೃತಪಟ್ಟಿರುವುದಾಗಿ ಹೇಳಲಾಗಿದೆ. ಶಿಯಾ ಧರ್ಮಗುರುಗಳ ಕೇಂದ್ರವಾಗಿರುವ ಕೋಮ್‌ನಲ್ಲಿ ಅವರ ಅಂತ್ಯಕ್ರಿಯೆ ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.

ಯುದ್ಧದ ಆರಂಭದಿಂದಲೇ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಹೆಸರಿನಲ್ಲಿ ಪ್ರಕಟವಾಗಿರುವ ಹೇಳಿಕೆಗಳನ್ನು ರಾಜ್ಯ ಮಾಧ್ಯಮಗಳು ಓದುತ್ತಿದ್ದರೂ, ಅವರ ಧ್ವನಿ ದಾಖಲೆ ಇಲ್ಲದಿರುವುದು ಅವರ ಆರೋಗ್ಯದ ಬಗ್ಗೆ ಅನುಮಾನ ಮೂಡಿಸಿದೆ.

ಇದಲ್ಲದೆ, Iran ಸರ್ಕಾರ ಕೃತಕ ಬುದ್ಧಿಮತ್ತೆ ಬಳಸಿ ಬಿಡುಗಡೆ ಮಾಡಿದ ವಿಡಿಯೋವೂ ಚರ್ಚೆಗೆ ಕಾರಣವಾಗಿದೆ. ಇದರಲ್ಲಿ ಖಮೇನಿ ಯುದ್ಧ ತಂತ್ರಗಳನ್ನು ಪರಿಶೀಲಿಸುತ್ತಿರುವಂತೆ ತೋರಿಸಲಾಗಿದೆ.

ಒಟ್ಟಿನಲ್ಲಿ, ಇರಾನ್‌ನಲ್ಲಿ ನಾಯಕತ್ವದ ಅನಿಶ್ಚಿತತೆ ಹಾಗೂ ಯುದ್ಧದ ಪರಿಣಾಮ ಜಾಗತಿಕ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟಿಸಿದೆ.

Continue Reading

Trending